Homeಕರೋನಾ ತಲ್ಲಣಹಿ. ಪ್ರದೇಶ: ಲಸಿಕೆ ನೀಡಲು 3 ಗಂಟೆ ಬೆಟ್ಟ ಗುಡ್ಡದಲ್ಲಿ ಪಾದಯಾತ್ರೆ ಮಾಡಿದ ಆರೋಗ್ಯ ಕಾರ್ಯಕರ್ತರು

ಹಿ. ಪ್ರದೇಶ: ಲಸಿಕೆ ನೀಡಲು 3 ಗಂಟೆ ಬೆಟ್ಟ ಗುಡ್ಡದಲ್ಲಿ ಪಾದಯಾತ್ರೆ ಮಾಡಿದ ಆರೋಗ್ಯ ಕಾರ್ಯಕರ್ತರು

- Advertisement -
- Advertisement -

ಹಿಮಾಲಯದ ಹಳ್ಳಿಗಳ ಜನರಿಗೆ ಲಸಿಕೆ ನೀಡುವುದು ಒಂದು ಸಾಹಸದ ಕೆಲಸವಾಗಿ ಮಾರ್ಪಟ್ಟಿದೆ. ಹಿಮಾಚಲ ಪ್ರದೇಶದ ಮಲಾನಾ ಗ್ರಾಮಕ್ಕೆ ಭೇಟಿ ನೀಡಿ, ಲಸಿಕೆ ನೀಡಲು ಹೊರಟಿದ್ದ ಆರೋಗ್ಯ ಕಾರ್ಯಕರ್ತರ ತಂಡ ಸುಮಾರು ಮೂರು ಗಂಟೆಗಳ ಕಾಲ ಬೆಟ್ಟ ಗುಡ್ಡಗಳನ್ನು ಹತ್ತಿ ಇಳಿದು ಸಾಹಸ ಮಾಡಿದೆ.

ಮಲಾನಾ ಗ್ರಾಮಕ್ಕೆ ಇದ್ದ ರಸ್ತೆ ಭೂಕುಸಿತದಿಂದ ನಾಶವಾಗಿರುವ ಕಾರಣ ಇಂತಹ ಸಾಹಸಕ್ಕೆ ಅಧಿಕಾರಿಗಳು ಮುಂದಾಗಬೇಕಾಗಿತ್ತು. ಮೂರು ಗಂಟೆಗಳ ಸಾಹಸದ ಬಳಿಕ ಹಳ್ಳಿಗೆ ತೆರಳಿ ಜನರಿಗೆ ಲಸಿಕೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಡಿದಾದ ಭೂಪ್ರದೇಶದ ಹೊರತಾಗಿಯೂ, ಹಿಮಾಚಲ ಪ್ರದೇಶದ ಮಲಾನಾ ಗ್ರಾಮವೂ, ಎಲ್ಲಾ ವಯಸ್ಕರು ಒಂದು ಡೋಸ್ ಲಸಿಕೆ ಪಡೆದ ಭಾರತದ ಮೊದಲ ಗ್ರಾಮವಾಗಿದೆ.

ಹಿಮಾಚಲ ಪ್ರದೇಶದ ಕಡಿದಾದ ಭೌಗೋಳಿಕತೆಯಿಂದಾಗ ದೂರವಿರುವ ಹಳ್ಳಿಗಳನ್ನು ತಲುಪಲು ಗಂಟೆಗಟ್ಟಲೆ ಅಥವಾ ಇಡೀ ದಿನ ನಡೆದು ಹೋಗುವುದು ಆರೋಗ್ಯ ಕಾರ್ಯಕರ್ತರಿಗೆ ಒಂದು ಸವಾಲಾಗಿದೆ. ಇದರ ಜೊತೆಗೆ ಧಾರ್ಮಿಕ ನಂಬಿಕೆಗಳು ಕೂಡ ಲಸಿಕೆ ನೀಡುವಲ್ಲಿ ಸವಾಲಾಗಿದೆ ಎನ್ನಲಾಗಿದೆ.

 ಇದನ್ನೂ ಓದಿ: ಕಾರ್ಮಿಕರಿಗೆ ಕೋವಿಡ್ ಲಸಿಕೆ ನೆಪದಲ್ಲಿ 312 ಕೋಟಿ ದುರ್ಬಳಕೆ: ಹರೀಶ್ ನಾಯ್ಕ್ ಆರೋಪ

ಸೆಪ್ಟೆಂಬರ್ 14 ರಂದು, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಅತುಲ್ ಗುಪ್ತಾ ನೇತೃತ್ವದ ಐವರ ತಂಡವು ಎರಡನೇ ಲಸಿಕೆ ಡೋಸ್‌ಗಳನ್ನು ನೀಡಲು ಮಲಾನಾಗೆ ಹೊರಟಿತ್ತು. ಭೂಕುಸಿತದಿಂದ ರಸ್ತೆ ಹಾಳಾಗದ್ದ ಕಾರಣ ವಾಹನಗಳನ್ನು ಬಿಟ್ಟು, ಲಸಿಕೆ ಪೆಟ್ಟಿಗೆಗಳನ್ನು ತಮ್ಮ ಭುಜದ ಮೇಲೆ ಹೊತ್ತುಕೊಂಡು ಬೆಟ್ಟ ಗುಡ್ಡಗಳನ್ನು ಹತ್ತಿ, ಇಳಿದು, ನದಿಯನ್ನು ದಾಟಿ ಹಳ್ಳಿಗೆ ಸೇರಿದೆ.

ಇತ್ತ, ಒಕ್ಕೂಟ ಸರ್ಕಾರ ಎಲ್ಲ ನಾಗರಿಕರಿಗೂ ಉಚಿತವಾಗಿ ಲಸಿಕೆಯನ್ನು ನೀಡುವುದಾಗಿ ಘೋಷಿಸಿದೆ. ಜನರು ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆಂದು ಗ್ರಾಮ ಗ್ರಾಮಗಳಿಗೆ ತೆರಳಿ ಲಸಿಕೆ ನೀಡುವ ಪ್ರಯತ್ನವನ್ನೂ ಮಾಡುತ್ತಿದೆ. ಆದರೆ, ಖಾಸಗಿ ಆಸ್ಪತ್ರೆಗಳಿಂದ ಕಟ್ಟಡ ಕಾರ್ಮಿಕರಿಗಾಗಿ ಲಸಿಕೆಯನ್ನು ಖರೀದಿಸಲು ಕಾರ್ಮಿಕ ನಿಧಿಯನ್ನು ಸರ್ಕಾರ ಬಳಸುತ್ತಿದೆ ಎಂದು ಕಾರ್ಮಿಕ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಆ.27ರಂದು ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ಕಾರ್ಯಾದೇಶ ಹೊರಡಿಸಿದ್ದು, “ಪ್ರತಿ ಡೋಸ್‌ಗೆ 780 ರೂ. ಪಡೆದು, ಕೋವಿಶೀಲ್ಡ್ ಲಸಿಕೆಯ 2 ಲಕ್ಷ ಡೋಸ್ ಗಳನ್ನು ಪೂರೈಸುವಂತೆ ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್ಗಳ ಸಂಘಕ್ಕೆ ಬೇಡಿಕೆ ಸಲ್ಲಿಸಲಾಗಿದೆ. ಅದಕ್ಕಾಗಿ 15.60 ಕೋಟಿ ರೂ. ವಿನಿಯೋಗಿಸಲು ಯೋಜಿಸಲಾಗಿದೆ” ಎಂದು ‘ದಿ ಪ್ರಿಂಟ್’ ವರದಿ ಮಾಡಿದೆ.


ಇದನ್ನೂ ಓದಿ: ಲಸಿಕೆ ನೀಡಲು ಕಾರ್ಮಿಕ ನಿಧಿ ದುರ್ಬಳಕೆ; ‘ದಿ ಪ್ರಿಂಟ್‌’ ವರದಿಯಲ್ಲಿ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...