Homeಚಳವಳಿಪಠ್ಯದಲ್ಲಿ ಹಿಂದೂ ಹತ್ಯಾಕಾಂಡಗಳು ಸೇರಬೇಕು ವರದಿಗೆ ಇತಿಹಾಸ ತಜ್ಞರ ವಿರೋಧ

ಪಠ್ಯದಲ್ಲಿ ಹಿಂದೂ ಹತ್ಯಾಕಾಂಡಗಳು ಸೇರಬೇಕು ವರದಿಗೆ ಇತಿಹಾಸ ತಜ್ಞರ ವಿರೋಧ

ಇತಿಹಾಸದಲ್ಲಿ ಒಳಿತು ಮತ್ತು ಕೆಡಕುಗಳೆರಡೂ ಇವೆ. ನಮ್ಮ ಮಕ್ಕಳಿಗೆ ಯಾವುದನ್ನು ನೀಡಬೇಕೆಂಬ ಎಚ್ಚರ, ತಿಳುವಳಿಕೆ ಶಿಕ್ಷಣತಜ್ಞರಿಗೆ ಇರಬೇಕಾಗುತ್ತದೆ.

- Advertisement -
- Advertisement -

ರಾಷ್ಟ್ರೀಯ ಶಿಕ್ಷಣ ನೀತಿ (ಎನ್‍ಇಪಿ)ಯ ಭಾಗವಾಗಿ ಸಲ್ಲಿಸಲಾಗಿರುವ 26 ಪೊಸಿಷನ್ ಪೇಪರ್‌ಗಳು ವಿವಾದ ಕಾರಣವಾಗಿವೆ. ಇತಿಹಾಸ ವಿಷಯದ ತಜ್ಞರು ಸಲ್ಲಿಸಿರುವ ವರದಿಯ ಶಿಫಾರಸ್ಸಿನಲ್ಲಿ “ಭಾರತದ ಇತಿಹಾಸದಲ್ಲಿ ನಡೆದ ಹಿಂದೂ ಹತ್ಯಾಕಾಂಡಗಳು ಸೇರಿಸಬೇಕು” ಎಂಬುದಕ್ಕೆ ಇತಿಹಾಸ ತಜ್ಞರು, ಪ್ರಾಧ್ಯಾಪಕರು, ನಿವೃತ್ತ ಉಪಕುಲಪತಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.

ಇಂತಹ ವಿಚಾರಗಳನ್ನು ಪಠ್ಯದಲ್ಲಿ ಅಳವಡಿಸುವುದು ಮಕ್ಕಳ ಮನಸ್ಸಿನಲ್ಲಿ ಪರಸ್ಪರ ದ್ವೇಷ, ವೈಷಮ್ಯದ ಭಾವನೆಯನ್ನು ಮೂಡಿಸುತ್ತದೆ. ಇಂತಹ ಪಠ್ಯ ಸಂವಿಧಾನದ ಆಶಯಗಳಿಗೆ ಮತ್ತು ಶೈಕ್ಷಣಿಕ ಚೌಕಟ್ಟಿಗೆ ವಿರುದ್ಧವಾಗಿದ್ದು, ಸಮಾಜದ ಶಾಂತಿ, ಸೌಹಾರ್ದತೆ, ಸಹಭಾಳ್ವೆಗೆ ಭಂಗ ತರುತ್ತದೆ ಎಂದು ಗುಲ್ಬರ್ಗಾ ಕೇಂದ್ರಿಯ ವಿಶ್ವವಿದ್ಯಾಲಯದ ವಿಶ್ರಾಂತ ಸಮ-ಕುಲಪತಿಗಳಾದ ಪ್ರೊ. ಎಸ್.ಚಂದ್ರಶೇಖರ್, ತುಮಕೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಪ್ರೊ. ಓ. ಅನಂತರಾಮಯ್ಯ, ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕರಾದ ಪ್ರೊ. ಅಶೋಕ್ ಶೆಟ್ಟರ್, ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕರಾದ ಡಾ. ಅಶ್ವತ್ಥನಾರಾಯಣ ಸೇರಿದಂತೆ ಹಲವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಎನ್‌ಇಪಿ: ಫೈಥಾಗರಸ್‌ ಥಿಯರಿ ಸುಳ್ಳು, ಸಂಸ್ಕೃತ, ಮನುಸ್ಮೃತಿ ಕಲಿಕೆಗೆ ಪ್ರಸ್ತಾಪ: ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ

ಭಾರತದ ಇತಿಹಾಸದಲ್ಲಿ ಅನೇಕ ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಕಾರಣಗಳಿಗಾಗಿ ಹಿಂದೂ – ಬೌದ್ಧರ ನಡುವೆ, ಹಿಂದೂ – ಜೈನರ ನಡುವೆ, ಹಿಂದೂ – ಹಿಂದೂಗಳ ನಡುವೆಯೇ ಹತ್ಯಾಕಾಂಡಗಳು ನಡೆದಿವೆ. ಅವುಗಳನ್ನು ಮರೆಮಾಚಿ ಯಾವುದೋ ಒಂದು ಧರ್ಮಿಯರನ್ನು ದೃಷ್ಟಿಯಲ್ಲಿಟ್ಟುಕೊಂಡು ಭಾರತದ ಇತಿಹಾಸದಲ್ಲಿ ಹಿಂದೂಗಳ ಹತ್ಯಾಕಾಂಡವಷ್ಟೆ ನಡೆದಿದೆ ಎಂದು ಬಿಂಬಿಸುವುದು ಚರಿತ್ರೆಗೆ ಮಾಡಿದ ಅಪಚಾರವಾಗುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಚರಿತ್ರೆಯಲ್ಲಿ ನಡೆದಿರುವ ಹತ್ಯಾಕಾಂಡಗಳಿಗೆ ಮೊದಲೂ ಇಲ್ಲ, ಕೊನೆಯೂ ಇಲ್ಲ. ಹರಪ್ಪ ನಾಗರಿಕತೆಯ ಅಂತ್ಯಕ್ಕೆ ಹೊರಗಿನಿಂದ ಬಂದ ಆಕ್ರಮಣಕಾರರು ಕಾರಣವೆಂದು ಹಲವು ಇತಿಹಾಸಕಾರರು ಬರೆದಿಲ್ಲವೇ? ಅಶೋಕ ಕಳಿಂಗ ರಾಜ್ಯದ ಮೇಲೆ ನಡೆಸಿದ ಯುದ್ಧದ ಭೀಕರತೆ ಕುರಿತು ತನ್ನ ಶಾಸನದಲ್ಲಿಯೇ ತಿಳಿಸಿಲ್ಲವೇ? ಮಾಗಡಿ ಸಮೀಪದ ಕಲ್ಯದಲ್ಲಿ ಶ್ರೀವೈಷ್ಣವರು ಜೈನರನ್ನು ಕೊಲ್ಲಲಿಲ್ಲವೇ? ರೈತರ ಮೇಲಿನ ತೆರಿಗೆ ವಿರೋಧಿಸಿದ ನೂರಾರು ಜಂಗಮರನ್ನು ಮಾತುಕತೆಗೆ ಕರೆದು ಚಿಕ್ಕದೇವರಾಜ ಒಡೆಯರ್ ಹತ್ಯೆಗೈಯಲಿಲ್ಲವೇ? ಮೈಸೂರು ರಾಜ್ಯದಲ್ಲಿ ಮರಾಠರು ಮಾಡಿದ ಲೂಟಿ ಮತ್ತು ಸಾವು ನೋವುಗಳಿಗೆ ಲೆಕ್ಕವಿದೆಯೆ? ದಲಿತರು, ಬುಡಕಟ್ಟು ಜನಾಂಗಗಳ ಮೇಲೆ ನೂರಾರು ಹತ್ಯಾಕಾಂಡಗಳು ನಡೆದಿಲ್ಲವೇ? ಅವುಗಳಲ್ಲಿ ತಮಗೆ ಬೇಕಾದ್ದನ್ನು ಮಾತ್ರ ಆಯ್ದು ಹೇಳುವುದು ಎಷ್ಟರಮಟ್ಟಿಗೆ ಸರಿ? ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇತಿಹಾಸದಲ್ಲಿ ಒಳಿತು ಮತ್ತು ಕೆಡಕುಗಳೆರಡೂ ಇವೆ. ನಮ್ಮ ಮಕ್ಕಳಿಗೆ ಯಾವುದನ್ನು ನೀಡಬೇಕೆಂಬ ಎಚ್ಚರ, ತಿಳುವಳಿಕೆ ಶಿಕ್ಷಣತಜ್ಞರಿಗೆ ಇರಬೇಕಾಗುತ್ತದೆ. ಇತಿಹಾಸದಿಂದ ಸ್ನೇಹ, ಪ್ರೀತಿ, ಸಹಬಾಳ್ವೆ, ಸೌಹಾರ್ದತೆಯ ವಿಚಾರಗಳನ್ನು ಮುಗ್ಧ ಮನಸಿನ ಮಕ್ಕಳಿಗೆ ಕಲಿಸುವ ಮೂಲಕ ಬೌದ್ಧಿಕ ವಿಕಾಸಗೊಳಿಸಬೇಕೇ ಹೊರತು; ಕ್ರೌರ್ಯ, ದ್ವೇಷ, ಅಸೂಯೆಯ ಮೂಲಕ ವಿಕಾರಗೊಳಿಸಬಾರದು ಎಂದು ಆಗ್ರಹಿಸಿದ್ದಾರೆ.

ಪತ್ರಿಕಾ ಹೇಳಿಕೆಗೆ ಡಾ. ಎಸ್.ಪಿ. ವಾಗೀಶ್ವರಿ,ಪ್ರಾಧ್ಯಾಪಕರು, ಕ್ರೈಸ್ಟ್ ವಿಶ್ವವಿದ್ಯಾಲಯ, ಡಾ. ಹಂ.ಗು. ರಾಜೇಶ್
ಸಂಪಾದಕರು, ಇತಿಹಾಸ ದರ್ಪಣ, ಡಾ. ಅಶ್ವತ್ಥನಾರಾಯಣ, ವಿಶ್ರಾಂತ ಪ್ರಾಧ್ಯಾಪಕರು, ಮೈಸೂರು ವಿಶ್ವವಿದ್ಯಾಲಯ, ಡಾ. ಕೆ.ಸದಾಶಿವ, ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು, ಮೈಸೂರು ವಿಶ್ವವಿದ್ಯಾನಿಲಯ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕರಾದ ಪ್ರೊ. ಎಂ. ಜಮುನಾರವರು ಸಹಿ ಹಾಕಿದ್ದಾರೆ.

ಇದನ್ನೂ ಓದಿ; NEP| ಮೊಟ್ಟೆ ನೀಡಿದರೆ ಮಕ್ಕಳಲ್ಲಿ ತಾರತಮ್ಯ ವೃದ್ಧಿ: ಎನ್‌‌ಸಿಇಆರ್‌ಟಿಗೆ ರಾಜ್ಯ ಸರ್ಕಾರದ ಸಮಿತಿ ಪ್ರಸ್ತಾವನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...