Homeಕರ್ನಾಟಕವರ್ತೂರು ಪೊಲೀಸರಿಂದ ಮಹಿಳೆ ಮೇಲೆ ಹಲ್ಲೆ ಆರೋಪ : ವರದಿ ಕೇಳಿದ ಗೃಹ ಸಚಿವ ಪರಮೇಶ್ವರ್

ವರ್ತೂರು ಪೊಲೀಸರಿಂದ ಮಹಿಳೆ ಮೇಲೆ ಹಲ್ಲೆ ಆರೋಪ : ವರದಿ ಕೇಳಿದ ಗೃಹ ಸಚಿವ ಪರಮೇಶ್ವರ್

- Advertisement -
- Advertisement -

ಪಶ್ಚಿಮ ಬಂಗಾಳ ಮೂಲದ ಮನೆ ಕೆಲಸದ ಮಹಿಳೆ ಮೇಲೆ ಬೆಂಗಳೂರಿನ ವರ್ತೂರು ಠಾಣೆ ಪೊಲೀಸರು ತೀವ್ರವಾಗಿ ಹಲ್ಲೆ ನಡೆಸಿರುವ ಕುರಿತು ವರದಿ ಕೇಳಿರುವುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.

ಮಂಗಳವಾರ (ನ.4) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಕರಣ ನನ್ನ ಗಮನಕ್ಕೆ ಬಂದಿದೆ. ಮಹಿಳಾ ಪೊಲೀಸರು ಹೊಡೆದಿದ್ದಾರೆ ಎಂಬ ವಿಷಯ ಗೊತ್ತಾಗಿದೆ. ಈ ಬಗ್ಗೆ ವಿವರವಾದ ವರದಿ ಕೊಡುವಂತೆ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದೇನೆ. ವರದಿ ಬಂದ ಬಳಿಕ ಮುಂದಿನ ಕ್ರಮದ ಬಗ್ಗೆ ತೀರ್ಮಾನಿಸುತ್ತೇವೆ” ಎಂದಿದ್ದಾರೆ.

ಏನಿದು ಪ್ರಕರಣ? ಬೆಂಗಳೂರಿನ ಬಳಗೆರೆಯ ಕಾರ್ಮಿಕರ ಶೆಡ್‌ನಲ್ಲಿ ವಾಸವಿದ್ದ ಪಶ್ಚಿಮ ಬಂಗಾಳ ಮೂಲದ ಮಹಿಳೆ ಸುಂದರಿ ಬೀಬಿ ಮತ್ತು ಆಕೆಯ ಪತಿ ಮೇಲೆ ಅಕ್ಟೋಬರ್ 30ರಂದು ವರ್ತೂರು ಪೊಲೀಸ್ ಠಾಣೆಯ ನಾಲ್ವರು ಪುರುಷ ಹಾಗೂ ಮೂವರು ಮಹಿಳಾ ಸಿಬ್ಬಂದಿ ಲಾಠಿಯಿಂದ ಮನಸೋ ಇಚ್ಚೆ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಅಕ್ಟೋಬರ್ 30ರಂದು ಬೆಳಿಗ್ಗೆ 9ಗಂಟೆಯ ಹೊತ್ತಿಗೆ ಮಹಿಳೆ ಮನೆ ಕೆಲಸ ಮಾಡುತ್ತಿದ್ದ ಶೋಭಾ ಫ್ಲ್ಯಾಟ್‌ನಿಂದ ವರ್ತೂರು ಠಾಣೆಯ ಪೊಲೀಸರು ಕರೆದೊಯ್ದಿದ್ದರು. ಫ್ಲ್ಯಾಟ್‌ನಲ್ಲಿ ವಾಸವಿರುವ ಟೆಕ್ಕಿ ದಂಪತಿ ಅವರ 5 ಲಕ್ಷ ರೂ ಬೆಲೆ ಬಾಳುವ ವಜ್ರದ ಉಂಗುರವನ್ನು ಸುಂದರಿ ಬೀಬಿ ಕದ್ದಿದ್ದಾರೆ ಎಂದು ಆರೋಪಿಸಿದ್ದರು. ಠಾಣೆಗೆ ಕರೆದೊಯ್ದ ಪೊಲೀಸರು ಅಮಾನವೀಯವಾಗಿ ಥಳಿಸಿದ್ದಾರೆ. ಈ ವಿಷಯ ತಿಳಿದು ಆಕೆಯ ಪತಿ ಸಹಾಯಕ್ಕೆ ಧಾವಿಸಿದ್ದರು. ಪೊಲೀಸರು ಅವರನ್ನೂ ಕೂಡಿ ಹಾಕಿ ಥಳಿಸಿದ್ದಾರೆ ಎಂದು ವರದಿಯಾಗಿದೆ.

ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪೊಲೀಸರು ನಿರಂತರ ಹಲ್ಲೆ ಮಾಡಿದ್ದಾರೆ. ಸಂಜೆ ಕಲೀಮುಲ್ಲಾ ಎಂಬ ಸಾಮಾಜಿಕ ಕಾರ್ಯಕರ್ತ ಕರೆ ಮಾಡಿ ವಿಚಾರಿಸಿದ ಬಳಿಕ ಪೊಲೀಸರು ಹಲ್ಲೆ ನಿಲ್ಲಿಸಿ ಲಾಠಿ ಬಚ್ಚಿಟ್ಟಿದ್ದರು. ಬಳಿಕ ರಾತ್ರಿ 7 ಗಂಟೆಯವರೆಗೆ ಠಾಣೆಯಲ್ಲೇ ಕೂರಿಸಿಕೊಂಡು, ಹಲ್ಲೆಯ ವಿಚಾರವನ್ನು ಎಲ್ಲೂ ಹೇಳದಂತೆ ಬೆದರಿಸಿ ಕಳುಹಿಸಿದ್ದಾರೆ ಎಂದು ವರದಿ ತಿಳಿಸಿದೆ.

ಸುಂದರಿ ಬೀಬಿ ದಂಪತಿಗೆ ನಾಲ್ವರು ಮಕ್ಕಳಿದ್ದಾರೆ. ಅವರನ್ನು ಪಶ್ಚಿಮ ಬಂಗಾಳದಲ್ಲೇ ಬಿಟ್ಟು ಕೆಲಸ ಮಾಡಲು ಬೆಂಗಳೂರಿಗೆ ಬಂದಿದ್ದರು. ಗಂಡ ಬಿಬಿಎಂಪಿ ಕಸದ ಲಾರಿಯಲ್ಲಿ ಕೆಲಸ ಮಾಡುತ್ತಿದ್ದರೆ, ಹೆಂಡತಿ ಮನೆ ಕೆಲಸ ಮಾಡುತ್ತಿದ್ದರು. ಕಳೆದ 3 ತಿಂಗಳಿನಿಂದ ಸುಂದರಿ ಬೀಬಿ ವರ್ತೂರಿನ ಶೋಭಾ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ಗೆ ಕೆಲಸಕ್ಕೆ ಹೋಗುತ್ತಿದ್ದರು.

ಅಕ್ಟೋಬರ್ 30ರಂದು ಬೆಳಿಗ್ಗೆ ಸುಂದರಿ ಬಾಲ್ಕನಿಯಲ್ಲಿ ಕಸ ಗುಡಿಸುತ್ತಿದ್ದಾಗ, ಅಲ್ಲಿ ಬಿದ್ದಿದ್ದ 100 ರೂ. ನೋಟನ್ನು ತೆಗೆದುಕೊಂಡಿದ್ದರು. ಈ ವೇಳೆ ಅಲ್ಲಿಗೆ ಬಂದ ಫ್ಲ್ಯಾಟ್ ಮಾಲೀಕರು, ಸುಂದರಿಯ ಕೈ ಹಿಡಿದುಕೊಂಡು ಕಳ್ಳಿ ಎಂದು ನಿಂದಿಸಿದ್ದರು. ಅಲ್ಲದೆ, ಈ ಹಿಂದೆಯೂ ಫ್ಲ್ಯಾಟ್‌ನಲ್ಲಿ ವಜ್ರದ ಉಂಗುರ ಕದ್ದಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಕರೆದೊಯ್ದು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಸಂತ್ರಸ್ತೆ ನೀಡಿದ ದೂರು ಆಧರಿಸಿ ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಕೆ.ಪರಶುರಾಮ್ ನೇತೃತ್ವದಲ್ಲಿ ಪೊಲೀಸರ ಆಂತರಿಕ ತನಿಖೆ ಆರಂಭವಾಗಿದೆ. “ಮನೆಗೆಲಸದ ಮಹಿಳೆಯನ್ನು ಠಾಣೆಗೆ ಕರೆಸಿ ಹಲ್ಲೆ ನಡೆಸಿದ ಆರೋಪದ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಡಿಸಿಪಿಗೆ ಸೂಚಿಸಲಾಗಿದೆ. ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ಪಶ್ಚಿಮ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರಮೇಶ್‌ ಬಾನೋತ್ ತಿಳಿಸಿದ್ದಾರೆ.

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ವೈಟ್‌ಫೀಲ್ಡ್ ವಿಭಾಗದ ಡಿಸಿಪಿಗೆ ಪತ್ರ ಬರೆದಿದ್ದು, ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ ಎಂದು ವರದಿಯಾಗಿದೆ.

ಸುಂದರಿ ಬೀಬಿಯ ಪತಿಯು ವರ್ತೂರು ಪೊಲೀಸರ ದೌರ್ಜನ್ಯದ ಬಗ್ಗೆ ಪಶ್ಚಿಮ ಬಂಗಾಳ ವಲಸೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಸಮೀರುಲ್ಲಾ ಅವರಿಗೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದರು. ಈ ಮೂಲಕ ವಿಷಯ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಕಚೇರಿಗೂ ತಲುಪಿಸಿದೆ. ಅಲ್ಲಿನ ಅಧಿಕಾರಿಗಳು ಈ ಘಟನೆ ಸಂಬಂಧ ಬೆಂಗಳೂರು ಪೊಲೀಸರಿಂದ ಸ್ಪಷ್ಟೀಕರಣ ಕೋರಿದ್ದಾರೆ ವರದಿಗಳು ಹೇಳಿವೆ.

ಪೊಲೀಸರು ಮಹಿಳೆಯ ಖಾಸಗಿ ಅಂಗಕ್ಕೆ ಥಳಿಸಿ ಕ್ರೌರ್ಯ ಮೆರೆದಿದ್ದಾರೆ. ಇದರಿಂದ ಆಕೆ ಮೂತ್ರ ವಿಸರ್ಜನೆ ಮಾಡಲೂ ಆಗದೆ ನರಕಯಾತನೆ ಅನುಭವಿಸುತ್ತಿದ್ದಾರೆ. ಬೌರಿಂಗ್ ಆಸ್ಪತ್ರೆಯ ಎಂಎಲ್​​ಸಿ ರಿಪೋರ್ಟ್​ನಲ್ಲಿ ಗಾಯದ ಭೀಕರತೆ ಬಗ್ಗೆ ಉಲ್ಲೇಖಿಸಲಾಗಿದೆ. ಸದ್ಯ ವೈದ್ಯರ ಚಿಕಿತ್ಸೆ ನಂತರ ಮಹಿಳೆ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.

‘ನಲಿ ಕಲಿ’ ಕಾರ್ಯಕ್ರಮ ಸ್ಥಗಿತಗೊಳಿಸಲು ಮುಂದಾದ ಸರ್ಕಾರ : ಶಿಕ್ಷಣ ತಜ್ಞರು ಏನಂದ್ರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...