Homeಕರ್ನಾಟಕಎನ್‌ಇಟಿ 'ಕನ್ನಡ' ಪ್ರಶ್ನೆಪತ್ರಿಕೆಯಲ್ಲಿ 'ಹಿಂದಿ' ಹಾವಳಿ; ಅಭ್ಯರ್ಥಿಗಳ ಆಕ್ರೋಶ

ಎನ್‌ಇಟಿ ‘ಕನ್ನಡ’ ಪ್ರಶ್ನೆಪತ್ರಿಕೆಯಲ್ಲಿ ‘ಹಿಂದಿ’ ಹಾವಳಿ; ಅಭ್ಯರ್ಥಿಗಳ ಆಕ್ರೋಶ

ಪರೀಕ್ಷಾ ಅಭ್ಯರ್ಥಿಗಳು ಪ್ರತಿಭಟಿಸಿರುವ ಬೆನ್ನಲ್ಲೇ ಮರು ಪರೀಕ್ಷೆ ನಡೆಸುವುದಾಗಿ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ತಿಳಿಸಿದೆ

- Advertisement -
- Advertisement -

ಕನ್ನಡ ವಿಷಯಕ್ಕೆ ಸಂಬಂಧಿಸಿದಂತೆ ಇಂದು (ಭಾನುವಾರ) ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‌ಇಟಿ) ಪ್ರಶ್ನೆಪತ್ರಿಕೆಯಲ್ಲಿ ಹಿಂದಿ ಪ್ರಶ್ನೆಗಳು ನುಸುಳಿದ್ದು ಅಭ್ಯರ್ಥಿಗಳು ಗೊಂದಲಕ್ಕೆ ಸಿಲುಕಿದರು. ತಾಂತ್ರಿಕ ದೋಷದಿಂದಾಗಿ ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಹಿಂದಿ ಭಾಷೆಯ ಪ್ರಶ್ನೆಗಳು ಬಂದಿದ್ದು, ಮರು ಪರೀಕ್ಷೆ ನಡೆಸುವುದಾಗಿ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್‌ಟಿಎ) ತಿಳಿಸಿದೆ.

ಆನ್‌ಲೈನ್‌ನಲ್ಲಿ ಪರೀಕ್ಷೆ ನಿಗದಿಯಾಗಿತ್ತು. ಸಾಮಾನ್ಯಜ್ಞಾನ ಪ್ರಶ್ನೆಪತ್ರಿಕೆ (100 ಅಂಕಗಳು) ಸರಿಯಾಗಿತ್ತು. ಆದರೆ ಕನ್ನಡ ಪ್ರಶ್ನೆಪತ್ರಿಕೆ (200 ಅಂಕ) ಗೊಂದಲವನ್ನು ಉಂಟುಮಾಡಿತು. ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಒಟ್ಟು ನೂರು ಪ್ರಶ್ನೆಗಳು ಇರುತ್ತವೆ. ತಾಂತ್ರಿಕ ದೋಷದಿಂದಾಗಿ ಮೊದಲ ಹತ್ತು ಪ್ರಶ್ನೆಗಳು ಮಾತ್ರ ಕನ್ನಡದಲ್ಲಿದ್ದವು. ಉಳಿದ ಪ್ರಶ್ನೆಗಳೆಲ್ಲ ಹಿಂದಿ ಭಾಷೆಯದ್ದಾಗಿದ್ದವು. ಹೀಗಾಗಿ ಪರೀಕ್ಷಾ ಅಭ್ಯರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಪರೀಕ್ಷಾ ಅಭ್ಯರ್ಥಿ ಹರೀಶ್ ಸಿಂಗ್ರಿಹಳ್ಳಿ, “ಹೆಚ್ಚುವರಿ ಸಮಯವನ್ನು ನೀಡಿ ಕೆಲವು ಕಡೆ ಪರೀಕ್ಷೆ ನಡೆಸಲಾಗಿದೆ. ಆದರೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಪರೀಕ್ಷೆ ನಡೆದಿಲ್ಲ. ನನ್ನ ಪರೀಕ್ಷೆ 9ರಿಂದ 12 ಗಂಟೆಗೆ ಮುಗಿಯಬೇಕಿತ್ತು. ಆದರೆ 2 ಗಂಟೆಗೆ ಮುಗಿಯಿತು” ಎಂದು ತಿಳಿಸಿದರು.

“ಹೆಚ್ಚುವರಿ ಸಮಯ ನೀಡಿ ಪರೀಕ್ಷೆ ನಡೆಸಿದರೂ ಮತ್ತೊಂದು ಸಮಸ್ಯೆಯಾಗಿತ್ತು. ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಪ್ರಶ್ನೆಗಳು ಪುನಾರಾವರ್ತನೆಯಾಗಿದ್ದವು. ಹೀಗಾಗಿ ಪರೀಕ್ಷೆ ಬರೆದವರಿಗೂ ಮರು ಪರೀಕ್ಷೆ ನಡೆಸುವುದು ಅನಿವಾರ್ಯವಾಗಿದೆ. ಅಲ್ಲದೆ ತುಮಕೂರಿನಲ್ಲಿ ಪರೀಕ್ಷೆ ಬರೆಯಲು ಬಯಸಿದ್ದ ಅನೇಕರನ್ನು ಬೆಂಗಳೂರಿನ ಪರೀಕ್ಷಾ ಕೇಂದ್ರಗಳಿಗೆ ಹಾಕಲಾಗಿತ್ತು. ಹೀಗಾಗಿ ನಮ್ಮ ಸಮಯ, ಹಣ ಎರಡೂ ವ್ಯರ್ಥವಾಗಿದೆ” ಎಂದರು.

ತುಮಕೂರಿನಲ್ಲಿ ಪ್ರತಿಭಟನೆ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅಭ್ಯರ್ಥಿಗಳು, “ಈ ರೀತಿ ಮತ್ತೆ ಆಗಬಾರದು. ಎಲ್ಲರಿಗೂ ಅನ್ಯಾಯವಾಗಿದೆ. ಬೇರೆ ಭಾಷೆಗೆ ಇಲ್ಲದೆ ಇರುವ ಸಮಸ್ಯೆ ಕನ್ನಡಕ್ಕೆ ಮಾತ್ರ ಯಾಕೆ?” ಎಂದು ಪ್ರಶ್ನಿಸಿದರು.

“ಇಲ್ಲಿಯವರೆಗೂ ಬೇರೆ ವಿಷಯಗಳ ಪರೀಕ್ಷೆಗಳು ಸುವ್ಯವಸ್ಥಿತವಾಗಿ ನಡೆದಿವೆ. ಆದರೆ ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ದೋಷ ಕಂಡು ಬಂದಿದೆ. ಮುಂದಿನ ಭವಿಷ್ಯದ ಮೇಲೆ ಜಿಗುಪ್ಸೆ ಬರುವ ರೀತಿಯಲ್ಲಿ ಹಿಂದಿ ಆಕ್ರಮಿಸಿದೆ. ಇದು ಕನ್ನಡಿಗರ ದುರಂತ ಸ್ಥಿತಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪರೀಕ್ಷಾ ಅಭ್ಯರ್ಥಿಗಳ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಹೊಸ ನೋಟಿಫಿಕೇಷನ್‌ ಹೊರಡಿಸಿದ್ದು, ಮರು ಪರೀಕ್ಷೆ ನಡೆಸುವುದಾಗಿ ತಿಳಿಸಿದೆ.

“ತಾಂತ್ರಿಕ ದೋಷದಿಂದಾಗಿ ಯುಜಿಸಿ-ಎನ್‌ಇಟಿ ಕನ್ನಡ ಪರೀಕ್ಷೆಯಲ್ಲಿ ತೊಂದರೆಯಾಗಿದ್ದು, ಶೀಘ್ರದಲ್ಲೇ ಮರುಪರೀಕ್ಷೆ ನಡೆಸಲು ಕ್ರಮ ವಹಿಸಲಾಗುವುದು” ಎಂದು ಎನ್‌ಟಿಎ ಹೇಳಿದೆ.


ಇದನ್ನೂ ಓದಿರಿ: ಮಧ್ಯಪ್ರದೇಶ: ಹಿಂದುತ್ವ ಗುಂಪಿನ ರ್‍ಯಾಲಿಯಿಂದಾಗಿ ಕೋಮು ಘರ್ಷಣೆ; 12ಕ್ಕೂ ಹೆಚ್ಚು ಮುಸ್ಲಿಮರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...