Homeಮುಖಪುಟತಮಿಳುನಾಡಿನಲ್ಲಿ ಹಿಂದಿ ಹೇರಿಕೆ ಮಾಡಲ್ಲ: ಕೇಂದ್ರ ಶಿಕ್ಷಣ ಸಚಿವ

ತಮಿಳುನಾಡಿನಲ್ಲಿ ಹಿಂದಿ ಹೇರಿಕೆ ಮಾಡಲ್ಲ: ಕೇಂದ್ರ ಶಿಕ್ಷಣ ಸಚಿವ

- Advertisement -
- Advertisement -

2020 ರ ರಾಷ್ಟ್ರೀಯ ಶಿಕ್ಷಣ ನೀತಿಯು ತಮಿಳುನಾಡಿನಲ್ಲಿ ಹಿಂದಿಯನ್ನು ಹೇರುವುದಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಭಾನುವಾರ ಪುನರುಚ್ಚರಿಸಿದ್ದಾರೆ. ತಮಿಳುನಾಡಿನಲ್ಲಿ ಈ ಯೋಜನೆಗೆ ವಿರೋಧ ವ್ಯಕ್ತವಾಗುತ್ತಿರುವುದು ರಾಜಕೀಯ ಉದ್ದೇಶಗಳ ಕಾರಣಕ್ಕಾಗಿ ಎಂದು ಅವರು ಪ್ರತಿಪಾದಿಸಿದ್ದಾರೆ.

“ಎನ್‌ಇಪಿ 2020 ಹಿಂದಿ, ತಮಿಳು, ಒಡಿಯಾ, ಪಂಜಾಬಿ ಸೇರಿದಂತೆ ಭಾರತದ ವಿವಿಧ ಭಾಷೆಗಳ ಮೇಲೆ ಕೇಂದ್ರೀಕೃತವಾಗಿದೆ. ಈ ಎಲ್ಲಾ ಭಾಷೆಗಳು ಸಮಾನ ಪ್ರಾಮುಖ್ಯತೆಯನ್ನು ಹೊಂದಿವೆ.” ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

“ತಮಿಳುನಾಡಿನಲ್ಲಿ ರಾಜಕೀಯ ಕಾರಣಕ್ಕಾಗಿ ಕೆಲವರು [ಎನ್‌ಇಪಿ]ಯನ್ನು ವಿರೋಧಿಸುತ್ತಿದ್ದಾರೆ. ಎನ್‌ಇಪಿ 2020 ರಲ್ಲಿ ಹಿಂದಿ ಮಾತ್ರ ಇರುತ್ತದೆ ಎಂದು ನಾವು ಎಂದಿಗೂ ಹೇಳಿಲ್ಲ. ಶಿಕ್ಷಣವು ಮಾತೃಭಾಷೆಯನ್ನು ಆಧರಿಸಿರುತ್ತದೆ ಎಂದು ಮಾತ್ರ ನಾವು ಹೇಳಿದ್ದೇವೆ. ತಮಿಳುನಾಡಿನಲ್ಲಿ ಅದು ತಮಿಳು ಆಗಿರುತ್ತದೆ.” ಎಂದು ಅವರು ಹೇಳಿದ್ದಾರೆ.

ತಮಿಳುನಾಡಿನ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ ಸೇರಿದಂತೆ ತಮಿಳುನಾಡಿನ ರಾಜಕೀಯ ಪಕ್ಷಗಳು ತ್ರಿಭಾಷಾ ಸೂತ್ರದ ಅಡಿಯಲ್ಲಿ ಹಿಂದಿಯನ್ನು ಮೂರನೇ ಭಾಷೆಯಾಗಿ ಹೇರುವ ಪ್ರಯತ್ನಗಳನ್ನು ಬಹಳ ಹಿಂದಿನಿಂದಲೂ ವಿರೋಧಿಸುತ್ತಿವೆ.

ಕೇಂದ್ರದ ತ್ರಿಭಾಷಾ ನೀತಿಯು ವಿದ್ಯಾರ್ಥಿಗಳಿಗೆ ಇಂಗ್ಲಿಷ್, ಹಿಂದಿ ಮತ್ತು ರಾಜ್ಯದ ಸ್ಥಳೀಯ ಭಾಷೆಯನ್ನು ಕಲಿಸುವುದನ್ನು ಸೂಚಿಸುತ್ತದೆ. ಇದನ್ನು 1968 ರಲ್ಲಿ ಮೊದಲ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪರಿಚಯಿಸಲಾಯಿತು ಮತ್ತು 2020 ರಿಂದ ಹೊಸ ನೀತಿಯಲ್ಲಿ ಉಳಿಸಿಕೊಳ್ಳಲಾಯಿತು.

ಕೃತಕ ಬುದ್ಧಿಮತ್ತೆಯ ಯುಗದಲ್ಲಿ ಶಾಲೆಗಳಲ್ಲಿ ಯಾವುದೇ ಭಾಷೆಯನ್ನು ಮೂರನೇ ಭಾಷೆಯಾಗಿ ಒತ್ತಾಯಿಸುವುದು ಅನಗತ್ಯ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹೇಳಿದ ಎರಡು ದಿನಗಳ ನಂತರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಈ ಹೇಳಿಕೆಗಳನ್ನು ನೀಡಿದ್ದಾರೆ.

ಫೆಬ್ರವರಿ 21 ರಂದು ರಾಷ್ಟ್ರೀಯ ಶಿಕ್ಷಣ ನೀತಿಯು ಯಾವುದೇ ಭಾಷೆಯನ್ನು ಹೇರುವುದನ್ನು ಪ್ರತಿಪಾದಿಸುವುದಿಲ್ಲ ಎಂದು ಹೇಳಿದ್ದ ಹೇಳಿಕೆಗಳನ್ನು ಧರ್ಮೇಂದ್ರ ಪ್ರಧಾನ್ ಭಾನುವಾರ ಪುನರುಚ್ಚರಿಸಿದ್ದಾರೆ. ಸಿಎಂ ಸ್ಟಾಲಿನ್‌ ಅವರಿಗೆ ಬರೆದ ಪತ್ರದಲ್ಲಿ, ರಾಜಕೀಯ ಭಿನ್ನಾಭಿಪ್ರಾಯಗಳ ಹೊರತಾಗಿಯೂ ಈ ನೀತಿಯನ್ನು ಬಿಜೆಪಿಯೇತರ ರಾಜ್ಯಗಳು ಜಾರಿಗೆ ತಂದಿವೆ ಎಂದು ಹೇಳಿದ್ದರು.

ತಮಿಳುನಾಡು ಈ ನೀತಿಯನ್ನು “ಸಂಕುಚಿತ ದೃಷ್ಠಿ”ಯಿಂದ ನೋಡುವುದು ಮತ್ತು ಅಂತಹ ಸುಧಾರಣೆಗಳನ್ನು ತಮ್ಮ ರಾಜಕೀಯ ನಿರೂಪಣೆಗಳನ್ನು ಉಳಿಸಿಕೊಳ್ಳಲು ಬೆದರಿಕೆಗಳಾಗಿ ಪರಿವರ್ತಿಸುವುದು ಸೂಕ್ತವಲ್ಲ ಎಂದು ಅವರು ಸಿಎಂ ಸ್ಟಾಲಿನ್‌ ಅವರಿಗೆ ಹೇಳಿದ್ದರು.

ಸಮಗ್ರ ಶಿಕ್ಷಾ ಯೋಜನೆಯಡಿ ತಮಿಳುನಾಡಿಗೆ ಬಿಡುಗಡೆಯಾದ 2,152 ಕೋಟಿ ರೂ. ಬಾಕಿ ಹಣವನ್ನು ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನಕ್ಕೆ ಲಿಂಕ್ ಮಾಡದೆ ಪಡೆಯುವಲ್ಲಿ ಮಧ್ಯಪ್ರವೇಶಿಸುವಂತೆ ಕೋರಿ ಸ್ಟಾಲಿನ್ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಒಂದು ದಿನದ ನಂತರ ಧರ್ಮೇಂದ್ರ ಪ್ರಧಾನ್ ಅವರು ಈ ಹೇಳಿಕೆ ನೀಡಿದ್ದರು.

2018 ರಲ್ಲಿ ಜಾರಿಗೆ ತರಲಾದ ಸಮಗ್ರ ಶಿಕ್ಷಾ, ಕೇಂದ್ರ ಸರ್ಕಾರವು ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ಶಿಕ್ಷಣಕ್ಕೆ ಬೆಂಬಲ ನೀಡುವ ಯೋಜನೆಯಾಗಿದೆ.

ಕೇಂದ್ರ ಸರ್ಕಾರವು ತಾನು ಕಡ್ಡಾಯಗೊಳಿಸಿದ ಕಾರ್ಯಕ್ರಮಗಳನ್ನು ಅಳವಡಿಸಿಕೊಳ್ಳುವಂತೆ ರಾಜ್ಯಗಳನ್ನು ಒತ್ತಾಯಿಸುವ ತಂತ್ರವಾಗಿ ಹಣವನ್ನು ತಡೆಹಿಡಿಯುತ್ತಿದೆ ಎಂದು ಸ್ಟಾಲಿನ್ ಆರೋಪಿಸಿದ್ದಾರೆ. ತಮ್ಮ ರಾಜ್ಯವು ಎರಡು ಭಾಷಾ ನೀತಿಯನ್ನು ಹೊಂದಿದ್ದು, ಅದು ವಿದ್ಯಾರ್ಥಿಗಳಿಗೆ ತಮಿಳು ಮತ್ತು ಇಂಗ್ಲಿಷ್ ಕಲಿಸುವುದನ್ನು ಒಳಗೊಂಡಿದೆ ಎಂದು ಅವರು ಹೇಳಿದ್ದಾರೆ.

ತಮಿಳುನಾಡಿಗೆ ಸಮಗ್ರ ಶಿಕ್ಷಾ ಕಾರ್ಯಕ್ರಮದಡಿಯಲ್ಲಿ ರಾಜ್ಯವು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸಂಪೂರ್ಣವಾಗಿ ಜಾರಿಗೆ ತರುವವರೆಗೆ ಮತ್ತು ತ್ರಿಭಾಷಾ ನೀತಿಯನ್ನು ಅಳವಡಿಸಿಕೊಳ್ಳುವವರೆಗೆ ಹಣವನ್ನು ಬಿಡುಗಡೆ ಮಾಡುವುದಿಲ್ಲ ಎಂದು ಧರ್ಮೇಂದ್ರ ಪ್ರಧಾನ್ ಅವರು ಈ ಹಿಂದೆ ನೀಡಿದ್ದ ಹೇಳಿಕೆಗಳಿಗೆ ಪ್ರತಿಕ್ರಿಯೆಯಾಗಿ ಸ್ಟಾಲಿನ್ ಈ ಹೇಳಿಕೆ ನೀಡಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಇಂದಿನಿಂದ ವಿಧಾನಮಂಡಲದ ಬಜೆಟ್ ಅಧಿವೇಶನ : ಉಭಯ ಪಕ್ಷಗಳ ವಾಗ್ಯುದ್ಧಕ್ಕೆ ವೇದಿಕೆ ಸಜ್ಜು

ಇಂದಿನಿಂದ ವಿಧಾನಮಂಡಲದ ಬಜೆಟ್ ಅಧಿವೇಶನ : ಉಭಯ ಪಕ್ಷಗಳ ವಾಗ್ಯುದ್ಧಕ್ಕೆ ವೇದಿಕೆ ಸಜ್ಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...