Homeಮುಖಪುಟಮೋದಿ ಅವಧಿಯಲ್ಲಿ ಹಿಂದಿ ಹೇರಿಕೆಗೆ ಹೆಚ್ಚು ಅನುದಾನ/ಖರ್ಚು - ಆರ್‌ಟಿಐನಿಂದ ಬಹಿರಂಗ!

ಮೋದಿ ಅವಧಿಯಲ್ಲಿ ಹಿಂದಿ ಹೇರಿಕೆಗೆ ಹೆಚ್ಚು ಅನುದಾನ/ಖರ್ಚು – ಆರ್‌ಟಿಐನಿಂದ ಬಹಿರಂಗ!

ಮನಮೋಹನ ಸಿಂಗ್ ಕಾಲದಲ್ಲಿ ವಾರ್ಷಿಕ ಸರಾಸರಿ 9 ಲಕ್ಷದ 90 ಸಾವಿರ ವೆಚ್ಚ ತಗುಲಿದರೆ, ಮೋದಿಯವರ ಕಾಲದಲ್ಲಿ ಇದು ದ್ವಿಗುಣಗೊಂಡು ಸರಾಸರಿ 17 ಲಕ್ಷ 32 ಸಾವಿರ ವೆಚ್ಚ ತಗುಲಿದೆ

- Advertisement -
- Advertisement -

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ದೇಶದ ಇತರ ರಾಜ್ಯಗಳ ಮೇಲೆ ಹಿಂದಿ ಹೇರಿಕೆಯನ್ನು ಮಾಡುತ್ತಲೇ ಬಂದಿದೆ. ಕೇಂದ್ರ ಸರ್ಕಾರದ ಎಲ್ಲಾ ಕಛೇರಿಗಳಲ್ಲೂ ಹಿಂದಿಯನ್ನೇ ಬಳಸುವಂತೆ ಒತ್ತಾಯಿಸಿರುವ ಪ್ರಕರಣಗಳೂ ಸಾಕಷ್ಟಿವೆ. ಸಂವಿಧಾನದ ಅಡಿಯಲ್ಲಿ 22 ಭಾಷೆಗಳನ್ನು ಸಮಾನವಾಗಿ ಸೂಚಿಸಿದ್ದರೂ ಸಹ ಕೇವಲ ಹಿಂದಿಯನ್ನು ಮಾತ್ರ ಉನ್ನತೀಕರಿಸುತ್ತಿರುವುದರ ಬಗ್ಗೆ ದಕ್ಷಿಣ ಭಾರತದ ರಾಜ್ಯಗಳಿಂದ ವ್ಯಾಪಕ ವಿರೊಧ ವ್ಯಕ್ತವಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿಯೂ ವ್ಯಾಪಕ ಟೀಕೆಗಳು ಬಂದಿದ್ದವು.

ಹಿಂದಿ ದಿವಸ್‌ ಆಚರಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಬಿಡುಗಡೆ ಮಾಡಿರುವ ಹಣದ ಮಾಹಿತಿಯನ್ನು ಕೋರಿ ಆರ್‌ಟಿಐ ಕಾರ್ಯಕರ್ತರೊಬ್ಬರು ಸಲ್ಲಿಸಿದ್ದ ಅರ್ಜಿಯಲ್ಲಿ ಬಹಿರಂಗವಾಗಿರುವ ಮಾಹಿತಿ ನಿಜಕ್ಕೂ ಅಚ್ಚರಿಯನ್ನುಂಟುಮಾಡುತ್ತದೆ.

ಕಳೆದ 12 ವರ್ಷಗಳಲ್ಲಿ ‘ಹಿಂದಿ ದಿವಸ್‌’ ಆಚರಣೆಗೆ ಸರ್ಕಾರ ಖರ್ಚು ಮಾಡಿರುವ ಮೊತ್ತಕ್ಕೆ ಸಂಬಂಧಿಸಿದಂತೆ ಕೇಂದ್ರದ ‘ಅಧಿಕೃತ ಭಾಷೆಗಳ ಇಲಾಖೆ’ಯು ಮಾಹಿತಿ ನೀಡಿದ್ದು, “ಮಾಜಿ ಪ್ರಧಾನಿ ಮನಮೋಹನ ಸಿಂಗ್ ಆಡಳಿತದಲ್ಲಿ ಹಿಂದಿ ದಿವಸ್‌ಗೆ ಮೀಸಲಿಡುತ್ತಿದ್ದ ಹಣದ ಮೊತ್ತ ನರೇಂದ್ರ ಮೋದಿಯವರ ಆಡಳಿತಾವಧಿಯಲ್ಲಿ ದ್ವಿಗುಣಗೊಂಡಿದೆ” ಎಂದು ತಿಳಿದುಬಂದಿದೆ.

ಈ ಕುರಿತು ಟ್ವೀಟ್ ಮಾಡಿರುವ ಚಿರು, “ಹಿಂದಿ ದಿವಸ್ ಆಚರಣೆಗೆ ಕಳೆದ 12ವರ್ಷಗಳಿಂದ ತಗಲುತ್ತಿರುವ ವೆಚ್ಚದ ಬಗ್ಗೆ ಮಾಹಿತಿ ಕೋರಿ ನಾನು ಸೆಪ್ಟಂಬರ್ 17 ರಂದು RTI ಅರ್ಜಿ ಸಲ್ಲಿಸಿದ್ದೆ. 30 ದಿನಗಳ ಒಳಗೆ ಪ್ರತ್ಯುತ್ತರ ಬಾರದ ಕಾರಣ ಮೇಲ್ಮನವಿ ಮೊರೆ ಹೋಗಿದ್ದೆ. ಸುಮಾರು 2 ತಿಂಗಳ ನಂತರ ಈ ಸಂಬಂಧ ‘ಡಿಪಾರ್ಟ್ಮೆಂಟ್ ಆಫ್ ಅಫೀಷಿಯಲ್ ಲ್ಯಾಂಗ್ವೇಜ್’ ನಿಂದ ಪ್ರತ್ಯುತ್ತರ ಸಿಕ್ಕಿದೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಹಿಂದಿ ಹೇರಿಕೆ ಕುರಿತು ಉತ್ತರ ಭಾರತದ ಜನಪರ ಮುಖಂಡರ ಅಭಿಪ್ರಾಯವೇನು? – ಡಾ.ಎಚ್.ವಿ ವಾಸು

ಮತ್ತೊಂದು ಟ್ವೀಟ್‌ನಲ್ಲಿ ಕೇಂದ್ರ ಅಧಿಕೃತ ಭಾಷಾ ಇಲಾಖೆಯು ನೀಡಿರುವ ಮಾಹಿತಿಯನ್ನು ಹಂಚಿಕೊಂಡು, “2009-19 ರವರೆಗೆ ಇದಕ್ಕೆ ಸುಮಾರು 1.5 ಕೋಟಿ ವೆಚ್ಚ ತಗುಲಿದೆ. ಮನಮೋಹನ ಸಿಂಗ್ ಕಾಲದಲ್ಲಿ ವಾರ್ಷಿಕ ಸರಾಸರಿ 9 ಲಕ್ಷದ 90 ಸಾವಿರ ವೆಚ್ಚ ತಗುಲಿದರೆ, ಮೋದಿಯವರ ಕಾಲದಲ್ಲಿ ಇದು ದ್ವಿಗುಣಗೊಂಡು ಸರಾಸರಿ 17 ಲಕ್ಷ 32 ಸಾವಿರ ವೆಚ್ಚ ತಗುಲಿದೆ. ಇಷ್ಟೊಂದು ಯಥೇಚ್ಛವಾಗಿ ಖರ್ಚು ಮಾಡಲು ಅಚ್ಚೆ ದಿನ್ ಕಾರಣವಿರಬಹುದೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹಿಂದಿ ಹೇರಿಕೆಯೆಂಬ ಸಾಂಸ್ಕೃತಿಕ ಸರ್ವಾಧಿಕಾರ! ದಕ್ಷಿಣದ ಭಾಷೆಗಳಿರಲಿ, ಉತ್ತರದ ತಾಯ್ನುಡಿಗಳನ್ನೂ ತಿಂದು ತೇಗಿದೆ ಹಿಂದಿ!

ಇದನ್ನೂ ಓದಿ: ಹಿಂದಿ ಹೇರಿಕೆಯನ್ನು ಒಪ್ಪಲು ಸಾಧ್ಯವಿಲ್ಲ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌

ಈ ಮಾಹಿತಿಯ ಪ್ರಕಾರ, 2009 ರಲ್ಲಿ ಹಿಂದಿ ದಿವಸ್ ಆಚರಣೆಗೆ ಮಾಡಿರುವ ಖರ್ಚು 8 ಲಕ್ಷದ 68 ಸಾವಿರದ 305 ರೂಗಳಾಗಿದ್ದರೆ, 2019 ರಲ್ಲಿ 15 ಲಕ್ಷದ 39 ಸಾವಿರದ 511 ರೂಗಳು ಖರ್ಚಾಗಿದೆ. ಅಂದರೆ ನರೇಂದ್ರ ಮೋದಿಯವರ ಆಡಳಿತಾವಧಿಯಲ್ಲಿ ಸರಾಸರಿ 17 ಲಕ್ಷದ 32 ಸಾವಿರ ರೂಗಳನ್ನು ಹಿಂದಿ ದಿವಸ್‌ಗೆ ಖರ್ಚು ಮಾಡಲಾಗಿದೆ.

ಈ ಮೂಲಕ ಹಿಂದಿ ಭಾಷೆಯನ್ನು ಮಾತ್ರವಲ್ಲದೇ ಉತ್ತರ ಭಾರದ ಸಂಸ್ಕೃತಿಯನ್ನೂ ಸಹ ದೇಶದ ಇತರ ರಾಜ್ಯಗಳ ಮೇಲೆ ಬಲವಂತವಾಗಿ ಹೇರುವ ಹುನ್ನಾರ ನಡೆಯುತ್ತಿದೆ. ಇದರಿಂದ ಭವಿಷ್ಯದಲ್ಲಿ ಹಿಂದಿ ಮಾತ್ರ ಉಳಿದುಕೊಂಡು ಇತರೆ ಭಾಷೆಗಳ ಅಸ್ಮಿತೆ ನಾಶವಾಗುತ್ತದೆ.

ಕೇಂದ್ರ ಸರ್ಕಾರದ ಹಿಂದಿಪರ ಧೋರಣೆ ಏನೆಂಬುದು ಇದರಿಂದಲೇ ತಿಳಿಯುತ್ತದೆ. ಹಿಂದಿಗಾಗಿ ಇಷ್ಟು ಹಣ ಖರ್ಚು ಮಾಡುವುದರಲ್ಲಿ ತಕರಾರಿಲ್ಲ. ಆದರೆ ಹಿಂದಿಯಂತೆಯೇ ಇತರ ಭಾಷೆಗಳಿಗೂ ಇದೇ ಪ್ರಧಾನ್ಯತೆ ನೀಡಬೇಕು ಎಂಬುದು ಎಲ್ಲರ ಪ್ರಮುಖ ಕೂಗಾಗಿದೆ.


ಇದನ್ನೂ ಓದಿ: ಹಿಂದಿ ಹೇರಿಕೆ ಬಗ್ಗೆ ನಿರ್ದೇಶಕ ಪವನ್ ಕುಮಾರ್‌ ’ಯೂ ಟರ್ನ್’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...