Homeಮುಖಪುಟಮೋದಿಗೆ ಪ್ರಶ್ನೆ ಮಾಡಿದ್ದ ಪತ್ರಕರ್ತೆಗೆ ಹಿಂದುತ್ವವಾದಿಗಳಿಂದ ನಿಂದನೆ; ಅಮೆರಿಕ ಶ್ವೇತಭವನದಿಂದ ಖಂಡನೆ

ಮೋದಿಗೆ ಪ್ರಶ್ನೆ ಮಾಡಿದ್ದ ಪತ್ರಕರ್ತೆಗೆ ಹಿಂದುತ್ವವಾದಿಗಳಿಂದ ನಿಂದನೆ; ಅಮೆರಿಕ ಶ್ವೇತಭವನದಿಂದ ಖಂಡನೆ

- Advertisement -
- Advertisement -

ಅಮೆರಿಕದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪ್ರಶ್ನೆ ಕೇಳಿದ ಪತ್ರಕರ್ತೆ ಸಬ್ರಿನಾ ಸಿದ್ದಿಕಿ ಅವರಿಗೆ ಹಿಂದುತ್ವವಾದಿಗಳು ಹಾಗೂ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಸೇರಿದಂತೆ ಬಿಜೆಪಿ ಸದಸ್ಯರು ಸಾಮಾಜಿಕ ಮಾಧ್ಯಮಗಳಲ್ಲಿ ಕಿರುಕುಳ ನೀಡಿದ್ದಾರೆ. ಇದು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಎಂದು ಶ್ವೇತಭವನ ಸೋಮವಾರ ಖಂಡನೆ ವ್ಯಕ್ತಪಡಿಸಿದೆ.

ಜೂನ್ 23ರಂದು, ವಾಷಿಂಗ್ಟನ್‌ನ ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಜೋ ಬಿಡನ್ ಅವರೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಮೋದಿ ಅವರು ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ವಾಲ್ ಸ್ಟ್ರೀಟ್ ಜರ್ನಲ್ ವರದಿಗಾರ್ತಿ, ”ಹಲವಾರು ಮಾನವ ಹಕ್ಕುಗಳ ಗುಂಪುಗಳು ಮೋದಿ ಸರ್ಕಾರವು ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ತಾರತಮ್ಯ ಮಾಡುತ್ತಿದೆ ಮತ್ತು ಸರ್ಕಾರದ ವಿರುದ್ಧ ಟೀಕೆ ಮಾಡುವವರನ್ನು ಮೌನಗೊಳಿಸಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಆರೋಪಿಸಿದೆ” ಎಂದು ಹೇಳುವ ಮೂಲಕ ಗಮನ ಸೆಳೆದಿದ್ದರು.

ಪತ್ರಿಕಾಗೋಷ್ಠಿಯ ನಂತರ ಸಿದ್ಧಿಕಿಯ ಮೇಲೆ ಹಿಂದುತ್ವ ಬೆಂಬಲಿಗರು ಮತ್ತು ಆಡಳಿತಾರೂಢ ಬಿಜೆಪಿ ಸದಸ್ಯರು ಆನ್ಲೈನ್‌ನಲ್ಲಿ ಮುಗಿಬಿದ್ದು, ಅವರನ್ನು ”ಪಾಕಿಸ್ತಾನದ ಪೋಷಕರ ಮಗಳು” ಮತ್ತು ”ಇಸ್ಲಾಮಿಸ್ಟ್‌” ಎಂದು ದಾಳಿ ಮಾಡಿದರು.

ಹಿಂದುತ್ವವಾದಿಗಳ ಮತ್ತು ಬಿಜೆಪಿ ಸದಸ್ಯರ ದಾಳಿಗೆ ಉತ್ತರವಾಗಿ ಟ್ವೀಟ್ ಮಾಡಿದ ಸಿದ್ದಿಕಿ, ತನ್ನ ತಂದೆಯೊಂದಿಗೆ ಭಾರತ ಕ್ರಿಕೆಟ್ ತಂಡವನ್ನು ಬೆಂಬಲಿಸುತ್ತಿರುವ ಫೋಟೋಗಳನ್ನು ಟ್ವೀಟ್ ಮಾಡಿದರು. ಈ ಮೂಲಕ ತಾನು ಭಾರತದ ವಿರೋಧಿಯಲ್ಲ, ಭಾರತದ ಪರವಾಗಿರುವವಳು ಎಂದು ಸ್ಪಷ್ಟಪಡಿಸಿದಳು.

ಈ ಬಗ್ಗೆ ಸೋಮವಾರ, ಸ್ಟ್ರಾಟೆಜಿಕ್ ಕಮ್ಯುನಿಕೇಷನ್ಸ್‌ನ ರಾಷ್ಟ್ರೀಯ ಭದ್ರತಾ ಮಂಡಳಿಯ ಸಂಯೋಜಕ ಜಾನ್ ಕಿರ್ಬಿಯನ್ನು ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತೆ ಸಿದ್ದಿಕಿ ಮೇಲೆ ನಡೆದ ದಾಳಿಯ ಬಗ್ಗೆ ಪ್ರತಿಕ್ರಿಯಿಸಿದರು. ಆ ಕಿರುಕುಳದ ವರದಿಗಳ ಬಗ್ಗೆ ನಮಗೆ ತಿಳಿದಿದೆ. ಇದು ಸ್ವೀಕಾರಾರ್ಹವಲ್ಲ ಮತ್ತು ಯಾವುದೇ ಸಂದರ್ಭದಲ್ಲೂ ಪತ್ರಕರ್ತರಿಗೆ ಯಾವುದೇ ಕಿರುಕುಳ ನೀಡುವುದನ್ನು ನಾವು ಸಂಪೂರ್ಣವಾಗಿ ಖಂಡಿಸುತ್ತೇವೆ. ಅದು … ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ಮತ್ತು ಇದು ಪ್ರಜಾಪ್ರಭುತ್ವದ ತತ್ವಗಳಿಗೆ ವಿರುದ್ಧವಾಗಿದೆ … ಎಂದು ಹೇಳುವ ಮೂಲಕ ಹಿಂದುತ್ವವಾದಿಗಳ ಮತ್ತು ಬಿಜೆಪಿ ಸದಸ್ಯರ ದಾಳಿಯನ್ನು ಖಂಡಿಸಿದ್ದಾರೆ.

”ಅಮೆರಿಕಾ ಸರ್ಕಾರವು ಪತ್ರಿಕಾ ಸ್ವಾತಂತ್ರ್ಯಕ್ಕೆ ಬದ್ಧವಾಗಿದೆ. ಪತ್ರಕರ್ತರು ತಮ್ಮ ಕೆಲಸವನ್ನು ಅವರು ಮಾಡುತ್ತಿರುವಾಗ ಅವರಿಗೆ ಬೆದರಿಕೆ ಅಥವಾ ಕಿರುಕುಳ ನೀಡುವಿದನ್ನು ನಾವು ಖಂಡಿತವಾಗಿಯೂ ಖಂಡಿಸುತ್ತೇವೆ” ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್-ಪಿಯರ್ ಹೇಳಿದರು.

ಜೂನ್ 24 ರಂದು, ಸಿದ್ದಿಕಿ ಆನ್‌ಲೈನ್ ಕಿರುಕುಳವನ್ನು ಎದುರಿಸಿದ ನಂತರ ದಕ್ಷಿಣ ಏಷ್ಯಾದ ಪತ್ರಕರ್ತರ ಸಂಘವೂ ಸಹ ಬೆಂಬಲವನ್ನು ನೀಡಿತ್ತು. ”ನಮ್ಮ ಸಹೋದ್ಯೋಗಿ ಸಬ್ರಿನಾ ಸಿದ್ದಿಕಿ ಅವರಿಗೆ ಬೆಂಬಲವನ್ನು ವ್ಯಕ್ತಪಡಿಸಲು ನಾವು ಬಯಸುತ್ತೇವೆ, ಅವರು ಅನೇಕ ದಕ್ಷಿಣ ಏಷ್ಯಾದ ಮತ್ತು ಮಹಿಳಾ ಪತ್ರಕರ್ತರಂತೆ, ತಮ್ಮ ಕೆಲಸವನ್ನು ಸರಳವಾಗಿ ಮಾಡುವುದಕ್ಕಾಗಿ ಕಿರುಕುಳವನ್ನು ಅನುಭವಿಸುತ್ತಿದ್ದಾರೆ. ಪತ್ರಿಕಾ ಸ್ವಾತಂತ್ರ್ಯವು ಯಾವುದೇ ಪ್ರಜಾಪ್ರಭುತ್ವದ ವಿಶಿಷ್ಟ ಲಕ್ಷಣವಾಗಿದೆ ಮತ್ತು ಪಿಎಂ ಮೋದಿ ಅವರು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವನ್ನು ಮುನ್ನಡೆಸುತ್ತಿದ್ದಾರೆ. ಅವರಿಗೆ ಪ್ರಶ್ನೆ ಮಾಡುವುದು ನಮ್ಮ ಕರ್ತವ್ಯ ನಾವು ಅದನ್ನು ಮಾಡಿದ್ದೇವೆ” ಎಂದು ಅಸೋಸಿಯೇಷನ್ ಹೇಳಿದೆ.

ಇದನ್ನೂ ಓದಿ: ಅಮೆರಿಕಾದಲ್ಲಿ ಮೋದಿಗೆ ಪ್ರಶ್ನೆ ಕೇಳಿದ ಪತ್ರಕರ್ತೆಗೆ ಟ್ವಿಟರ್‌ನಲ್ಲಿ ಹಿಂದುತ್ವವಾದಿಗಳಿಂದ ನಿಂದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...