Homeಮುಖಪುಟದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ಗೆ ಗೌರವ ಡಾಕ್ಟರೇಟ್

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ಗೆ ಗೌರವ ಡಾಕ್ಟರೇಟ್

ತೀಸ್ತಾ ಸೆಟಲ್ವಾಡ್‌ರವರು ಕರ್ನಾಟಕದೊಂದಿಗೆ ನಿಕಟ ಸಂಬಂಧ ಹೊಂದಿದ್ದು, ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಹತ್ತಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಗೌರಿ ಲಂಕೇಶ್‌ರವರ ನಿಕಟವರ್ತಿಯಾಗಿದ್ದ ಇವರು ಕಳೆದ ವರ್ಷ ಖ್ಯಾತ ಪತ್ರಕರ್ತ ರವೀಶ್‌ ಕುಮಾರ್‌ರವರಿಗೆ ’ಗೌರಿ ಲಂಕೇಶ್‌’ ಪ್ರಶಸ್ತಿ ಪ್ರಧಾನ ಸಮಾರಂಭದ ಮುಖ್ಯ ಅತಿಥಿಯಾಗಿದ್ದರು.

- Advertisement -
- Advertisement -

ಭಾರತದ ನಾಗರಿಕ ಹಕ್ಕುಗಳ ಹೋರಾಟಗಾರ್ತಿ ಮತ್ತು ಪತ್ರಕರ್ತೆ ತೀಸ್ತಾ ಸೆಟಲ್ವಾಡ್ ಅವರಿಗೆ ಬ್ರಿಟಿಷ್ ಕೊಲಂಬಿಯಾ ವಿಶ್ವವಿದ್ಯಾಲಯದ (ಯುಬಿಸಿ) ಪ್ರತಿಷ್ಠಿತ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ.

ತೀಸ್ತಾ ಸೆಟಲ್ವಾಡ್ ಅವರು ನಾಗರಿಕರ ನ್ಯಾಯ ಮತ್ತು ಶಾಂತಿ (ಸಿಜೆಪಿ) ವೇದಿಕೆಯ ಕಾರ್ಯದರ್ಶಿಯಾಗಿದ್ದಾರೆ. ಸಿಜೆಪಿ 2002 ರಲ್ಲಿ ಗುಜರಾತ್ ರಾಜ್ಯದಲ್ಲಿ ಕೋಮು ಹಿಂಸಾಚಾರಕ್ಕೆ ಒಳಗಾದವರಿಗೆ ನ್ಯಾಯಕ್ಕಾಗಿ ಹೋರಾಡಲು ರಚಿಸಲಾದ ಒಂದು ಸಂಘಟನೆಯಾಗಿದೆ. 2002 ರ ಗುಜರಾತ್‌ ಗಲಭೆ ಕುರಿತು ಸಿಜೆಪಿ ಸಹ-ಅರ್ಜಿದಾರರಾಗಿದ್ದು, ನರೇಂದ್ರ ಮೋದಿ ಮತ್ತು ಇತರ ಅರವತ್ತೆರಡು ರಾಜಕಾರಣಿಗಳು ಮತ್ತು ಸರ್ಕಾರಿ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ವಿಚಾರಣೆ ನಡೆಸಬೇಕೆಂದು ಕೋರಿದೆ.

ತೀಸ್ತಾ ತನ್ನ ಪತಿ ಜಾವೇದ್ ಆನಂದ್ ಅವರೊಂದಿಗೆ Cammunalisam cambat ನಿಯತಕಾಲಿಕದ ಸಹ-ಸ್ಥಾಪಕ ಮತ್ತು ಸಹ ಸಂಪಾದಕರಾಗಿದ್ದಾರೆ. ಇದು ಕೋಮು ಹಿಂಸಾಚಾರವನ್ನು ಉತ್ತೇಜಿಸುವ ಘಟಕಗಳ ಮೇಲೆ ಆಕ್ರಮಣ ಮಾಡುವ ಮೂಲಕ ಕೋಮು ಸೌಹಾರ್ದತೆಯನ್ನು ಬೆಳೆಸುತ್ತದೆ. ಅವರು ಪೀಪಲ್ಸ್ ಯೂನಿಯನ್ ಫಾರ್ ಹ್ಯೂಮನ್ ರೈಟ್ಸ್ (ಪಿಯುಹೆಚ್ಆರ್) ನ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

ತೀಸ್ತಾರವರು ಬರೆದ Foot Soldier of the Constitution ಪುಸ್ತಕವು ಬಹಳಷ್ಟು ಜನರ ಗಮನಸೆಳೆದಿದ್ದು ಕನ್ನಡ ಸೇರಿದಂತೆ ಹತ್ತಾರು ಭಾಷೆಗಳಿಗೆ ಅನುವಾದಗೊಂಡಿದೆ.

ತೀಸ್ತಾ ಸೆಟಲ್ವಾಡ್‌ರವರು ಕರ್ನಾಟಕದೊಂದಿಗೆ ನಿಕಟ ಸಂಬಂಧ ಹೊಂದಿದ್ದು, ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಹತ್ತಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಗೌರಿ ಲಂಕೇಶ್‌ರವರ ನಿಕಟವರ್ತಿಯಾಗಿದ್ದ ಇವರು ಕಳೆದ ವರ್ಷ ಖ್ಯಾತ ಪತ್ರಕರ್ತ ರವೀಶ್‌ ಕುಮಾರ್‌ರವರಿಗೆ ’ಗೌರಿ ಲಂಕೇಶ್‌’ ಪ್ರಶಸ್ತಿ ಪ್ರಧಾನ ಸಮಾರಂಭದ ಮುಖ್ಯ ಅತಿಥಿಯಾಗಿದ್ದರು.

2020 ರಲ್ಲಿ ಈ ಗೌರವ ಡಾಕ್ಟರೇಟ್ ಪಡೆದ 10 ಪ್ರಮುಖ ವ್ಯಕ್ತಿಗಳಲ್ಲಿ ತೀಸ್ತಾ ಒಬ್ಬರಾಗಿದ್ದಾರೆ. ಕೋವಿಡ್ -19 ಸಾಂಕ್ರಾಮಿಕದ ಮಧ್ಯೆ ಮೇ ಕೊನೆಯಲ್ಲಿ ವ್ಯಾಂಕೋವರ್‌ನಲ್ಲಿ ನಡೆಯಬೇಕಿದ್ದ ಸಮಾರಂಭವನ್ನು ಮುಂದೂಡಲಾಗಿದೆ.

ಲೇಖಕಿ ತೀಸ್ತಾ ಸೆಟಲ್ವಾಡ್ ಅವರು “ನಾಗರಿಕ ಹಕ್ಕುಗಳ ಹೋರಾಟಗಾರ್ತಿಯಾಗಿದ್ದು, ಗುಜರಾತ್ ರಾಜ್ಯದಲ್ಲಿ 2002 ರ ಸಾವಿರಾರು ಮುಸ್ಲಿಮರ ಹತ್ಯಾಕಾಂಡದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಅಭಿಯಾನದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಜಾತ್ಯತೀತವಾದಿಯಾಗಿ, ಅವರು ಭಾರತದಲ್ಲಿ ಮತ್ತು ವಿಶ್ವದ ಇತರ ಭಾಗಗಳಲ್ಲಿ ಬಹುಸಂಖ್ಯಾತತೆ ಮತ್ತು ಧಾರ್ಮಿಕ ಮತಾಂಧತೆಯನ್ನು ಬಹಿರಂಗಪಡಿಸಲು ಮಾನವ ಹಕ್ಕುಗಳು ಮತ್ತು ಕಾನೂನು ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಮಹಿಳೆಯರು, ಧಾರ್ಮಿಕ ಅಲ್ಪಸಂಖ್ಯಾತರು, LGBTQ ಸಮುದಾಯ, ಸ್ಥಳೀಯರ ಹಕ್ಕುಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

ಇದುವರೆಗೂ ಪಿಯುಸಿಎಲ್ ಜರ್ನಲಿಸಮ್ ಫಾರ್ ಹ್ಯೂಮನ್ ರೈಟ್ಸ್ ಅವಾರ್ಡ್ 1993, ಅತ್ಯುತ್ತಮ ಮಹಿಳಾ ಮಾಧ್ಯಮ ವ್ಯಕ್ತಿ, 1993 ರ ಚಮೇಲಿ ದೇವಿ ಜೈನ್ ಪ್ರಶಸ್ತಿ ಜೊತೆಗೆ ಮಹಾರಾಷ್ಟ್ರದಲ್ಲಿ ಸಾರ್ವಜನಿಕ ವ್ಯವಹಾರಕ್ಕಾಗಿ ಭಾರತ ಸರ್ಕಾರದಿಂದ 2007 ರಲ್ಲಿ ಪದ್ಮಶ್ರೀ ಪ್ರಶಸ್ತಿ ಪಡೆದಿದ್ದಾರೆ.

ಕೋಮುವಾದದ ವಿರುದ್ಧ, ಸೌಹಾರ್ದತೆಯ ಪರ ಸದಾ ದುಡಿಯುತ್ತಿರುವ ತೀಸ್ತಾ ಸೆಟಲ್ವಾದ್‌ ಮೇಲೆ ಪ್ರಭುತ್ವ ಕೆಂಗಣ್ಣು ಬೀರಿದೆ. ಅವರ ವಿರುದ್ಧ ಹತ್ತಾರು ಪ್ರಕರಣಗಳನ್ನು ದಾಖಲಿಸಿ ಹೋರಾತ ಹತ್ತಿಕ್ಕಲು ಯತ್ನಿಸುತ್ತಿದ್ದರೂ ಸಹ ಅದನ್ನು ಅವರು ದಿಟ್ಟವಾಗಿ ಎದುರಿಸುತ್ತಿದ್ದಾರೆ. ಅವರಿಗೆ ಗೌರವ ಡಾಕ್ಟರೇಟ್‌ ಪ್ರದಾನವಾಗುತ್ತಿರುವ ಸಂದರ್ಭದಲ್ಲಿ ನೂರಾರು ಹೋರಾಟಗಾರರು ಅಭಿನಂದನೆ ಸಲ್ಲಿಸಿದ್ದಾರೆ.


ಇದನ್ನೂ ಓದಿ: ಜರ್ಮನ್ ಬುಕ್‌ ಟ್ರೇಡ್‌ನ ಶಾಂತಿ ಪ್ರಶಸ್ತಿ ಗೆದ್ದ ಭಾರತೀಯ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ 

Also Read: UBC honors Teesta Setalvad, among nine others with honorary doctorate

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...