Homeಮುಖಪುಟಅಂಬೇಡ್ಕರ್‌ರನ್ನು ಗುಂಡಿಟ್ಟು ಕೊಲ್ಲುತ್ತಿದ್ದೆ ಎಂದಿದ್ದ ಹಿಂದುತ್ವ ಮುಖಂಡ ಅರೆಸ್ಟ್

ಅಂಬೇಡ್ಕರ್‌ರನ್ನು ಗುಂಡಿಟ್ಟು ಕೊಲ್ಲುತ್ತಿದ್ದೆ ಎಂದಿದ್ದ ಹಿಂದುತ್ವ ಮುಖಂಡ ಅರೆಸ್ಟ್

- Advertisement -
- Advertisement -

ಗೋಡ್ಸೆ ಗಾಂಧಿಯನ್ನು ಕೊಂದಂತೆ ನಾನು ಅಂಬೇಡ್ಕರ್‌ರನ್ನು ಗುಂಡಿಟ್ಟು ಕೊಲ್ಲುತ್ತಿದ್ದೆ ಎಂದು ನಾಲಿಗೆ ಹರಿಬಿಟ್ಟಿದ್ದ ಹಿಂದುತ್ವ ಸಂಘಟನೆಯ, ರಾಷ್ಟ್ರೀಯ ದಲಿತ ಸೇನೆಯ ಸಂಸ್ಥಾಪಕ ತೆಲಂಗಾಣದ ಹಮಾರಾ ಪ್ರಸಾದ್‌ನನ್ನು ಬಂಧಿಸಲಾಗಿದೆ. ಹಮಾರಾ ಪ್ರಸಾದ್, ಡಾ ಬಿಆರ್ ಅಂಬೇಡ್ಕರ್ ಅವರ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿರುವ ವೀಡಿಯೊವನ್ನು ಹರಿಬಿಟ್ಟಿದ್ದನು.

ಹೈದರಾಬಾದ್ ಪೊಲೀಸರು ಶುಕ್ರವಾರ ಹಮಾರಾ ಪ್ರಸಾದ್‌ನನ್ನು ಬಂಧಿಸಿ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ ಮತ್ತು 505 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಹೈದರಾಬಾದ್ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಪೊಲೀಸರು, ”ಡಾ ಬಿಆರ್ ಅಂಬೇಡ್ಕರ್ ಅವರನ್ನು ನಿಂದನೆ ಮಾಡಿರುವ ವಿಡಿಯೋ ರೆಕಾರ್ಡ ಮಾಡಿಕೊಂಡು ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ವೀಡಿಯೊಗಳನ್ನು ಫಾರ್ವರ್ಡ್ ಮಾಡಿದ ಹಮಾರಾ ಪ್ರಸಾದ್‌ರನ್ನು ಇಂದು ಬಂಧಿಸಿದ್ದೇವೆ. ಅವರ ವಿರುದ್ಧ 256/2023 ಯು/ಎಸ್ 153 ಎ, 505 (2) ಐಪಿಸಿ ಎಫ್‌ಐಆರ್ ದಾಖಲಿಸಿದ್ದೇವೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ‘ಅಂಬೇಡ್ಕರ್‌ರನ್ನು ಗುಂಡಿಟ್ಟು ಕೊಲ್ಲುತ್ತಿದ್ದೆ’: ನಾಲಿಗೆ ಹರಿಬಿಟ್ಟ ಹಿಂದುತ್ವ ನಾಯಕ; ಕ್ರಮಕ್ಕೆ BSP ನಾಯಕರ ಆಗ್ರಹ

ಹಮಾರಾ ಪ್ರಸಾದ್ ಆ ವಿಡಿಯೋದಲ್ಲಿ, ಡಾ. ಬಿಆರ್ ಅಂಬೇಡ್ಕರ್ ಅವರು ಬರೆದಿರುವ ‘ಹಿಂದೂಯಿಸಂನಲ್ಲಿ ಒಗಟುಗಳು’ ಎನ್ನುವ ಪುಸ್ತಕವನ್ನು ಹಿಡಿದು, “ಈ ಮನುಷ್ಯ (ಅಂಬೇಡ್ಕರ್) ಸ್ಪಷ್ಟವಾಗಿ 12 ಡಿಗ್ರಿ (ಮಾಸ್ಟರ್ಸ್) ಹೊಂದಿರುವ ಬುದ್ಧಿಜೀವಿಯಾಗಿದ್ದಾರೆ. ರಾಷ್ಟ್ರನಾಯಕನಾದವನು ದೇಶದ ಎಲ್ಲ ಜನರನ್ನು ಸಮಾನವಾಗಿ ಕಾಣಬೇಕು. ಅವನು ಕಷ್ಟ ಅನುಭವಿಸಿದರೂ ಇತರರ ಮೇಲೆ ತನ್ನ ದ್ವೇಷವನ್ನು ತೋರಿಸಬಾರದು. ಅಂಬೇಡ್ಕರ್ ಅವರು ಈ ರೀತಿಯ ಕಸ ಬರೆಯುವ ಮೂಲಕ ಕೋಟ್ಯಂತರ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ” ಎಂದು ಹಮಾರಾ ಪ್ರಸಾದ್ ಹೇಳಿದ್ದಾರೆ. ಅಷ್ಟೇ ಅಲ್ಲದೇ ಮುಂದುವರೆದು, ”ನಾನು ಅಂಬೇಡ್ಕರ್ ಬದುಕಿದ್ದಾಗ ಹುಟ್ಟಿದ್ದರೆ, ಈ ಪುಸ್ತಕ ನನ್ನ ಕಣ್ಣಿಗೆ ಬಿದ್ದಿದ್ದರೆ, ಗೋಡ್ಸೆ ಗಾಂಧಿಗೆ ಹೇಗೆ ಗುಂಡು ಹಾರಿಸಿದನೋ ಅದೇ ರೀತಿ ನಾನು ಅಂಬೇಡ್ಕರ್‌ಗೆ ಗುಂಡು ಹಾರಿಸುತ್ತಿದ್ದೆ” ಎಂದು ನಾಲಿಗೆ ಹರಿಬಿಟ್ಟಿದ್ದನು.

ಈ ವಿಚಾರವಾಗಿ ಹಮಾರಾ ಪ್ರಸಾದ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ ಮತ್ತು ಪ್ರಿವೆಂಟಿವ್ ಡಿಟೆನ್ಶನ್ ಆಕ್ಟ್ ಅಡಿಯಲ್ಲಿ ಕ್ರಮ ಕೈಗೊಳ್ಳುವಂತೆ ಬಹುಜನ ಸಮಾಜ ಪಕ್ಷದ ತೆಲಂಗಾಣ ಮುಖ್ಯಸ್ಥ ಆರ್‌.ಎಸ್ ಪ್ರವೀಣ್ ಕುಮಾರ್ ಆಗ್ರಹಿಸಿದ್ದರು.

ವಿಡಿಯೊ ಕ್ಲಿಪ್ಪಿಂಗ್ ಶೇರ್ ಮಾಡಿದ್ದ ಆರ್‌.ಎಸ್. ಪ್ರವೀಣ್ ಕುಮಾರ್ ಅವರು, ಬಿಆರ್ ಎಸ್ ಪಕ್ಷವನ್ನು ಟ್ಯಾಗ್ ಮಾಡಿ, ಈ ‘ಈಡಿಯಟ್’ ವಿರುದ್ಧ 153 ಎ (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸೌಹಾರ್ದತೆ ಕಾಪಾಡಲು ಪೂರ್ವಾಗ್ರಹ ಪೀಡಿತ ಕೃತ್ಯಗಳನ್ನು ಮಾಡುವುದು) ಅಡಿಯಲ್ಲಿ ಸರ್ಕಾರ ಏಕೆ ಪ್ರಕರಣ ದಾಖಲಿಸಿಲ್ಲ ಎಂದು ಕೇಳಿದ್ದರು. ಪ್ರಿವೆಂಟಿವ್ ಡಿಟೆನ್ಶನ್ ಆಕ್ಟ್‌ನ ಅಡಿಯಲ್ಲಿ ಅವನನ್ನು ಜೈಲಿನಲ್ಲಿಡಿ ಎಂದು ಪ್ರವೀಣ್ ಕುಮಾರ್ ತಮ್ಮ ಆಕ್ರೋಶ ಹೊರಹಾಕಿದ್ದರು.

”ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ನಿಂದಿಸುವ ಮತ್ತು ಪರಿಶಿಷ್ಟ ಜಾತಿಯ ನಾಗರಿಕರ ಭಾವನೆಗಳಿಗೆ ನೋವುಂಟು ಮಾಡುವ ವೀಡಿಯೊಗಳನ್ನು ಮಾಡಿ ಮತ್ತು ಫಾರ್ವರ್ಡ್ ಮಾಡಿದ್ದಾರೆ” ಎಂದು ದಲಿತಪರ ಹೋರಾಟಗಾರ ಕಾರ್ತಿಕ್ ನವಯನ್ ಅವರು ಹೈದರಾಬಾದ್ ಸೈಬರ್ ಕ್ರೈಮ್ ಪೊಲೀಸರಿಗೆ ಆನ್‌ಲೈನ್ ದೂರು ದಾಖಲಿಸಿದ್ದರು.

ಆದರೆ, ಹೈದರಾಬಾದ್ ಸೈಬರ್ ಕ್ರೈಮ್ ಪೊಲೀಸರು, ಹಮಾರಾ ಪ್ರಸಾದ್ ವಿರುದ್ಧ ಇನ್ನೂ ಯಾವುದೇ ದೂರುಗಳು ಬಂದಿಲ್ಲ ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ್ದರು. ಇದಕ್ಕೆ ದಲಿತಪರ ಸಂಘಟನೆಗಳು ಮತ್ತು ಪ್ರಜ್ಞಾವಂತ ಜನರು, ತೆಲಂಗಾಣ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಕೂಡಲೇ ಹಮಾರಾ ಪ್ರಸಾದ್‌ನನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಸಾಲಾ ಬಾಂಡ್ ಪ್ರಕರಣ : ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಶೋಕಾಸ್ ನೋಟಿಸ್ ನೀಡಿದ ಇಡಿ

ಕೆಐಐಎಫ್‌ಬಿ ಮಸಾಲಾ ಬಾಂಡ್ ಪ್ರಕರಣದಲ್ಲಿ ಕೇರಳ ಸಿಎಂ ಪಿಣರಾಯಿ ವಿಜಯನ್, ಮಾಜಿ ಹಣಕಾಸು ಸಚಿವ ಥಾಮಸ್ ಐಸಾಕ್ ಮತ್ತು ಮುಖ್ಯಮಂತ್ರಿಗಳ ಕಾರ್ಯದರ್ಶಿ ಕೆ.ಎಂ ಅಬ್ರಹಾಂ ಅವರಿಗೆ ಜಾರಿ ನಿರ್ದೇಶನಾಲ 466 ಕೋಟಿ ರೂ.ಗಳ...

ಸಂಸತ್ತಿನ ಚಳಿಗಾಲದ ಅಧಿವೇಶನ : ಎಸ್‌ಐಆರ್ ಕುರಿತು ತುರ್ತು ಚರ್ಚೆಗೆ ಒತ್ತಾಯಿಸಿ ನಿಲುವಳಿ ಸೂಚನೆ ಮಂಡಿಸಿದ ಕಾಂಗ್ರೆಸ್

ಸೋಮವಾರ (ಡಿಸೆಂಬರ್ 1) ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನವೇ, ದೇಶದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ತುರ್ತು ಚರ್ಚೆ ನಡೆಸಬೇಕೆಂದು ಕೋರಿ ಕಾಂಗ್ರೆಸ್ ನಿಲುವಳಿ ಸೂಚನೆ...

ತಮಿಳುನಾಡಿನಲ್ಲಿ ಎರಡು ಬಸ್ಸುಗಳು ಡಿಕ್ಕಿ:10ಕ್ಕೂ ಹೆಚ್ಚು ಜನರ ಸಾವು, 20 ಜನರಿಗೆ ಗಂಭೀರ ಗಾಯಗಳಾಗಿವೆ

ಚೆನ್ನೈ: ಶಿವಗಂಗಾ ಜಿಲ್ಲೆಯ ಕುಮ್ಮಂಗುಡಿ ಬಳಿ ಭಾನುವಾರ ಸಂಜೆ ಎರಡು ತಮಿಳುನಾಡು ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 10 ಜನರು ಸಾವನ್ನಪ್ಪಿ, 20 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು...

ನಾಳೆಯಿಂದ ಸಂಸತ್ ಚಳಿಗಾಲದ ಅಧಿವೇಶನ | ಸುಗಮ ಕಲಾಪಕ್ಕೆ ಸಹಕಾರ ಕೋರಿದ ಆಡಳಿತ : ಎಸ್‌ಐಆರ್ ಚರ್ಚೆ ಮುಂದಿಟ್ಟ ಪ್ರತಿಪಕ್ಷಗಳು

ನಾಳೆಯಿಂದ (ಡಿಸೆಂಬರ್ 1) ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭಗೊಳ್ಳಲಿದೆ. ಅದಕ್ಕೂ ಮುನ್ನ ಇಂದು (ನವೆಂಬರ್ 30) ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆದಿದೆ. ಸಭೆಯಲ್ಲಿ ಸುಗಮ...

ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿವೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.  ನವೆಂಬರ್ 30ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು...

ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಯುವಕ: ಮನನೊಂದು 22 ವರ್ಷದ ಯುವತಿ ಆತ್ಮಹತ್ಯೆ 

ಮದುವೆಯಾಗುವುದಾಗಿ ನಂಬಿಸಿದ್ದ ಯುವಕ, ಯುವತಿಗೆ ಮಾನಸಿಕ-ದೈಹಿಕ ಹಲ್ಲೆ ನಡೆಸಿದ್ದು, ಆತನ ಲೈಂಗಿಕ ಕಿರುಕುಳಕ್ಕೆ ಬೇಸತ್ತ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇಂಜಿನಿಯರಿಂಗ್ ಪದವೀಧರೆ...

ಮಹಾರಾಷ್ಟ್ರ : ಪ್ರಮುಖ ನಾಯಕ ಅನಂತ್ ಸೇರಿದಂತೆ 10 ಮಂದಿ ಮಾವೋವಾದಿಗಳು ಶರಣಾಗತಿ

ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯಲ್ಲಿ ಶುಕ್ರವಾರ (ನ.28) ಪ್ರಮುಖ ಮಾವೋವಾದಿ ನಾಯಕ ವಿಕಾಸ್ ನಾಗಪುರೆ ಅಲಿಯಾಸ್ ನವಜ್ಯೋತ್ ಅಲಿಯಾಸ್ ಅನಂತ್ ಮತ್ತು ಇತರ 10 ಮಂದಿ ಪೊಲೀಸರ ಮುಂದೆ ಶರಣಾಗಿದ್ದಾರೆ. ಅನಂತ್ ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ...

ಎಸ್‌ಐಆರ್ : 12 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಗಡುವು ವಿಸ್ತರಿಸಿದ ಚು. ಆಯೋಗ

ಒಂಬತ್ತು ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌)ಯಲ್ಲಿ ಮತದಾರರು ಎಣಿಕೆ ನಮೂನೆಗಳನ್ನು ಸಲ್ಲಿಸುವ ಗಡುವನ್ನು ಡಿಸೆಂಬರ್ 4 ರಿಂದ 11ಕ್ಕೆ ಚುನಾವಣಾ ಆಯೋಗ...

ಗೆಳತಿಗೆ ಬೇರೊಬ್ಬ ವ್ಯಕ್ತಿಯೊಂದಿಗೆ ವಿವಾಹ: 18ವರ್ಷದ ಪದವಿಪೂರ್ವ ವಿದ್ಯಾರ್ಥಿ ಆತ್ಮಹತ್ಯೆ

ತನ್ನ ಗೆಳತಿ ಬೇರೊಬ್ಬ ವ್ಯಕ್ತಿಯನ್ನು ಮದುವೆಯಾದ ಕಾರಣ ನವೆಂಬರ್ 29, ಶನಿವಾರ ಹೈದರಾಬಾದ್‌ನಲ್ಲಿ ಪದವಿಪೂರ್ವ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಸುರರಾಮ್ ಪೊಲೀಸ್ ವ್ಯಾಪ್ತಿಯಲ್ಲಿ ನಡೆದಿದೆ. ಮೃತನನ್ನು 18 ವರ್ಷದ ಅಭಿಲಾಷ್ ಎಂದು...

ಅರ್ಫಾಝ್‌ನ ಮನೆ ಕೆಡವಿದ ಆಡಳಿತ : ತನ್ನ ಜಾಗ ಉಡುಗೊರೆಯಾಗಿ ಕೊಟ್ಟ ಕುಲ್ದೀಪ್ ಶರ್ಮಾ

ಅರ್ಫಾಝ್ ಎಂಬ ಪತ್ರಕರ್ತನ ಮನೆಯನ್ನು ಆಡಳಿತ ಕೆಡವಿದಾಗ, ತನ್ನ ಜಾಗವನ್ನು ಉಡುಗೊರೆಯಾಗಿ ಕೊಟ್ಟ ಜಮ್ಮು ಕಾಶ್ಮೀರದ ಸಾಮಾಜಿಕ ಹೋರಾಟಗಾರ ಕುಲ್ದೀಪ್ ಶರ್ಮಾ ನಡೆಗೆ ದೇಶದಾದ್ಯಂತ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಜಮ್ಮುವಿನ ಜ್ಯುವೆಲ್ ಪ್ರದೇಶದ ನಿವಾಸಿ...