Homeಕರ್ನಾಟಕಹನಿಟ್ರ್ಯಾಪ್ ಆರೋಪದಲ್ಲಿ ಸಿಕ್ಕ ಬಿದ್ದ ಆರು ಜನರು... ಪೊಲೀಸರ ಮೇಲೆ ಗುಂಡು ಹಾರಿಸಿ ಏಒನ್ ಆರೋಪಿ...

ಹನಿಟ್ರ್ಯಾಪ್ ಆರೋಪದಲ್ಲಿ ಸಿಕ್ಕ ಬಿದ್ದ ಆರು ಜನರು… ಪೊಲೀಸರ ಮೇಲೆ ಗುಂಡು ಹಾರಿಸಿ ಏಒನ್ ಆರೋಪಿ ಪರಾರಿ

- Advertisement -
- Advertisement -

ಯುವತಿಯೊಬ್ಬಳನ್ನು ಬಳಸಿ ವ್ಯಕ್ತಿಯೊಬ್ಬರನ್ನು ಹನಿಟ್ರ್ಯಾಪ್ ಸಂಚಿನಲ್ಲಿ ಸಿಲುಕಿಸಿ, 3.80 ಲಕ್ಷ ರೂ. ನಗದನ್ನು ಲಪಟಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಅಪರಾಧ ಪತ್ತೆದಳ ಯಶಸ್ವಿಯಾಗಿದೆ.

ಬಂಧಿತರನ್ನು ಮುಹಮದ್ ಅಝರುದ್ದೀನ್(24), ಅಬೂಬಕರ್ ಸಿದ್ದೀಕ್(33), ಹಸೈನಾರ್ ಅಲಿಯಾಸ್ ಅಚ್ಚು(27), ಇರ್ಷಾದ್ ಅಲಿ(27), ಎ.ಎ.ಸಮೀರ್(28) ಹಾಗೂ ಓರ್ವ ಕಾಲೇಜು ವಿದ್ಯಾರ್ಥಿನಿ ಕೂಡ ಬಂಧನಕ್ಕೆ ಒಳಗಾಗಿದ್ದಾಳೆ. ಬಂಧಿತ ಆರೋಪಿಗಳಿಂದ 1 ಲಕ್ಷ ರೂ. ಗಳನ್ನು ವಶಕ್ಕೆ ಪಡೆಯಲಾಗಿದೆ.

ಈ ಪ್ರಕರಣದಲ್ಲಿ ಒಟ್ಟು 10 ಮಂದಿ ಶಾಮೀಲಾಗಿದ್ದು, ಪ್ರಮುಖ ಆರೋಪಿ ಸೇರಿದಂತೆ ನಾಲ್ವರ ಪತ್ತೆಗಾಗಿ ಶೋಧ ಕಾರ್ಯ ಚುರುಕುಗೊಂಡಿದೆ. ನಾಪೋಕ್ಲು ಪೊಲೀಸ್ ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ಸುಮನ ಡಿ. ಪನ್ನೇಕರ್ ತಿಳಿಸಿದ್ದಾರೆ.

ಪ್ರಕರಣದ ಹಿನ್ನೆಲೆ

ದುಬೈನಲ್ಲಿದ್ದ ನಾಪೋಕ್ಲು ಎಮ್ಮೆಮಾಡು ನಿವಾಸಿ ಗಫೂರ್ ಆಗಸ್ಟ್ ತಿಂಗಳಿನಲ್ಲಿ ತಮ್ಮ ಊರಿಗೆ ಬಂದಿದ್ದರು. ಹೊಸ ಮನೆಯನ್ನು ನಿರ್ಮಿಸುವ ಯೋಜನೆ ಹಾಕಿಕೊಂಡಿದ್ದ ಅವರ ಬಳಿ ಹಣ ಇರುವ ಬಗ್ಗೆ ಮಾಹಿತಿ ತಿಳಿದ ಎಮ್ಮೆಮಾಡು ನಿವಾಸಿ ಕರೀಂ ಎಂಬಾತ ಸ್ಥಳೀಯ ಯುವಕರನ್ನು ಸಂಪರ್ಕಿಸಿ ಗಫೂರ್ ಬಳಿಯಿದ್ದ ಹಣವನ್ನು ಲಪಟಾಯಿಸಲು ಸಂಚು ಹೂಡಿದ್ದರು ಎನ್ನಲಾಗಿದೆ. ಅದರಂತೆ ಆಗಸ್ಟ್ 16ರಂದು ಗಫೂರ್ ಅವರನ್ನು ಕರೆದುಕೊಂಡು ಮನೆ ಬಳಕೆಯ ಎಲೆಕ್ಟ್ರಿಕಲ್ ವಸ್ತುಗಳನ್ನು ಖರೀದಿಸಲು ಮೈಸೂರಿಗೆ ತೆರಳುವಂತೆ ಆರೋಪಿಗಳು ಮನವೊಲಿಸಿದ್ದರು. ಅದರಂತೆ ಕರೀಂ ಮತ್ತು ಅಝರುದ್ದೀನ್ ಅವರು ಗಫೂರ್ ಅವರನ್ನು ಕರೆದುಕೊಂಡು ಮೈಸೂರಿಗೆ ತೆರಳುವಾಗ ಮೊದಲೇ ಸಂಚು ರೂಪಿಸಿದಂತೆ ಆರೋಪಿಗಳು ಕುಶಾಲನಗರದಿಂದ ಕಾಲೇಜು ಯುವತಿಯೊಬ್ಬಳನ್ನು ಜೊತೆಗೆ ಕರೆದುಕೊಂಡು ಹೋಗಿದ್ದಾರೆ. ಮೈಸೂರಿಗೆ ತಲುಪಿದ ಬಳಿಕ ಕತ್ತಲಾದ ಕಾರಣ ಮೈಸೂರಿನ ರಿಂಗ್ ರೋಡ್‍ನ ಹೋಂ ಸ್ಟೇ ಯಲ್ಲಿ ವಿಶ್ರಾಂತಿ ಪಡೆಯುವಂತೆ ಹೇಳಿ, ಯುವತಿ ಮತ್ತು ಗಫೂರ್ ಅವರನ್ನು ಆರೋಪಿಗಳು ಅಲ್ಲಿಗೆ ಕರೆದೊಯ್ದಿದ್ದರು. ಈ ಸಂದರ್ಭ ಗಫೂರ್ ಅವರಿಗೆ ಅಮಲು ಬರುವ ಪದಾರ್ಥವನ್ನು ನೀಡಿದ್ದರು ಎನ್ನಲಾಗಿದೆ.

ಮೊದಲೇ ನಿರ್ಧರಿಸಿದಂತೆ ಕೆಲವು ಸಮಯದ ಬಳಿಕ ಉಳಿದ ಆರೋಪಿಗಳು ಗಫೂರ್ ಮತ್ತು ಯುವತಿ ಉಳಿದುಕೊಂಡಿದ್ದ ಹೋಂ ಸ್ಟೇ ಮೇಲೆ ದಾಳಿ ನಡೆಸಿದ್ದಾರೆ. ನಾವು ಪತ್ರಿಕಾ ಮಾಧ್ಯಮದವರೆಂದು ಹೇಳಿಕೊಂಡು ಗಫೂರ್ ಮೇಲೆ ಹಲ್ಲೆ ನಡೆಸಿದ್ದಲ್ಲದೇ ಗಫೂರ್ ಮತ್ತು ಯುವತಿಯನ್ನು ಜೊತೆಯಲ್ಲಿ ನಿಲ್ಲಿಸಿ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ತೆಗೆದಿದ್ದಾರೆ.

ನಂತರ ಗಫೂರ್ ಬಳಿಯಿದ್ದ 60 ಸಾವಿರ ರೂ. ನಗದು ಮತ್ತು 55 ಸಾವಿರ ಮುಖ ಬೆಲೆಯ ಫಾರಿನ್ ಕರೆನ್ಸಿ, ಎಟಿಎಂ ಕಾರ್ಡ್ ಕಸಿದುಕೊಂಡಿದ್ದಾರೆ. ಅಲ್ಲದೇ 50 ಲಕ್ಷ ರೂ. ಗಳನ್ನು ತಕ್ಷಣ ನೀಡದಿದ್ದಲ್ಲಿ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ಟಿವಿ ಯಲ್ಲಿ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಇದರಿಂದ ಆತಂಕಗೊಂಡ ಗಫೂರ್ ತಮ್ಮ ಬಳಿಯಿದ್ದ 3 ಲಕ್ಷ ರೂ. ಮತ್ತು ಮನೆಯಿಂದ ಹಣವನ್ನು ತರಿಸಿಕೊಂಡು ಒಟ್ಟು 3.80 ಲಕ್ಷ ರೂ. ಗಳನ್ನು ಆರೋಪಿಗಳಿಗೆ ನೀಡಿದ್ದಾರೆ. ನಂತರ ಆರೋಪಿಗಳು ಗಫೂರ್ ಅವರನ್ನು ಬಿಟ್ಟು ಕಳುಹಿಸಿದ್ದರು ಎಂದು ಆರೋಪಿಸಲಾಗಿದೆ.

ಒಂದು ತಿಂಗಳ ಹಿಂದೆ ಹನಿಟ್ರ್ಯಾಪ್ ಪ್ರಕರಣ ನಡೆದಿರುವ ಬಗ್ಗೆ ಜಿಲ್ಲಾ ಅಪರಾಧ ಪ್ತತೆದಳಕ್ಕೆ ಖಚಿತ ಮಾಹಿತಿ ದೊರಕಿತ್ತು. ಇದನ್ನು ಆಧರಿಸಿ ತನಿಖೆ ನಡೆಸಿದ ಅಪರಾಧ ಪತ್ತೆ ದಳ ನಾಪೋಕ್ಲುವಿನ ಎಮ್ಮೆಮಾಡು ನಿವಾಸಿ ಗಫೂರ್ ಅವರು ಹನಿಟ್ರ್ಯಾಪ್ ಪ್ರಕರಣದಲ್ಲಿ ಸಂತ್ರಸ್ತರಾಗಿರುವ ಬಗ್ಗೆ ಮಾಹಿತಿ ಸಂಗ್ರಹಿಸುತ್ತಾರೆ. ಗಫೂರ್ ಅವರ ಮನವೊಲಿಸಿದ ಪೊಲೀಸರು ನಾಪೋಕ್ಲು ಪೊಲೀಸ್ ಠಾಣೆಯಲ್ಲಿ 10 ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದರು. ಪೊಲೀಸ್ ವರಿಷ್ಟಾಧಿಕಾರಿ ಡಾ.ಸುಮನ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ಅಪರಾಧ ಪತ್ತೆ ದಳ 10 ಮಂದಿ ಆರೋಪಿಗಳ ಪೈಕಿ 6 ಮಂದಿಯನ್ನು ಬಂಧಿಸಿದೆ.

ಬಂಧಿತ ಆರೋಪಿಗಳು ಎಮ್ಮೆಮಾಡು ನಿವಾಸಿಗಳಾಗಿದ್ದು, ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಕಲಂ 120(ಬಿ), 328, 384, 395, ಮತ್ತು 149 ಐಪಿಸಿ ಸೆಕ್ಷನ್ ಗಳ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಇತರ 4 ಮಂದಿ ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿಸಲಾಗಿದೆ.

ಪೊಲೀಸರಿಗೆ ಗುಂಡು

ಪ್ರಕರಣದ ಬಯಲಾಗುತ್ತಿದ್ದಂತೆಯೇ ಪ್ರಮುಖ ಆರೋಪಿ ಕರೀಂನನ್ನು ಬಂಧಿಸಲು ಜಿಲ್ಲಾ ಅಪರಾಧ ಪತ್ತೆ ದಳದ ಸಹಾಯಕ ನಿರೀಕ್ಷಕ ಮತ್ತು ಇತರ 4 ಮಂದಿ ಸಿಬ್ಬಂದಿಗಳು ಕರೀಂನ ಮನೆಗೆ ತೆರಳಿದ್ದರು. ಬಂಧನದ ಮಾಹಿತಿ ಅರಿತ ಕರೀಂ ಮನೆಯೊಳಗಿದ್ದ ಬಂದೂಕಿನಿಂದ ಪೊಲೀಸರ ಮೇಲೆ ಒಂದು ಸುತ್ತು ಗುಂಡು ಹಾರಿಸಿದ್ದು, ಪೊಲೀಸ್ ಸಹಾಯಕ ನಿರೀಕ್ಷಕ ಹಮೀದ್ ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದರು. ಗುಂಡು ಪಕ್ಕದಲ್ಲಿದ್ದ ತಡೆಗೋಡೆಗೆ ಬಡಿದಿದ್ದು, ಬಳಿಕ ಕರೀಂ ತನ್ನ ಇಬ್ಬರು ಹೆಂಡತಿಯರ ಸಹಿತ ಸ್ಥಳದಿಂದ ಪರಾರಿಯಾಗಿದ್ದಾನೆ. ಪೊಲೀಸರಿಗೆ ಗುಂಡು ಹೊಡೆಯುವಂತೆ ಆತನ ಪತ್ನಿಯೇ ಕೋವಿಯನ್ನು ತಂದು ಕೊಟ್ಟಿದ್ದಳು ಎನ್ನಲಾಗಿದೆ.

ಈ ಕುರಿತು ಪ್ರತ್ಯೇಕ ಪ್ರಕರಣವು ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 353, 307, 325 ಮತ್ತು ಭಾರತೀಯ ಶಸ್ತ್ರಾಸ್ತ್ರ ದುರ್ಬಳಕೆ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಕರೀಂ ಮತ್ತು ಆತನ ಇಬ್ಬರು ಪತ್ನಿಯರು ಕೂಡ ಆರೋಪಿಗಳಾಗಿದ್ದು, ಈಗ ತಲೆ ಮರೆಸಿಕೊಂಡಿದ್ದಾರೆ. ಕರೀಂ 2015ರಲ್ಲಿ ನಡೆದ ಟಿಪ್ಪು ಗಲಭೆಯಲ್ಲೂ ಪ್ರಮುಖ ಪಾತ್ರ ವಹಿಸಿರುವ ಆರೋಪದಲ್ಲಿ ಪ್ರಕರಣವೂ ದಾಖಲಾಗಿದೆ. ಆತನ ಹಿನ್ನಲೆಯನ್ನು ಕೂಡ ತನಿಖೆ ನಡೆಸಲಾಗುತ್ತಿದ್ದು, ಆತನ ಬಂಧನದ ಬಳಿಕ ಹೆಚ್ಚಿನ ಮಾಹಿತಿ ದೊರೆಯಲಿದೆ ಎಂದು ಪೊಲೀಸ್ ವರಿಷ್ಟಾಧಿಕಾರಿ ಡಾ. ಸುಮನ್ ಡಿ.ಪನ್ನೇಕರ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...