Homeಮುಖಪುಟಹಿಂದಿ ಹೇರಿಕೆ | ಕೇಂದ್ರ ಸರ್ಕಾರದ ವಿರುದ್ಧ ನಿರ್ಣಯ ತೆಗೆದುಕೊಂಡ ಡಿಎಂಕೆ

ಹಿಂದಿ ಹೇರಿಕೆ | ಕೇಂದ್ರ ಸರ್ಕಾರದ ವಿರುದ್ಧ ನಿರ್ಣಯ ತೆಗೆದುಕೊಂಡ ಡಿಎಂಕೆ

- Advertisement -
- Advertisement -

ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಉನ್ನತ ಮಟ್ಟದ ಸಭೆಯು ಹಿಂದಿಯೇತರ ರಾಜ್ಯಗಳ ಮೇಲೆ ಹಿಂದಿಯನ್ನು ಹೇರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಲಾಗಿದ್ದು, ಜಾತಿ ಆಧಾರಿತ ಜನಗಣತಿಯನ್ನು ವಿಳಂಬ ಮಾಡುತ್ತಿರುವ ಕೇಂದ್ರ ಸರ್ಕಾರವನ್ನು ಪಕ್ಷ ಸಭೆಯ ನಿರ್ಣಯದಲ್ಲಿ ತೀವ್ರವಾಗಿ ಟೀಕಿಸಿದೆ. ಈ ಮೂಲಕ 2026ರಲ್ಲಿ ನಡೆಯುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಆಡಳಿತರೂಢ ಡಿಎಂಕೆ ಪಕ್ಷವು ತಯಾರಿ ಪ್ರಾರಂಭಿಸಿದೆ. ಹಿಂದಿ ಹೇರಿಕೆ

ಮಣಿಪುರದಲ್ಲಿ ನಡೆಯುತ್ತಿರುವ ಬಿಕ್ಕಟ್ಟಿನ ಬಗ್ಗೆ “ಮೂಕ ಪ್ರೇಕ್ಷಕ”ನಾಗಿ ಇರುವ ಬದಲಿಗೆ ಸಕ್ರಿಯವಾಗಿ ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಡಿಎಂಕೆ ಕರೆ ನೀಡಿದೆ. ಗಲಭೆ ಪೀಡಿತ ಮಣಿಪುರದಲ್ಲಿ ಎಲ್ಲಾ ಜನರ ಸುರಕ್ಷತೆಯನ್ನು ಖಾತ್ರಿಪಡಿಸುವ ಮತ್ತು ಈ ಪ್ರದೇಶದಲ್ಲಿ ಮಾನವೀಯತೆಯನ್ನು ಪುನಃಸ್ಥಾಪಿಸುವ ಅಗತ್ಯವನ್ನು ಪಕ್ಷವು ಒತ್ತಿಹೇಳಿದೆ. ಹಿಂದಿ ಹೇರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

16 ನೇ ಹಣಕಾಸು ಆಯೋಗದ ಶಿಫಾರಸುಗಳಲ್ಲಿ ತಮಿಳುನಾಡಿನ ವಿನಂತಿಗಳನ್ನು ಸೇರಿಸುವಂತೆ ಸಭೆಯಲ್ಲಿ ಅಂಗೀಕರಿಸಲಾದ ಮತ್ತೊಂದು ನಿರ್ಣಯಲ್ಲಿ ಡಿಎಂಕೆ ಪಕ್ಷವೂ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ರಾಜ್ಯದ ಆರ್ಥಿಕ ಅಗತ್ಯಗಳನ್ನು ಪರಿಣಾಮಕಾರಿಯಾಗಿ ಪರಿಹರಿಸಲು ಈ ನಿರ್ಣಯಗಳನ್ನು ಅಂಗೀಕರಿಸಲು ಪಕ್ಷವು ಕರೆ ನೀಡಿದೆ.

2026 ರ ತಮಿಳುನಾಡು ವಿಧಾನಸಭಾ ಚುನಾವಣೆಯ ತಯಾರಿಯ ಭಾಗವಾಗಿ ತಳಮಟ್ಟದ ಸಾಂಸ್ಥಿಕ ಕೆಲಸವನ್ನು ತಕ್ಷಣವೇ ಪ್ರಾರಂಭಿಸಲು ಡಿಎಂಕೆ ನಾಯಕತ್ವವು ತನ್ನ ಪಕ್ಷದ ಕಾರ್ಯಕರ್ತರಿಗೆ ನಿರ್ದೇಶನ ನೀಡಿದೆ. ಅಷ್ಟೆ ಅಲ್ಲದೆ, ಪಕ್ಷವೂ ವಿಧಾನಸಭಾ ಚುನಾವಣೆಯ ತಯಾರಿಗಾಗಿ ರಾಜ್ಯದ ಎಲ್ಲಾ 234 ವಿಧಾನಸಭಾ ಕ್ಷೇತ್ರಗಳಿಗೆ ಈಗಾಗಲೆ ಪೂರ್ಣಾವಧಿ ಕಾರ್ಯಕರ್ತರನ್ನು ನೇಮಿಸಿದೆ.

ಆಯ್ಕೆ ಮಾಡಲಾದ ಅರ್ಧದಷ್ಟು ಪೂರ್ಣಾವಧಿ ಕಾರ್ಯಕರ್ತರು 2024 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಉತ್ತಮ ಕಾರ್ಯಕ್ಷಮತೆ ತೋರಿರುವವರಾಗಿದ್ದಾರೆ. ಲೋಕಸಭಾ ಚುನಾವಣೆ ವೇಳೆ ಡಿಎಂಕೆ ನೇತೃತ್ವದ ಇಂಡಿಯಾ ಒಕ್ಕೂಟವು ತಮಿಳುನಾಡಿನ ಎಲ್ಲಾ 39 ಸ್ಥಾನಗಳನ್ನು ಮತ್ತು ಪುದುಚೇರಿಯಲ್ಲಿರುವ ಏಕೈಕ ಸ್ಥಾನವನ್ನು ಗೆದ್ದು ಭರ್ಜರಿ ಜಯ ಸಾಧಿಸಿದೆ.

ನೇಮಕಗೊಂಡ ಪೂರ್ಣಾವಧಿ ಕಾರ್ಯಕರ್ತರು ತಮ್ಮ ಕ್ಷೇತ್ರಗಳಲ್ಲಿನ ಸಾಮರ್ಥ್ಯ ಮತ್ತು ದೌರ್ಬಲ್ಯಗಳನ್ನು ಗುರುತಿಸಿ ರಾಜ್ಯ ಪಕ್ಷದ ಪ್ರಧಾನ ಕಛೇರಿಗೆ ಸಾಪ್ತಾಹಿಕ ಪ್ರಗತಿ ವರದಿಗಳನ್ನು ಸಲ್ಲಿಸಬೇಕಾಗುತ್ತದೆ. ಅಲ್ಲದೆ, ಸಮನ್ವಯವನ್ನು ಹೆಚ್ಚಿಸಲು ಮತ್ತು ಪ್ರತಿ ಜಿಲ್ಲೆಯ ಕಾರ್ಯಕ್ಷಮತೆಯ ಮೇಲ್ವಿಚಾರಣೆ ಮಾಡಲು ಸಚಿವರನ್ನು ನೇಮಿಸಲಾಗಿದೆ. ಈ ಸಚಿವರು ಕ್ಷೇತ್ರದ ಉಸ್ತುವಾರಿಗಳೊಂದಿಗೆ ನಿಕಟವಾಗಿ ಕೆಲಸ ಮಾಡಲಿದ್ದು, ಪ್ರಗತಿಯ ಮೇಲ್ವಿಚಾರಣೆ ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಮತ್ತು ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳುತ್ತಾರೆ.

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಸಚಿವರ ಕಾರ್ಯವೈಖರಿಯನ್ನು ಖುದ್ದಾಗಿ ಗಮನಿಸಲಿದ್ದು, 2026 ರ ಚುನಾವಣೆಯಲ್ಲಿ 234 ವಿಧಾನಸಭಾ ಸ್ಥಾನಗಳ ಪೈಕಿ 200 ಸ್ಥಾನಗಳನ್ನು ಗೆಲ್ಲುವ ಡಿಎಂಕೆ ಸಾಮರ್ಥ್ಯದ ಬಗ್ಗೆ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ 133 ಸ್ಥಾನಗಳನ್ನು ಹೊಂದಿರುವ ಪಕ್ಷವು ಮಹತ್ವಾಕಾಂಕ್ಷೆಯ ಗುರಿಯನ್ನು ಹೊಂದಿದ್ದು, ಅದಕ್ಕಾಗಿ ಕಠಿಣವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರಾಖಂಡ | 55 ವರ್ಷ ಹಳೆಯ ಮಸೀದಿಯನ್ನು ಕೆಡವಲು ಬಿಜೆಪಿ ಪರ ಸಂಘಟನೆಗಳ ಬೇಡಿಕೆ; ಹೈಕೋರ್ಟ್ ಮಟ್ಟಿಲೇರಿದ ವಿವಾದ

ಉತ್ತರಾಖಂಡ | 55 ವರ್ಷ ಹಳೆಯ ಮಸೀದಿಯನ್ನು ಕೆಡವಲು ಬಿಜೆಪಿ ಪರ ಸಂಘಟನೆಗಳ ಬೇಡಿಕೆ; ಹೈಕೋರ್ಟ್ ಮಟ್ಟಿಲೇರಿದ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...