Homeಮುಖಪುಟಹಿಂಡೆನ್‌ಬರ್ಗ್ ರಿಸರ್ಚ್ ಕಾರ್ಯಾಚರಣೆ ಸ್ಥಗಿತ : ಸಂಸ್ಥಾಪಕ ಆಂಡರ್ಸನ್ ಘೋಷಣೆ

ಹಿಂಡೆನ್‌ಬರ್ಗ್ ರಿಸರ್ಚ್ ಕಾರ್ಯಾಚರಣೆ ಸ್ಥಗಿತ : ಸಂಸ್ಥಾಪಕ ಆಂಡರ್ಸನ್ ಘೋಷಣೆ

ಅದಾನಿ ಸೇರಿದಂತೆ ಕಾರ್ಪೋರೇಟ್ ದೈತ್ಯರ ಅಕ್ರಮ ಬಯಲಿಗೆಳೆದಿದ್ದ ಸಂಸ್ಥೆ

- Advertisement -
- Advertisement -

ಅದಾನಿ ಸೇರಿದಂತೆ ಹಲವು ಕಾರ್ಪೋರೇಟ್ ದೈತ್ಯರ ಅಕ್ರಮಗಳನ್ನು ಬಯಲಿಗೆಳೆದಿದ್ದ ಅಮೆರಿಕದ ಶಾರ್ಟ್ ಸೆಲ್ಲರ್‌ ಸಂಸ್ಥೆ ಹಿಂಡನ್‌ಬರ್ಗ್‌ ರಿಸರ್ಚ್‌ ತನ್ನ ಕಾರ್ಯಾಚರಣೆ ಸ್ಥಗಿತಗೊಳಿಸಲು ನಿರ್ಧರಿಸಿದೆ.

“ನಾವು ಮುನ್ನಡೆಸುತ್ತಿದ್ದ ಎಲ್ಲಾ ಯೋಜನೆಗಳನ್ನು ಪೂರ್ಣಗೊಳಿಸಿದ್ದೇವೆ. ಹಾಗಾಗಿ ಸಂಸ್ಥೆಯನ್ನು ವಿಸರ್ಜಿಸುತ್ತೇವೆ ಎಂದು ಹಿಂಡನ್‌ಬರ್ಗ್ ಸಂಸ್ಥಾಪಕ ನೇಟ್ ಆಂಡರ್ಸನ್ ಬುಧವಾರ (ಜ.15) ಹೇಳಿದ್ದಾರೆ.

ಹಿಂಡನ್‌ಬರ್ಗ್ ರಿಸರ್ಚ್ ಸಂಸ್ಥಾಪಕ ನೇಟ್ ಆಂಡರ್ಸನ್ ಪ್ರಕಟಣೆ

ನೇಟ್ ಆಂಡರ್ಸನ್ ಅವರ ಸಂಪೂರ್ಣ ಹೇಳಿಕೆ ಇಲ್ಲಿದೆ 

2017ರಲ್ಲಿ ಸುಮಾರು 10 ಸಿಬ್ಬಂದಿಯೊಂದಿಗೆ ಸಣ್ಣ ಮಟ್ಟದಲ್ಲಿ ಸ್ಥಾಪನೆಯಾದ ಹಿಂಡನ್‌ಬರ್ಗ್‌, ಕಡಿಮೆ ಅವಧಿಯಲ್ಲಿ ಭಾರತ ಅದಾನಿ ಗ್ರೂಪ್‌ ಸೇರಿದಂತೆ ಜಗತ್ತಿನ ದೈತ್ಯ ಕಾರ್ಪೋರೇಟ್ ಕಂಪನಿಗಳ ಲೆಕ್ಕಪತ್ರ ದೋಷಗಳು ಸೇರಿದಂತೆ ಹಲವು ಅಕ್ರಮಗಳನ್ನು ಬಯಲಿಗೆಳೆದಿತ್ತು.

2023ರಲ್ಲಿ ಭಾರತೀಯ ಸಂಘಟಿತ ಸಂಸ್ಥೆಗಳ ವಿರುದ್ಧ ಹಿಂಡನ್‌ಬರ್ಗ್ ವರದಿ ಪ್ರಕಟಿಸಿತ್ತು. ಅದಾನಿ ಗ್ರೂಪ್ ಕಡಲಾಚೆಯ ತೆರಿಗೆಳನ್ನು ಅಸಮರ್ಪಕವಾಗಿ ಬಳಕೆ ಮಾಡುತ್ತಿದೆ ಎಂದು ಆರೋಪಿಸಿತ್ತು. ಆದರೆ, ಈ ಆರೋಪವನ್ನು ಅದಾನಿ ಗ್ರೂಪ್ ನಿರಾಕರಿಸಿತ್ತು.

ಅದಾನಿ ಗ್ರೂಪ್‌ ತನ್ನ ಕಂಪನಿಯ ಷೇರುಗಳ ಬೆಲೆಯನ್ನು ಕೃತಕವಾಗಿ ಹೆಚ್ಚಿಸಲು ಬಳಸಿದ ಮಾರಿಷಸ್‌ ನಿಧಿಯಲ್ಲಿ ಸೆಬಿ ಅಧ್ಯಕ್ಷೆ ಮಾಧವಿ ಪುರಿ ಬುಚ್‌ ಪಾಲು ಹೊಂದಿದ್ದಾರೆ ಎಂದು ಹಿಂಡನ್‌ಬರ್ಗ್ 2024ರಲ್ಲಿ ಆರೋಪ ಮಾಡಿತ್ತು. ಇದು ಷೇರುಪೇಟೆಯಲ್ಲಿ ಸಾಕಷ್ಟು ಸಂಚಲನ ಉಂಟು ಮಾಡಿತ್ತು. ಇದರಿಂದಾಗಿ ಅದಾನಿ ಗ್ರೂಪ್‌ ಷೇರುಗಳಲ್ಲಿ ಭಾರೀ ಕುಸಿತ ಉಂಟಾಗಿತ್ತು.

ಈ ನಡುವೆ 2024ರ ನವೆಂಬರ್‌ನಲ್ಲಿ ಬಹುಕೋಟಿ ಡಾಲರ್‌ ಲಂಚ ಮತ್ತು ವಂಚನೆ ಆರೋಪಿಸಿ ನ್ಯೂಯಾರ್ಕ್‌ನಲ್ಲಿ ಅದಾನಿ ಗ್ರೂಪ್‌ ಅಧ್ಯಕ್ಷ ಗೌತಮ್‌ ಅದಾನಿ ಸೇರಿದಂತೆ ಹಲವರ ವಿರುದ್ಧ ಚಾರ್ಜ್‌ಶೀಟ್‌ ದಾಖಲಿಸಲಾಗಿದೆ ಎಂದು ಯುಎಸ್‌ ಪ್ರಾಸಿಕ್ಯೂಟರ್‌ಗಳು ತಿಳಿಸಿದ್ದರು.

ಭಾರತಕ್ಕೆ ಸಂಬಂಧಪಟ್ಟಂತೆ ಅದಾನಿ ವಿರುದ್ದ ಹಿಂಡನ್‌ಬರ್ಗ್ ಮಾಡಿದ್ದ ಎರಡು ಪ್ರಮುಖ ಆರೋಪಗಳು ಜಾಗತಿಕ ಮಟ್ಟದಲ್ಲಿ ಸುದ್ದಿಯಾಗಿತ್ತು. ಅದಾನಿ ಕಂಪನಿಯನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು. ಭಾರತದಲ್ಲಿ ಆಡಳಿತ ಪಕ್ಷ ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಪ್ರತಿಪಕ್ಷಗಳ ಒಕ್ಕೂಟ ಕಾಂಗ್ರೆಸ್‌ ನೇತೃತ್ವದ ಇಂಡಿಯಾ ನಡುವೆ ತೀವ್ರ ತಿಕ್ಕಾಟ ನಡೆದಿತ್ತು.

ಬಿಜೆಪಿ ಮತ್ತು ಸಂಘ ಪರಿವಾರದ ಹಿಂದುತ್ವ ಸಂಘಟನೆಗಳು ಆದಾನಿ ವಿರುದ್ದ ಹಿಂಡನ್‌ಬರ್ಗ್‌ ಆರೋಪ ಭಾರತ ವಿರೋಧಿ ಕೃತ್ಯ ಎಂದು ಬಣ್ಣಿಸಿತ್ತು. ಹಿಂಡನ್‌ಬರ್ಗ್ ಅನ್ನು ಬೆಂಬಲಿಸಿದ್ದ ಪ್ರತಿಪಕ್ಷಗಳ ವಿರುದ್ದ ದೇಶದ್ರೋಹದ ಆರೋಪ ಮಾಡಿತ್ತು.

ಹಿಂಡನ್‌ಬರ್ಗ್ ಜಾಗತಿಕ ಮಟ್ಟದಲ್ಲಿ ಬಯಲಿಗೆಳೆದ ಕಾರ್ಪೋರೇಟ್ ಕಂಪನಿಗಳ ಅಕ್ರಮಗಳಲ್ಲಿಎಲೆಕ್ಟ್ರಿಕ್ ಟ್ರಕ್ ತಯಾರಕ ಕಂಪನಿ ನಿಕೋಲಾ ವಿರುದ್ಧದ ಪ್ರಕರಣವೂ ಒಂದು. ನಿಕೋಲಾ ತನ್ನ ತಂತ್ರಜ್ಞಾನದ ಸ್ಥಿತಿಯ ಬಗ್ಗೆ ಸುಳ್ಳು ಹೇಳುತ್ತಿದೆ ಎಂದು 2020ರಲ್ಲಿ ಹಿಂಡನ್‌ಬರ್ಗ್ ಆರೋಪಿಸಿತ್ತು.

ಪರಿಣಾಮ, ನಿಕೋಲಾ ಕಂಪನಿಯ ಮೇಲೆ ಕ್ರಿಮಿನಲ್ ವಂಚನೆ ಪ್ರಕರಣ ದಾಖಲಿಸಲಾಗಿತ್ತು. ಕಂಪನಿಯು ಯುಎಸ್‌ ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಕಮಿಷನ್‌ಗೆ 125 ಮಿಲಿಯನ್ ಡಾಲರ್ ಪಾವತಿಸಲು ಒಪ್ಪಿಕೊಂಡಿತ್ತು. ಇದು ಹಿಂಡನ್‌ಬರ್ಗ್‌ನ ಯಶಸ್ವಿ ವರದಿ ಎಂದು ಪರಿಗಣಿಸಲಾಗಿದೆ.

ಹಿಂಡೆನ್‌ಬರ್ಗ್ ವರದಿಯು ವಂಚನೆ ಆರೋಪ ಹೊರಿಸಿದ ನಂತರ ಅದಾನಿ ಗ್ರೂಪ್ 2023 ರಲ್ಲಿ ತನ್ನ ಮಾರುಕಟ್ಟೆ ಮೌಲ್ಯದಿಂದ 150 ಬಿಲಿಯನ್ ಡಾಲರ್ ಕಳೆದುಕೊಂಡಿತ್ತು.

ಬಹಳ ಕಡಿಮೆ ಅವಧಿಯಲ್ಲಿ ಜಾಗತಿಕ ಮಟ್ಟದಲ್ಲಿ ದೈತ್ಯ ಕಾರ್ಪೋರೇಟ್ ಕಂಪನಿಗಳ ಅಕ್ರಮ ಬಯಲಿಗೆಳೆದು, ಅವರನ್ನು ಎದುರು ಹಾಕಿಕೊಂಡಿರುವ ಹಿಂಡನ್‌ಬರ್ಗ್ ಹಠಾತ್ ಮುಚ್ಚುವ ನಿರ್ಧಾರಕ್ಕೆ ಬಂದಿರುವುದು ಏಕೆ ಎಂಬುವುದು ಸ್ಪಷ್ಟವಾಗಿಲ್ಲ.

ಆದರೆ, ಮುಂದಿನ ವಾರ ಅಮೆರಿದಲ್ಲಿ ಬೈಡೆನ್‌ ಆಡಳಿತ ಕೊನೆಗೊಂಡು ಪ್ರಧಾನಿ ಮೋದಿಯವರ ಆಪ್ತ ಡೊನಾಲ್ಡ್‌ ಟ್ರಂಪ್ ಅಧ್ಯಕ್ಷ ಹುದ್ದೆ ಅಲಂಕರಿಸಲಿದ್ದಾರೆ. ಅದಕ್ಕೂ ಮುನ್ನ ಹಿಂಡನ್‌ಬರ್ಗ್ ಸ್ಥಗಿತಕ್ಕೆ ಮುಂದಾಗಿರುವುದು ಗಮನಾರ್ಹ.

ಕಂಪನಿ ಮುಚ್ಚುವ ಪ್ರಕ್ರಿಯೆ ನಡೆಯುತ್ತಿದೆ. ಅದು ಪೂರ್ಣಗೊಂಡ ಬಳಿಕ ಕಾರ್ಯಾಚರಣೆ ಸ್ಥಗಿಗೊಳ್ಳಲಿದೆ ಎಂದು ಸಂಸ್ಥಾಪಕ ನೇಟ್ ಆಂಡರ್ಸನ್ ಹೇಳಿದ್ದಾರೆ.

ಇದುವರೆಗಿನ ತಮ್ಮ ಕಾರ್ಯಾಚರಣೆಯ ಅವಧಿಯಲ್ಲಿ ಕನಿಷ್ಠ 100 ಜನರು ಕೋಟ್ಯಾದಿಪತಿಗಳು, ಕಾರ್ಪೋರೇಟ್ ದೈತ್ಯರ ಮೇಲೆ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ ಎಂದು ಆಂಡರ್ನಸ್ ಮೆಲುಕು ಹಾಕಿದ್ದಾರೆ. “ನಾವು ಅಲುಗಾಡಿಸಬೇಕು ಎಂದಿದ್ದ ಕೆಲವು ಸಾಮ್ರಾಜ್ಯಗಳನ್ನು ಅಲುಗಾಡಿಸಿದ್ದೇವೆ” ಎಂದಿದ್ದಾರೆ.

ಮುಂದಿನ ಆರು ತಿಂಗಳಲ್ಲಿ ನಾವು ಹೇಗೆ ಸಂಶೋಧನೆಗಳನ್ನು ಮಾಡುತ್ತೇವೆ. ಹೇಗೆ ಅಕ್ರಮಗಳನ್ನು ಬಯಲಿಗೆಳೆಯುತ್ತೇವೆ ಎಂಬುವುದರ ಬಗ್ಗೆ ಸರಣಿ ವಿಡಿಯೋ ಮತ್ತು ಇತರ ರೀತಿಯಲ್ಲಿ ಮಾಹಿತಿ ಹಂಚಿಕೊಳ್ಳುತ್ತೇವೆ ಎಂದು ಆಂಡರ್ಸನ್ ತಿಳಿಸಿದ್ದಾರೆ.

ಕಂಪನಿ ಮುಚ್ಚುವ ನಿರ್ಧಾರದ ಹಿಂದೆ ಯಾವುದೇ ನಿರ್ದಿಷ್ಟ ಬೆದರಿಕೆ ಅಥವಾ ವೈಯಕ್ತಿಕ ಸಮಸ್ಯೆ ಇಲ್ಲ ಎಂದು ಆಂಡರ್ಸನ್ ಸ್ಪಷ್ಟಪಡಿಸಿದ್ದಾರೆ.

ಜನವರಿ 19 ರಿಂದ ಇಸ್ರೇಲ್-ಹಮಾಸ್ ಕದನ ವಿರಾಮ ಒಪ್ಪಂದ ಜಾರಿ ಸಾಧ್ಯತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...