Homeಕರ್ನಾಟಕಕರಾವಳಿಯಲ್ಲಿ ಕೋಮುಗಲಭೆಗಳ ಇತಿಹಾಸ - ನಿಖಿಲ್‌ ಕೋಲ್ಪೆ

ಕರಾವಳಿಯಲ್ಲಿ ಕೋಮುಗಲಭೆಗಳ ಇತಿಹಾಸ – ನಿಖಿಲ್‌ ಕೋಲ್ಪೆ

- Advertisement -
- Advertisement -

1968ರಲ್ಲಿ ಕರಾವಳಿ ಕರ್ನಾಟಕದಲ್ಲಿ ಅದರಲ್ಲೂ ಉತ್ತರ ಕನ್ನಡದಲ್ಲಿ ಕೋಮು ಉದ್ರಿಕ್ತತೆ ಹೆಚ್ಚಿತ್ತು. ಸುಳ್ಳು ವದಂತಿಗಳು ದಕ್ಷಿಣ ಕನ್ನಡ ಜಿಲ್ಲೆಗೂ ತಲಪಿದವು. ಆ ಸಂದರ್ಭದಲ್ಲಿಯೇ ಮಂಗಳೂರಿನಲ್ಲಿ ಮಟನ್ ಖಾದರ್ ಎಂಬಾತನಿಗೂ, ಮೀನು ಮಾರುವ ಮೊಗವೀರ ಮಹಿಳೆಗೂ ಪ್ರೇಮಸಂಬಂಧವಿದೆ ಎಂಬ ವದಂತಿ ಗಲಭೆಗೆ ಕಾರಣವಾಯಿತು. ಈ ಗಲಭೆಯಲ್ಲಿ ಬಂದರು ಪ್ರದೇಶದಲ್ಲಿ ಒಬ್ಬ ವ್ಯಕ್ತಿ ಸಾವಿಗೀಡಾದ ಬಗ್ಗೆ ಮಾಹಿತಿ ಸಿಗುತ್ತದೆ.

ಮತ್ತೆ 1979ರಲ್ಲಿ ಖ್ಯಾತ ಚಿತ್ರ ನಿರ್ದೇಶಕ, ಲೇಖಕ ವಿಶುಕುಮಾರ್ ಅವರ ಕನ್ನಡ ಚಿತ್ರ ‘ಕರಾವಳಿ’ಯ ಕಾರಣದಿಂದ ಗಲಭೆ ಉಂಟಾಯಿತು. ಅದು ಮೀನುಗಾರ ಮುಸ್ಲಿಂ ಯುವಕ ಮತ್ತು ಮೊಗವೀರ ಸಮುದಾಯದ ಮಹಿಳೆಯ ನಡುವಿನ ಪ್ರೇಮಕತೆಯಾಗಿದ್ದುದೇ ಇದಕ್ಕೆ ಕಾರಣ. ಈ ಗಲಭೆಗಳು ಹೊಯ್ಗೆಬಜಾರ್, ಕುದ್ರೋಳಿ, ಬಂದರು ಮುಂತಾದ ಪ್ರದೇಶಗಳಲ್ಲಿ ತೀವ್ರವಾಗಿತ್ತು. ಈ ಘಟನೆಯಲ್ಲಿ ಕೆಲವರು ಪ್ರಾಣಕಳೆದುಕೊಂಡರು ಎಂದು ಹೇಳಲಾಗುತ್ತದೆಯಾದರೂ, ನಿಖರ ಮಾಹಿತಿ ಲಭ್ಯವಿಲ್ಲ. ಈ ಘಟನೆಯಲ್ಲಿ ಮುಸ್ಲಿಮರ ಮತ್ತು ಗೌಡ ಸಾರಸ್ವತ ಸಮುದಾಯದವರ ಹಲವಾರು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿತ್ತು.

ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಕೋಮುವಾದದ ಸಾಮಾಜಿಕ ಹಿನ್ನೆಲೆ; ಮೊದಲ ಕೋಮುಗಲಭೆ!

ಹಿಂದೆಲ್ಲಾ ಉಳ್ಳಾಲ ಪ್ರದೇಶವು ಕೋಮುಸೌಹಾರ್ದಕ್ಕೆ ಹೆಸರಾಗಿತ್ತು. ಇದಕ್ಕೆ ದೊಡ್ಡ ಇತಿಹಾಸವಿದ್ದು, ಆ ಕುರಿತು ಈಗಾಗಲೇ ಬರೆಯಲಾಗಿದೆ. ಕೃಷ್ಣಜನ್ಮಾಷ್ಟಮಿಯ ಸಂದರ್ಭದಲ್ಲಿ ಮುಸ್ಲಿಮರು ಕ್ರೀಡಾಸ್ಪರ್ಧೆಗಳಲ್ಲಿ ಭಾಗವಹಿಸುತ್ತಿದ್ದರು. 1980ರ ದಶಕದಲ್ಲಿ ಮಲ್ಲಕಂಭಕ್ಕೆ ಹಂದಿಯ ಕೊಬ್ಬನ್ನು ಸವರಲಾಗುತ್ತದೆ ಎಂದು ಇಂತಹಾ ಉತ್ಸವಗಳಲ್ಲಿ ಭಾಗವಹಿಸುವುದನ್ನು ‘ಶಿರ್ಕ್’ ಎಂದು ಕರೆಯುವ ಕೆಲವು ಸಂಪ್ರದಾಯವಾದಿ ಮುಸ್ಲಿಮರು ವದಂತಿ ಹಬ್ಬಿದರು. ಆಗಿನಿಂದ ಮುಸ್ಲಿಮರ ಭಾಗವಹಿಸುವಿಕೆ ಕಡಿಮೆಯಾಗುತ್ತಾ ಹೋಯಿತು. ಇಂದು ಸಾಮಾನ್ಯ ಸ್ಥಿತಿಯಲ್ಲಿ ಹಿಂದೂ-ಮುಸ್ಲಿಮರು ಸೌಹಾರ್ದದಿಂದಲೇ ಸಹಬಾಳ್ವೆ ನಡೆಸುತ್ತಿದ್ದರೂ, ಸದಾ ಬೂದಿ ಮುಚ್ಚಿದ ಕೆಂಡದಂತೆ ಇರುತ್ತದೆ. ಕೆಲವು ಸಂದರ್ಭಗಳಲ್ಲಿ ಅದು ಸ್ಫೋಟಕ ಸ್ಥಿತಿ ತಲಪುತ್ತದೆ.

ನಂತರ, 1989ರಲ್ಲಿ ಬೈಕಂಪಾಡಿ, ಹೊಸಬೆಟ್ಟು- ಹೀಗೆ ದಕ್ಷಿಣ ಕನ್ನಡದ ಕಡಲತಡಿಯ ಉದ್ದಕ್ಕೂ ಕೋಮುಗಲಭೆ ಉಂಟಾಗಿತ್ತಾದರೂ, ಅದು ಮುಖ್ಯವಾಗಿ ಭಾರೀ ಪ್ರಮಾಣದಲ್ಲಿ ಅಂಗಡಿಗಳ ಲೂಟಿ, ಬೆಂಕಿ ಹಚ್ಚುವಿಕೆ, ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿಯಲ್ಲಿಯೇ ಕೊನೆಗೊಂಡಿತು.

ನಂತರ ಸಣ್ಣಪುಟ್ಟ ಸಂಘರ್ಷಗಳು ಅಲ್ಲಲ್ಲಿ ನಡೆದೇ ಇದ್ದರೂ, ಇತಿಹಾಸದ ಅತೀ ದೊಡ್ಡ ಕೋಮುಗಲಭೆ ನಡೆದದ್ದು 1998-99ರಲ್ಲಿ. 1998ರ ಡಿಸೆಂಬರ್ 29ರಂದು ಆರಂಭವಾದ ಈ ಗಲಭೆ ಸುರತ್ಕಲ್ ಸಮೀಪದ ಚೊಕ್ಕಬೆಟ್ಟುವಿನಲ್ಲಿ ಆರಂಭವಾಗಿ ನಂತರದಲ್ಲಿ ಸುತ್ತಲಿನ ಕೃಷ್ಣಾಪುರ, ಬೈಕಂಪಾಡಿ, ಕುಳಾಯಿ, ಹೊಸಬೆಟ್ಟು, ತಡಂಬೈಲ್, ಕಾನ, ಕಾಟಿಪಳ್ಳ, ನಂತರ ಮಂಗಳೂರು ನಗರ, ಬಂಟ್ವಾಳ ಮತ್ತು ಪುತ್ತೂರು ತಾಲೂಕುಗಳಿಗೆ ವ್ಯಾಪಿಸಿತ್ತು. ಈ ಗಲಭೆಯಲ್ಲಿ ಎಂಟು ಮಂದಿ ಅಧಿಕೃತ ಮೂಲಗಳ ಪ್ರಕಾರ ಪ್ರಾಣ ಕಳೆದುಕೊಂಡಿದ್ದರು. ಇವರಲ್ಲಿ ಆರು ಮಂದಿ ಮುಸ್ಲಿಮರು ಮತ್ತು ಇಬ್ಬರು ಹಿಂದೂಗಳು. ಅನಧಿಕೃತ ವರದಿಗಳ ಪ್ರಕಾರ ಈ ಸಂಖ್ಯೆ 16 ಆಗಿತ್ತು. 100ಕ್ಕೂ ಹೆಚ್ಚು ಮಂದಿ ಮಾರಣಾಂತಿಕವಾಗಿ ಗಾಯಗೊಂಡಿದ್ದರು. ಮನೆಗೆ ನುಗ್ಗಿ ಹೆಂಗಸರು, ಮಕ್ಕಳು, ವೃದ್ಧರ ಮೇಲೆಯೂ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಅಮಾನುಷ ಘಟನೆಗಳೂ ನಡೆದಿದ್ದವು. ಘಟನೆಯಲ್ಲಿ ಭಾರೀ ಆಸ್ತಿಪಾಸ್ತಿ ಹಾನಿ ಸಂಭವಿಸಿದ್ದು, 165 ಮನೆಗಳನ್ನು ಧ್ವಂಸ ಮಾಡಲಾಗಿದ್ದು, ಇವುಗಳಲ್ಲಿ 98 ಮುಸ್ಲಿಮರು ಮತ್ತು 67 ಹಿಂದೂಗಳ ಮನೆಗಳಾಗಿದ್ದವು. ಮುಸ್ಲಿಮರ ನಾಲ್ಕು ಪೂಜಾಸ್ಥಳಗಳನ್ನು ಧ್ವಂಸ ಮಾಡಲಾಗಿತ್ತು. ಈ ಅಂಕಿ-ಅಂಶಗಳನ್ನು ನೀಡುತ್ತಿರುವ ಕಾರಣವೆಂದರೆ- ಕಾರಣ ಏನೇ ಇರಲಿ, ಯಾರೇ ಇರಲಿ- ಎರಡೂ ಕಡೆಗಳವರು ಧರ್ಮಗಳ ಹೆಸರಿನಲ್ಲಿ ಮನುಷ್ಯತ್ವ ಮರೆತು ಪಶುಗಳ ರೀತಿ ಕಾದಾಡಿದ್ದರು ಎಂಬುದನ್ನು ಸೂಚಿಸುವುದಾಗಿದೆ.‌‌‌

ಗಲಭೆ ಕಾರಣ ಕ್ಷುಲ್ಲಕವಾದದ್ದು. ಚೊಕ್ಕಬೆಟ್ಟುವಿನಲ್ಲಿ ಗುಜರಿ ಮಾರುವವನೊಬ್ಬ ಒಂದು ಮನೆಯಿಂದ ಗುಜರಿ ಕದ್ದಿದ್ದ. ಆತನನ್ನು ಹಿಡಿದ ಮನೆಯವರು, ನೆರೆಯವರು ಆತನಿಗೆ ಥಳಿಸಿದ್ದರು. ಇದು ಒಂದು ಸಮುದಾಯದ ಕೆಲವರು, ಕಲ್ಲೆಸೆತ ಆರಂಭಿಸುವುದಕ್ಕೆ ಕಾರಣವಾಗಿತ್ತು. ಆದರೆ, ಇದು ಕೇವಲ ನೆಪವಾಗಿತ್ತು. ಇದಕ್ಕಿಂತಲೂ ಮೊದಲು ಬೇರೆ ಮೂರು ಪ್ರತ್ಯೇಕ ಘಟನೆಗಳು ನಡೆದಿದ್ದವು.

1998ರ ನವೆಂಬರ್‌ನಲ್ಲಿ ಕುಳಾಯಿಯಲ್ಲಿ ಕ್ರೈಸ್ತರ ಸಣ್ಣ ಪಂಥವಾದ ಇವಾಂಜಲಿಕ್ ಚರ್ಚಿಗೆ ನುಗ್ಗಿದ ಹಿಂದೂತ್ವವಾದಿಗಳು ರಾಜಾರೋಷವಾಗಿ ನುಗ್ಗಿ ಎಲ್ಲರನ್ನು ಥಳಿಸಿ, ಅದನ್ನು ಧ್ವಂಸಗೊಳಿಸಿದ್ದರು. ಇದು ದೇಶದಾದ್ಯಂತ ಕ್ರೈಸ್ತ ಧಾರ್ಮಿಕ ಸಂಸ್ಥೆಗಳ ಮೇಲೆ ನಡೆಯುತ್ತಿದ್ದ ದಾಳಿಗಳ ಭಾಗವಾಗಿತ್ತು. ಇಲ್ಲಿ ಕೆಥೋಲಿಕರ ಮೇಲೆ ಯಾವುದೇ ದಾಳಿಗಳು ನಡೆದಿರಲಿಲ್ಲವಾದರೂ (ನಂತರ ನಡೆದವು) ಇಂತಹಾ ಭಯಹುಟ್ಟಿಸುವ ಕೃತ್ಯ ಎಲ್ಲಾ ಧಾರ್ಮಿಕ ಅಲ್ಪಸಂಖ್ಯಾತರಲ್ಲಿ ಆತಂಕ ಸೃಷ್ಟಿಸಿತ್ತು.

ಇನ್ನೊಂದು ಘಟನೆ ಎಂದರೆ, ಮುಸ್ಲಿಂ ಹುಡುಗನೊಬ್ಬ ಹಿಂದೂ ಹುಡುಗಿಯನ್ನು ಚುಡಾಯಿಸಿದ ಎಂಬ ಆರೋಪದಲ್ಲಿ ಆತನಿಗೆ ಹಿಂದೂತ್ವವಾದಿಗಳ ಗುಂಪೊಂದು ಥಳಿಸಿದ್ದು. ಅದರ ಆರೋಪಿಗಳನ್ನು ಪೊಲೀಸರು ಬಂಧಿಸಿದಾಗ ಪೊಲೀಸರು ಪಕ್ಷಪಾತ ಮಾಡುತ್ತಿದ್ದಾರೆ ಎಂಬ ಆರೋಪ ಹೊರಿಸಲಾಗಿತ್ತು. ಪೊಲೀಸರ ಕೆಲಸವನ್ನು ತಾವೇ ಮಾಡುತ್ತೇವೆ, ತಮ್ಮನ್ನು ಅವರು ಬಂಧಿಸುವಂತಿಲ್ಲ ಎಂಬ ಮನೋಭಾವ ಹುಟ್ಟಿ ಇಂದಿನ ವರೆಗೆ ಬೆಳೆದುಬಂದಿರುವುದು ಬಹುಶಃ ಇದೇ ಘಟನೆಯಿಂದ. ಈ ಘಟನೆ ಕೂಡಾ ಕಂದರವನ್ನು ಆಳಗೊಳಿಸಿತ್ತು.

ಆಗಲೇ ಇನ್ನೊಂದು ಘಟನೆಯೂ ನಡೆದಿತ್ತು. ಸುರತ್ಕಲ್‌ನಲ್ಲಿ ಹಾಕಿದ್ದ ಯಕ್ಷಗಾನದ ಬ್ಯಾನರ್ ಒಂದನ್ನು ಕಿಡಿಗೇಡಿಗಳು ಹರಿದುಹಾಕಿದ್ದರು. ಆಗ ಉಂಟಾದ ಉದ್ವಿಗ್ನತೆಯಿಂದ ಯಕ್ಷಗಾನ ಪ್ರದರ್ಶನವೇ ನಿಂತಿತ್ತು. ಇದು ಕೂಡಾ ಧಾರ್ಮಿಕ ಭಾವನೆಗೆ ನೋವುಂಟುಮಾಡುವ ಕೆಲಸವೇ ಆಗಿತ್ತು. ಕೆಲವೇ ಕಿಡಿಗೇಡಿ ಕೃತ್ಯಗಳು, ಪರಿಸ್ಥಿತಿ ಅರಿಯುವುದರಲ್ಲಿ ಪೊಲೀಸ್ ಗುಪ್ತಚರ್ಯೆಯ ವೈಫಲ್ಯ, ಪೊಲೀಸರ ಕಾರ್ಯದಲ್ಲಿ ರಾಜಕಾರಣದ ಹಸ್ತಕ್ಷೇಪ, ಕಾನೂನನ್ನು ಕೈಗೆತ್ತಿಕೊಳ್ಳುವುದು ಇತ್ಯಾದಿಗಳು ಹೇಗೆ ಪರಿಸ್ಥಿತಿಯನ್ನು ಹದಗೆಡಿಸಬಲ್ಲವು ಎಂಬುದನ್ನು ಈ ಘಟನೆ ತೋರಿಸುತ್ತದೆ.

ಇದನ್ನೂ ಓದಿ: ಕರಾವಳಿಯ ಕೋಮು ಸಂಘಟನೆಗಳ ನಿಜಬಣ್ಣ! ಅವುಗಳ ಕಾರ್ಯವಿಧಾನ…

ಈ ಗಲಭೆ ಹರಡುವುದಕ್ಕೆ ವದಂತಿಗಳೂ ಕಾರಣವಾಗಿದ್ದವು. ಇವುಗಳನ್ನು ಹರಡುವುದಕ್ಕೆ ರಾಜಕೀಯ ಹಿತಾಸಕ್ತಿಗಳ ಪ್ರೇರಣೆಯೂ ಇತ್ತು. ವದಂತಿಯ ಸ್ವರೂಪಗಳು ಉಳಿದ ಕಡೆಗಳಂತೆಯೇ ಇದ್ದವು; ಈಗಲೂ ಇವೆ. ‘ನಮ್ಮವರ’ ಮೇಲೆ ದಾಳಿ ಮಾಡುತ್ತಿದ್ದಾರೆ, ನಮ್ಮವರ ಮನೆಗೆ ನುಗ್ಗಿ ಹೊಡೆದಿದ್ದಾರೆ, ನಮ್ಮ ಹೆಣ್ಣು ಮಕ್ಕಳ ಮೇಲೆ, ಅಕ್ಕತಂಗಿಯರ ಮೇಲೆ ಅತ್ಯಾಚಾರ ಮಾಡಿದ್ದಾರೆ, ನಮ್ಮ ತಂದೆ ತಾಯಿಯ ಮೇಲೆ ಕೈ ಹಾಕಿದ್ದಾರೆ, ಪೊಲೀಸರು ಪಕ್ಷಪಾತದಿಂದ ವರ್ತಿಸುತ್ತಿದ್ದಾರೆ, ನಮ್ಮವರಿಗೆ ಹೊಡೆದಿದ್ದಾರೆ- ಇವು ಹಿಂದೆ ನಡೆಯುತ್ತಿದ್ದವು, ಇಂದು ಸಾಮಾಜಿಕ ಜಾಲತಾಣಗಳ ಕಾರಣದಿಂದ ಕ್ಷಣಮಾತ್ರದಲ್ಲಿ ನಡೆಯುತ್ತಿವೆ.

ಇಲ್ಲಿ ಆರಂಭವಾದ ಗಲಭೆಗಳ ಪರಿಣಾಮ ಇಲ್ಲಿಗೇ ನಿಲ್ಲಲಿಲ್ಲ. ಸುರತ್ಕಲ್ ಪರಿಸರದಲ್ಲಿಯೇ ಹಲವಾರು ಕೊಲೆಗಳು, ಪ್ರತೀಕಾರಗಳು ನಡೆದವು, ಈಗಲೂ ಮುಂದುವರಿಯುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...