Homeಮುಖಪುಟಹಿಂದೂ ಧರ್ಮ ಮತ್ತು ಹಿಂದುತ್ವ ಒಂದೇ ಅಲ್ಲ: ಹಿಂದುತ್ವ ಎಂದರೆ ರಾಜಕೀಯ - ನಟಿ ರಮ್ಯಾ

ಹಿಂದೂ ಧರ್ಮ ಮತ್ತು ಹಿಂದುತ್ವ ಒಂದೇ ಅಲ್ಲ: ಹಿಂದುತ್ವ ಎಂದರೆ ರಾಜಕೀಯ – ನಟಿ ರಮ್ಯಾ

ಹಿಂದೂ ಧರ್ಮ ಎಂದರೆ ಒಳಗೊಳ್ಳುವಿಕೆ ಮತ್ತು ಎಲ್ಲರನ್ನು ಪ್ರೀತಿಸುವುದು, ಆದರೆ ಹಿಂದುತ್ವ ಇದಕ್ಕೆ ವಿರುದ್ಧವಾಗಿದೆ ಎಂದು ಅವರು ಬರೆದಿದ್ದಾರೆ.

- Advertisement -
- Advertisement -

ಸಕ್ರಿಯ ರಾಜಕಾರಣದಿಂದ ದೂರವಿರುದ ನಟಿ ರಮ್ಯಾ ದಿವ್ಯಸ್ಪಂದನ ಆಗಾಗ್ಗೆ ಸಮಾಜದ ಆಗು ಹೋಗುಗಳಿಗೆ ಪ್ರತಿಕ್ರಿಯಿಸುತ್ತಿರುತ್ತಾರೆ. ಅದರಂತೆ ಇಂದು ಹಿಂದೂ ಧರ್ಮ ಮತ್ತು ಹಿಂದುತ್ವ ಒಂದೇ ಅಲ್ಲ ಎಂದು ಪ್ರತಿಪಾದಿಸಿ ಚರ್ಚೆಗೆ ಕಾರಣರಾಗಿದ್ದಾರೆ.

ಹಿಂದೂ ಧರ್ಮ ಎಂದರೆ ಒಳಗೊಳ್ಳುವಿಕೆ ಮತ್ತು ಎಲ್ಲರನ್ನು ಪ್ರೀತಿಸುವುದು, ಆದರೆ ಹಿಂದುತ್ವ ಇದಕ್ಕೆ ವಿರುದ್ಧವಾಗಿದೆ ಎಂದು ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬರೆಯುವ ಮೂಲಕ ಬಿಸಿ ಬಿಸಿ ಚರ್ಚೆಗೆ ಗ್ರಾಸವಾಗಿದ್ದಾರೆ. ಅವರು ಒಟ್ಟಾರೆ ಹೇಳಿಕೆ ಈ ಕೆಳಗಿನಂತಿದೆ.

“ಹಿಂದೂ ಧರ್ಮ ಮತ್ತು ಹಿಂದುತ್ವ ಒಂದೇ ಅಲ್ಲ. ಹಿಂದೂ ಧರ್ಮ ರಾಜಕೀಯವಲ್ಲ, ಆದರೆ ಹಿಂದುತ್ವ ಪೂರ್ತಿ ರಾಜಕೀಯ. ಹಿಂದೂ ಧರ್ಮ ಎಂದರೆ ಒಳಗೊಳ್ಳುವಿಕೆ ಮತ್ತು ಎಲ್ಲರನ್ನು ಪ್ರೀತಿಸುವುದು. ಹಿಂದುತ್ವ ಇದಕ್ಕೆ ವಿರುದ್ಧವಾಗಿದೆ. ನಿಜವಾದ ಹಿಂದೂಗಳಿಗೆ ಈ ವ್ಯತ್ಯಾಸ ತಿಳಿಯುತ್ತದೆ” ಎಂದು ಅವರು ಬರೆದಿದ್ದಾರೆ.

 

View this post on Instagram

 

A post shared by Ramya/Divya Spandana (@divyaspandana)

ಎರಡು ದಿನಗಳ ಹಿಂದಷ್ಟೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹ ಇದೇ ರೀತಿಯ ಹೇಳಿಕೆ ನೀಡಿದ್ದರು. ಹಿಂದುತ್ವ ಮತ್ತು ಹಿಂದೂ ಧರ್ಮ ಎಂಬುದು ಎರಡು ವಿಭಿನ್ನ ಪರಿಕಲ್ಪನೆಗಳು ಎಂದು ಅವರು ಹೇಳಿದ್ದರು.

ಮಹರಾಷ್ಟ್ರದ ವಾರ್ಧದಲ್ಲಿ ನಡೆದ ಪಕ್ಷದ ಕಾರ್ಯಕರ್ತರ ನಾಲ್ಕು ದಿನಗಳ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, “ಹಿಂದೂ ಧರ್ಮವು ಸಿಖ್ಖರನ್ನು ಅಥವಾ ಮುಸಲ್ಮಾನರನ್ನು ಹೊಡೆಯಿರಿ ಎಂದು ಹೇಳುತ್ತದೆಯೇ? ಹಾಗೆಂದು ಯಾವ ಪುಸ್ತಕದಲ್ಲಿ ಬರೆಯಲಾಗಿದೆ? ನಾನು ಉಪನಿಷತ್ತುಗಳನ್ನು ಓದಿದ್ದೇನೆ, ಎಲ್ಲಿಯೂ ಹಾಗೆ ಹೇಳಿಲ್ಲ. ಆದರೆ ಹಿಂದುತ್ವವು ಸಹಜವಾಗಿಯೇ ಏಕೆ ದ್ವೇಷಿಸಲು ಕರೆ ಕೊಡುತ್ತದೆ? ಹಿಂದುತ್ವ ಮತ್ತು ಹಿಂದೂ ಧರ್ಮದ ನಡುವೆ ವ್ಯತ್ಯಾಸವಿದೆ ಎಂದು ನಾವು ಹೇಳುತ್ತೇವೆ. ಇದು ಸರಳವಾದ ತರ್ಕ. ನೀವು ಹಿಂದೂ ಆಗಿದ್ದರೆ ನಿಮಗೆ ಹಿಂದುತ್ವ ಏಕೆ ಬೇಕು? ನಿಮಗೆ ಈ ಹೊಸ ಹೆಸರು ಏಕೆ ಬೇಕು?” ಎಂದು ಹೇಳಿದ್ದರು.


ಇದನ್ನೂ ಓದಿ: ಹಿಂದುತ್ವದಿಂದ ಬಂಧುತ್ವದೆಡೆಗೆ…: ಸುನಿಲ್ ಬಜಿಲಕೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...