Homeಮುಖಪುಟಗಾಂಧಿ ಹಂತಕ ಗೋಡ್ಸೆ ಪ್ರತಿಮೆ ನಿರ್ಮಾಣಕ್ಕೆ ಮುಂದಾದ ಹಿಂದೂ ಮಹಾಸಭಾ

ಗಾಂಧಿ ಹಂತಕ ಗೋಡ್ಸೆ ಪ್ರತಿಮೆ ನಿರ್ಮಾಣಕ್ಕೆ ಮುಂದಾದ ಹಿಂದೂ ಮಹಾಸಭಾ

- Advertisement -
- Advertisement -

1949ರಲ್ಲಿ ಮಹಾತ್ಮ ಗಾಂಧಿಯವರನ್ನು ಹತ್ಯೆಗೈದ ಹಂತಕ ನಾಥೂರಾಂ ಗೋಡ್ಸೆಯ ಪ್ರತಿಮೆ ನಿರ್ಮಾಣಕ್ಕೆ ಹಿಂದೂ ಮಹಾಸಭಾ ಮುಂದಾಗಿದೆ. ಗೋಡ್ಸೆಯನ್ನು ಗಲ್ಲಿಗೇರಿಸಿದ ಹರಿಯಾಣದ ಅಂಬಾಲಾ ಸೆಂಟ್ರಲ್ ಜೈಲಿನಿಂದ ಮಣ್ಣನ್ನು ತಂದು ಗೋಡ್ಸೆಯ ಪ್ರತಿಮೆಯನ್ನು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಿರ್ಮಿಸುವುದಾಗಿ ಹಿಂದೂ ಮಹಾಸಭಾ ಹೇಳಿದೆ.

ಸೋಮವಾರ ಗೋಡ್ಸೆಯ ಗಲ್ಲಿಗೇರಿಸಿದ ದಿನವನ್ನು ಆಚರಣೆ ನಡೆಸಿದ ಬಲಪಂಥೀಯ ಸಂಘಟನೆಯು ಆತನ ಪ್ರತಿಮೆಯನ್ನು ನಿರ್ಮಿಸುವುದಾಗಿ ಹೇಳಿದೆ.

ಕಳೆದ ವಾರ ಮಹಾಸಭಾ ಕಾರ್ಯಕರ್ತರು ಗೋಡ್ಸೆ ಮತ್ತು ನಾರಾಯಣ ಆಪ್ಟೆ ಅವರನ್ನು ಗಲ್ಲಿಗೇರಿಸಿದ ಅಂಬಾಲಾ ಜೈಲಿನಿಂದ ಮಣ್ಣನ್ನು ತಂದಿದ್ದಾರೆ. ಈ ಮಣ್ಣನ್ನು ಗೋಡ್ಸೆ ಮತ್ತು ಆಪ್ಟೆ ಅವರ ಪ್ರತಿಮೆಗಳನ್ನು ತಯಾರಿಸಲು ಬಳಸಲಾಗುವುದು. ಆ ಪ್ರತಿಮೆಗಳನ್ನು ಗ್ವಾಲಿಯರ್‌ನಲ್ಲಿರುವ ಮಹಾಸಭಾದ ಕಚೇರಿಯಲ್ಲಿ ಸ್ಥಾಪಿಸಲಾಗುವುದು ಎಂದು ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಜೈವೀರ್ ಭಾರದ್ವಾಜ್ ತಿಳಿಸಿದ್ದಾರೆ.

ಮಹಾಸಭಾ ಕಾರ್ಯಕರ್ತರು ಸೋಮವಾರ ಮೀರತ್‌ನ (ಉತ್ತರ ಪ್ರದೇಶ) ‘ಬಲಿಧಾನ್ ಧಾಮ’ದಲ್ಲಿ ಗೋಡ್ಸೆ ಮತ್ತು ಆಪ್ಟೆ ಅವರ ಪ್ರತಿಮೆಗಳನ್ನು ಸ್ಥಾಪಿಸಿದ್ದಾರೆ. ನಾವು ಪ್ರತಿ ರಾಜ್ಯದಲ್ಲೂ ಅಂತಹ ಬಲಿದಾನ್ ಧಾಮವನ್ನು ನಿರ್ಮಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನಾನೇ ಒಂದು ಜುಮ್ಲಾ : ಗೋಡ್ಸೆ ಜೊತೆ ಒಂದು ಕಾಲ್ಪನಿಕ ಸಂದರ್ಶನ

ಗ್ವಾಲಿಯರ್ ಜಿಲ್ಲಾಡಳಿತವು 2017ರಲ್ಲಿ ಮಹಾಸಭಾದ ಕಚೇರಿಯಲ್ಲಿ ಸ್ಥಾಪಿಸಲಾಗಿದ್ದ ಗೋಡ್ಸೆಯ ಪ್ರತಿಮೆಯನ್ನು ವಶಪಡಿಸಿಕೊಂಡಿದೆ. ಆದರೆ, ಅದನ್ನು ಇಲ್ಲಿಯವರೆಗೆ ಹಿಂತಿರುಗಿಸಿಲ್ಲ ಎಂದು ಅವರು ಹೇಳಿದ್ದಾರೆ.

ಇನ್ನು ಗೋಡ್ಸೆಯನ್ನು ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಎಂದು ಕಾಂಗ್ರೆಸ್ ಕರೆದಿದೆ. ದೇಶದ ಸ್ವಾತಂತ್ರ್ಯ ನೇತಾರ ಗಾಂಧೀಜಿಯವರನ್ನು ಕೊಂದ ಭಯೋತ್ಪಾದಕನ್ನು ಆರಾಧಿಸುವುದು ಅವರ ಮನಸ್ಥಿತಿಯನ್ನು ಬಿಂಬಿಸುತ್ತದೆ ಎಂದು ಕಾಂಗ್ರೆಸ್ ಕಿಡಿಕಾರಿದೆ.

ಇಲ್ಲಿಯವರೆಗೆ ಯಾವುದೇ ಪ್ರತಿಮೆಯನ್ನು ಸ್ಥಾಪಿಸಲಾಗಿಲ್ಲ. ಪ್ರತಿಮೆಯ ನಿರ್ಮಾಣ ಚಟುವಟಿಕೆಗಳ ಮೇಲೆ ಪೊಲೀಸರು ಕಣ್ಣಿಟ್ಟಿದ್ದಾರೆ ಎಂದು ಗ್ವಾಲಿಯರ್‌ನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸತ್ಯೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.


ಇದನ್ನೂ ಓದಿ: ಕುರಿ-ಆಡು ರಕ್ತದ ಫ್ರೈ ಲಾಕಿ ಮಾಡುವುದು ಹೇಗೆ?: ಇಲ್ಲಿದೆ ಬೊಂಬಾಟ್ ರೆಸಿಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...