Homeಮುಖಪುಟಕರ್ನಾಟಕದಲ್ಲಿ ಕನ್ನಡ ಮಾಯ, ತಮಿಳುನಾಡಿನಲ್ಲಿ ತಮಿಳುಮಯ: ಹಿಂದಿ ಹೇರಿಕೆಗೆ ಆಕ್ರೋಶ

ಕರ್ನಾಟಕದಲ್ಲಿ ಕನ್ನಡ ಮಾಯ, ತಮಿಳುನಾಡಿನಲ್ಲಿ ತಮಿಳುಮಯ: ಹಿಂದಿ ಹೇರಿಕೆಗೆ ಆಕ್ರೋಶ

- Advertisement -
- Advertisement -

ಜನವರಿ 16ರಂದು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಸಮೀಪ ರಾಜ್ಯ ಸರ್ಕಾರದ ವತಿಯಿಂದ ನಡೆದ ಕ್ಷಿಪ್ರ ಕಾರ್ಯಪಡೆ ಬೆಟಾಲಿಯನ್ ಸ್ಥಾಪನೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣಿಸಿ ಹಿಂದಿಯಲ್ಲಿ ಬ್ಯಾನರ್, ನಿರೂಪಣೆ ಸೇರಿದಂತೆ ಇಡೀ ಕಾರ್ಯಕ್ರಮ ನಡೆಸಲಾಗಿತ್ತು. ಆದರೆ ನಿನ್ನೆ ಪ್ರಧಾನಿ ಮೋದಿಯವರು ತಮಿಳುನಾಡಿನಲ್ಲಿ ಚನ್ನೈ ಮೆಟ್ರೋ ಸೇರಿದಂತೆ ಹಲವು ಶಂಕುಸ್ಥಾಪನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಕಾರ್ಯಕ್ರಮದ ಆಹ್ವಾನ ಪತ್ರಿಕೆ, ವೇದಿಕೆಯ ಬ್ಯಾನರ್ ಮತ್ತು ಭಾಷಣ ಸೇರಿದಂತೆ ಎಲ್ಲಿಯೂ ಹಿಂದಿ ಬಳಸಿಲ್ಲ. ಇದು ಕನ್ನಡಿಗರನ್ನು ಕೆರಳಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಕರ್ನಾಟಕದಲ್ಲಿ ಬಿಜೆಪಿ ಆಡಳಿತವಿದೆ. ಹಾಗಾಗಿ ಇಲ್ಲಿನ ಬಿಜೆಪಿ ಮುಖಂಡರು ಹೈಕಮಾಂಡ್‌ ಅನ್ನು ಒಲೈಸುವುದಕ್ಕಾಗಿ ಕನ್ನಡವನ್ನು ಕಡೆಗಣಿಸಿ ಹಿಂದಿ ಹೇರಿಕೆ ಮಾಡುತ್ತಾರೆ. ಆದರೆ ತಮಿಳುನಾಡಿನಲ್ಲಿ ಹಿಂದಿ ಹೇರಿಕೆಯ ವಿರುದ್ಧ ಗಟ್ಟಿ ಚಳವಳಿ ಇದೆ. ಅಲ್ಲದೇ ಅಲ್ಲಿ ಬಿಜೆಪಿ ಸರ್ಕಾರವಿಲ್ಲ. ಬಿಜೆಪಿಯ ಮಿತ್ರ ಪಕ್ಷಗಳು ಸಹ ಹಿಂದಿ ಹೇರಿಕೆಗೆ ಭಯಪಡುತ್ತಾರೆ. ಹಾಗಾಗಿ ಅಲ್ಲಿ ಹಿಂದಿ ಹೇರಿಕೆ ನಡೆಯುವುದಿಲ್ಲ. ಕರ್ನಾಟಕಕ್ಕೆ ಈ ಅನ್ಯಾಯ ಏಕೆ ಎಂದು ಕನ್ನಡಿಗರು ಪ್ರಶ್ನಿಸಿದ್ದಾರೆ.

ಮೋದಿ ಕೇರಳದ ಕಾರ್ಯಕ್ರಮದಲ್ಲಿ ಇಂಗ್ಲಿಷ್ ಅಲ್ಲಿ ಮಾತಾಡ್ತಾರೆ, ಅದಕ್ಕೆ ಮಲಯಾಳಂ ಅನುವಾದ ಸಹ ಇರುತ್ತೆ. ಅದೇ ನಮ್ಮಲ್ಲಿಗೆ ಬಂದ್ರೆ ಹಿಂದಿಲಿ ಮಾತಾಡ್ತಾರೆ, ಕನ್ನಡದ ಅನುವಾದ ಸಹ ಇರೋಲ್ಲ. ಕರಾವಳಿ ಜನ ಅಂತೂ ಅನುವಾದ ಬೇಡ ಅಂತಾರೆ. ಬಿಜೆಪಿನ ಗೆಲ್ಲಿಸಿದ್ದಕ್ಕೆ ನಮಗೆ ಸಿಗೋದು ಏನಪ್ಪಾ ಅಂದ್ರೆ #ಹಿಂದಿಹೇರಿಕೆ ಎಂದು ಸತ್ಯ ಹೊಳ್ಳ ಎಂಬುವವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಮಿಳು ನಾಡಿನಲ್ಲಿ ನಡೆದಿರುವ ಕಾರ್ಯಕ್ರಮದಲ್ಲಿ ತಮಿಳು ಇರುತ್ತದೆ, ಕರ್ನಾಟಕದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕನ್ನಡ ಇರೊಲ್ಲಾ. ಇದರ ಅರ್ಥ, ಸಾವಿರಾರು ವರ್ಷ ಸ್ವಾಭಿಮಾನಿಗಳಾಗಿ ಬದುಕಿದ್ದ ಕನ್ನಡಿಗರು ಹುಸಿ ದೇಶಪ್ರೇಮದ ಹೆಸರಲ್ಲಿ ಸ್ವಾಭಿಮಾನ ಮರೆತು ಬದುಕುತ್ತಿದ್ದೇವೆ ಎಂದು ಅರುಣ್ ಜಾವಗಲ್ ವಿಷಾಧ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ವಿರೋಧ ಪಕ್ಷದಲ್ಲಿರೋ ಕಾಂಗ್ರೆಸ್ ನಾಯಕರೇ ಆಗಲಿ ಆಡಳಿತ ಪಕ್ಷ ಬಿಜೆಪಿಯ ನಾಯಕರೇ ಆಗಲಿ ಹಿಂದಿ ಹೇರಿಕೆ ಸಲ್ಲದು ಎಂದು ಕನ್ನಡ ಕಟ್ಟಾಳುಗಳಂತೆ ಮಾತಾಡ್ತಾರೆಯೇ ಹೊರತು, ಸಂವಿಧಾನ ತಿದ್ದುಪಡಿ ಮಾಡಿ ಹಿಂದಿಗಿರುವ ಹೆಚ್ಚುಗಾರಿಕೆಯನ್ನು ಹಾಗೂ ಹಿಂದಿ ಹೇರಲು ಸಂವಿಧಾನದಲ್ಲಿರುವ ವ್ಯವಸ್ಥೆಯನ್ನು ಹತ್ತಿಕ್ಕುವ ಬಗ್ಗೆ ಮಾತಾಡಲ್ಲ ಎಂದು ರಾಮಚಂದ್ರ ಎಂ ಟ್ವೀಟ್ ಮಾಡಿದ್ದಾರೆ.

ಭಾಷೆಯ ವಿಚಾರದಲ್ಲಿ ಕರುಣಾನಿಧಿ ಹೋರಾಟ ಅಷ್ಟು ಮಹತ್ವ ಪಡೆದಿದೆ. ಶತಮಾನಗಳು ಕಳೆದರೂ ತಮಿಳರು ಹಿಂದಿ ಹೇರಿಕೆ ಸಹಿಸುವುದಿಲ್ಲ!. ಕನ್ನಡಿಗರ ಕತೆ, “ಮೂರು ಕೊಟ್ಟರೆ ಮಾವನ ಕಡೆ, ಆರು ಕೊಟ್ಟರೆ ಅತ್ತೆ ಕಡೆ” ಎಂದು ವೆಂಕಟರಾಮು ವ ಎಂಬುವವರು ವ್ಯಂಗ್ಯವಾಡಿದ್ದಾರೆ.


ಇದನ್ನೂ ಓದಿ: ಹಿಂದಿ ಹೇರಿಕೆ ವಿರುದ್ಧ ಭುಗಿಲೆದ್ದ ಆಕ್ರೋಶ: ಬಿಎಸ್‌ವೈ, ಅಮಿತ್‌ ಶಾ ವಿರುದ್ಧ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಾವೂ ಕೂಡಾ ತಮಿಳುನಾಡಿನವರಂತೆ ದ್ವಿಭಾಷಾ ಸೂತ್ರಕ್ಕಾಗಿ ಒತ್ತಾಯಿಸಬೇಕು.

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...