Homeಮುಖಪುಟಹಿಮಾಚಲ ಪ್ರದೇಶ: ಆಪರೇಷನ್‌ ಕಮಲದ ಭೀತಿಯಲ್ಲಿ ಕಾಂಗ್ರೆಸ್!?

ಹಿಮಾಚಲ ಪ್ರದೇಶ: ಆಪರೇಷನ್‌ ಕಮಲದ ಭೀತಿಯಲ್ಲಿ ಕಾಂಗ್ರೆಸ್!?

- Advertisement -
- Advertisement -

ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು, ಮತ್ತೊಂದೆಡೆ ಆಪರೇಷನ್ ಕಮಲದ ಭೀತಿಯನ್ನು ಕಾಂಗ್ರೆಸ್ ಎದುರಿಸುತ್ತಿದೆ. ಹೀಗಾಗಿ ಹಿಮಾಚಲ ಪ್ರದೇಶದ ತನ್ನ ಶಾಸಕರನ್ನು ರಾಜಸ್ಥಾನಕ್ಕೆ ಸ್ಥಳಾಂತರಿಸಲು ಕಾಂಗ್ರೆಸ್ ಯೋಜಿಸುತ್ತಿದೆ ಎಂದು ವದಿಯಾಗಿದೆ.

‘ಆಪರೇಷನ್ ಕಮಲ’ಕ್ಕೆ ಪೂರ್ವಭಾವಿಯಾಗಿ ಶಾಸಕರನ್ನು ಸ್ಥಳಾಂತರಿಸುವ ಜವಾಬ್ದಾರಿಯನ್ನು ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಮತ್ತು ಹಿರಿಯ ನಾಯಕ ಭೂಪಿಂದರ್ ಸಿಂಗ್ ಹೂಡಾ ಅವರಿಗೆ ವಹಿಸಲಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ‘ಇಂಡಿಯಾ ಟುಡೇ’ ವರದಿ ಮಾಡಿದೆ.

ಶಾಸಕರನ್ನು ಬಸ್‌ಗಳಲ್ಲಿ ರಾಜಸ್ಥಾನಕ್ಕೆ ಸ್ಥಳಾಂತರಿಸುವ ಸಾಧ್ಯತೆ ಇದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪರಿಸ್ಥಿತಿಯನ್ನು ವೈಯಕ್ತಿಕವಾಗಿ ಗಮನಿಸುತ್ತಿದ್ದಾರೆ. ಇಂದು ಅವರು ಶಿಮ್ಲಾ ತಲುಪುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಸಾಂಪ್ರದಾಯಿಕವಾಗಿ ಹಿಮಾಚಲಪ್ರದೇಶದಲ್ಲಿ ಒಮ್ಮೆ ಬಿಜೆಪಿ, ಮತ್ತೊಮ್ಮೆ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಲಾಗುತ್ತಿದೆ. ರಾಜ್ಯದಲ್ಲಿನ 55 ಲಕ್ಷ ಮತದಾರರಿದ್ದಾರೆ. 68 ಕ್ಷೇತ್ರಗಳ ಚುನಾವಣೆ ನವೆಂಬರ್ 12ರಂದು ನಡೆದಿದ್ದು, ಶೇಕಡಾ 75 ಕ್ಕಿಂತ ಹೆಚ್ಚು ಜನರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಈ ಚುನಾವಣೆಯಲ್ಲಿ ಒಟ್ಟು 412 ಅಭ್ಯರ್ಥಿಗಳು ಕಣದಲ್ಲಿದ್ದರು.

ಬೆಲೆ ಏರಿಕೆ, ನಿರುದ್ಯೋಗ, ಹಳೆಯ ಪಿಂಚಣಿ ಯೋಜನೆ, ರಾಜ್ಯದ ನಿವಾಸಿಗಳು ಎದುರಿಸುತ್ತಿರುವ ಜೀವನ ಮತ್ತು ಜೀವನೋಪಾಯದ ಇತರ ಮೂಲಭೂತ ಸಮಸ್ಯೆಗಳ ಬಗ್ಗೆ ಮತದಾರರು ನಿರ್ಧರಿಸುತ್ತಾರೆ ಎಂದು ಕಾಂಗ್ರೆಸ್ ತನ್ನ ಗೆಲುವಿನ ವಿಶ್ವಾಸದಲ್ಲಿದೆ.

ಕಾಂಗ್ರೆಸ್ ಪಕ್ಷವು ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಮಾತ್ರ ಅಧಿಕಾರವನ್ನು ಹೊಂದಿದೆ. ಇವೆರಡೂ ರಾಜ್ಯಗಳು 2023 ರಲ್ಲಿ ಚುನಾವಣೆ ಎದುರಿಸಲಿವೆ. ಪಕ್ಷದ ಪುನರುಜ್ಜೀವನದ ಯಾವುದೇ ಭರವಸೆಯು ಹಿಮಾಚಲ ಪ್ರದೇಶದಿಂದ ಪ್ರಾರಂಭವಾಗಬೇಕು ಎಂದು ಕಾಂಗ್ರೆಸ್ ಒಳಗಿನವರು ಹೇಳುತ್ತಿದ್ದಾರೆ.

ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು, ತಮ್ಮ ಪಕ್ಷ ಆಪರೇಷನ್ ಕಮಲಕ್ಕೆ ಹೆದರುವುದಿಲ್ಲ ಎಂದು ಹಿರಿಯ ನಾಯಕ ರಾಜೀವ್ ಶುಕ್ಲಾ ಹೇಳಿದ್ದಾರೆ.

“ನಾವು 40 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತೇವೆ. ನಾವು ರಾಜ್ಯದಲ್ಲಿ 10 ಯೋಜನೆಗಳನ್ನು ಜಾರಿಗೊಳಿಸುವುದಾಗಿ ಖಾತರಿ ಪಡಿಸುತ್ತೇವೆ. ನಾವು ‘ಆಪರೇಷನ್ ಕಮಲ’ಕ್ಕೆ ಹೆದರುವುದಿಲ್ಲ, ಈ ಅಂಕಿಅಂಶಗಳು ಮುಂದುವರಿದರೆ ಅಂತಹ ಯಾವುದೇ ಪರಿಸ್ಥಿತಿ ಇರುವುದಿಲ್ಲ” ಎಂದು ಶುಕ್ಲಾ ತಿಳಿಸಿದ್ದಾರೆ.

ಸದ್ಯದ ಪರಿಸ್ಥಿತಿಯ ಪ್ರಕಾರ 39 ಕ್ಷೇತ್ರಗಳಲ್ಲಿ ಕಾಂಗ್ರೆಸ್‌, 26 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.  ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಹಮೀರ್‌ಪುರದಿಂದ ಸ್ವತಂತ್ರ ಅಭ್ಯರ್ಥಿ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಬಂಡಾಯಗಾರ ಆಶಿಶ್ ಶರ್ಮಾ ಗೆಲುವು ಸಾಧಿಸಿದ್ದಾರೆ. ಶರ್ಮಾ ಅವರು ಕಾಂಗ್ರೆಸ್ ಅಭ್ಯರ್ಥಿ ಪುಷ್ಪಿಂದರ್ ವರ್ಮಾ ಅವರನ್ನು 12,899 ಮತಗಳ ಅಂತರದಿಂದ ಸೋಲಿಸಿದ್ದಾರೆ.

ಹಿಮಾಚಲ ಪ್ರದೇಶದ ಹಾಲಿ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಅವರು ಸೇರಾಜ್‌ನಿಂದ 30,000 ಮತಗಳಿಂದ ಗೆದ್ದಿದ್ದಾರೆ. ಪಕ್ಷವು ಮುನ್ನಡೆ ಸಾಧಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಬಹುಮತದ ಸರ್ಕಾರ ರಚಿಸಲು ಸಿದ್ಧವಾಗುತ್ತಿದ್ದಂತೆ ಪಕ್ಷದ ಹಿರಿಯ ನಾಯಕ ಪವನ್ ಖೇರಾ ಅವರು ಪಕ್ಷದ ಇತರ ಕಾರ್ಯಕರ್ತರೊಂದಿಗೆ ಸಿಹಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...