ಹಿಂದಿ ರಾಷ್ಟ್ರ ಭಾಷೆ ಅಲ್ಲ: ಕನ್ನಡಿಗರ ಆಕ್ರೋಶಕ್ಕೆ ಮಣಿದು ಕ್ಷಮೆ ಕೇಳಿದ ದೊಡ್ಡರಂಗೇಗೌಡ

ಹಿಂದಿ ನಮ್ಮ ರಾಷ್ಟ್ರ ಭಾಷೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಾಹಿತಿ ದೊಡ್ಡರಂಗೇಗೌಡ, ಇದಕ್ಕೆ ಸಂಬಂಧಿಸಿದಂತೆ ಕ್ಷಮೆಯಾಚಿಸಿದ್ದಾರೆ.

“ಹಿಂದಿ ಭಾಷೆಯ ತಿರಸ್ಕಾರ ಏಕೆ, ಹಿಂದಿ ನಮ್ಮ ರಾಷ್ಟ್ರ ಭಾಷೆ” ಎಂದು ದೊಡ್ಡರಂಗೇಗೌಡ ಅವರು ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ನೀಡಿದ ಹೇಳಿಕೆಗೆ ಸಾಹಿತಿಗಳು, ಕನ್ನಡಪರ ಕಾರ್ಯಕರ್ತರು ಹಾಗೂ ನೆಟ್ಟಿಗರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು. ಇದಕ್ಕೆ ಪ್ರತಿಕ್ರಿಯಿಸಿರುವ ದೊಡ್ಡರಂಗೇಗೌಡ ಪತ್ರ ಬರೆದು ಕನ್ನಡಿಗರ ಕ್ಷಮೆಯಾಚಿಸಿದ್ದಾರೆ.

ಇದನ್ನೂ ಓದಿ: “ಹಿಂದಿ ನಮ್ಮ ರಾಷ್ಟ್ರ ಭಾಷೆ”: ದೊಡ್ಡರಂಗೇಗೌಡರ ಹೇಳಿಕೆಗೆ ಕನ್ನಡಿಗರ ವಿರೋಧ

”ನಾನೇನು ಯಾವುದೇ ಭಾಷೆಯನ್ನು ನನ್ನ ತಲೆಯ ಮೇಲೆ ಹೊತ್ತು ಮೆರೆಸುತ್ತಿಲ್ಲ. ನಾನು ಭಕ್ತಿ ಪೂರ್ವಕವಾಗಿ ನನ್ನ ಅಂತರಾಳದಿಂದ ಕನ್ನಡವನ್ನು ಆರಾಧಿಸುತ್ತೇನೆ. ಕನ್ನಡವನ್ನೇ ನನ್ನ ತಲೆಯ ಮೇಲೆ ಹೊತ್ತು ಮೆರೆಸುತ್ತೇನೆ. ಕನ್ನಡಿಗರ ಮೇಲೆ ಹಿಂದಿ ಭಾಷೆಯ ಹಾಗೂ ಇಂಗ್ಲಿಷ್ ಹೇರಿಕೆಯ ನೀತಿಯನ್ನು ನಾನು ಸಹಿಸುವುದಿಲ್ಲ. ನನ್ನ ಮಾತುಗಳು ಕನ್ನಡ ಜನರ ಮನಸ್ಸನ್ನು ನೋಯಿಸಿದ್ದರೆ, ನಾನು ಕ್ಷಮೆ ಯಾಚಿಸುತ್ತೇನೆ” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ಲಯ ತಪ್ಪಿದ ಸಾರ್ವಜನಿಕ ಗ್ರಂಥಾಲಯ ಇಲಾಖೆ?: ವಿಶೇಷ ವರದಿ

1 COMMENT

LEAVE A REPLY

Please enter your comment!
Please enter your name here