Homeಕರ್ನಾಟಕಕನ್ನಡ ಪ್ರಶ್ನೆ ಪತ್ರಿಕೆಯಲ್ಲಿ ಹಿಂದಿ ಪ್ರಶ್ನೆಗಳು: 'ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ'ಎಂದು ಎಚ್‌ಡಿಕೆ ಆಕ್ರೋಶ

ಕನ್ನಡ ಪ್ರಶ್ನೆ ಪತ್ರಿಕೆಯಲ್ಲಿ ಹಿಂದಿ ಪ್ರಶ್ನೆಗಳು: ‘ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ’ಎಂದು ಎಚ್‌ಡಿಕೆ ಆಕ್ರೋಶ

- Advertisement -
- Advertisement -

ಕನ್ನಡ ವಿಷಯಕ್ಕೆ ಸಂಬಂಧಿಸಿದಂತೆ ಭಾನುವಾರ (ಡಿ.26) ರಂದು ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‌ಇಟಿ) ಪ್ರಶ್ನೆಪತ್ರಿಕೆಯಲ್ಲಿ ಹಿಂದಿ ಪ್ರಶ್ನೆಗಳು ನುಸುಳಿದ್ದು ಅಭ್ಯರ್ಥಿಗಳು ಗೊಂದಲಕ್ಕೆ ಸಿಲುಕಿದ್ದರು. ಇದಕ್ಕೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ಇದೇ ವಿಷಯಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಯಮಾರಸ್ವಾವಿ “ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ” ಎಂದು ಕಿಡಿ ಕಾರಿದ್ದಾರೆ.

“ನಾನು ಮೊದಲಿನಿಂದಲೂ ಹೇಳುತ್ತಿರುವ ಮಾತಿದು. ಈ ಮಾತು ಪದೇಪದೆ ಮರುಕಳಿಸುತ್ತಿರುವುದು ನನಗೆ ಬಹಳ ನೋವುಂಟು ಮಾಡಿದೆ. ಕೇಂದ್ರ ಸರಕಾರದ ಉದ್ಯೋಗ ಅವಕಾಶಗಳಲ್ಲಿ ಕನ್ನಡಿಗರನ್ನು ಹತ್ತಿಕ್ಕುವ ಮತ್ತು ಅವಕಾಶಗಳನ್ನು ನಿರಾಕರಿಸುವ ಕುತಂತ್ರ ನಿರಂತರವಾಗಿ ನಡೆಯುತ್ತಲೇ ಇದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹರಿಯಾಣ: ದುಷ್ಕರ್ಮಿಗಳಿಂದ ಯೇಸು ಕ್ರಿಸ್ತನ ಪ್ರತಿಮೆ ಧ್ವಂಸ

’ನಿನ್ನೆ ರಾಷ್ಟ್ರೀಯ ಪರಿಕ್ಷಾ ಸಂಸ್ಥೆ ನಡೆಸಿದ ಪರೀಕ್ಷೆಯಲ್ಲಿ ಯುಜಿಸಿ – ಎನ್‌ ಇಟಿ ಕನ್ನಡ ಐಚ್ಛಿಕ ಭಾಷಾ ಪಶ್ನೆ ಪತ್ರಿಕೆಯ 100 ಪ್ರಶ್ನೆಗಳಲ್ಲಿ 90 ಪ್ರಶ್ನೆಗಳು ಹಿಂದಿಯಲ್ಲೇ ಇದ್ದವು. ಅದನ್ನು ಕಂಡ ಅಭ್ಯರ್ಥಿಗಳು ಗೊಂದಲಕ್ಕೆ ಒಳಗಾಗಿ ಪರೀಕ್ಷೆಯನ್ನು ಬಹಿಷ್ಕರಿಸಿ, ಪ್ರತಿಭಟನೆ ನಡೆಸಿದ್ದಾರೆ. ಇದು ಕನ್ನಡದ ಮೇಲಿನ ತಾತ್ಸಾರ ಹಾಗೂ ಹಿಂದಿ ಹೇರಿಕೆಯ ವಿಪರೀತ. ಅಲ್ಲದೆ, ಪರೀಕ್ಷೆ ನಡೆಸಿದ ಸಂಸ್ಥೆ ಮಾಡಿರುವ ಕನ್ನಡ ದ್ರೋಹ. ಉದ್ದೇಶಪೂರ್ವಕವಾಗಿಯೇ ಇಂಥ ಕೃತ್ಯಗಳನ್ನು ಕನ್ನಡದ ವಿರುದ್ಧ ಎಸಗಲಾಗುತ್ತಿದೆ. ಕನ್ನಡಿಗರ ಬಗ್ಗೆ ಈ ಕಠಿಣತೆ ಏಕೆ..?’ ಎಂದು ಪ್ರಶ್ನಿಸಿದ್ದಾರೆ.

’ರೈಲ್ವೆ, ಬ್ಯಾಂಕಿಂಗ್ ಸೇರಿದಂತೆ ಕೇಂದ್ರ ಸರಕಾರದ  ಇನ್ನು ಹಲವಾರು ಉದ್ಯೋಗ ಅವಕಾಶಗಳಲ್ಲಿ ಕನ್ನಡದ ಪ್ರತಿಭಾವಂತ ಯುವಜನರಿಗೆ ಅನ್ಯಾಯ ಆಗುತ್ತಿದೆ. ಕನ್ನಡಿಗರ ಕಡೆಗಣನೆ ದೇಶಕ್ಕೆ ಒಳ್ಳೆಯದಲ್ಲ. ನಮ್ಮ ಮೌನ ನಮ್ಮ  ದೌರ್ಬಲ್ಯವಲ್ಲ ಎಂಬುದು ನೆನಪಿರಲಿ. ಈ ಅನ್ಯಾಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕೂಡಲೇ ಪರಿಕ್ಷಾ ಸಂಸ್ಥೆಯು ಆಗಿರುವ ಲೋಪ ಸರಿಮಾಡಿ ಪುನಾ ಪರೀಕ್ಷೆ ನಡೆಸಬೇಕು. ಎರಡು ವರ್ಷಗಳಿಂದ ಪರಿಕ್ಷೆಗಾಗಿ ತಯಾರಿ ನಡೆಸಿರುವ ಅಭ್ಯರ್ಥಿಗಳಿಗೆ ನ್ಯಾಯ ಸಿಗುವಂತೆ ಕ್ರಮ ವಹಿಸಬೇಕು’ ಎಂದು ಒತ್ತಾಯಿಸಿದ್ದಾರೆ.

’ಪರೀಕ್ಷೆ ಅವ್ಯವಸ್ಥೆ ಆಗರವಾಗಿತ್ತು ಎನ್ನುವುದು ತಿಳಿದುಬಂದಿದೆ. ಅದನ್ನು ಸರಿಪಡಿಸಿ ಉತ್ತಮ ರೀತಿಯಲ್ಲಿ ಪರೀಕ್ಷೆ ನಡೆಸಬೇಕು’ ಎಂದು ಹೇಳಿದ್ದಾರೆ.

ಕನ್ನಡ ವಿಷಯಕ್ಕೆ ಸಂಬಂಧಿಸಿದಂತೆ ಆನ್‌ಲೈನ್‌ನಲ್ಲಿ ಭಾನುವಾರ ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‌ಇಟಿ) ನಿಗದಿಯಾಗಿತ್ತು. ಸಾಮಾನ್ಯಜ್ಞಾನ ಪ್ರಶ್ನೆಪತ್ರಿಕೆ (100 ಅಂಕಗಳು) ಸರಿಯಾಗಿತ್ತು. ಆದರೆ ಕನ್ನಡ ಪ್ರಶ್ನೆಪತ್ರಿಕೆ (200 ಅಂಕ) ಗೊಂದಲವನ್ನು ಉಂಟುಮಾಡಿತು. ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಒಟ್ಟು ನೂರು ಪ್ರಶ್ನೆಗಳು ಇರುತ್ತವೆ. ತಾಂತ್ರಿಕ ದೋಷದಿಂದಾಗಿ ಮೊದಲ ಹತ್ತು ಪ್ರಶ್ನೆಗಳು ಮಾತ್ರ ಕನ್ನಡದಲ್ಲಿದ್ದವು. ಉಳಿದ ಪ್ರಶ್ನೆಗಳೆಲ್ಲ ಹಿಂದಿ ಭಾಷೆಯದ್ದಾಗಿದ್ದವು. ಹೀಗಾಗಿ ಪರೀಕ್ಷಾ ಅಭ್ಯರ್ಥಿಗಳು ಆಕ್ರೋಶ ಹೊರಹಾಕಿದ್ದರು.

ತಾಂತ್ರಿಕ ದೋಷದಿಂದಾಗಿ ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಹಿಂದಿ ಭಾಷೆಯ ಪ್ರಶ್ನೆಗಳು ಬಂದಿದ್ದು, ಮರು ಪರೀಕ್ಷೆ ನಡೆಸುವುದಾಗಿ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್‌ಟಿಎ) ತಿಳಿಸಿದೆ.


ಇದನ್ನೂ ಓದಿ: ಎನ್‌ಇಟಿ ‘ಕನ್ನಡ’ ಪ್ರಶ್ನೆಪತ್ರಿಕೆಯಲ್ಲಿ ‘ಹಿಂದಿ’ ಹಾವಳಿ; ಅಭ್ಯರ್ಥಿಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...