Homeಕರ್ನಾಟಕ’ಹಿಂದಿ’ ದಕ್ಷಿಣ ಭಾರತೀಯರ ಅವಕಾಶಗಳನ್ನು ಕಸಿದಿದೆ: ಎಚ್‌.ಡಿ ಕುಮಾರಸ್ವಾಮಿ

’ಹಿಂದಿ’ ದಕ್ಷಿಣ ಭಾರತೀಯರ ಅವಕಾಶಗಳನ್ನು ಕಸಿದಿದೆ: ಎಚ್‌.ಡಿ ಕುಮಾರಸ್ವಾಮಿ

ಹಿಂದಿ ವ್ಯಾಮೋಹಿ ರಾಜಕಾರಣಿಗಳ ವರಸೆಗಳನ್ನು ಹತ್ತಿರದಿಂದ ನಾನು ಕಂಡಿದ್ದೇನೆ. ಹಿಂದಿಯೇತರ ರಾಜ್ಯಗಳ ರಾಜಕಾರಣಿಗಳೆಂದರೆ ಬಹುತೇಕರಿಗೆ ಅಲ್ಲಿ ಅಪತ್ಯವೇ ಸರಿ.

- Advertisement -
- Advertisement -

ಭಾಷೆಯ ಕಾರಣಕ್ಕೆ ತಮಿಳುನಾಡಿನ ಡಿಎಂಕೆ ಸಂಸದೆ ಕನಿಮೊಳಿ ಅವರನ್ನು ವಿಮಾನ ನಿಲ್ದಾಣದಲ್ಲಿ ‘ನೀವು ಭಾರತೀಯರೇ’ ಎಂದು ಪ್ರಶ್ನಿಸಿದ್ದನ್ನು ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ’ಹಿಂದಿ ವ್ಯಾಮೋಹ, ಹಿಂದಿ ರಾಜಕಾರಣ, ಹಿಂದಿ ಶ್ರೇಷ್ಠತೆ ವ್ಯಸನ ದಕ್ಷಿಣ ಭಾರತದ ನಾಯಕರ, ಜನರ ಅವಕಾಶಗಳನ್ನು ಕಸಿದ ವಿಚಾರ ಚರ್ಚಾರ್ಹ’ ಎಂದು ಹೇಳಿದ್ದಾರೆ.

ಈ ವಿಚಾರದಲಿ ಕನಿಮೋಳಿ ಪರವಾಗಿ ನನ್ನ ಧ್ವನಿ ಕೂಡಾ ಇದೆ ಎಂದು ಅವರು ಕನಿಮೋಳಿ ಅವರನ್ನು ಬೆಂಬಲಿಸಿದ್ದಾರೆ.


ಇದನ್ನೂ ಓದಿ: ಹಿಂದಿ ತಿಳಿದಿದ್ದವರು ಮಾತ್ರ ಭಾರತೀಯರೆ?: ಡಿಎಂಕೆ ಸಂಸದೆ ಕನಿಮೊಳಿ ಪ್ರಶ್ನೆ 


ಹಿಂದಿ ರಾಜಕಾರಣವು ದಕ್ಷಿಣ ಭಾರತದ ಹಲವು ನಾಯಕರ ಪ್ರಧಾನಿಯಾಗುವ ಅವಕಾಶ ಕಸಿದಿದೆ. ಅದರಲ್ಲಿ ಹೆಚ್.ಡಿ ದೇವೇಗೌಡರು, ಕರುಣಾನಿಧಿ, ಕಾಮರಾಜರ ಹೆಸರುಗಳು ಪ್ರಧಾನ. ಈ ವ್ಯೂಹವನ್ನು ದೇವೇಗೌಡರು ಭೇದಿಸಿ ಅತ್ಯುನ್ನತ ಪಟ್ಟ ಅಲಂಕರಿಸಿದರಾದರೂ, ಭಾಷೆ ವಿಚಾರಕ್ಕೆ ಅವರನ್ನು ಮೂದಲಿಸಿದ, ಗೇಲಿ ಮಾಡಿದ, ಕನ್ನಡತನ ಪ್ರಶ್ನಿಸಿದ ಪ್ರಸಂಗಗಳು ಆಗಿ ಹೋಗಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಭಾರತದ ಪ್ರಧಾನ ಮಂತ್ರಿಯಾಗಿದ್ದ ದೇವೇಗೌಡರಿಂದ ಅಂದು ಕೆಂಪು ಕೋಟೆಯಲ್ಲಿ ಹಿಂದಿಯಲ್ಲೇ ಭಾಷಣ ಮಾಡಿಸುವಲ್ಲಿ ‘ಹಿಂದಿ ರಾಜಕಾರಣ’ ಯಶಸ್ವಿಯಾಗಿತ್ತು. ಬಿಹಾರ ಮತ್ತು ಉತ್ತರ ಪ್ರದೇಶದ ಬಹುದೊಡ್ಡ ರೈತ ಸಮುದಾಯದ ದೃಷ್ಟಿಯಿಂದ ಅಂದು ದೇವೇಗೌಡರು ಹಿಂದಿಯಲ್ಲೇ ಮಾತನಾಡಿದರು. ಅಷ್ಟರ ಮಟ್ಟಿಗೆ ಈ ದೇಶದಲ್ಲಿ ಹಿಂದಿ ರಾಜಕಾರಣ ಕೆಲಸ ಮಾಡುತ್ತದೆ ಎಂದು ಅವರು ವಿಷಾದ ವ್ಯಕ್ತಪಡಿಸಿದ್ದಾರೆ.

ಸಂಸತ್‌ನಲ್ಲಿ ಕನ್ನಡದಲ್ಲಿ ಮಾಡಲಾಗುವ ಭಾಷಣಗಳ ಬಗ್ಗೆ ಆಳುವ ವರ್ಗ ದಿವ್ಯ ನಿರ್ಲಕ್ಷ್ಯ ತೋರುತ್ತದೆ ಎಂದು ಆರೋಪಿಸಿರುವ ಕುಮಾರಸ್ವಾಮಿ ಇಂತಹದ್ದೇ ಅನುಭವ ನನಗೂ ಆಗಿದೆ ಎಂದು ಹೇಳಿದ್ದಾರೆ. ಅಲ್ಲದೆ, ಹಿಂದಿ ವ್ಯಾಮೋಹಿ ರಾಜಕಾರಣಿಗಳ ವರಸೆಗಳನ್ನು ಹತ್ತಿರದಿಂದ ನಾನು ಕಂಡಿದ್ದೇನೆ. ಹಿಂದಿಯೇತರ ರಾಜ್ಯಗಳ ರಾಜಕಾರಣಿಗಳೆಂದರೆ ಬಹುತೇಕರಿಗೆ ಅಲ್ಲಿ ಅಪತ್ಯವೇ ಸರಿ ಎಂದಿದ್ದಾರೆ.

ರಾಜಕಾರಣ ಹೊರತುಪಡಿಸಿ ಔದ್ಯೋಗಿಕ ಕ್ಷೇತ್ರಕ್ಕೆ ಬಂದರೆ, ಕೇಂದ್ರ ಸರ್ಕಾರದ ಕೆಲ ಹುದ್ದೆಗಳ ಪರೀಕ್ಷೆಗಳನ್ನು ಇಂಗ್ಲಿಷ್‌–ಹಿಂದಿಯಲ್ಲೇ ಬರೆಯಬೇಕಿದೆ. ಅದರಲ್ಲಿ #ibpsmosa ಕೂಡ ಒಂದು. ಈ ಬಾರಿಯ ಅಧಿಸೂಚನೆಯಲ್ಲಿ ಕನ್ನಡಕ್ಕೆ ಸ್ಥಾನವೇ ಇಲ್ಲ. ಹೀಗಾಗಿ ಕನ್ನಡದ ಉದ್ಯೋಗಾಕಾಂಕ್ಷಿಗಳು ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ಇದು ನಿಲ್ಲಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಅಧಿಕೃತ ಭಾಷೆಗಳಲ್ಲಿ ಹಿಂದಿಯೂ ಒಂದು ಎಂದು ಕೇಂದ್ರ ಸರ್ಕಾರ ಬಾಯಿ ಮಾತಿಗಷ್ಟೇ ಹೇಳುತ್ತದೆ. ಆದರೆ, ಹಿಂದಿ ಅಭಿವೃದ್ಧಿಗಾಗಿ ದೇಶ, ವಿದೇಶದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕೇಂದ್ರವು ಕೋಟ್ಯಂತರ ಮೊತ್ತ ವಿನಿಯೋಗಿಸುತ್ತದೆ. ಇದು ರಹಸ್ಯ ಕಾರ್ಯಸೂಚಿಗಳಲ್ಲೊಂದು. ಪ್ರಾಮಾಣಿಕ ಭಾಷಾಭಿಮಾನದಿಂದ ಮಾತ್ರ ಇವುಗಳನ್ನು ಮೆಟ್ಟಿಸಲು ಸಾಧ್ಯ ಎಂದು ಅವರು ಹೇಳಿದ್ದಾರೆ.


ಓದಿ: ಮತ್ತೆ ಮುನ್ನೆಲೆಗೆ ಬಂದ ಹಿಂದಿ ಹೇರಿಕೆ ಚರ್ಚೆ: ಕನಿಮೊಳಿ ಪರ ದನಿಯೆತ್ತಿದ ದಕ್ಷಿಣ ಭಾರತದ ರಾಜಕಾರಣಿಗಳು


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಉತ್ತರಪತ್ರಿಕೆಯಲ್ಲಿ ‘ಜೈ ಶ್ರೀರಾಮ್‌’ ಬರೆದಿದ್ದ ವಿದ್ಯಾರ್ಥಿಗಳಿಗೆ 50% ಅಂಕ: ಮರುಮೌಲ್ಯಮಾಪನ ಮಾಡಿದಾಗ ಶೂನ್ಯಕ್ಕಿಳಿದ ಅಂಕ

0
ಪರೀಕ್ಷೆಗಳಿಗೆ ಬರೆದಿರುವ ಉತ್ತರಗಳ ಗುಣಮಟ್ಟದ ಆಧಾರದಲ್ಲಿ ಅಂಕಗಳನ್ನು ನೀಡಲಾಗುತ್ತದೆ. ಆದರೆ ಉತ್ತರಪ್ರದೇಶದ  ಜೌನ್‌ಪುರದಲ್ಲಿರುವ ವೀರ್‌ ಬಹದ್ದೂರ್‌ ಸಿಂಗ್‌ ಪೂರ್ವಾಂಚಲ ವಿಶ್ವವಿದ್ಯಾಲಯದಲ್ಲಿನ ಪರೀಕ್ಷೆಯಲ್ಲಿನ ಉತ್ತರ ಪತ್ರಿಕೆಯಲ್ಲಿ ‘ಜೈ ಶ್ರೀರಾಮ್‌’ ಮತ್ತು ಕ್ರಿಕೆಟ್‌ ಆಟಗಾರರ ಹೆಸರುಗಳನ್ನು...