Homeಮುಖಪುಟಉದ್ಯಮಿ ಬಾಬಿ ಚೆಮ್ಮನ್ನೂರ್ ವಿರುದ್ಧ ದೂರು ದಾಖಲಿಸಿದ ಮಲಯಾಳಂ ನಟಿ ಹನಿ ರೋಸ್

ಉದ್ಯಮಿ ಬಾಬಿ ಚೆಮ್ಮನ್ನೂರ್ ವಿರುದ್ಧ ದೂರು ದಾಖಲಿಸಿದ ಮಲಯಾಳಂ ನಟಿ ಹನಿ ರೋಸ್

- Advertisement -
- Advertisement -

ಮಲಯಾಳಂ ಚಿತ್ರರಂಗದ ಜನಪ್ರಿಯ ನಟಿ ಹನಿ ರೋಸ್ ಅವರು ಉದ್ಯಮಿ, ಖ್ಯಾತ ಆಭರಣ ವ್ಯಾಪಾರಿ ಬಾಬಿ ಚೆಮ್ಮನೂರ್ ವಿರುದ್ಧ ನಿರಂತರ ಅಶ್ಲೀಲ ನಿಂದನೆ ಆರೋಪದ ಮೇಲೆ ಜನವರಿ 7ರಂದು ಪೊಲೀಸ್ ದೂರು ದಾಖಲಿಸಿದ್ದಾರೆ.

ಕೇರಳದ ಎರ್ನಾಕುಲಂ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಬಾಬಿ ಅವರೊಂದಿಗೆ, ಅವರ ಕೆಲ ಬೆಂಬಲಿಗರ ವಿರುದ್ದವೂ ದೂರು ದಾಖಲಿಸುವುದಾಗಿ ಜನವರಿ 7ರಂದು ಇನ್‌ಸ್ಟಾಗ್ರಾಮ್‌ನಲ್ಲಿ ಹಾಕಿರುವ ಪೋಸ್ಟ್‌ನಲ್ಲಿ ಹನಿ ರೋಸ್ ಹೇಳಿದ್ದಾರೆ.

ಜನವರಿ 7ರಂದು ಹನಿ ರೋಸ್ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಹಾಕಿರುವ ಪೋಸ್ಟ್

“ಬಾಬಿ ಚೆಮ್ಮನೂರ್, ನಿಮ್ಮ ನಿರಂತರ ಅಶ್ಲೀಲ ನಿಂದನೆಯ ವಿರುದ್ದ ಎರ್ನಾಕುಲಂ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ನಿಮ್ಮ ಮಾನಸಿಕ ಸ್ಥಿತಿಯನ್ನು ವ್ಯಕ್ತಪಡಿಸುವ ನಿಮ್ಮ ಸಹವರ್ತಿಗಳ ವಿರುದ್ಧವೂ ಶೀಘ್ರದಲ್ಲೇ ದೂರು ನೀಡಲಿದ್ದೇನೆ. ನಿಮ್ಮ ಹಣದ ಬಲವನ್ನು ನೀವು ನಂಬಿರಬಹುದು. ಆದರೆ, ನಾನು ಭಾರತದ ನ್ಯಾಯಾಂಗ ವ್ಯವಸ್ಥೆಯ ಬಲವನ್ನು ನಂಬುತ್ತೇನೆ” ಎಂದು ತನ್ನ ಪೋಸ್ಟ್‌ನಲ್ಲಿ ಹನಿ ರೋಸ್ ಬರೆದುಕೊಂಡಿದ್ದಾರೆ.

ಈ ಹಿಂದೆ ಆಭರಣ ಮಳಿಗೆಯೊಂದರ ಉದ್ಘಾಟನೆ ವೇಳೆ ಹನಿ ರೋಸ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಾಬಿ ಚೆಮ್ಮನೂರ್ ಅವರು ಸಾರ್ವಜನಿಕರ ಟೀಕೆಗೆ ಗುರಿಯಾಗಿದ್ದರು.

ಜನವರಿ 5ರಂದು ಹನಿ ರೋಸ್ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಹಾಕಿದ್ದ ಪೋಸ್ಟ್

“ಈ ಪ್ರಕರಣ ಸಂಬಂಧ ಜನವರಿ 5ರಂದು ಇನ್‌ಸ್ಟಾಗ್ರಾಮ್‌ನಲ್ಲಿ ಮೊದಲ ಪೋಸ್ಟ್ ಹಾಕಿದ್ದ ಹನಿ ರೋಸ್ ಅವರು “ಒಬ್ಬ ವ್ಯಕ್ತಿಯು ನಿರಂತರವಾಗಿ ನನ್ನನ್ನು ಅವಮಾನಿಸಲು ಪ್ರಯತ್ನಿಸಿದಾಗ ನಾನು ಮೌನವಾಗಿದ್ದರೆ, ನಾನು ಅದನ್ನು ಆನಂದಿಸುತ್ತಿದ್ದೇನೆ ಅಥವಾ ಆತ ಮಾಡಿದ್ದೆಲ್ಲವನ್ನು ಒಪ್ಪಿಕೊಂಡಿದ್ದೇನೆಯೇ? ಎಂದು ನನ್ನ ಆಪ್ತರು ಕೇಳುತ್ತಾರೆ. ಈ ವ್ಯಕ್ತಿಯು ಕೆಲವು ಕಾರ್ಯಕ್ರಮಗಳಿಗೆ ನನ್ನನ್ನು ಆಹ್ವಾನಿಸಿದ್ದ. ನಾನು ಹಾಜರಾಗಲು ನಿರಾಕರಿಸಿದ್ದೆ.ಈ ಕಾರಣಕ್ಕೆ ನಾನು ಭಾಗವಹಿಸುವ ಕಾರ್ಯಕ್ರಮಗಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸುತ್ತಿದ್ದಾನೆ. ನನನ್ನು ಗುರಿಯಾಗಿಸಿ ಹೆಣ್ತನಕ್ಕೆ ಅವಮಾನಿಸುವ ರೀತಿಯಲ್ಲಿ ಸಾರ್ವಜನಿಕವಾಗಿ ನನ್ನ ಬಗ್ಗೆ ಅವಹೇಳನಕಾರಿ ಟೀಕೆಗಳನ್ನು ಮಾಡುತ್ತಿದ್ದಾನೆ” ಎಂದು ಬಾಬಿ ಚೆಮ್ಮನ್ನೂರ್ ಅವರ ಹೆಸರು ಉಲ್ಲೇಖಿಸಿದೆ ಹನಿರೋಸ್ ಬರೆದುಕೊಂಡಿದ್ದರು.

ಈ ಪೋಸ್ಟ್‌ನ ಕೆಳಗೆ ಅನೇಕ ಜನರು ಅವಹೇಳನಕಾರಿ ಕಾಮೆಂಟ್‌ಗಳನ್ನು ಹಾಕಿದ್ದರು. ಅದು ಹನಿ ರೋಸ್ ಅವರನ್ನು ದೂರು ದಾಖಲಿಸಲು ಪ್ರೇರೇಪಿಸಿತು ಎಂದು ವರದಿಯಾಗಿದೆ.

ಹನಿ ರೋಸ್ ದೂರು ಆಧರಿಸಿ ಎರ್ನಾಕುಲಂ ಸೆಂಟ್ರಲ್ ಪೊಲೀಸರು 27 ವ್ಯಕ್ತಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದಾರೆ. ಈ ಪೈಕಿ ಕುಂಬಳಂನ ಶಾಜಿ ಎಂಬ ವ್ಯಕ್ತಿಯನ್ನು ಜನವರಿ 6 ರಂದು ಸೋಮವಾರ ಬಂಧಿಸಲಾಗಿದೆ. ಈತನ ವಿರುದ್ದ ಹನಿ ರೋಸ್ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಅಡಿಯಲ್ಲಿ ಅಶ್ಲೀಲ ಮತ್ತು ಅವಹೇಳನಕಾರಿ ಕಾಮೆಂಟ್‌ಗಳು ಹಾಕಿರುವ ಆರೋಪವಿದೆ. ಹನಿ ರೋಸ್ ಸ್ಕ್ರೀನ್‌ಶಾಟ್‌ಗಳನ್ನು ಪೊಲೀಸರಿಗೆ ಪುರಾವೆಯಾಗಿ ಸಲ್ಲಿಸಿದ್ದಾರೆ ಎಂದು ವರದಿಗಳು ಹೇಳಿವೆ.

ವುಮೆನ್ ಇನ್ ಸಿನಿಮಾ ಕಲೆಕ್ಟಿವ್ ಬೆಂಬಲ

ಹನಿರೋಸ್ ಅವರ ಇನ್‌ಸ್ಟಾಗ್ರಾಮ್ ಪೋಸ್ಟ್ ಅನ್ನು ರಿ ಪೋಸ್ಟ್ ಮಾಡಿರುವ ವುಮೆನ್ ಇನ್ ಸಿನಿಮಾ ಕಲೆಕ್ಟಿವ್ ‘ಅವಳೊಂದಿಗೆ’ (Avalkoppam) ಎಂದು ಹ್ಯಾಷ್‌ಟ್ಯಾಗ್ ಕೊಟ್ಟಿದೆ. ಈ ಮೂಲಕ ಹನಿರೋಸ್ ಅವರಿಗೆ ಬೆಂಬಲ ವ್ಯಕ್ತಪಡಿಸಿದೆ.

ಡಿಎಂಕೆ ಸರ್ಕಾರಕ್ಕೆ ತೊಂದರೆ ನೀಡಲು ಬಿಜೆಪಿಯಿಂದ ರಾಜ್ಯಪಾಲ ಆರ್‌ಎನ್ ರವಿ ನೇಮಕ: ಕನಿಮೊಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...