Homeಮುಖಪುಟಹಿಂದುತ್ವ ವಾರ್‌: ‘ಶಿವಸೇನೆ ಹುಟ್ಟೇ ಇರಲಿಲ್ಲ’ ಎಂದ ಬಿಜೆಪಿ

ಹಿಂದುತ್ವ ವಾರ್‌: ‘ಶಿವಸೇನೆ ಹುಟ್ಟೇ ಇರಲಿಲ್ಲ’ ಎಂದ ಬಿಜೆಪಿ

- Advertisement -
- Advertisement -

ಮುಂಬೈ: ರಾಜಕೀಯ ಅನುಕೂಲಕ್ಕಾಗಿ ಬಿಜೆಪಿ ಹಿಂದುತ್ವವನ್ನು ಬಳಸಿಕೊಂಡಿದೆ ಎಂಬ ಮಾಜಿ ಮಿತ್ರ ಪಕ್ಷ ಶಿವಸೇನೆಯ ನಾಯಕ, ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿದ ಹೇಳಿಕೆಗೆ ಬಿಜೆಪಿ ಪ್ರತಿಕ್ರಿಯೆ ನೀಡಿದೆ.

“ಶಿವಸೇನೆ ಆಯ್ದ ವಿಷಯಗಳನ್ನಷ್ಟೇ ಸ್ಮರಿಸುತ್ತದೆ. ಮುಂಬೈ ನಾಗರಿಕ ಸಂಸ್ಥೆಯಲ್ಲಿ ಬಿಜೆಪಿ ಸದಸ್ಯರಿದ್ದಾಗ ಶಿವಸೇನೆ ಹುಟ್ಟೇ ಇರಲಿಲ್ಲ. 1984ರ ಚುನಾವಣೆಯಲ್ಲಿ ಅವರ ಪಕ್ಷದ ಅಭ್ಯರ್ಥಿ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದರು” ಎಂದು ಬಿಜೆಪಿ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.

ಭಾನುವಾರ ನಡೆದ ಶಿವಸೇನೆಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ್ದ ಉದ್ಧವ್ ಠಾಕ್ರೆ, “ಬಿಜೆಪಿಯೊಂದಿಗೆ ಮಿತ್ರಪಕ್ಷವಾಗಿದ್ದರಿಂದ ಶಿವಸೇನೆಯ ಕಳೆದ 25 ವರ್ಷಗಳು ವ್ಯರ್ಥವಾದವು” ಎಂದು ಹೇಳಿದ್ದರು.

ಹಿಂದುತ್ವಕ್ಕೆ ಅಧಿಕಾರ ಬೇಕು ಎಂಬ ಕಾರಣಕ್ಕೆ ಶಿವಸೇನೆಯು ಬಿಜೆಪಿಯ ಜತೆ ಹೊಂದಾಣಿಕೆ ಮಾಡಿಕೊಂಡಿತ್ತು. ಸೇನೆ ಎಂದಿಗೂ ಅಧಿಕಾರಕ್ಕಾಗಿ ಹಿಂದುತ್ವವನ್ನು ಬಳಸಿಕೊಂಡಿಲ್ಲ ಎಂದು ಉದ್ಧವ್ ಠಾಕ್ರೆ ಹೇಳಿದ್ದರು.

“ನಮ್ಮ ಪಕ್ಷವು ರಾಜ್ಯದ ಹೊರಗೆ ತನ್ನ ಹೆಜ್ಜೆಗುರುತನ್ನು ವಿಸ್ತರಿಸಲು ಪ್ರಯತ್ನಿಸುತ್ತದೆ. ರಾಷ್ಟ್ರ ರಾಜಕಾರಣಕ್ಕೂ ಕಾಲಿಡಲಿದೆ. ಅಕಾಲಿದಳ ಮತ್ತು ಶಿವಸೇನೆಯಂತಹ ಪಕ್ಷಗಳು ಈಗಾಗಲೇ ಹೊರನಡೆದಿರುವುದರಿಂದ ಬಿಜೆಪಿ ನೇತೃತ್ವದ ಎನ್‌ಡಿಎ ಶಕ್ತಿ ಕುಗ್ಗಿದೆ” ಎಂದಿದ್ದರು.

“ಹಿಂದುತ್ವಕ್ಕೆ ಅಧಿಕಾರ ಬೇಕು ಎಂಬ ಕಾರಣಕ್ಕೆ ಶಿವಸೇನೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿತು. ಸೇನೆ ಎಂದಿಗೂ ಅಧಿಕಾರಕ್ಕಾಗಿ ಹಿಂದುತ್ವವನ್ನು ಬಳಸಿಕೊಂಡಿಲ್ಲ. ಶಿವಸೇನೆ ಬಿಜೆಪಿಯನ್ನು ಬಿಟ್ಟಿದೆಯೇ ಹೊರತು ಹಿಂದುತ್ವವನ್ನಲ್ಲ. ಬಿಜೆಪಿಯ ಅವಕಾಶವಾದಿ ಹಿಂದುತ್ವ ಅಧಿಕಾರಕ್ಕಾಗಿ ಮಾತ್ರ ಎಂದು ನಾನು ನಂಬುತ್ತೇನೆ. ಶಿವಸೇನೆಯು ಬಿಜೆಪಿಯೊಂದಿಗೆ ಮಿತ್ರಪಕ್ಷವಾಗಿ ಕಳೆದ 25 ವರ್ಷಗಳನ್ನು ವ್ಯರ್ಥ ಮಾಡಿಕೊಂಡಿದೆ” ಎಂದು ಹೇಳಿಕೆ ನೀಡಿದ್ದರು.

“ರಾಷ್ಟ್ರೀಯ ಮಹತ್ವಾಕಾಂಕ್ಷೆಗಳನ್ನು ಪೂರೈಸಲು ನಾವು ಬಿಜೆಪಿಯನ್ನು ಪೂರ್ಣ ಹೃದಯದಿಂದ ಬೆಂಬಲಿಸಿದೆವು. ಮಹಾರಾಷ್ಟ್ರದಲ್ಲಿ ನಾವಿದ್ದರೆ, ಅವರು ರಾಷ್ಟ್ರ ರಾಜಕಾರಣಕ್ಕೆ ಹೋಗುತ್ತಾರೆ ಎಂಬು ಭಾವಿಸಿದ್ದೆವು. ಆದರೆ ನಮಗೆ ದ್ರೋಹ ಬಗೆದರು. ನಮ್ಮ ಮನೆಯಲ್ಲಿ ನಮ್ಮನ್ನು ನಾಶಮಾಡಲು ಪ್ರಯತ್ನಿಸಲಾಯಿತು. ಆದ್ದರಿಂದ ನಾವು ಉಲ್ಟಾ ಹೊಡೆಯಬೇಕಾಯಿತು” ಎನ್ನುವ ಮೂಲಕ 2019ರ ಚುನಾವಣೆಯ ನಂತರ ಕಾಂಗ್ರೆಸ್ ಮತ್ತು ಎನ್‌ಸಿಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡ ತಮ್ಮ ನಿರ್ಧಾರವನ್ನು ಠಾಕ್ರೆ ಸಮರ್ಥಿಸಿದ್ದರು. ಜೊತೆಗೆ ನಿರ್ಲಕ್ಷ್ಯ ವಹಿಸಿದ್ದರಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಶಿವಸೇನೆಗೆ ಹಿನ್ನಡೆಯಾಗಿದೆ ಎಂದೂ ಹೇಳಿದ್ದರು.

ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ದೇವೇಂದ್ರ ಫಡ್ನವಿಸ್‌, “ಇತ್ತೀಚಿನ ನಗರ ಪಂಚಾಯತ್ ಅಥವಾ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತಮ್ಮ ಪಕ್ಷವು ನಾಲ್ಕನೇ ಸ್ಥಾನ ಗಳಿಸಿದ್ದರಿಂದ ಅವರು ಹತಾಶರಾಗಿದ್ದಾರೆ. ಈ ಮೂಲಕ ಹೊರ ಹಾಕುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.

“ರಾಮ ಜನ್ಮಭೂಮಿ ಅಭಿಯಾನದಲ್ಲಿ ನೀವು ಎಲ್ಲಿದ್ದೀರಿ? ನಾವು ಗುಂಡುಗಳು ಮತ್ತು ಲಾಠಿಗಳನ್ನು ಎದುರಿಸಿದ್ದೇವೆ. ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದೆ” ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿರಿ: ಯುಪಿ ಚುನಾವಣೆ: ಪ್ರಚೋದನಾಕಾರಿ ಭಾಷಣ ಮಾಡಿದ ಬಿಜೆಪಿ ಅಭ್ಯರ್ಥಿ ವಿರುದ್ಧ ಪ್ರಕರಣ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read