Homeಮುಖಪುಟನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

ನಟ ಶಿರೀಶ್ ಸರವಣನ್ ಜೊತೆಗೆ ಜನಪ್ರಿಯ ಸಂಗೀತ ನಿರ್ದೇಶಕ ಯುವನ್ ಶಂಕರ್ ರಾಜಾ ಅವರು ಚರ್ಚಿಸುತ್ತಿರುವ ಫೋಟೋವೊಂದು ನಿನ್ನೆ ಟ್ವಿಟರ್‌ನಲ್ಲಿ ವೈರಲ್ ಆಗಿದೆ

- Advertisement -
- Advertisement -

ಹಿಂದಿ ಹೇರಿಕೆ ವಿರುದ್ಧ ದೇಶದ ಹಲವೆಡೆ ವ್ಯಾಪಕ ಪ್ರತಿರೋಧಗಳು ವ್ಯಕ್ತವಾಗುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ತಮಿಳುನಾಡಿನ ಟೀ-ಶರ್ಟ್ ಘೋಷಣೆಗಳು ವೈರಲ್ ಆಗುತ್ತಿವೆ. ಹಿಂದಿ ಥೆರಿಯಾದು, ಪೋಡಾ! ” (ನನಗೆ ಹಿಂದಿ ಗೊತ್ತಿಲ್ಲ, ಹೋಗು!). “ನಾನು ತಮೀಝ್ ಪೆಸುಮ್ ಇಂಡಿಯನ್” (ನಾನು ತಮಿಳು ಮಾತನಾಡುವ ಭಾರತೀಯ). “ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ”ಎಂಬ ಘೋಷಣೆಗಳು ವೈರಲ್ ಆಗಿವೆ.

ಮೆಟ್ರೋ (2016) ತಮಿಳು ಚಿತ್ರದ ಮೂಲಕ ಪಾದಾರ್ಪಣೆ ಮಾಡಿದ ನಟ ಶಿರೀಶ್ ಸರವಣನ್ ಜೊತೆಗೆ ಜನಪ್ರಿಯ ಸಂಗೀತ ನಿರ್ದೇಶಕ ಯುವನ್ ಶಂಕರ್ ರಾಜಾ ಅವರು ಚರ್ಚಿಸುತ್ತಿರುವ ಫೋಟೋವೊಂದು ನಿನ್ನೆ ಟ್ವಿಟರ್‌ನಲ್ಲಿ ವೈರಲ್ ಆಗಿದೆ. ಈ ಫೋಟೋವನ್ನು ಸೆ.5 ರಂದು ನಟ ಶಿರೀಶ್ ಅವರು “ಆಳವಾದ ಚರ್ಚೆಯಲ್ಲಿ, ಒಳ್ಳೆಯ ವಿಷಯಗಳು ನಮ್ಮ ಹಾದಿಗೆ ಬರುತ್ತಿವೆ” ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಂಡಿದ್ದರು.

ಇದನ್ನೂ ಓದಿ: ದ್ವಿಭಾಷಾ ನೀತಿ ಸಾಕು: ಹಿಂದಿ ಹೇರಿಕೆ ಬೇಡ – ಟ್ವಿಟ್ಟರ್ ಟ್ರೆಂಡಿಂಗ್

ಈ ಫೋಟೋ ಇಷ್ಟೊಂದು ವೈರಲ್ ಆಗಲು ಕಾರಣ ಇಬ್ಬರು ಧರಿಸಿದ್ದ ಟೀ ಶರ್ಟ್‌ಗಳು. ಹೌದು, ಯುವನ್ ಅವರ ಟೀ ಶರ್ಟ್‌ ಮೇಲೆ  ತಮಿಳು ಕವಿ ತಿರುವಳ್ಳುವರ್ ಅವರ ಆಧುನಿಕ ಸ್ಕೆಚ್‌ನೊಂದಿಗೆ, “ನಾನು ತಮೀಝ್ ಪೆಸುಮ್ ಇಂಡಿಯನ್” ಎಂದಿದ್ದರೆ, ಶಿರೀನ್ ಧರಿಸಿದ್ದ ಕೆಂಪು ಟೀಶರ್ಟ್ ಮೇಲೆ  “ಹಿಂದಿ ಥೆರಿಯಾದು, ಪೋಡಾ!”ಎಂಬ ಪದಗಳಿದ್ದವು. ಇವು ಈ ಫೋಟೋ ವೈರಲ್ ಆಗಲು ಕಾರಣವಾಯಿತು.

ಈ ಚಿತ್ರ ತಮಿಳುನಾಡಿನಲ್ಲಿ ಹೊಸ ಅಲೆಯನ್ನೇ ಹುಟ್ಟುಹಾಕಿತು. ಟ್ವಿಟ್ಟರ್‌ನಲ್ಲಿ ಹಿಂದಿ ಹೇರಿಕೆ ವಿರೋಧಿಸಿ ಹಲವಾರು ಜನರು ಇದೇ ರೀತಿಯ ಟೀ ಶರ್ಟ್ ಧರಿಸಿದ ಫೋಟೋಗಳನ್ನು ಸಾಮಾಜಿಕ ಸಾಲತಾಣಗಳಲ್ಲಿ ಹಂಚಿಕೊಂಡರು.

ತೂತುಕುಡಿ ಸಂಸದೆ ಕನಿಮೋಳಿ ಹೇಳುವಂತೆ ಡಿಎಂಕೆ ಮುಖಂಡರು ಈ ಕೆಲಸವನ್ನು ಸಣ್ಣ ರೀತಿಯಲ್ಲಿ ಪ್ರಾರಂಭಿಸಿದ್ದು, ಟೀ ಶರ್ಟ್‌ಗಳನ್ನು ಮುದ್ರಿಸಿದ್ದಾರೆ ಎಂದಿದ್ದಾರೆ. ಅಷ್ಟೇ ಅಲ್ಲದೇ ಕನಿಮೋಳಿ ಭಾನುವಾರ ಟಿ-ಶರ್ಟ್ ಧರಿಸಿದ ಯುವಕರ ಗುಂಪಿನೊಂದಿಗೆ ತನ್ನ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ.

ಟೀ-ಶರ್ಟ್‌ ತಯಾರಿಕೆಗೆ ಹೆಸರುವಾಸಿಯಾದ ತಿರುಪ್ಪೂರಿನ ಗಾರ್ಮೆಂಟ್ ತಯಾರಕರು ಇದೇ ರೀತಿಯ ಟೀಶರ್ಟ್‌‌ಗಳನ್ನು ತಯಾರಿಸಿ ಮಾರುಕಟ್ಟೆಗೆ ಬಿಟ್ಟಿದ್ದಾರೆ.

ಬರೀ ಟೀ ಶರ್ಟ್‌‌ಗಳೇ ಅಲ್ಲದೆ ಮೊಬೈಲ್ ಪೌಚ್‌ಗಳು, ಮೀಮ್ಸ್‌ಗಳಲ್ಲೂ ಹಿಂದಿ ಥೆರಿಯಾದು, ಪೋಡಾ ಟ್ರೆಂಡಿಂಗ್‌ನಲ್ಲಿದೆ.

ತಮ್ಮ ಮೇಲೆ ಹಿಂದಿ ಹೇರಿಕೆ ಮಾಡಲು ಬಂದರೇ ಯಾವ ಯಾವ ರೀತಿಯ ಪ್ರತಿರೋಧ ಎದುರಿಸಬೇಕಾಗುತ್ತದೆ ಎಂಬುದನ್ನು ತಮಿಳುನಾಡಿನ ಜನತೆ ತೋರಿಸುತ್ತಲೇ ಇದ್ದಾರೆ. ಈಗ ಇದಕ್ಕೆ ಟೀ-ಶರ್ಟ್‌ ಅಭಿಯಾನ ಸೇರಿಕೊಂಡಿದೆ. ತಮಿಳುನಾಡಿನಲ್ಲಿ ಜನರ ಜೊತೆಗೆ ಚಿತ್ರರಂಗ, ರಾಜಕೀಯ ನಾಯಕರು ಸಹ ಹಿಂದಿ ಹೇರಿಕೆ ವಿರುದ್ಧ ದನಿಯೆತ್ತಿದ್ದಾರೆ.


ಇದನ್ನೂ ಓದಿ: ಮತ್ತೆ ಮುನ್ನೆಲೆಗೆ ಬಂದ ಹಿಂದಿ ಹೇರಿಕೆ ಚರ್ಚೆ: ಕನಿಮೊಳಿ ಪರ ದನಿಯೆತ್ತಿದ ಎಚ್‌.ಡಿ ಕುಮಾರಸ್ವಾಮಿ, ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...