Homeದಲಿತ್ ಫೈಲ್ಸ್ಮರ್ಯಾದೆಗೇಡು ಹತ್ಯೆ: ದಲಿತ ವ್ಯಕ್ತಿಯನ್ನು ಥಳಿಸಿ ಕೊಂದ ಪತ್ನಿ ಸಂಬಂಧಿಕರು

ಮರ್ಯಾದೆಗೇಡು ಹತ್ಯೆ: ದಲಿತ ವ್ಯಕ್ತಿಯನ್ನು ಥಳಿಸಿ ಕೊಂದ ಪತ್ನಿ ಸಂಬಂಧಿಕರು

- Advertisement -
- Advertisement -

ಅಂತರ್ಜಾತಿ ವಿವಾಹವಾಗಿದ್ದ 25 ವರ್ಷದ ದಲಿತ ವ್ಯಕ್ತಿಯನ್ನು ಆತನ ಪ್ರಬಲಜಾತಿ ಪತ್ನಿಯ ಸಂಬಂಧಿಕರು ಥಳಿಸಿ ಕೊಂದಿರುವ ಘಟನೆ ಮಧ್ಯಪ್ರದೇಶದ ಶಿವಪುರಿಯಲ್ಲಿ ಬೆಳಕಿಗೆ ಬಂದಿದೆ. ಸಂಬಂಧಿಕರ ಇಚ್ಛೆಗೆ ವಿರುದ್ಧವಾಗಿ ಅನ್ಯಜಾತಿ ಯುವತಿಯನ್ನು ಮದುವೆಯಾದ ಕಾರಣ ಅವರನ್ನು ಮನೆಯಿಂದ ಹೊರಗೆ ಎಳೆದುಕೊಂಡು ಹೋಗಿ ದೊಣ್ಣೆ ಮತ್ತು ರಾಡ್‌ಗಳಿಂದ ಥಳಿಸಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಮದುವೆ ಬಳಿಕ ಊರಿಗೆ ಹಿಂದಿರುಗಿ ಬರಬಾರದು ಎಂದು ಪತ್ನಿಯ ಕುಟುಂಬವು ಮೊದಲೇ ಎಚ್ಚರಿಸಿದ್ದರೂ, ತಿಂಗಳುಗಳ ನಂತರ ದಂಪತಿ ತಮ್ಮ ಗ್ರಾಮಕ್ಕೆ ಮರಳಿದ್ದರು. ಬಳಿಕ ಯುವಕನಿಗೆ ಥಳಿಸಲಾಗಿದೆ ಎಂದು ಎಂದು ಪೊಲೀಸರು ತಿಳಿಸಿದ್ದಾರೆ.

ಓಂ ಪ್ರಕಾಶ್ ದಾಬ್ರಾ ಪಟ್ಟಣದಲ್ಲಿ ತಿಂಗಳುಗಟ್ಟಲೆ ವಾಸಿಸಿದ ನಂತರ ತನ್ನ ಹೆತ್ತವರನ್ನು ಭೇಟಿ ಮಾಡಲು ತನ್ನ ಗ್ರಾಮಕ್ಕೆ ಹಿಂತಿರುಗಿದ್ದ. ಶಿವಾನಿಯ ತಂದೆ ದ್ವಾರಕಾ ಪ್ರಸಾದ್ ಝಾ, ಸಂಬಂಧಿಕರಾದ ರಾಜೇಶ್ ಅಲಿಯಾಸ್ ರಾಜು ಝಾ, ಉಮಾ ಓಜಾ ಮತ್ತು ಸಂದೀಪ್ ಶರ್ಮಾ ಅವರೊಂದಿಗೆ ಯುವಕನ ಮನೆಗೆ ನುಗ್ಗಿ, ಹೊರಗೆ ಎಳೆದುಕೊಂಡು ಹೋಗಿ ದೊಣ್ಣೆ ಮತ್ತು ರಾಡ್‌ಗಳಿಂದ ಹೊಡೆದಿದ್ದಾರೆ ಎಂದು ವರದಿಯಾಗಿದೆ.

ಓಂ ಪ್ರಕಾಶ್ ಅವರನ್ನು ಗ್ವಾಲಿಯರ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರು ದಿನಗಳ ಕಾಲ ಅಲ್ಲಿಯೇ ಕಷ್ಟಪಟ್ಟು ಭಾನುವಾರ ಸಂಜೆ ಸಾವನ್ನಪ್ಪಿದರು.

ಕುಟುಂಬದೊಂದಿಗೆ ರಕ್ಷಾ ಬಂಧನ ಆಚರಿಸಲು ಅವರು ಮನೆಗೆ ಬಂದಿದ್ದರು ಎಂದು ಯುವಕನ ತಾಯಿ ಹೇಳಿದ್ದಾರೆ. ಜನವರಿಯಲ್ಲಿ ನ್ಯಾಯಾಲಯದ ವಿವಾಹದ ಮೂಲಕ ಶಿವಾನಿಯ ಒಪ್ಪಿಗೆಯೊಂದಿಗೆ ದಂಪತಿಗಳು ಕಾನೂನುಬದ್ಧವಾಗಿ ವಿವಾಹವಾಗಿದ್ದಾರೆ ಎಂದು ಅವರು ಹೇಳಿದರು.

2023 ರಲ್ಲಿ ಮೊದಲ ಬಾರಿಗೆ ಓಡಿಹೋದಾಗಿನಿಂದ ಶಿವಾನಿಯ ಕುಟುಂಬದಿಂದ ದಂಪತಿಗಳು ವಿರೋಧವನ್ನು ಎದುರಿಸಿದ್ದರು. ಹರ್ಸಿ ಗ್ರಾಮ ಪಂಚಾಯತ್ ಓಂ ಪ್ರಕಾಶ್ ಅವರ ಜಾತಿಯ ಹೊರಗಿನವರನ್ನು ವಿವಾಹವಾಗಿದ್ದಕ್ಕಾಗಿ 51,000 ರೂ. ದಂಡ ವಿಧಿಸಿದೆ. ಗ್ರಾಮಸ್ಥರು ಅವರ ಕುಟುಂಬವನ್ನು ಬಹಿಷ್ಕರಿಸುವಂತೆ ಆದೇಶಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಿವಾನಿಯ ಸಂಬಂಧಿಕರು ಸೇರಿದಂತೆ 12 ಜನರ ವಿರುದ್ಧ ಈಗ ಕೊಲೆ ಪ್ರಕರಣ ದಾಖಲಾಗಿದೆ. ಪ್ರಮುಖ ಆರೋಪಿ ದ್ವಾರಕಾ ಪ್ರಸಾದ್ ಝಾ ಪ್ರಸ್ತುತ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 6635 ಎಸ್‌ಸಿ, ಎಸ್‌ಟಿ ದೌರ್ಜನ್ಯ ಪ್ರಕರಣ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...