Homeಮುಖಪುಟಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಅವರಿಗೆ ಮತ್ತೆ ಬೆದರಿಕೆ ಕರೆ

ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಅವರಿಗೆ ಮತ್ತೆ ಬೆದರಿಕೆ ಕರೆ

ಅನಾಮಧೇಯ ವ್ಯಕ್ತಿಯೊಬ್ಬ ತನ್ನ ನಾಗ್ಪುರ ಕಚೇರಿಗೆ ಫೋನ್ ಮಾಡಿ ತನಗೂ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ಗೂ ಬೆದರಿಕೆ ಹಾಕಿದ್ದಾನೆ ಎಂದು ಸಚಿವರು ಈ ಹಿಂದೆ ತಿಳಿಸಿದ್ದರು.

- Advertisement -
- Advertisement -

ನಟಿ ಕಂಗನಾ ರಣಾವತ್ ಅವರ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಅವರ ನಿಲುವಿನ ಬಗ್ಗೆ ಅವರಿಗೆ ಬೆದರಿಕೆ ಕರೆಗಳು ಬಂದಿವೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಮಂಗಳವಾರ ಮತ್ತು ಬುಧವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ ಹಿಮಾಚಲ ಪ್ರದೇಶದ ವಿವಿಧ ವ್ಯಕ್ತಿಗಳಿಂದ ದೇಶ್ಮುಖ್ ಈ ಕರೆಗಳನ್ನು ಸ್ವೀಕರಿಸಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಇದನ್ನೂ ಓದಿ: ಮುಂಬೈಯನ್ನು ಪಿಒಕೆಗೆ ಹೋಲಿಕೆ ವಿಚಾರ: ಟ್ವಿಟ್ಟರ್‌ನಲ್ಲಿ ಕಂಗನಾ ವಿರುದ್ಧ ಆಕ್ರೋಶ

ಈ ಹಿಂದೆಯು ಅವರಿಗೆ ಈ ರೀತಿಯ ಬೆದರಿಕೆ ಕರೆಗಳು ಬಂದಿದ್ದು, ಅನಾಮಧೇಯ ವ್ಯಕ್ತಿಯೊಬ್ಬ ತನ್ನ ನಾಗ್ಪುರ ಕಚೇರಿಗೆ ಫೋನ್ ಮಾಡಿ ತನಗೂ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ಗೂ ಬೆದರಿಕೆ ಹಾಕಿದ್ದಾನೆ ಎಂದು ಸಚಿವರು ಸೋಮವಾರ ತಿಳಿಸಿದ್ದರು.

ಕಂಗನಾ‌ಗೆ ‘ವೈ-ಪ್ಲಸ್’ ಭದ್ರತೆ ನೀಡುವ ಕೇಂದ್ರದ ನಿರ್ಧಾರದ ಬಗ್ಗೆ ದೇಶ್ಮುಖ್ ಸೋಮವಾರ ಆಶ್ಚರ್ಯ ವ್ಯಕ್ತಪಡಿಸಿದ್ದು, ಅವರು ತಮ್ಮ ಹೇಳಿಕೆಗಳಿಂದ ಮುಂಬೈ ಮತ್ತು ಮಹಾರಾಷ್ಟ್ರವನ್ನು “ಅವಮಾನಿಸಿದ್ದಾರೆ” ಎಂದು ಹೇಳಿದ್ದರು.

ಕಂಗನಾ ರಾಣಾವತ್‌ ಮುಂಬೈಯನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸಿ ವಿವಾದ ಎಬ್ಬಿಸಿದ್ದರು.

ಅಷ್ಟೇ ಅಲ್ಲದೆ ಕಳೆದ ಶನಿವಾರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಬಾಂದ್ರಾದಲ್ಲಿರುವ ನಿವಾಸ ‘ಮಾತೋಶ್ರೀ’ ಗೆ ಕರೆಗಳು ಬಂದಿದ್ದು, ಕರೆ ಮಾಡಿದವರು ನಿವಾಸವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಕರೆ ಮಾಡಿದವರು ಮುಂಬೈನ ಭೂಗತ ಡಾನ್ ದಾವೂದ್ ಇಬ್ರಾಹಿಂ ಸಹಾಯಕ ಎಂದು ಪರಿಚಯಿಸಿಕೊಂಡಿದ್ದರು ಎಂದು ಹೇಳಲಾಗಿದೆ.

ಇದನ್ನೂ ಓದಿ: ಕಂಗನಾಗೆ ನಮ್ಮ ರಾಜ್ಯದಲ್ಲಿ ವಾಸಿಸುವ ಹಕ್ಕಿಲ್ಲ: ಮಹಾರಾಷ್ಟ್ರ ಗೃಹ ಸಚಿವ

ಈ ನಡುವೆ, ಸಿನೆಮಾ ಮಾಫಿಯಾಕ್ಕಿಂತ ತನಗೆ ಮುಂಬೈ ಪೊಲೀಸರ ಬಗ್ಗೆ ಭಯವಿದೆ. ತಾನು ಹಿಮಾಚಲ ಪ್ರದೇಶ ಅಥವಾ ಕೇಂದ್ರದಿಂದ ಭದ್ರತೆ ಬಯಸುತ್ತೇನೆ ಎಂದು ಕಂಗನಾ ಹೇಳಿದ್ದು, ಇದಕ್ಕೆ ಬಿಜೆಪಿ ನಾಯಕ ಹಾಗೂ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಆಕ್ಷೇಪ ವ್ಯಕ್ತಪಡಿಸಿ ಕಂಗನಾ ಹೇಳಿಕೆ ಪೊಲೀಸ್ ಇಲಾಖೆಯ ‘ಅವಮಾನ’ಕ್ಕೆ ಸಮನಾಗಿದೆ ಎಂದಿದ್ದಾರೆ.

ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಐದು ವರ್ಷ ಅಧಿಕಾರದಲ್ಲಿದ್ದುದರಿಂದ ಮುಂಬೈ ಪೊಲೀಸರ ಸಾಮರ್ಥ್ಯದ ಕುರಿತು ತಮಗೆ ಅರಿವಿದೆ. ಆದರೆ ಪೊಲೀಸರು ರಾಜಕೀಯ ಒತ್ತಡಕ್ಕೆ ಒಳಗಾಗಬಹುದು, ಅವರು ಸುಶಾಂತ್ ಸಿಂಗ್ ರಾಜಪುತ್ ಪ್ರಕರಣವನ್ನು ತಪ್ಪಾಗಿ ನಿಭಾಯಿಸಿದ್ದರಿಂದ ಅದರ ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ ಎಂದರು.


ಓದಿ: ಕಂಗನಾ, ಪದ್ಮಶ್ರೀ ಮತ್ತು ತುಕ್ಡೇಗ್ಯಾಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...