Homeಮುಖಪುಟಹಿಂದಿ ಭಾಷಿಕರು ತಮಿಳುನಾಡಿನಲ್ಲಿ ಶೌಚಾಲಯ ಸ್ವಚ್ಛಗೊಳಿಸುತ್ತಾರೆ; ವಿವಾದ ಸೃಷ್ಟಿಸಿದ ದಯಾನಿಧಿ ಮಾರನ್ ಹೇಳಿಕೆ

ಹಿಂದಿ ಭಾಷಿಕರು ತಮಿಳುನಾಡಿನಲ್ಲಿ ಶೌಚಾಲಯ ಸ್ವಚ್ಛಗೊಳಿಸುತ್ತಾರೆ; ವಿವಾದ ಸೃಷ್ಟಿಸಿದ ದಯಾನಿಧಿ ಮಾರನ್ ಹೇಳಿಕೆ

- Advertisement -
- Advertisement -

‘ತಮಿಳುನಾಡಿಗೆ ಬರುವ ಉತ್ತರ ಪ್ರದೇಶ ಮತ್ತು ಬಿಹಾರದ ಹಿಂದಿ ಭಾಷಿಗರು ಗಾರೆ ಕೆಲಸ, ರಸ್ತೆ ನಿರ್ಮಾಣ ಮತ್ತು ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಾರೆ’ ಎಂದು ಡಿಎಂಕೆ ಸಂಸದ ದಯಾನಿಧಿ ಮಾರನ್ ಹೇಳಿಕೆ ವಿವಾದ ಸೃಷ್ಟಿಸಿದೆ.

ಇಂಗ್ಲಿಷ್ ಕಲಿತವರಿಗೆ ಹಿಂದಿ ಮಾತ್ರ ಕಲಿತವರನ್ನು ಹೋಲಿಸಿರುವ ಮಾರನ್, ‘ಮೊದಲಿನವರು ಐಟಿ ಕಂಪನಿಗಳಲ್ಲಿ ಕೊನೆಗೊಳ್ಳುತ್ತಾರೆ, ನಂತರದವರು ಕೀಳು ಕೆಲಸ ಮಾಡುತ್ತಾರೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬಿಹಾರದ ಜನರ ಬಗ್ಗೆ ಡಿಎಂಕೆ ಸಂಸದರ ಟೀಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಪಾಟ್ನಾದ ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್, ‘ಡಿಎಂಕೆ ನಾಯಕರು ಬಿಹಾರದ ಜನರನ್ನು ಅವಮಾನಿಸುವುದನ್ನು ನಿಲ್ಲಿಸಬೇಕು. ತಮ್ಮ ಇಂಡಿಯಾ ಮೈತ್ರಿಕೂಟದ ಸದಸ್ಯರಾಗಿರುವ ನಿತೀಶ್ ಕುಮಾರ್ ಅವರ ಆಡಳಿತ ರಾಜ್ಯದ ಸ್ಥಿತಿಯಿಂದಾಗಿ ಬಿಹಾರದ ಜನರು ಅಲ್ಲಿಗೆ (ತಮಿಳುನಾಡು) ಹೋಗಬೇಕಾಯಿತು’ ಎಂದು ಹೇಳಿದ್ದಾರೆ.

ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲಾ, ‘ದೇಶದ ಜನರನ್ನು ಜಾತಿ, ಭಾಷೆ ಮತ್ತು ಧರ್ಮದ ಆಧಾರದ ಮೇಲೆ ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ. ಮತ್ತೊಮ್ಮೆ ಡಿವೈಡ್ ಮತ್ತು ರೂಲ್ ಕಾರ್ಡ್ ಅನ್ನು ಪ್ಲೇ ಮಾಡುವ ಪ್ರಯತ್ನ’ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಬಿಜೆಪಿ ನಾಯಕ ದಯಾನಿಧಿ ಮಾರನ್ ಬಳಸಿದ ಭಾಷೆ ದುರದೃಷ್ಟಕರ. ಅವರ ಇತರೆ ನಾಯಕರ ಹೇಳಿಕೆಯನ್ನು ಪರಿಗಣಿಸಿದಾಗ ಈ ಹೇಳಿಕೆಯು ಕಾಕತಾಳೀಯವಲ್ಲ ಎಂದು ಹೇಳಿದ್ದಾರೆ.

ದಯಾನಿಧಿ ಮಾರನ್ ಅವರ ಹೇಳಿಕೆಗೆ ಉತ್ತರ ಪ್ರದೇಶ ಮತ್ತು ಬಿಹಾರ ರಾಜ್ಯಗಳ ಇಂಡಿಯಾ ಮೈತ್ರಿಕೂಟದ ನಾಯಕರನ್ನು ತರಾಟೆಗೆ ತೆಗೆದುಕೊಂಡ ಅವರು, ‘ನಿತೀಶ್ ಕುಮಾರ್, ತೇಜಸ್ವಿ ಯಾದವ್, ಲಾಲು ಯಾದವ್, ಕಾಂಗ್ರೆಸ್, ಎಸ್‌ಪಿ ಅಖಿಲೇಶ್ ಯಾದವ್ ಎಲ್ಲರೂ ಏನೂ ಆಗಿಲ್ಲ ಎಂದು ನಟಿಸುತ್ತಾರೆಯೇ? ಅವರು ತಮ್ಮ ನಿಲುವು ಯಾವಾಗ ತೆಗೆದುಕೊಳ್ಳುತ್ತಾರೆ’ ಎಂದು ಪೂನಾವಾಲಾ ಪ್ರಶ್ನಿಸಿದ್ದಾರೆ.

‘ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಹಿಂದಿ ಹೃದಯ ರಾಜ್ಯಗಳ ವಿರುದ್ಧ ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದ ಡಿಎಂಕೆ ಮತ್ತೊಬ್ಬ ಸಂಸದ ಡಿಎಸ್‌ವಿ ಸೆಂಥಿಲ್‌ಕುಮಾರ್ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಇತ್ತೀಚೆಗೆ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಗಢದಲ್ಲಿ ಬಿಜೆಪಿ ಗೆದ್ದ ನಂತರ ದಕ್ಷಿಣ ಭಾರತದ ರಾಜ್ಯಗಳಲ್ಲಿ ಬಿಜೆಪಿ ಗೆಲ್ಲಲು ಸಾಧ್ಯವಿಲ್ಲ ಎಂದು ಸೆಂಥಿಲ್‌ಕುಮಾರ್ ಹೇಳಿದ್ದಾರೆ’ ಎಂದು ಪೂನಾವಾಲಾ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ; ಅಥ್ಲೀಟ್‌ಗಳ ಒತ್ತಡಕ್ಕೆ ಮಣಿದ ಕೇಂದ್ರ ಸರ್ಕಾರ; ಡಬ್ಲ್ಯೂಎಫ್ಐ ನೂತನ ಆಡಳಿತ ಮಂಡಳಿ ಅಮಾನತು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...