Homeಮುಖಪುಟಹಿಮಾಚಲ ಪ್ರದೇಶ: ಕಾಶ್ಮೀರಿ ಶಾಲು ಮಾರಾಟಗಾರರಿಗೆ ಹಿಂದುತ್ವ ಗುಂಪುಗಳಿಂದ ಬೆದರಿಕೆ: ಸಿಎಂ ಮಧ್ಯಪ್ರವೇಶಕ್ಕೆ ಮುಫ್ತಿ ಕರೆ

ಹಿಮಾಚಲ ಪ್ರದೇಶ: ಕಾಶ್ಮೀರಿ ಶಾಲು ಮಾರಾಟಗಾರರಿಗೆ ಹಿಂದುತ್ವ ಗುಂಪುಗಳಿಂದ ಬೆದರಿಕೆ: ಸಿಎಂ ಮಧ್ಯಪ್ರವೇಶಕ್ಕೆ ಮುಫ್ತಿ ಕರೆ

- Advertisement -
- Advertisement -

ಹೊಸದಿಲ್ಲಿ:  ಜಮ್ಮು ಮತ್ತು ಕಾಶ್ಮೀರದ ಸುಮಾರು ಎರಡು ಡಜನ್ ನಷ್ಟು ಬಡ ಶಾಲು ಮಾರಾಟಗಾರರಿಗೆ ಹಿಮಾಚಲ ಪ್ರದೇಶದ ಬಿಲಾಸ್‌ಪುರದಲ್ಲಿ ಸ್ಥಳೀಯ ಹಿಂದುತ್ವ ಗುಂಪುಗಳು ವ್ಯಾಪಾರ ಮಾಡದಂತೆ ಮತ್ತು ಈ ಪ್ರದೇಶವನ್ನು ಬಿಟ್ಟು ಕಾಶ್ಮೀರಕ್ಕೆ ಹಿಂತಿರುಗುವಂತೆ  ಕಿರುಕುಳ ನೀಡುತ್ತಿರುವ ಘಟನೆ ವರದಿಯಾಗಿದೆ.

ಈ ಅಸಹಾಯಕ ಶಾಲು ಮಾರಾಟಗಾರರು ಸಂಭಾವ್ಯ ಗ್ರಾಹಕರನ್ನು ತಲುಪಲು ಹೋದರೆ ತಮ್ಮ ಸರಕುಗಳನ್ನು ಸ್ಥಳೀಯ ಹಿಂದುತ್ವ ಗುಂಪುಗಳಿಂದ ವಶಪಡಿಸಿಕೊಳ್ಳಲಾಗುತ್ತದೆ ಎಂಬ ಭಯದಿಂದ ಒಂದೇ ಸ್ಥಳದಲ್ಲಿ ಕುಳಿತಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಅವರು ಈ ವಿಷಯದಲ್ಲಿ ಮಧ್ಯಪ್ರವೇಶಿಸುವಂತೆ ಮತ್ತು ಕಾಶ್ಮೀರದ ಶಾಲು ಮಾರಾಟಗಾರರ ರಕ್ಷಣೆಯನ್ನು ಖಚಿತಪಡಿಸಿಕೊಳ್ಳುವಂತೆ ಕೇಳಿಕೊಂಡಿದ್ದಾರೆ.

ಬಿಲಾಸ್‌ಪುರದಲ್ಲಿ ಸ್ಥಳೀಯ ಹಿಂದುತ್ವ ಗುಂಪುಗಳಿಂದ ಕಾಶ್ಮೀರಿ ಮಾರಾಟಗಾರರು ಎದುರಿಸುತ್ತಿರುವ ದೌರ್ಜನ್ಯದ ಬಗ್ಗೆ ಸುಖ್ವಿಂದರ್ ಸಿಂಗ್ ಮತ್ತು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ಗಮನವನ್ನು ಸೆಳೆಯಲು ಮುಫ್ತಿ ಅವರು ಸಾಮಾಜಿಕ ಮಾಧ್ಯಮದಲ್ಲಿ ಮನವಿ ಮಾಡಿದ್ದಾರೆ. ಈ ವ್ಯಾಪಾರಿಗಳಿಗೆ ಸುರಕ್ಷಿತ ವಾತಾವರಣವನ್ನು ಖಚಿತಪಡಿಸುವಂತೆ ಸುಖ್ವಿಂದರ್ ಸಿಂಗ್ ಅವರನ್ನು ಕೇಳಿದ್ದಾರೆ.

ಹಿಮಾಚಲ ಪ್ರದೇಶದ ಬಿಲಾಸ್‌ಪುರ ಜಿಲ್ಲೆಯಲ್ಲಿ ಕಾಶ್ಮೀರಿ ಶಾಲು ಮಾರಾಟಗಾರರು ಹಿಂದುತ್ವ ಗುಂಪುಗಳಿಂದ ಕಿರುಕುಳ, ಹಲ್ಲೆ ಮತ್ತು ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ. ಈ ವ್ಯಾಪಾರಿಗಳು ಸರಿಯಾದ ದಾಖಲೆಗಳನ್ನು ಹೊಂದಿರುವ ಹೊರತಾಗಿಯೂ, ಅವರನ್ನು ವ್ಯಾಪಾರ ಮಾಡದಂತೆ ನಿರ್ಬಂಧಿಸಲಾಗಿದೆ ಮತ್ತು ಹೊರಹಾಕಲಾಗುತ್ತಿದೆ. ಇದು ಈ ರಾಜ್ಯದಲ್ಲಿ ನಡೆದ ಮೂರನೇ ಘಟನೆಯಾಗಿದ್ದು, ಉದ್ದೇಶಪೂರ್ವಕ ಕಿರುಕುಳವು ಆತಂಕಕಾರಿಯಾಗಿದೆ ಎಂದು ಮುಫ್ತಿ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ ಕಾಶ್ಮೀರಿ ಮಾರಾಟಗಾರರೊಬ್ಬರು, ನಾವು 3-4 ದಿನಗಳ ಕಾಲ ಇಲ್ಲಿ ಒಂದೇ ಕಡೆ ಕುಳಿತಿದ್ದೇವೆ. ನಮಗೆ ಕಿರುಕುಳ ನೀಡಲಾಗುತ್ತಿದೆ. ನಾವು ನಮ್ಮ ಸರಕುಗಳನ್ನು ಮಾರಾಟ ಮಾಡಲು ಬಸ್ ನಿಲ್ದಾಣಕ್ಕೆ ಹೋದಾಗ, ಅವಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ. ನಮಗೆ ವ್ಯಾಪಾರ ಮಾಡಲು ಬಿಡುತ್ತಿಲ್ಲ. ನಾವು ಆ ಪ್ರದೇಶದಿಂದ ದೂರ ಹೋಗಲು ಮತ್ತು ಕಾಶ್ಮೀರಕ್ಕೆ ಹಿಂತಿರುಗುವಂತೆ ಒತ್ತಾಯಿಸಲಾಗುತ್ತಿದೆ ಎಂದು ಆಳಲು ತೊಡಿಕೊಂಡಿದ್ದಾನೆ.

ನಾವು ಹಿಮಾಚಲ ಪ್ರದೇಶದ  ಸ್ಥಳೀಯ ಜನರಿಗೆ ತಾವೂ ಸಹ ಭಾರತೀಯರು ಮತ್ತು ನಮ್ಮ ಸರಕುಗಳನ್ನು ಇಲ್ಲಿ ಮಾರಾಟ ಮಾಡಬಹುದು ಎಂದು ಹೇಳಿದರೆ ಪ್ರಯೋಜನವಿಲ್ಲವಾಗಿದೆ.  ಸ್ಥಳೀಯ ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ ಮತ್ತು ಇತರ ಅಗತ್ಯ ದಾಖಲೆಗಳನ್ನು ಹೊಂದಿದ್ದರೂ ನಮಗೆ ವ್ಯಾಪಾರಕ್ಕೆ ಅನುಮತಿಸಲು ಸ್ಥಳೀಯರು ಸಿದ್ಧರಿಲ್ಲ ಎಂದು ಕಾಶ್ಮೀರಿ ವ್ಯಾಪಾರಿ ಹೇಳಿದ್ದಾನೆ.

ಅವರು ನಮಗೆ ಬೆದರಿಕೆ ಹಾಕುತ್ತಿದ್ದಾರೆ. ನಾವು ವ್ಯಾಪಾರ ಮಾಡುತ್ತಿರುವ ಸ್ಥಳದ ಮಾಲಿಕರಿಗೆ ಅಲ್ಲಿಂದ ಹೊರಹಾಕುವಂತೆ ಈ ಹಿಂದುತ್ವ ಗುಂಪುಗಳು ಕರೆ ನೀಡುತ್ತಿದ್ದಾರೆ. ನಾವು ಕಳೆದ 25 ,30 ಮತ್ತು 40 ವರ್ಷಗಳಿಂದ ತಮ್ಮ ಸರಕುಗಳನ್ನು ಇಲ್ಲಿ ಮಾರಾಟ ಮಾಡುತ್ತಿದ್ದೇವೆ ಎಂದು ಕಾಶ್ಮೀರಿ ಮಾರಾಟಗಾರರು ಮಾಹಿತಿ ನೀಡಿದ್ದಾರೆ.

ಸ್ಥಳೀಯ ಅಂಗಡಿಯವರೊಂದಿಗೆ ನಮಗೆ ಯಾವುದೇ ಸಮಸ್ಯೆ ಇಲ್ಲ. ಕೆಲವರು ಮಾತ್ರ ನಮ್ಮನ್ನು ಹೊರಹಾಕಲು ಒತ್ತಾಯಿಸುತ್ತಿದ್ದಾರೆ ಎಂದು ಮತ್ತೊಬ್ಬ ಕಾಶ್ಮೀರಿ ಮಾರಾಟಗಾರ ಹೇಳುತ್ತಾನೆ.

ಘಟನೆಯು ಹಿಮಾಚಲ ಪ್ರದೇಶದ ಬಿಲಾಸ್ಪುರದ ಘುಮರ್ವಿನ್ ಪಟ್ಟಣದಲ್ಲಿ ಸಂಭವಿಸಿದೆ. ಈ ನತದೃಷ್ಟ ಕಾಶ್ಮೀರಿ ಮಾರಾಟಗಾರರು ಘುಮರ್ವಿನ್‌ನ ಎಸ್‌ಡಿಎಂಗೆ ದೂರು ನೀಡಲು ಹೋಗಿದ್ದರು. ಎಸ್ ಡಿಎಂ ಅವರು ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡುವಂತೆ ಅವರನ್ನು ಕಳುಹಿಸಿದ್ದರು ಎಂದು ವರದಿಗಳು ಹೇಳಿವೆ.

ಸ್ಥಳೀಯ ವ್ಯಾಪಾರಿಗಳು ಮತ್ತು ಕಾಶ್ಮೀರಿ ಮಾರಾಟಗಾರರ ನಡುವಿನ ಈ ವಿವಾದವಾಗಿದೆ ಮತ್ತು ಈ ಬಗ್ಗೆ ದೂರು ಸ್ವೀಕರಿಸಲಾಗಿದೆ. ಕಳೆದ ವರ್ಷವೂ ಇಂತಹ ಘಟನೆಗಳು ವರದಿಯಾಗಿದ್ದವು. ಕೆಲ ವ್ಯಾಪಾರಿಗಳು ಮಾರಾಟಗಾರರಿಂದ ನಷ್ಟ ಅನುಭವಿಸುತ್ತಿದ್ದಾರೆ. ಇದುವರೆಗೆ ಹಲ್ಲೆ ನಡೆದಿರುವ ಬಗ್ಗೆ ವರದಿಯಾಗಿಲ್ಲ ಎಂದು ಬಿಲಾಸ್ಪುರ್ ಎಸ್ಪಿ ಸಂದೀಪ್ ಧವಾಲ್ ತಿಳಿಸಿದ್ದಾರೆ.

ಎರಡು ಗುಂಪುಗಳ ನಡುವಿನ ಜಗಳಕ್ಕೆ ಮಧ್ಯಸ್ಥಿಕೆ ವಹಿಸುವಂತೆ ಎಸ್ಪಿಯವರು ಡಿಸಿ ಕಚೇರಿಗೆ ಸೂಚಿಸಿದ್ದಾರೆ. ಮುಂದಿನ 2 ಅಥವಾ 3 ದಿನಗಳಲ್ಲಿ ಎರಡೂ ಗುಂಪುಗಳ ನಡುವೆ ಸಭೆ ನಡೆಯುವ ನಿರೀಕ್ಷೆಯಿದೆ. ಏತನ್ಮಧ್ಯೆ, ಜಮ್ಮು ಮತ್ತು ಕಾಶ್ಮೀರ ವಿದ್ಯಾರ್ಥಿಗಳ ಸಂಘದ ರಾಷ್ಟ್ರೀಯ ಸಂಚಾಲಕ ನಾಸಿರ್ ಖುಹಾಮಿ ಕಾಶ್ಮೀರಿಗಳ ವಿರುದ್ಧ ಇಂತಹ ಘಟನೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಅವರಿಗೆ ಕಾಶ್ಮೀರ ಬೇಕು, ಆದರೆ ಕಾಶ್ಮೀರಿಗಳು ಬೇಕಾಗಿಲ್ಲ. ಭಾರತದ ಕಲ್ಪನೆಗೆ ಇಂತಹ ಘಟನೆಗಳಿಂದ ಕಾಶ್ಮೀರದಲ್ಲಿ ಹೆಚ್ಚು ಹಾನಿಯಾಗುವುದಿಲ್ಲ. ಕಾಶ್ಮೀರಿಗಳಿಗೆ ಪ್ರತಿದಿನವೂ ಕಿರುಕುಳ ನೀಡುವುದು ಮತ್ತು ಬೆದರಿಕೆ ಹಾಕುವುದು ಸರಿಯಲ್ಲ. ಎರಡು ರಾಜ್ಯಗಳ ನಡುವೆ ನಿಜವಾದ ಏಕೀಕರಣವು ಗೌರವ, ಘನತೆ ಮತ್ತು ಸಹಾನುಭೂತಿಯಿಂದ ಬರುತ್ತದೆ ಎಂದು ಅವರು ಹೇಳಿದ್ದಾರೆ.

ಹಿಮಾಚಲ ಪ್ರದೇಶದ ಸ್ಥಳೀಯ ಆರ್ಥಿಕತೆಗೆ ಕಾಶ್ಮೀರವು ಅಪಾರ ಕೊಡುಗೆ ನೀಡಿದೆ ಮತ್ತು ಅಲ್ಲಿನ ಸಾಮಾಜಿಕ ರಚನೆಯ ಭಾಗವಾಗಿರುವ ಈ ಶಾಲು ಮಾರಾಟಗಾರರು ಈಗ ಬೆದರಿಕೆ ಮತ್ತು ಅಭದ್ರತೆಯನ್ನು ಎದುರಿಸುತ್ತಿದ್ದಾರೆ. ಇದು ಕಾಶ್ಮೀರಿ ಶಾಲು ಮಾರಾಟಗಾರರನ್ನು ಪ್ರತಿದಿನವೂ ಗುರಿಯಾಗಿಸುವ ಅಪಾಯಕಾರಿ ಮಾದರಿಯನ್ನು ಪ್ರತಿಬಿಂಬಿಸುತ್ತದೆ. ಏಕೆಂದರೆ ಇದು ಆ ರಾಜ್ಯದಲ್ಲಿ ನಡೆದ ಇಂತಹ ಮೂರನೇ ಘಟನೆಯಾಗಿದೆ. ಕಾಶ್ಮೀರಿಗಳ ವಿರುದ್ಧದ ಉದ್ದೇಶಿತ ಹಿಂಸಾಚಾರ ಕೊನೆಗೊಳ್ಳುವ ಲಕ್ಷಣಗಳಿಲ್ಲ ಕಾಣುತ್ತಿಲ್ಲ ಎಂದು ಖುಹಮಿ ಗಮನಸೆಳೆದಿದ್ದಾರೆ.

ಕೇರಳ | ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಪ್ರಕರಣ : ಸಿಪಿಐ(ಎಂ) ಮಾಜಿ ಶಾಸಕ ಸೇರಿ 14 ಮಂದಿ ದೋಷಿಗಳೆಂದು ತೀರ್ಪು ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...