Homeಮುಖಪುಟ10 ವರ್ಷ ಅಧಿಕಾರದಲ್ಲಿದ್ದು, ಹಿಂದೂಗಳು ಅಪಾಯದಲ್ಲಿದ್ದಾರೆ ಎಂದು ಹೇಳುತ್ತಿದ್ದರೆ ಅವರು ಮತ್ತೆ ಅಧಿಕಾರಕ್ಕೆ ಬರಬಾರದು: ಕೀರ್ತಿ...

10 ವರ್ಷ ಅಧಿಕಾರದಲ್ಲಿದ್ದು, ಹಿಂದೂಗಳು ಅಪಾಯದಲ್ಲಿದ್ದಾರೆ ಎಂದು ಹೇಳುತ್ತಿದ್ದರೆ ಅವರು ಮತ್ತೆ ಅಧಿಕಾರಕ್ಕೆ ಬರಬಾರದು: ಕೀರ್ತಿ ಆಝಾದ್

- Advertisement -
- Advertisement -

10 ವರ್ಷಗಳ ಕಾಲ ಅಧಿಕಾರದಲ್ಲಿದ್ದರೂ ಕೇಸರಿ ಪಕ್ಷವು ‘ಹಿಂದೂಗಳು ಅಪಾಯದಲ್ಲಿದ್ದಾರೆ’ (ಹಿಂದೂ ಖತ್ರೆ ಮೇ) ಎಂದು ಹೇಳುವುದನ್ನು ಮುಂದುವರಿಸಿದರೆ, ಪಕ್ಷ ಅಧಿಕಾರಕ್ಕೆ ಮರಳುವ ಅಗತ್ಯದ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕುತ್ತದೆ, ಅಂತಹ ಪಕ್ಷ ಅಧಿಕಾರಕ್ಕೆ ಮತ್ತೆ ಬರಬಾರದು ಎಂದು ಟಿಎಂಸಿ ಅಭ್ಯರ್ಥಿ ಮತ್ತು ಭಾರತದ ಮಾಜಿ ಕ್ರಿಕೆಟಿಗ ಕೀರ್ತಿ ಆಝಾದ್ ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಬರ್ಧಮಾನ್-ದುರ್ಗಾಪುರ ಲೋಕಸಭಾ ಕ್ಷೇತ್ರದ ಟಿಎಂಸಿ ಅಭ್ಯರ್ಥಿ ಆಝಾದ್ ಪಿಟಿಐಗೆ ನೀಡಿದ ಸಂದರ್ಶನದಲ್ಲಿ, ಕೇಸರಿ ಪಾಳಯಕ್ಕೆ ಜನರ ಮುಂದೆ ಪ್ರಸ್ತುತ ಪಡಿಸಲು ಬೇರೆ ಏನೂ ಇಲ್ಲದ ಕಾರಣ ಯುಸಿಸಿಯನ್ನು(ಏಕರೂಪ ನಾಗರಿಕ ಸಂಹಿತೆಯನ್ನು) ತಂದಿದ್ದು, ಇದು ಚುನಾವಣೆಗಳನ್ನು ಕೋಮುವಾದೀಕರಣಗೊಳಿಸುವ ತಂತ್ರ ಎಂದು ಹೇಳಿದ್ದಾರೆ. ಆಝಾದ್ ಅವರು ಭಾರತದ ವೈವಿಧ್ಯತೆಯನ್ನು ಎತ್ತಿ ಹಿಡಿದಿದ್ದು, ಯುಸಿಸಿಯನ್ನು ವೈವಿಧ್ಯಮಯ ಪ್ರದೇಶದಲ್ಲಿ ಅಳವಡಿಸುವುದರ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದಾರೆ.

ಮೊಘಲರ ಆಳ್ವಿಕೆಯಲ್ಲಿ- ಹಿಂದೂಗಳು ಬೆದರಿಕೆಗೆ ಒಳಗಾಗಲಿಲ್ಲ, ಬ್ರಿಟಿಷ್ ಆಳ್ವಿಕೆಯಲ್ಲಿ ಅವರು ಅಪಾಯಕ್ಕೆ ಒಳಗಾಗಲಿಲ್ಲ, ಸ್ವಾತಂತ್ರ್ಯದ ನಂತರದ ಅನೇಕ ಸರ್ಕಾರಗಳ ಅಡಿಯಲ್ಲಿಯೂ ಸಹ ಹಿಂದೂಗಳು ಯಾವುದೇ  ಅಪಾಯವನ್ನು ಎದುರಿಸಲಿಲ್ಲ. ಆದರೆ ಕಳೆದ 10 ವರ್ಷಗಳಿಂದ ಹಿಂದೂ ರಾಷ್ಟ್ರೀಯವಾದಿ ಪಕ್ಷವು ಅಧಿಕಾರದಲ್ಲಿದ್ದಾಗ ಹಿಂದೂಗಳು ಇದ್ದಕ್ಕಿದ್ದಂತೆ ಅಪಾಯಕ್ಕೆ ಒಳಗಾಗುವುದು ಹೇಗೆ? ಎಂದು ಪ್ರಶ್ನಿಸಿದ್ದಾರೆ.

ಹಿಂದೂ ಪಕ್ಷವು ಹಿಂದೂಗಳನ್ನು ಉಳಿಸಲು ಸಾಧ್ಯವಾಗದಿದ್ದರೆ, ಅವರನ್ನು ಅಧಿಕಾರದಿಂದ ಕೆಳಗಿಳಿಸಬೇಕು. ಬಿಜೆಪಿಗೆ ತನ್ನ 10 ವರ್ಷಗಳ ಸಾಧನೆಯ ವರದಿ ತೋರಿಸಲು ಏನೂ ಇಲ್ಲ ಎಂಬುವುದು ಸತ್ಯ. ಅದಕ್ಕಾಗಿಯೇ ಅವರು ‘ಹಿಂದೂ ಖತ್ರೇ ಮೇ ಹೈಂ’ (ಹಿಂದೂಗಳು ಅಪಾಯದಲ್ಲಿದ್ದಾರೆ) ಎಂದು ಸಮುದಾಯಗಳ ಬಗ್ಗೆ ಭಯದ ಮನೋವಿಕಾರವನ್ನು ಹುಟ್ಟುಹಾಕಿದರು ಎಂದು ಹೇಳಿದ್ದಾರೆ.

1983ರ ವಿಶ್ವಕಪ್ ವಿಜೇತ ಕ್ರಿಕೆಟ್ ತಂಡದ ಸದಸ್ಯರಾದ ಆಝಾದ್, ನಾವು ಕಪ್ ಗೆದ್ದಾಗ, ನಮ್ಮ ತಂಡದಲ್ಲಿ ಹಿಂದೂ ಆಟಗಾರರು ಇದ್ದರು, ಮುಸ್ಲಿಂ ಸಮುದಾಯದ ಸೈಯದ್ ಕಿರ್ಮಾನಿ, ಸಿಖ್ ಸಮುದಾಯದ ಬಲ್ವಿಂದರ್ ಸಂಧು, ಕ್ರಿಶ್ಚಿಯನ್ ಸಮುದಾಯದ ರೋಜರ್ ಬಿನ್ನಿ ಇದ್ದರು. ನಾವೆಲ್ಲರೂ ಒಟ್ಟಾಗಿ ಹೋರಾಡಿ ಭಾರತಕ್ಕೆ ಮೊದಲ ವಿಶ್ವಕಪ್ ಗೆದ್ದುಕೊಟ್ಟಿದ್ದೇವೆ. ಈ ಎಲ್ಲಾ ಧರ್ಮಗಳು ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಒಟ್ಟಾಗಿ ಹೋರಾಡಿದವು. ಬಿಜೆಪಿ ಈಗ ಹಿಂದೂಗಳು ಅಪಾಯದಲ್ಲಿದ್ದಾರೆ ಎಂದು ಹೇಳುತ್ತಿದೆ ಎಂದು ಹೇಳಿದ್ದಾರೆ.

ಅನೇಕ ಚುನಾವಣಾ ಪ್ರಚಾರಗಳಲ್ಲಿ ನೀಡಿದ ಭರವಸೆಯ ಹೊರತಾಗಿಯೂ ಯುಸಿಸಿಯನ್ನು ತನ್ನ ಅಧಿಕಾರಾವಧಿಯಲ್ಲಿ ಜಾರಿಗೆ ತರುವಲ್ಲಿ ಬಿಜೆಪಿ ವಿಫಲವಾಗಿದೆ. ಯುಸಿಸಿ ತರುತ್ತೇವೆ ಎಂದು ಬಿಜೆಪಿ ಮೊದಲಿನಿಂದಲೂ ಹೇಳುತ್ತಿದೆ. ಅವರು 1998 ಮತ್ತು 1999ರಲ್ಲೂ ಈ ಭರವಸೆಯನ್ನು ನೀಡಿದ್ದರು. 2014 ರಲ್ಲಿಯೂ UCC ಅವರ ಚುನಾವಣಾ ಕಾರ್ಯಸೂಚಿಯಲ್ಲಿತ್ತು. ಕಳೆದ 1 ದಶಕದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ  ಅವರಿಗೆ ಯುಸಿಸಿಯನ್ನು ಜಾರಿಗೆ ತರದಂತೆ ತಡೆದಿದ್ದು ಯಾರು? ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನು ಓದಿ:ನೀವು ಕಾನೂನಿಗಿಂತ ಮೇಲಲ್ಲ: ಜಾರಿ ನಿರ್ದೇಶನಾಲಯಕ್ಕೆ ತರಾಟೆಗೆ ತೆಗೆದುಕೊಂಡ ದೆಹಲಿ ಹೈಕೋರ್ಟ್‌

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...