Homeಮುಖಪುಟಮಂಡಿ ಕ್ಷೇತ್ರದಿಂದ ಆಯ್ಕೆ ಪ್ರಶ್ನಿಸಿ ಅರ್ಜಿ: ಕಂಗನಾ ರಣಾವತ್‌ಗೆ ಹೈಕೋರ್ಟ್ ನೋಟಿಸ್

ಮಂಡಿ ಕ್ಷೇತ್ರದಿಂದ ಆಯ್ಕೆ ಪ್ರಶ್ನಿಸಿ ಅರ್ಜಿ: ಕಂಗನಾ ರಣಾವತ್‌ಗೆ ಹೈಕೋರ್ಟ್ ನೋಟಿಸ್

- Advertisement -
- Advertisement -

ಮಂಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರ ಆಯ್ಕೆ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ನಡೆಸಿರುವ ಹಿಮಾಚಲ ಪ್ರದೇಶ ಹೈಕೋರ್ಟ್, ಕಂಗನಾ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಆಗಸ್ಟ್ 21ರ ಒಳಗಾಗಿ ಉತ್ತರ ನೀಡುವಂತೆ ಕಂಗನಾ ಅವರಿಗೆ ನ್ಯಾಯಮೂರ್ತಿ ಜೋತ್ಸ್ನಾ ರೆವಾಲ್ ಅವರು ನಿರ್ದೇಶನ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಲೋಕಸಭೆ ಚುನಾವಣೆ ವೇಳೆ ಮಂಡಿಯ ಚುನಾವಣಾಧಿಕಾರಿ ತನ್ನ ನಾಮಪತ್ರವನ್ನು ಅನ್ಯಾಯವಾಗಿ ತಿರಸ್ಕರಿಸಿದ್ದರು ಎಂದು ಆರೋಪಿಸಿ ಕಿನ್ನೂರು ನಿವಾಸಿ ಲಾಯಕ್ ರಾಮ್ ನೇಗಿ ಎಂಬವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಜಿಲ್ಲಾಧಿಕಾರಿಯನ್ನು ಪ್ರಕರಣದ ಪಕ್ಷಗಾರನ್ನಾಗಿ ಮಾಡಿದ್ದಾರೆ.

ಅರಣ್ಯ ಇಲಾಖೆಯ ಮಾಜಿ ನೌಕರ ನೇಗಿ ಅವರು ಅವಧಿಪೂರ್ವ ನಿವೃತ್ತಿ ಪಡೆದಿದ್ದರು. ಇಲಾಖೆಯಿಂದ ಯಾವುದೇ ಬಾಕಿಯಿಲ್ಲ ಪ್ರಮಾಣಪತ್ರ (NO due Certificate)ಪಡೆದಿದ್ದರು. ಅದನ್ನು ಲಗ್ಗತ್ತಿಸಿ ಲೋಕಸಭೆ ಚುನಾವಣೆಗೆ ಮಂಡಿ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು.

ಆದರೆ, ಚುನಾವಣಾಧಿಕಾರಿ ವಿದ್ಯುತ್, ನೀರು ಮತ್ತು ದೂರವಾಣಿ ಇಲಾಖೆಗಳಲ್ಲಿ ಯಾವುದೇ ಬಾಕಿ ಇಲ್ಲ ಎಂಬ ಪ್ರಮಾಣಪತ್ರ ಸಲ್ಲಿಸಲು ಒಂದು ದಿನದ ಗಡುವು ನೀಡಿದ್ದರು. ಅದರಂತೆ, ಪ್ರಮಾಣಪತ್ರ ಸಲ್ಲಿಸಿದರೂ, ಅವರು ನಾಮಪತ್ರವನ್ನು ಸ್ವೀಕರಿಸಿಲ್ಲ ಎಂದು ನೇಗಿ ಆರೋಪಿಸಿದ್ದಾರೆ.

ಒಂದು ವೇಳೆ ನಾಮಪತ್ರ ತಿರಸ್ಕೃತವಾಗದಿದ್ದರೆ ನಾನು ಚುನಾವಣೆಯಲ್ಲಿ ಗೆಲುವು ಸಾಧಿಸುತ್ತಿದ್ದೆ. ಹೀಗಾಗಿ ಮಂಡಿ ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ರದ್ದು ಮಾಡಬೇಕು ಎಂದು ನೇಗಿ ಕೋರಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಮಂಡಿ ಲೋಕಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷ (ಬಿಜೆಪಿ)ದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಟಿ ಕಂಗನಾ ರಣಾವತ್ ಅವರು ಕಾಂಗ್ರೆಸ್ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್ ಅವರ ವಿರುದ್ದ 74,755 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.

ಇದನ್ನೂ ಓದಿ : ಕೇಂದ್ರ ಬಜೆಟ್‌ ತಿರಸ್ಕರಿಸುವ ನಿರ್ಣಯ ಅಂಗೀಕರಿಸಿದ ತೆಲಂಗಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...