Homeಕರ್ನಾಟಕಮೂರು ತಿಂಗಳಿನಿಂದ ಬಿಡುಗಡೆಯಾಗದ ಗೌರವಧನ; ಸಂಕಷ್ಟದಲ್ಲಿ ಅಂಗನವಾಡಿ ನೌಕರರು

ಮೂರು ತಿಂಗಳಿನಿಂದ ಬಿಡುಗಡೆಯಾಗದ ಗೌರವಧನ; ಸಂಕಷ್ಟದಲ್ಲಿ ಅಂಗನವಾಡಿ ನೌಕರರು

- Advertisement -
- Advertisement -

ಕಳೆದ ಮೂರು ತಿಂಗಳಿನಿಂದ (ಜೂನ್‌ನಿಂದ) ಸರ್ಕಾರ ಗೌರವಧನ ಬಿಡುಗಡೆ ಮಾಡದೇ ಇರುವುದರಿಂದ ರಾಜ್ಯದ ಅಂಗನವಾಡಿ ನೌಕರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಕ್ಕಳಿಗೆ ಅಕ್ಷರ ಕಲಿಸುವ ಜೊತೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಹಲವು ಯೋಜನೆಗಳ ಜಾರಿಗೆ ಹಗಲಿರುಳು ಶ್ರಮಿಸುತ್ತಿರುವ ನೌಕರರು ಹಬ್ಬದ ಸಂದರ್ಭದಲ್ಲಿ ಹಣ ಇಲ್ಲದೆ ತೊಂದರೆಗೆ ಒಳಗಾಗಿದ್ದಾರೆ. “ಕೂಡಲೇ ಬಾಕಿ ಬಿಡುಗಡೆ ಮಾಡುವ ಜೊತೆಗೆ, ಪ್ರತಿತಿಂಗಳು ನಿಯಮಿತವಾಗಿ ಗೌರವಧನ ಕೊಡಬೇಕು” ಎಂದು ‘ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ’ದ ರಾಜ್ಯ ಸಮಿತಿ ಆಗ್ರಹಿಸಿದೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ರಾಜ್ಯ ಸಮಿತಿ, “ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ಐಸಿಡಿಎಸ್)ಯು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪಾವತಿಯಾಧಾರದಲ್ಲಿ ನಡೆಯುತ್ತಿದೆ. 2016 ರವರೆಗೂ ಗೌರವಧನ ನಿಯಮಿತವಾಗಿ ಬರುತ್ತಿರಲಿಲ್ಲ. ಆಗ ರಾಜ್ಯ ಸರ್ಕಾರ ವೇತನಕ್ಕೆ ಬೇಕಾದ ಹಣವನ್ನೊದಗಿಸಿ, ಕೇಂದ್ರದಿಂದ ಬ೦ದಾಗ ತಗೆದುಕೊಳ್ಳುವ ವಿಶೇಷ ತೀರ್ಮಾನವನ್ನು ಮಾಡಲಾಗಿತ್ತು. ಅಂದಿನಿಂದ ಇಂದಿನವರೆಗೂ ಅದೇ ರೀತಿ ಪಕ್ರಿಯೆ ಇತ್ತು. 2024 ಜೂನ್‌ನಿಂದ ಪುನಃ ಅ೦ಗನವಾಡಿ ನೌಕರರ ಗೌರವಧನ ಪಾವತಿಯಲ್ಲಿ ವ್ಯತ್ಯಯ ಉಂಟಾಗಿ, ಹಲವು ತಾಲ್ಲೂಕುಗಳಲ್ಲಿ 2 ರಿಂದ 3 ತಿಂಗಳು ಗೌರವಧನ ಬಂದಿಲ್ಲ” ಎಂದು ಸಮಿತಿ ಹೇಳಿದೆ.

“ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ದೇಶಕರ ಮಾಹಿತಿಯಂತೆ, ಕಚೇರಿಗಳಲ್ಲಿರುವ ಹಣ ಖರ್ಚಾಗದೇ ಇರುವುದರಿಂದ 2024 ಏಪ್ರಿಲ್‌ನಿಂದ ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿಲ್ಲ. ಆದ್ದರಿಂದ, ಈ ಸಮಸ್ಯೆ ಉದ್ಭವಿಸಿದೆ ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ವಿಚಾರಿಸಿದರೆ ಕೇಂದ್ರ ಕಚೇರಿಯಿಂದ ಅನುದಾನಗಳು ಬಂ೦ದಿಲ್ಲ ಎಂದು ನಿರ್ದೇಶಕರ ಕಚೇರಿಯಲ್ಲಿ ಹೇಳುತ್ತಿದ್ದಾರೆ. ಕೆಲವಡೆ 2 ತಿಂಗಳು, ಕೆಲವಡೆ 3 ತಿಂಗಳು, ಕೆಲವಡೆ ಒಂದೇ ತಾಲ್ಲೂಕಿನಲ್ಲಿ 3-4 ತಿಂಗಳ ವೇತನ ಪಾವತಿಯಿಲ್ಲ. ಇನ್ನು ಕೆಲವಡೆ ಸಹಾಯಕಿಯರಿಗೆ ವೇತನವಾಗಿದೆ. ಆದರೆ, ಕಾರ್ಯಕರ್ತೆಯರಿಗೆ ಬಂದಿಲ್ಲ. ಈ ರೀತಿಯಲ್ಲಿ ಹಲವು ಗೊ೦ದಲದಗೂಡಾಗಿದೆ. ಆದ್ದರಿ೦ದ, ತಾವು ಮಧ್ಯಪ್ರವೇಶಿಸಿ ಪ್ರತಿ ತಿಂಗಳು ಗೌರವಧನ ಸಿಗುವ ಹಾಗೆ ಸೂಕ್ತಕ್ರಮ ವಹಿಸಬೇಕು” ಎಂದು ಅಂಗನವಾಡಿ ನೌಕರರ ಸಂಘಟನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಈ ಬಗ್ಗೆ ‘ನಾನುಗೌರಿ.ಕಾಮ್’ ಜೊತೆಗೆ ಮಾತನಾಡಿ ಅಂಗನವಾಡಿ ಕಾರ್ಯಕರ್ತೆ ಎಂ.ಬಿ ಪುಷ್ಪಾ, “ಇದು ಮಹಾಲಯ ಅಮಾವಸ್ಯೆ ತಿಂಗಳು.. ನಮ್ಮಲ್ಲಿ ಈಗ ಆಚರಣೆಗಳು ಹೆಚ್ಚಾಗಿರುತ್ತವೆ. ಕಳೆದ ಎರಡುಮೂರು ತಿಂಗಳಿನಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕರಿಗೆ ಗೌರವಧನ ಬಿಡುಗಡೆಯಾಗಿಲ್ಲ. ಅಧಿಕಾರಿಗಳನ್ನು ಈ ಬಗ್ಗೆ ಪ್ರಶ್ನಿಸಿದರೆ, ‘ಅನುದಾನ ಬಂದರೆ ಮಾಡಿಕೊಡುತ್ತೇವೆ’ ಎನ್ನುತ್ತಿದ್ದಾರೆ. ಮೇಲಾಧಿಕಾರಿಗಳನ್ನು ಕೇಳಿದರೆ ಅನುದಾನ ಕಳಿಸಿದ್ದೇವೆ ಎನ್ನುತ್ತಾರೆ. ಇಂಥ ಪರಿಸ್ಥಿತಿಯಲ್ಲಿ ನಾವು ಯಾರನ್ನು ನಂಬಬೇಕು ಎನ್ನುವುದೇ ಗೊತ್ತಾಗುತ್ತಿಲ್ಲ. ಅಂಗನವಾಡಿ ನೌಕರರು ಯಾರೂ ಕೂಡ ಆರ್ಥಿಕವಾಗಿ ಸಬಲರಾಗಿರುವುದಿಲ್ಲ. ಇದನ್ನೇ ನಂಬಿಕೊಂಡು ಜೀವನ ಮಾಡುವವರಿಗೆ ಎರಡು ಮೂರು ತಿಂಗಳು ಗೌರವಧನ ನೀಡದೇ ಇದ್ದರೆ ನಮ್ಮ ಬದುಕಿಗೆ ಕಷ್ಟವಾಗುತ್ತದೆ” ಎಂದು ಬೇಸರ ಹೊರಹಾಕಿದರು.

“ಈ ಪರಿಸ್ಥಿತಿಯನ್ನು ನಿರ್ವಹಿಸಲಾಗದೆ ದಾವಣಗೆರೆಯ ಅಂಗನವಾಡಿ ಸಹಾಯಕರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸರ್ಕಾರ ಈವರೆಗೆ ಒಂದು ಸ್ಪಷ್ಟನೆ ನೀಡಿಲ್ಲ.. ಗೌರವಧನ ನೀಡದಿದ್ದರೂ ನಮ್ಮ ಕೆಲಸಗಳು ನಿಂತಿಲ್ಲ. ದಿನದಿಂದ ದಿನಕ್ಕೆ ಕೆಲಸದ ಹೊರೆ ಹೆಚ್ಚುತ್ತಿದೆ. ಸಂಬಳ ಕೊಡದೆ ಕೆಲಸ ಮಾಡಿಸುತ್ತಿರುವುದರಿಂದ ಕಾರ್ಯಕರ್ತರು ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಬೆಲೆ ಏರಿಕೆಗೆ ಅನುಗುಣವಾಗಿ ನಮಗೆ ಕನಿ‍ಷ್ಠ ವೇತನವನ್ನೂ ಸರ್ಕಾರ ಕೊಡುತ್ತಿಲ್ಲ. ಬರಬೇಕಾದ ಕಡಿಮೆ ಗೌರವಧನವನ್ನೂ ಸಮಯಕ್ಕೆ ಸರಿಯಾಗಿ ಕೊಡುತ್ತಿಲ್ಲ. ನಮಗೆ ಜೀವನ ಮಾಡುವುದು ಕಷ್ಟವಾಗುತ್ತಿದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಪ್ರತಿ ತಿಂಗಳು ಹಣ ಬಿಡುಗಡೆ ಮಾಡಬೇಕು” ಎಂದು ಆಗ್ರಹಿಸಿದರು.

“ಕೆಲವು ತಾಲೂಕುಗಳಲ್ಲಿ ಗೌರವಧನ ಕೊಡದಿದ್ದರೂ ತಮ್ಮದೇ ಹಣದಲ್ಲಿ ಮಕ್ಕಳಿಗೆ ಮೊಟ್ಟೆ ಕೊಡಿ ಎಂದು ಅಧಿಕಾರಿಗಳು ಒತ್ತಡ ಹಾಕುತ್ತಿದ್ದಾರೆ. ನಮಗೆ ಜೀವನ ಮಾಡುವುದೇ ಕಷ್ಟವಾಗಿರುವಾಗ ಮಕ್ಕಳಿಗೆ ಮೊಟ್ಟೆ ಖರೀದಿ ಮಾಡುವುದು ಹೇಗೆ? ಇದನ್ನೂ ತಡೆಗಟ್ಟಬೇಕು. ಕಾರ್ಯಕರ್ತೆಯರ ಬದುಕು ಚಿಂತಾಜನಕವಾಗಿದೆ. ಸರ್ಕಾರ ಈ ಬಗ್ಗೆ ಗಮನಕೊಟ್ಟು ಪ್ರತಿ ತಿಂಗಳು ಗೌರವಧನ ಕೊಡಬೇಕು” ಎಂದರು.

ಅಂಗನವಾಡಿ ನೌಕರರ ಬೇಡಿಕೆಗಳೇನು?

1. ಸಮಗ್ರ ಶಿಶು ಅಭಿವೃದ್ಧಿ ಯೋಜನೆ 2023 ರ ಆದೇಶದ ಪ್ರಕಾರ ಕೂಡಲೇ ಗ್ರಾಜ್ಯುಟಿ ಹಣವನ್ನು ಕೊಡಬೇಕು.

2. ನಿವೃತ್ತಿಯಾದವರಿಗೆ ಇಡಗ೦ಟು ಅಥವಾ ಎನ್‌ಪಿಎಸ್‌ ಹಣ ಕೊಡಬೇಕು.

3. 2023 ರ ವಿಧಾನಸಭಾ ಚುನಾವಣೆಯ ಸಂಧರ್ಭದಲ್ಲಿ ಘೋಷಣೆ ಮಾಡಿದ 14 ಸಾವಿರ ರೂಗಳಿಗೆ
ಗೌರವಧನ ಹೆಚ್ಚಿಸಬೇಕು.

4. ಶಿಕ್ಷಣ ಇಲಾಖೆ, ಎಸ್‌ಡಿಎಂಸಿ ಗಳಿಂದ ಪ್ರಾರಂಭ ಮಾಡಿರುವ ಎಲ್‌ಕೆಜಿ-ಯುಕೆಜಿ ನಿಲ್ಲಿಸಿ, ಎಲ್ಲ ಅ೦ಗನವಾಡಿ
ಕೇ೦ದ್ರಗಳನ್ನು ಮೇಲ್ದರ್ಜೆಗೇರಿಸಿ ಅಂಗನವಾಡಿ ಕೇ೦ದ್ರಗಳಲ್ಲಿಯೇ ಎಲ್‌ಕೆಜಿ-ಯುಕೆಜಿ ಪ್ರಾರಂಭಿಸಬೇಕು.

5. ಇಲಾಖಾ ಸಚಿವರು ಒಪ್ಪಿಕೊ೦ಡಂತೆ ಸಾಮೂಹಿಕ ಆರೋಗ್ಯ ವಿಮೆಯನ್ನು ಕೂಡಲೇ
ಜಾರಿಗೊಳಿಸಬೇಕು.

6. ಐಸಿಡಿಎಸ್ ಯೋಜನೆಯನ್ನು ಕಾಯ್ದೆಯನ್ನಾಗಿ ರೂಪಿಸಬೇಕು.

7. ಪೌಷ್ಟಿಕ ಆಹಾರ ಮತ್ತು ಪೂರ್ವಪ್ರಾರ್ಥಮಿಕ ಶಿಕ್ಷಣ ಹಕ್ಕಗಬೇಕು.

8. ಐಸಿಡಿಎಸ್ ಯೋಜನೆಗೆ ಬಜೆಟ್‌ನ್ನು ಹೆಚ್ಚಿಸಬೇಕು.

9. ಅ೦ಗನವಾಡಿ ಕೇಂದ್ರಗಳಿಗೆ ಕೊಡುವ ಪೂರಕ ಪೌಷ್ಟಿಕ ಆಹಾರಕ್ಕೆ ಜಿಎಸ್‌ಟಿ ಹಾಕಬಾರದು.

10. ಐಸಿಡಿಎಸ್ ಯೋಜನೆಗೆ ಪ್ರತ್ಯೇಕ ನಿರ್ದೇಶಾನಾಲಯ ಬೇಕು.

11. 2018 ಸೆಪ್ಟಂಬರ್‌ನಿ೦ದ ಇದುವರೆಗೂ ಅಂಗನವಾಡಿ ನೌಕರರಿಗೆ ಯಾವುದೇ ವೇತನ ಹೆಚ್ಚಿಸಿಲ್ಲ.
ಆದ್ದರಿ೦ದ 26 ಸಾವಿರಕ್ಕೆ ಕನಿಷ್ಠ ವೇತನ ಹೆಚ್ಚಳ ಮಾಡಬೇಕು.

12. 45ನೇ ಐಎಲ್‌ಸಿ ಶಿಫಾರಸ್ಸುಗಳನ್ನು ಜಾರಿ ಮಾಡಬೇಕು.

13. ಕೇಂದ್ರ ಸರ್ಕಾರದ ಪಾಲಿನ ಐಸಿಡಿಎಸ್‌ಗೆ ಕೊಡುವ ಅನುದಾನ ಸಮಯಕ್ಕೆ ಸರಿಯಾಗಿ ಬಿಡುಗಡೆ
ಮಾಡಬೇಕು.

14. ಬೆಲೆಯೇರಿಕೆಯ ಆಧಾರದಲ್ಲಿ ಫಲಾನುಭವಿಗಳ ಘಟಕವೆಚ್ಚವನ್ನು ಹೆಚ್ಚಳಗೊಳಿಸಬೇಕು. 2017 ರಿಂದ
ಘಟಕ ವೆಚ್ಚವನ್ನು ಹೆಚ್ಚಳ ಮಾಡಲಿಲ್ಲ.

15. ನಗರಸಭೆ, ನಗರಪಾಲಿಕೆ, ಮಹಾನಗರ ಪಾಲಿಕೆ, ವಿಧಾನಸಭೆ, ಲೋಕಸಭಾ ಚುನಾವಣೆಗಳು ಅಲ್ಲದೇ
ಉಪಚುನಾವಣೆಗಳಲ್ಲಿ ಮತದಾರರನ್ನು ಗುರ್ತಿಸುವುದು, ಅನರ್ಹಗೊಳಿಸುವುದು, ಚುನಾವಣಾ
ಸಂಧರ್ಭದಲ್ಲಿ ಚೀಟಿ ಹ೦ಚುವುದು, ಬೂತ್‌ಗಳಲ್ಲಿ ಕೆಲಸ ಮಾಡುವ ಮುಂತಾದ ಕೆಲಸಗಳಿಂದ
ಅ೦ಗನವಾಡಿ ಕೇಂದ್ರದ ದಿನನಿತ್ಯದ ಕೆಲಸಗಳಲ್ಲಿ ಅಂಗನವಾಡಿ ನೌಕರರು ತೊಂದರೆ ಅನುಭವಿಸುತ್ತದ್ದಾರೆ.
ಆದ್ದರಿಂದ ಅವರನ್ನು ಚುನಾವಣಾ ಕಲಸಗಳಿ೦ದ ಮುಕ್ತಿಗೊಳಿಸಬೇಕು.

ಇದನ್ನೂ ಓದಿ; ರೈತರು, ವಿದ್ಯಾರ್ಥಿಗಳು, ಸಾಮಾನ್ಯರ ಪ್ರಕರಣಗಳನ್ನೂ ವಾಪಸ್ ಪಡೆಯಲಾಗಿದೆ : ಸಚಿವ ಪರಮೇಶ್ವರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...