Homeಮುಖಪುಟ‘ಇತಿಹಾಸವೊಂದೇ ಅಂತಿಮ ತೀರ್ಪುಗಾರ’; ಸುಪ್ರೀಂ ತೀರ್ಪಿನ ಬಳಿಕ ಕಪಿಲ್ ಪ್ರತಿಕ್ರಿಯೆ

‘ಇತಿಹಾಸವೊಂದೇ ಅಂತಿಮ ತೀರ್ಪುಗಾರ’; ಸುಪ್ರೀಂ ತೀರ್ಪಿನ ಬಳಿಕ ಕಪಿಲ್ ಪ್ರತಿಕ್ರಿಯೆ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಬೆಂಬಲಿಸುವ ಸುಪ್ರೀಂಕೋರ್ಟಿನ ತೀರ್ಪಿನ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ವಕೀಲ ಕಪಿಲ್ ಸಿಬಲ್, ‘ಕೆಲವು ಯುದ್ಧಗಳು ಕಳೆದುಹೋಗಲು ಹೋರಾಡುತ್ತವೆ’ ಎಂದು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.

2019ರ ಆಗಸ್ಟ್ ನಲ್ಲಿ ಸಂವಿಧಾನದ 370ನೇ ವಿಧಿಯ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವುದನ್ನು ಕೋರ್ಟಿನಲ್ಲಿ ಪ್ರಶ್ನಿಸಿದ್ದ ಅರ್ಜಿದಾರರ ಪರ ವಕೀಲರಾಗಿ ಕಪಿಲ್ ಸಿಬಲ್ ವಾದ ಮಂಡಿಸುತ್ತಿದ್ದರು.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಕೆಲವು ಯುದ್ಧಗಳು ಕಳೆದುಹೋಗಲು ಹೋರಾಡುತ್ತವೆ. ಇತಿಹಾಸವು ತಲೆಮಾರುಗಳಿಗೆ ಅಹಿತಕರವಾದ ಸಂಗತಿಗಳನ್ನು ದಾಖಲಿಸಬೇಕು. ಸಾಂಸ್ಥಿಕ ಕ್ರಮಗಳ ಸರಿ ಮತ್ತು ತಪ್ಪುಗಳು ಮುಂಬರುವ ವರ್ಷಗಳಲ್ಲಿ ಚರ್ಚೆಯಾಗುತ್ತವೆ. ಇತಿಹಾಸವೊಂದೇ ಅಂತಿಮ ತೀರ್ಪುಗಾರ; ಐತಿಹಾಸಿಕ ನಿರ್ಧಾರಗಳ ನೈತಿಕ ದಿಕ್ಸೂಚಿ’ ಎಂದು ಕಪಿಲ್ ಸಿಬಲ್ ಪ್ರತಿಕ್ರಿಯಿಸಿದ್ದಾರೆ.

ಕಾಶ್ಮೀರದಲ್ಲಿ ಆದಷ್ಟು ಬೇಗ ಚುನಾವಣೆ ನಡೆಸಬೇಕು: ಓವೈಸಿ

370ನೇ ವಿಧಿ ರದ್ದು ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಎಐಎಂಎಂ ಮುಖಂಡ ಅಸಾದುದ್ದೀನ್ ಓವೈಸಿ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.

ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ‘2019ರಲ್ಲಿ ನಡೆದ ಸೆಮಿನಾರ್‌ನಲ್ಲಿ ಮಾತನಾಡಿದ ಸಿಜೆಐ, ‘ಸಾರ್ವಜನಿಕರ ಅನುಪಸ್ಥಿತಿಯಲ್ಲಿ ಅಧಿಕಾರವನ್ನು ಸ್ಥಾಪಿಸಿದವರಿಗೆ ಆ ಕುರಿತ ಚರ್ಚೆ ಯಾವಾಗಲೂ ಬೆದರಿಕೆಯಾಗಿರುತ್ತದೆ’ ಎಂದು ಹೇಳಿದ್ದರು. 356ನೇ ವಿಧಿಗೆ ಒಳಪಟ್ಟಿರುವಾಗ. ರಾಜ್ಯದಲ್ಲಿ ಚುನಾಯಿತ ವಿಧಾನಸಭೆ ಅಸ್ತಿತ್ವದಲ್ಲಿ ಇಲ್ಲದೆ ಇದ್ದರೂ ಇಡೀ ರಾಜ್ಯವನ್ನು ಕರ್ಫ್ಯೂನಲ್ಲಿ ಇರಿಸುವ ಮೂಲಕ ನೀವು ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಬಹುದೇ ಎಂಬುದು ಪ್ರಶ್ನೆ’ ಎಂದಿದ್ದಾರೆ.

‘ಒಕ್ಕೂಟವು (ಫೆಡರಲಿಸಂ) ಸಂವಿಧಾನದ ಮೂಲ ರಚನೆಯ ಭಾಗವಾಗಿದೆ ಎಂದು ಸುಪ್ರೀಂಕೋರ್ಟ್ ಬೊಮ್ಮಾಯಿ (ಎಸ್ಆರ್ ಬೊಮ್ಮಾಯಿ ತೀರ್ಪು) ತೀರ್ಪಿನಲ್ಲಿ ಹೇಳಿರುವುದನ್ನು ನಾವು ಸ್ಪಷ್ಟಪಡಿಸೋಣ. ಫೆಡರಲಿಸಂ ಎಂದರೆ ರಾಜ್ಯವು ತನ್ನದೇ ಆದ ಧ್ವನಿ ಹೊಂದಿದ್ದು, ಅದರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಲು ಸಂಪೂರ್ಣ ಸ್ವಾತಂತ್ರ್ಯವನ್ನು ಹೊಂದಿದೆ. ರಾಜ್ಯದ ಕುರಿತು ವಿಧಾನಸಭೆ ಬದಲಿಗೆ ಲೋಕಸಭೆ ಹೇಗೆ ಮಾತನಾಡಬಹುದು? ಸಂವಿಧಾನದಲ್ಲಿ ವಿಧಾನಸಭೆ ಅಂಗೀಕರಿಸಬೇಕಾದ ನಿರ್ಣಯವನ್ನು ಸಂಸತ್ತು ಹೇಗೆ ಅಂಗೀಕರಿಸಬಹುದು? 370 ಅನ್ನು ರದ್ದುಪಡಿಸಿದ ವಿಧಾನವು ಸಾಂವಿಧಾನಿಕ ನೈತಿಕತೆಯ ಉಲ್ಲಂಘನೆಯಾಗಿದೆ. ಇನ್ನೂ ಕೆಟ್ಟ ನಿರ್ಧಾರವೆಂದರೆ, ಸ್ವತಂತ್ರ ರಾಜ್ಯದ ಸ್ಥಾನಮಾನ ರದ್ದುಗೊಳಿಸಿ ವಿಭಜಿಸಿರುವುದು. ಕೇಂದ್ರಾಡಳಿತ ಪ್ರದೇಶದ ತಳಮಟ್ಟಕ್ಕಿಳಿಸಿರುವುದು ಕಾಶ್ಮೀರದ ಜನರಿಗೆ ಒಕ್ಕೂಟ ಸರ್ಕಾರ ಎಸಗಿದ ಗಂಭೀರ ಮಹಾ ದ್ರೋಹವಾಗಿದೆ’ ಎಂದು ಆಕ್ರೋಶ ಹೊರಹಾಕಿದ್ದಾರೆ.

‘ನಾನು ಒಮ್ಮೆ ಹೇಳಿದ್ದೇನೆ, ಮತ್ತೊಮ್ಮೆ ಹೇಳುತ್ತೇನೆ. ಒಮ್ಮೆ ಇದನ್ನು ಕಾನೂನುಬದ್ಧಗೊಳಿಸಿದರೆ, ಚೆನ್ನೈ, ಕೋಲ್ಕತ್ತಾ, ಹೈದರಾಬಾದ್ ಅಥವಾ ಮುಂಬೈಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಲು ಕೇಂದ್ರ ಸರ್ಕಾರಕ್ಕೆ ಅಡ್ಡಿಯಿಲ್ಲ. ಲಡಾಖ್ ಪ್ರಕರಣವನ್ನು ನೋಡೋಣ, ಇದು ಲೆಫ್ಟಿನೆಂಟ್ ಗವರ್ನರ್ ಆಳ್ವಿಕೆಯಲ್ಲಿದೆ. ಅಲ್ಲಿ ಯಾವುದೇ ಪ್ರಜಾಸತ್ತಾತ್ಮಕ ಪ್ರಾತಿನಿಧ್ಯವಿಲ್ಲ’ ಎಂದು ಹೇಳಿದ್ದಾರೆ.

‘ರಾಜ್ಯವು ಭಾರತದ ಅವಿಭಾಜ್ಯ ಅಂಗ ಎಂಬುದರಲ್ಲಿ ಸಂದೇವಿಲ್ಲ. ಆದರೆ, ಒಂದು ಅವಿಭಾಜ್ಯ ಅಂಗವಾಗಿರುವುದರಿಂದ ಅದು ಒಕ್ಕೂಟದೊಂದಿಗೆ ವಿಶಿಷ್ಟವಾದ ಸಾಂವಿಧಾನಿಕ ಸಂಬಂಧವನ್ನು ಹೊಂದಿಲ್ಲ ಎಂದು ಅರ್ಥವಲ್ಲ. ಕಾಶ್ಮೀರದ ಸಂವಿಧಾನ ಸಭೆಯ ವಿಸರ್ಜನೆಯ ನಂತರ ಈ ಸಾಂವಿಧಾನಿಕ ಸಂಬಂಧವನ್ನು ಶಾಶ್ವತಗೊಳಿಸಲಾಯಿತು’ ಎಂದಿದ್ದಾರೆ.

‘ಒಕ್ಕೂಟದ ನಿರ್ಧಾರದಿಂದ ಸೋತವರು ಜಮ್ಮುವಿನ ಡೋಗ್ರಾಸ್ ಮತ್ತು ಲಡಾಖ್‌ನ ಬೌದ್ಧರು, ಅವರು ಜನಸಂಖ್ಯಾ ಬದಲಾವಣೆಯನ್ನು ಎದುರಿಸಬೇಕಾಗುತ್ತದೆ. ರಾಜ್ಯತ್ವವನ್ನು ಮರುಸ್ಥಾಪಿಸುವ ಬಗ್ಗೆ ಟೈಮ್‌ಲೈನ್‌ ಏಕೆ ಇಲ್ಲ? ಕಾಶ್ಮೀರದಲ್ಲಿ ದೆಹಲಿ ಆಡಳಿತಕ್ಕೆ ಈಗಾಗಲೇ ಐದು ವರ್ಷಗಳಾಗಿವೆ. 2024ರ ಲೋಕಸಭೆ ಚುನಾವಣೆ ಜತೆಗೆ ರಾಜ್ಯದಲ್ಲಿ ಆದಷ್ಟು ಬೇಗ ವಿಧಾನಸಭೆ ಚುನಾವಣೆ ನಡೆಯಬೇಕು’ ಎಂದು ಓವೈಸಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ; ತೀರ್ಪಿಗೂ ಮುನ್ನ ನಮ್ಮನ್ನು ಗೃಹಬಂಧನದಲ್ಲಿಟ್ಟಿದ್ದರು: ಒಮರ್ ಅಬ್ದುಲ್ಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...