Homeಕರ್ನಾಟಕವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

- Advertisement -
- Advertisement -

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂಬ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ವಿಶ್ವವಿದ್ಯಾಲಯದ ಕುಲಪತಿ ಡಾ. ವಿಷ್ಣುವರ್ಧನ ಅವರ ಹೆಸರಿನಲ್ಲಿ ವಿವಿಯ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳಿಗೆ ಪೂಜೆಗೆ ಬರುವಮತೆ ಅಧಿಕೃತ ಆಹ್ವಾನ ಹೊರಡಿಲಾಗಿದೆ. ಅದರಲ್ಲಿ ದಿನಾಂಕ 11-08-2026 (ಮಂಗಳವಾರ) ರಂದು ಬೆಳಿಗ್ಗೆ 10.30 ಕ್ಕೆ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿರುವ ಕುಲಪತಿಗಳ ವಸತಿಗೃಹದಲ್ಲಿ ‘ಶ್ರೀ ಸತ್ಯನಾರಾಯಣ ಪೂಜೆ, ನವಗ್ರಹ ಶಾಂತಿ ಹೋಮ ಹಾಗೂ ಶ್ರೀ ಮಹಾಗಣಪತಿ ಪೂಜಾ ಕಾರ್ಯಕ್ರಮ’ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಉಲ್ಲಖಿಸಲಾಗಿದೆ. ಈ ಪೂಜಾ ಕಾರ್ಯಕ್ರಮ ಆಯೋಜನೆ ಮತ್ತು ಆಹ್ವಾನವು ಸಾರ್ವಜನಿಕ, ಶೈಕ್ಷಣಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಆಹ್ವಾನ ಪತ್ರಿಕೆಯ ‘ಲೆಟರ್ ಹೆಡ್’ ವೈರಲ್ ಆಗಿದ್ದು, ನೆಟ್ಟಿಗರು ಹಾಗೂ ಶಿಕ್ಷಣ ತಜ್ಞರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಧಾರ್ಮಿಕ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕಾರಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ಕಾರ್ಮಿಕರು ಮತ್ತು ವಿದ್ಯಾರ್ಥಿ-ವಿದ್ಯಾರ್ಥಿನಿಯರು ವೈಯಕ್ತಿಕವಾಗಿ ಭಾಗವಹಿಸಿ ದೇವರ ಆಶೀರ್ವಾದ ಪಡೆಯಬೇಕೆಂದು ಉಲ್ಲೇಖಿಸಿದ್ದಾರೆ. ಕುಲಪತಿಗಳ ವಿ‍ಷ್ಣುವರ್ಧನ್ ಅವರ ಈ ಧೋರಣೆ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಆಕ್ಷೇಪಗಳು‌ ವ್ಯಕ್ತವಾಗಿವೆ. ಸರ್ಕಾರಿ ಅನುದಾನದಲ್ಲಿ ನಡೆಯುವ ಹಾಗೂ ಜಾತ್ಯತೀತ ಮೌಲ್ಯಗಳನ್ನು ಎತ್ತಿಹಿಡಿಯಬೇಕಾದ ಉನ್ನತ ಶಿಕ್ಷಣ ಸಂಸ್ಥೆಯೊಂದರಲ್ಲಿ ಇಂತಹ ಧಾರ್ಮಿಕ ಆಚರಣೆಗಳನ್ನು ನಡೆಸುವುದು ಮತ್ತು ಅದಕ್ಕೆ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳನ್ನು ಅಧಿಕೃತವಾಗಿ ಆಹ್ವಾನಿಸುವುದು ಎಷ್ಟರ ಮಟ್ಟಿಗೆ ಸರಿ ಎಂದು ಹಲವು ಆಕ್ರೋಶ ಹೊರಹಾಕಿದ್ದಾರೆ..

“ವಿಶ್ವವಿದ್ಯಾಲಯಗಳು ವೈಜ್ಞಾನಿಕ ಮನೋಭಾವನೆ ಮತ್ತು ಸಂಶೋಧನೆಯನ್ನು ಪ್ರೋತ್ಸಾಹಿಸುವ ಕೇಂದ್ರಗಳಾಗಬೇಕು. ವಿಜ್ಞಾನವನ್ನು ಬೋಧಿಸುವ ಸಂಸ್ಥೆಯ ಉನ್ನತ ಹುದ್ದೆಯಲ್ಲಿದ್ದುಕೊಂಡು ಹೋಮ, ಹವನ ಮತ್ತು ನವಗ್ರಹ ಶಾಂತಿ ಪೂಜೆಗಳನ್ನು ಪ್ರಚುರಪಡಿಸುವುದು ವೈಜ್ಞಾನಿಕ ಆಲೋಚನೆಗಳಿಗೆ ಹಿನ್ನೆಡೆ ತರುತ್ತದೆ. ಶಿಕ್ಷಣ ಸಂಸ್ಥೆಗಳ ಅಧಿಕೃತ ವೇದಿಕೆಯಲ್ಲಿ ಇಂತಹ ಆಚರಣೆಗಳು ಸರಿಯಲ್ಲ” ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.

“ಸರ್ಕಾರಿ ಮತ್ತು ಶೈಕ್ಷಣಿಕ ಸಂಸ್ಥೆಗಳು ಎಲ್ಲ ಧರ್ಮ ಹಾಗೂ ಸಮುದಾಯದ ವಿದ್ಯಾರ್ಥಿಗಳಿಗೆ ಸಮಾನವಾದ ಜಾತ್ಯತೀತ ಸ್ಥಳಗಳಾಗಿವೆ. ಕುಲಪತಿಗಳು ತಮ್ಮ ವೈಯಕ್ತಿಕ ವೆಚ್ಚದಲ್ಲಿ ವಸತಿಗೃಹದಲ್ಲಿ ಪೂಜೆ ಮಾಡಿಕೊಳ್ಳುವುದಕ್ಕೆ ಅಭ್ಯಂತರವಿಲ್ಲ, ಆದರೆ ವಿಶ್ವವಿದ್ಯಾಲಯದ ಲೋಗೋ ಹಾಗೂ ಅಧಿಕೃತ ಪತ್ರವನ್ನು ಬಳಸಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯನ್ನು ಆಹ್ವಾನಿಸಿರುವುದು ಸಂವಿಧಾನದ ಜಾತ್ಯತೀತ ಆಶಯಗಳಿಗೆ ವಿರುದ್ಧವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ವಿದ್ಯಾರ್ಥಿಗಳನ್ನು ಅಭ್ಯಾಸ ಮತ್ತು ಸಂಶೋಧನೆಗಳತ್ತ ಗಮನ ಹರಿಸುವಂತೆ ಪ್ರೇರೇಪಿಸಬೇಕಾದ ಆಡಳಿತ ಮಂಡಳಿಯೇ ಪೂಜೆ-ಪುನಸ್ಕಾರಗಳಲ್ಲಿ ಭಾಗವಹಿಸುವಂತೆ ಕರೆ ನೀಡುವುದು ಶೈಕ್ಷಣಿಕ ವಾತಾವರಣದ ಮೇಲೆ ಪರಿಣಾಮ ಬೀರುತ್ತದೆ. ವಿಶ್ವವಿದ್ಯಾಲಯದ ಸಂಪನ್ಮೂಲಗಳು ವೈಜ್ಞಾನಿಕ ಬೆಳವಣಿಗೆಗೆ ಬಳಕೆಯಾಗಬೇಕೇ ಹೊರತು ಧಾರ್ಮಿಕ ಚಟುವಟಿಕೆಗಳಿಗಲ್ಲ” ಎಂಬ ಆಕ್ಷೇಪಗಳು ಇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೊಂದವರು ಯಾರು?’: ಧರ್ಮಸ್ಥಳ ಪ್ರಕರಣಗಳ ನಿಷ್ಪಕ್ಷಪಾತ ತನಿಖೆಗೆ ಆಗ್ರಹ, ಅ.2 ರಂದು ವಿಚಾರ ಸಂಕಿರಣ

ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಹಲವಾರು ದಶಕಗಳಿಂದ ನಡೆದಿದೆ ಎನ್ನಲಾದ ಮಹಿಳೆಯರ ಮೇಲಿನ ವ್ಯವಸ್ಥಿತ ಲೈಂಗಿಕ ದೌರ್ಜನ್ಯ, ನಿಗೂಢ ಕೊಲೆಗಳು ಹಾಗೂ ಸಂತ್ರಸ್ತ ಕುಟುಂಬಗಳ ಸುದೀರ್ಘ ನ್ಯಾಯದ ಹೋರಾಟಕ್ಕೆ ಬೆಂಬಲವಾಗಿ...

2016ರಲ್ಲೇ ತಮ್ಮನ್ನು ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ IAS ಜಿಜಿ ಥಾಮ್ಸನ್

ದೇಶದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗಲೇ ಬಿಜೆಪಿ ಪರವಾಗಿ ಏಜೆಂಟ್ ರೀತಿ ಕೆಲಸ ಮಾಡುತ್ತಿದ್ದರು ಎಂಬ ಕಟು ಸತ್ಯವೊಂದು ಈಗ ಬಹಿರಂಗವಾಗಿದೆ. ಅವರು ನನಗೆ...

ಚಿಕ್ಕಮಗಳೂರು : ಚುನಾವಣಾ ಆಯೋಗದ ವಿರುದ್ಧ ಜನಾಂದೋಲನಕ್ಕೆ ಪ್ರಕಾಶ್ ರಾಜ್ ಕರೆ

ನ್ಯಾಯಾಂಗದ ಮೂಲಕ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರನ್ನು ಕೆಳಗಿಳಿಸುವುದು ಸಾಧ್ಯವಾಗದಿರಬಹುದು, ಆದರೆ ಜನರ ಹಕ್ಕುಗಳಿಗಾಗಿ ಬೀದಿ ಚಳವಳಿ ನಡೆಯಬೇಕು ಎಂದು ಪ್ರಕಾಶ್ ರಾಜ್ ಕರೆ ನೀಡಿದರು. ಎಸ್‌ಐಆರ್ ಪರಿಶೋಧನೆ ಮತ್ತು...

ಬೆಳಗಾವಿ| ಕೂಲಿ ನೇಕಾರರಿಗೆ ಕಾರ್ಮಿಕ ಇಲಾಖೆ ನೀಡುವ ‘ಸ್ಮಾರ್ಟ್ ಕಾರ್ಡ್’ನಲ್ಲಿ ಲೋಪ, ಅನ್ಯಾಯ ಸರಿಪಡಿಸಲು ಆಗ್ರಹ

ಹಗಲಿರುಳೆನ್ನದೆ ಮಗ್ಗಗಳ ಮುಂದೆ ಕುಳಿತು ಬಟ್ಟೆ ನೇಯುವ ಬೆಳಗಾವಿ ಭಾಗದ ಲಕ್ಷಾಂತರ ಕೂಲಿ ನೇಕಾರರ ಬದುಕು ಇಂದು ಭರವಸೆಯಿಲ್ಲದ ತೂಗುಯ್ಯಾಲೆಯಲ್ಲಿದೆ. ಒಂದೆಡೆ ಕಳೆದ ಒಂದು ದಶಕದಿಂದ (10 ವರ್ಷ) ಮಾಲೀಕರಿಂದ ಶ್ರಮಕ್ಕೆ ತಕ್ಕಂತೆ...

ಅಧಿಕಾರಿಯ ಡೆತ್‌ ನೋಟ್‌ನಲ್ಲಿ ಗ್ಯಾನೇಶ್ ಕುಮಾರ್ ಹೆಸರು!: ಮತ್ತೆ ಮುನ್ನೆಲೆಗೆ ಬಂದ ಹಳೆ ಕೇಸ್

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ವಿರುದ್ಧ ದೇಶದಾದ್ಯಂತ ಆಕ್ರೋಶದ ಅಲೆ ಎದ್ದಿರುವ ಈ ಸಂದರ್ಭದಲ್ಲಿ, ಸುಮಾರು ಎರಡು ದಶಕಗಳ ಹಿಂದೆ, ಮಲೇಷ್ಯಾದ ಯೋಜನಾ ಅಧಿಕಾರಿಯೊಬ್ಬರ ಆತ್ಮಹತ್ಯೆ ಪತ್ರದಲ್ಲಿ ಗ್ಯಾನೇಶ್ ಕುಮಾರ್...

ಹಾಸನ| SIR ಅಕ್ರಮದ ವಿರುದ್ಧ ಸುಪ್ರೀಂ ಕೋರ್ಟ್ ತನಿಖೆಗೆ ನಟ ಪ್ರಕಾಶ್ ರಾಜ್ ಪಟ್ಟು

ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯ ನೆಪದಲ್ಲಿ ಲಕ್ಷಾಂತರ ನಾಗರಿಕರ ಮೂಲಭೂತ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ. ಇದು ಕೇವಲ ಮತದಾರರ ವೈಯಕ್ತಿಕ ಸಮಸ್ಯೆಯಲ್ಲ, ಬದಲಿಗೆ ದೇಶದ ಸಂವಿಧಾನ...

SIR ರದ್ದುಗೊಳಿಸಿ, ಗ್ಯಾನೇಶ್ ಕುಮಾರ್‌ನನ್ನು ವಜಾಗೊಳಿಸುವಂತೆ ಆಗ್ರಹಿಸಿ ಎಡಪಕ್ಷಗಳಿಂದ ಪ್ರತಿಭಟನೆ

ದೇಶಾದ್ಯಂತ ನಡೆಯುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯು ಸಂಪೂರ್ಣ ಅಪ್ರಜಾಸತ್ತಾತ್ಮಕವಾಗಿದ್ದು, ಲಕ್ಷಾಂತರ ಅರ್ಹ ಮತದಾರರನ್ನು ಪಟ್ಟಿಯಿಂದ ಹೊರಗಿಡುವ ಮೂಲಕ ಅವರ ಸಂವಿಧಾನಾತ್ಮಕ ಹಕ್ಕುಗಳನ್ನು ಕಸಿಯಲಾಗುತ್ತಿದೆ ಎಂದು ಎಡಪಕ್ಷಗಳು ಆರೋಪಿಸಿವೆ. ಈ ಪ್ರಕ್ರಿಯೆಯನ್ನು...

ಗುವಾಹಟಿಯಲ್ಲಿ ಸಿಜೆಪಿ ಸಭೆಗೆ ಪೊಲೀಸರಿಂದ ಅಡ್ಡಿ; ಅಶುತೋಷ್ ರಾಂಕಾ ಮತ್ತು ತಂಡ ವಶಕ್ಕೆ

ಅಸ್ಸಾಂ ಪೊಲೀಸರು ಭಾನುವಾರ (ಸೆ.27) ಬೆಳಿಗ್ಗೆ ಗುವಾಹಟಿಯಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ'ಯ (ಸಿಜೆಪಿ) ಸಹ-ಸಂಯೋಜಕ ಅಶುತೋಷ್ ರಾಂಕಾ ಮತ್ತು ಸಂಘಟನೆಯ ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಅಸ್ಸಾಂ ಸಚಿವಾಲಯದ ಸಮೀಪದಲ್ಲಿ...

ಬಿಜೆಪಿಯಿಂದ ಸ್ಪರ್ಧಿಸುವಂತೆ ಗ್ಯಾನೇಶ್ ಕುಮಾರ್ ಈ ಹಿಂದೆ ನನಗೆ ಆಫರ್ ನೀಡಿದ್ದರು! — ಕೇರಳದ ಮಾಜಿ ಚೀಫ್ ಸೆಕ್ರೆಟರಿ ಜಿಜಿ ತೋಮ್ಸನ್ ಸ್ಪೋಟಕ ಹೇಳಿಕೆ!

ಚುನಾವಣಾ ಆಯೋಗದಲ್ಲಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಹೆಸರಿನಲ್ಲಿ ನಡೆಯುತ್ತಿರುವ ಬೃಹತ್ ಮತ ಕಡಿತ ಹಾಗೂ ಏಕಪಕ್ಷೀಯ ನಿರ್ಧಾರಗಳ ಆರೋಪದ ಹಿನ್ನೆಲೆಯಲ್ಲಿ ದೇಶಾದ್ಯಂತ ಜನಾಕ್ರೋಶ ಭುಗಿಲೆದ್ದಿರುವ ಬೆನ್ನಲ್ಲೇ, ಹಾಲಿ ಮುಖ್ಯ ಚುನಾವಣಾ ಆಯುಕ್ತ...

ಕರ್ನಾಟಕ ಎಸ್ಐಆರ್: ಅಳಿಸುವಿಕೆಗೆ ಸಂಬಂಧಿಸಿದ ದತ್ತಾಂಶದಿಂದ ಸುಮಾರು 6000 ಮತದಾರರು ನಾಪತ್ತೆ: ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ ಅಂಕಿಅಂಶಗಳ ವ್ಯತ್ಯಾಸ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ನಡುವೆ, ಚುನಾವಣಾ ಆಯೋಗದ ಅಂಕಿಅಂಶಗಳಲ್ಲೇ ಸುಮಾರು 6 ಸಾವಿರ ಮತದಾರರ ಅಳಿಸುವಿಕೆಗೆ ಸಂಬಂಧಿಸಿದ ವ್ಯತ್ಯಾಸ ಬೆಳಕಿಗೆ ಬಂದಿದೆ. ಮತದಾರರ...