Homeಮುಖಪುಟಜ್ಞಾನವಾಪಿ ಮಸೀದಿ ನೆಲಮಹಡಿಯಲ್ಲಿ ಹಿಂದೂಗಳಿಗೆ ಪ್ರಾರ್ಥನೆಗೆ ಅವಕಾಶ ನೀಡಿದ ಕೋರ್ಟ್‌

ಜ್ಞಾನವಾಪಿ ಮಸೀದಿ ನೆಲಮಹಡಿಯಲ್ಲಿ ಹಿಂದೂಗಳಿಗೆ ಪ್ರಾರ್ಥನೆಗೆ ಅವಕಾಶ ನೀಡಿದ ಕೋರ್ಟ್‌

- Advertisement -
- Advertisement -

ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿಯ ನೆಲಮಹಡಿಯಲ್ಲಿ ಹಿಂದೂ ಭಕ್ತರು ಪ್ರಾರ್ಥನೆ ಸಲ್ಲಿಸಬಹುದು ಎಂದು ವಾರಣಾಸಿ ಜಿಲ್ಲಾ ನ್ಯಾಯಾಲಯ ಇಂದು ಆದೇಶ ನೀಡಿದೆ.

ವಾರಣಾಸಿ ಮಸೀದಿಯ ಬೀಗ ಮುದ್ರೆ ಹಾಕಿರುವ ನೆಲ ಮಹಡಿ ‘ವ್ಯಾಸ್ ಕಾ ಠಿಕಾಣಾ’ದಲ್ಲಿ ಹಿಂದೂ ಭಕ್ತರು ಪ್ರಾರ್ಥನೆ ಸಲ್ಲಿಸಬಹುದಾಗಿದೆ. ಹಿಂದೂಗಳಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸುವುದಕ್ಕಾಗಿ ಇನ್ನು ಒಂದು ವಾರದೊಳಗಾಗಿ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳುವಂತೆ ನ್ಯಾಯಾಲಯವು ತನ್ನ ವಿಚಾರಣೆಯ ಸಂದರ್ಭದಲ್ಲಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ. ಬ್ಯಾರಿಕೇಡ್‌ಗಳನ್ನು ತೆಗೆಯುವುದು ಸೇರಿದಂತೆ ವ್ಯವಸ್ಥೆಗಳನ್ನು ಒಂದು ವಾರದಲ್ಲಿ ಪೂರ್ಣಗೊಳಿಸಬೇಕು ಎಂದು ನ್ಯಾಯಾಧೀಶರು ಹೇಳಿದ್ದಾರೆ. ಕಾಶಿ ವಿಶ್ವನಾಥ ದೇಗುಲದ ಅರ್ಚಕರಿಂದ ಪ್ರಾರ್ಥನೆ ನಡೆಸಬೇಕು ಎಂದು ನ್ಯಾಯಾಲಯ ಹೇಳಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಹಿಂದೂ ಮಹಿಳಾ ಅರ್ಜಿದಾರರ ಪರ ವಕೀಲ ವಿಷ್ಣು ಶಂಕರ್ ಜೈನ್, ಎಲ್ಲರಿಗೂ ಅಲ್ಲಿ ಪ್ರಾರ್ಥನೆ ಮಾಡುವ ಹಕ್ಕು ಇದೆ, ಇದೊಂದು ಮಹತ್ವದ ಆದೇಶವಾಗಿದೆ. ಆದೇಶದಂತೆಯೇ ವಾರದೊಳಗೆ ಅಲ್ಲಿ ನಾವು ಪೂಜೆ ಮಾಡಲಿದ್ದೇವೆ ಎಂದು  ಹೇಳಿದ್ದಾರೆ.

ಮಸೀದಿಯಲ್ಲಿ ಒಟ್ಟು 4 ನೆಲಮಾಳಿಗೆಗಳಿದೆ. ಅವುಗಳ ಪೈಕಿ ಒಂದು ಇಲ್ಲಿ ವಾಸಿಸುತ್ತಿದ್ದ ಹಿಂದೂ ಕುಟುಂಬವೊಂದರ ವಶದಲ್ಲಿದೆ. ಹಾಗಾಗಿ, ಇದರಲ್ಲಿರುವ ‘ವ್ಯಾಸ್ ಕಾ ಠಿಕಾಣಾ’ದಲ್ಲಿ ಹಿಂದೂ ಭಕ್ತರು ಪ್ರಾರ್ಥನೆ ಸಲ್ಲಿಸಬಹುದು ಎಂದು ನ್ಯಾಯಾಲಯ ಹೇಳಿದೆ. ಈ ಆದೇಶವನ್ನು ಮಸೀದಿ ಸಮಿತಿಯು ಉನ್ನತ ನ್ಯಾಯಾಲಯದಲ್ಲಿ ಪ್ರಶ್ನಿಸುವ ನಿರೀಕ್ಷೆಯಿದೆ.

ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಗೆ ಸಂಬಂಧಿಸಿದ ಸಮೀಕ್ಷಾ ವರದಿಯನ್ನು ಭಾರತೀಯ ಪುರಾತತ್ವ ಇಲಾಖೆ ಇತ್ತೀಚೆಗೆ ಬಹಿರಂಗಪಡಿಸಿತ್ತು. ಹಿಂದೂ ದೇವಾಲಯದ ಅವಶೇಷಗಳ ಮೇಲೆ ಮಸೀದಿ ನಿರ್ಮಿಸಲಾಗಿದೆ. ಮಸೀದಿಗೂ ಮುನ್ನ ಅಲ್ಲೊಂದು ದೊಡ್ಡ ಹಿಂದೂ ದೇವಾಲಯವಿತ್ತು ಎಂದು 839 ಪುಟಗಳ ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸುತ್ತಿರುವ ವಾರಣಾಸಿ ಜಿಲ್ಲಾ ನ್ಯಾಯಾಧೀಶ ಅಜಯ್ ಕೃಷ್ಣ ಅವರು ಕಳೆದ ವರ್ಷ ಜುಲೈ 21 ರಂದು ಎಎಸ್‌ಐಗೆ ಜ್ಞಾನವಾಪಿ ಆವರಣದ ವೈಜ್ಞಾನಿಕ ಸಮೀಕ್ಷೆಯನ್ನು ಮಾಡಿ, ಮಸೀದಿಯು ಹಳೆಯ ರಚನೆಯ ಮೇಲೆ ನಿಂತಿದೆಯೇ ಎಂದು ನಿರ್ಧರಿಸಲು ಸೂಚಿಸಿದ್ದರು. ಅದರಂತೆ ಸಮೀಕ್ಷೆ ನಡೆಸಿದ ಪುರಾತತ್ವ ಇಲಾಖೆಯು ಒಂದು ತಿಂಗಳ ಹಿಂದೆ ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿತ್ತು. ಕಳೆದ ಬುಧವಾರ, ವಾರಣಾಸಿ ನ್ಯಾಯಾಲಯವು ಎರಡೂ ಕಡೆಯವರಿಗೆ ವರದಿಯನ್ನು ನೀಡುವಂತೆ ಆದೇಶಿಸಿತ್ತು.

ಇದನ್ನು ಓದಿ: ಪನ್ನುನ್ ಹತ್ಯೆ ಸಂಚು ಆರೋಪ: ಭಾರತದ ಜೊತೆಗಿನ 3 ಬಿಲಿಯನ್ ಡಾಲರ್‌ ವೆಚ್ಚದ ಡ್ರೋನ್‌ ಮಾರಾಟ ಒಪ್ಪಂದವನ್ನು ತಡೆ ಹಿಡಿದ ಅಮೆರಿಕ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಬಿಜೆಪಿ ಟಿಕೆಟ್ ಆಮಿಷ ನೀಡಿ ರಾಜೀನಾಮೆ ಕೊಡಿಸಿ ವಂಚಿಸಿದ್ರು’: ಮಣಿಪುರ ಹಿಂಸಾಚಾರದ ತನಿಖೆ ನಡೆಸುತ್ತಿದ್ದ...

0
ಮಣಿಪುರ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದ (ಎಸ್‌ಐಟಿ) ನೇತೃತ್ವ ವಹಿಸಲು ಸುಪ್ರೀಂ ನಿರ್ದೇಶನದ ಕೆಲವೇ ದಿನಗಳಲ್ಲಿ ಅಸ್ಸಾಂ-ಮೇಘಾಲಯ ಕೇಡರ್‌ನ ಐಪಿಎಸ್ ಅಧಿಕಾರಿ ಆನಂದ್ ಮಿಶ್ರಾ ತಮ್ಮ ಹುದ್ದೆಗೆ ರಾಜೀನಾಮೆ...