Homeಕರೋನಾ ತಲ್ಲಣಗೃಹ ಸಚಿವ ಬಸವರಾಜ್ ಬೊಮ್ಮಾಯಿಗೆ ಕೊರೊನಾ ಸೋಂಕು

ಗೃಹ ಸಚಿವ ಬಸವರಾಜ್ ಬೊಮ್ಮಾಯಿಗೆ ಕೊರೊನಾ ಸೋಂಕು

ನಾಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಜೊತೆಗೆ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಬೊಮ್ಮಾಯಿ ದೆಹಲಿಗೆ ತೆರಳಬೇಕಿತ್ತು

- Advertisement -
- Advertisement -

ಗೃಹ ಸಚಿವ ಬಸವರಾಜ್ ಬೊಮ್ಮಾಯಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ರೋಗಲಕ್ಷಣಗಳು ಕಾಣಿಸಿಕೊಂಡಿಲ್ಲ. ಮನೆಯಲ್ಲೇ ಪ್ರತ್ಯೆಕವಾಗಿದ್ದೇನೆ ಎಂದು ಸಚಿವರು ತಿಳಿಸಿದ್ದಾರೆ.

ನಮ್ಮ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸದ ಹುಡುಗನಿಗೆ ನಿನ್ನೆ ಕೋವಿಡ್-19 ಪರೀಕ್ಷೆಯಲ್ಲಿ ಸೊಂಕು ದೃಢಪಟ್ಟಿರುತ್ತದೆ. ಈ ಹಿನ್ನೆಲೆಯಲ್ಲಿ ನಾನು ಸಹ ಪರೀಕ್ಷೆಗೆ ಒಳಪಟ್ಟಿದ್ದು ನನಗೂ ಸಹ ಸೊಂಕು ದೃಢಪಟ್ಟಿದ್ದು, ಯಾವುದೇ ರೀತಿಯ ರೋಗ ಲಕ್ಷಣಗಳು ಇರುವುದಿಲ್ಲ ಹಾಗೂ ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ ಎಂದು ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಜೊತೆಗೆ ಇತ್ತಿಚೆಗೆ ಅವರ ನೇರ ಸಂಪರ್ಕಕ್ಕೆ ಬಂದಿರುವವರು ಪರೀಕ್ಷೆಗೆ ಒಳಪಡುವಂತೆ ಮನವಿ ಮಾಡಿದ್ದಾರೆ. ನಾಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಜೊತೆಗೆ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ದೆಹಲಿಗೆ ತೆರಳಬೇಕಿತ್ತು.

ಇದನ್ನೂ ಓದಿ: ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಯ್ತು #NoMoreBJP, #unemploymentday

ಗೃಹ ಸಚಿವರಿಗೆ ಕೊರೊನಾ ದೃಡವಾಗಿರುವ ಹಿನ್ನೆಲೆ ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿ ಬಸವರಾಜ್ ಬೊಮ್ಮಾಯಿ ಅವರು ಶೀಘ್ರದಲ್ಲಿ ಕೊರೋನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ, ಮತ್ತೆ ಎಂದಿನಂತೆ ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ನಿರತರಾಗಲಿ ಎಂದು ಹಾರೈಸಿದ್ದಾರೆ.


ಇದನ್ನೂ ಓದಿ: ಬಿಹಾರ ಚುನಾವಣೆ: ಬಿಜೆಪಿ – ಜೆಡಿಯು ನಡುವೆ ಸ್ಥಾನ ಹಂಚಿಕೆ ಮಾತುಕತೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಸಮಯಾವಕಾಶ ಕೋರಿ ಪ್ರಧಾನಿಗೆ ಖರ್ಗೆ ಪತ್ರ

0
ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆ 'ನ್ಯಾಯಪತ್ರ'ದ ಕುರಿತು ಪ್ರಧಾನಿ ಮೋದಿ ಸರಣಿ ಹೇಳಿಕೆಗಳನ್ನು ಕೊಡುತ್ತಿದ್ದು, ಈ ಹಿನ್ನೆಲೆ ಪ್ರಣಾಳಿಕೆಯ ಕುರಿತು ವಿವರಿಸಲು ಸಮಯ ಕೋರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಖರ್ಗೆ...