Homeಮುಖಪುಟನಕಲಿ ಮದ್ಯ ದುರಂತ | 21 ದಿನಗೂಲಿ ಕಾರ್ಮಿಕರು ಸಾವು: ನಾಲ್ವರು ಅಧಿಕಾರಿಗಳು ಅಮಾನತು, 10...

ನಕಲಿ ಮದ್ಯ ದುರಂತ | 21 ದಿನಗೂಲಿ ಕಾರ್ಮಿಕರು ಸಾವು: ನಾಲ್ವರು ಅಧಿಕಾರಿಗಳು ಅಮಾನತು, 10 ಜನರ ಬಂಧನ

- Advertisement -
- Advertisement -

ಪಂಜಾಬ್‌ನ ಅಮೃತಸರದ ಮಜಿತಾ ಪ್ರದೇಶದಲ್ಲಿ ನಕಲಿ ವಿಷಪೂರಿತ ಮದ್ಯ ಸೇವಿಸಿ ಸಾವಿಗೀಡಾದವರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಸುಮಾರು 10 ಜನರು ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.

ಕಳೆದ ಭಾನುವಾರ ಸಂಜೆ ಮಜಿತಾ ಪ್ರದೇಶದ ಸುಮಾರು ಐದು ಹಳ್ಳಿಗಳ ಜನರು ನಕಲಿ ಮದ್ಯ ಸೇವಿಸಿದ್ದಾರೆ. ಈ ಬೆನ್ನಲ್ಲೇ ಹಲವರು ಅಸ್ವಸ್ಥಗೊಂಡಿದ್ದು, ಈ ಪೈಕಿ ಕೆಲವರು ಸೋಮವಾರ ಬೆಳಿಗ್ಗೆ ಸಾವಿಗೀಡಾಗಿದ್ದಾರೆ. ಆದರೆ, ಈ ವಿಚಾರವನ್ನು ಮುಚ್ಚಿಟ್ಟಿದ್ದ ಗ್ರಾಮಸ್ಥರು, ಮೃತರ ಅಂತ್ಯ ಸಂಸ್ಕಾರ ಮುಗಿಸಿದ್ದರು.

ಸೋಮವಾರ ಸಂಜೆಯ ವೇಳೆ ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು, ತಕ್ಷಣ ವೈದ್ಯರ ತಂಡವೊಂದನ್ನು ಹಳ್ಳಿಗಳಿಗೆ ಕಳಿಸಿದ್ದರು. ವೈದ್ಯರು ಮನೆ ಮನೆಗೆ ಹೋಗಿ ನಕಲಿ ಮದ್ಯ ಕುಡಿದವರನ್ನು ತಪಾಸಣೆ ನಡೆಸಿದ್ದರು ಮತ್ತು ಗಂಭೀರ ಸ್ಥಿತಿಯಲ್ಲಿದ್ದ ಕೆಲವರನ್ನು ಆಸ್ಪತ್ರೆಗೆ ಸೇರಿಸಿದ್ದರು. ಆದರೂ, ಮಂಗಳವಾರ ಸಂಜೆಯ ವೇಳೆ ಸಾವಿನ ಸಂಖ್ಯೆ 15 ಆಗಿತ್ತು. ಇಂದು ಮುಂಜಾನೆ ಅದು 21ಕ್ಕೆ ತಲುಪಿದೆ.

ಘಟನೆ ಸಂಬಂಧ 10 ಜನರನ್ನು ಬಂಧಿಸಲಾಗಿದೆ. ಮಜಿತಾ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಮತ್ತು ಸ್ಥಳೀಯ ಅಬಕಾರಿ ಮತ್ತು ತೆರಿಗೆ ಅಧಿಕಾರಿ (ಇಟಿಒ) ಸೇರಿದಂತೆ ನಾಲ್ವರು ಅಧಿಕಾರಿಗಳನ್ನು ಮಂಗಳವಾರ ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ.

ಸಾವಿಗೀಡಾದವರು ಮತ್ತು ಸೋಮವಾರದಿಂದ ಆಸ್ಪತ್ರೆಗೆ ದಾಖಲಾದ ಹೆಚ್ಚಿನ ಜನರು ದಿನಗೂಲಿ ಕಾರ್ಮಿಕರು. ಅಮೃತಸರದ ಗುರುನಾನಕ್ ದೇವ್ ಆಸ್ಪತ್ರೆಗೆ ದಾಖಲಾಗಿರುವ 10 ಜನರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಅಮೃತಸರ ಉಪ ಆಯುಕ್ತ ಸಾಕ್ಷಿ ಸಾಹ್ನಿ ಹೇಳಿದ್ದಾರೆ.

ಮಜಿಥಿಯಾದ ಭಂಗಲಿ, ಪಾತಾಳಪುರಿ, ಮರಾರಿ ಕಲನ್ ಮತ್ತು ಥೆರೆವಾಲ್ ಗ್ರಾಮಗಳಲ್ಲಿ ಸಾವುಗಳು ಸಂಭವಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಮೆಥನಾಲ್ ಎಂಬ ಅಗ್ಗದ ಕೈಗಾರಿಕಾ ಮದ್ಯವು ಸಣ್ಣ ಪ್ರಮಾಣದಲ್ಲಿಯೂ ಸಹ ಮಾರಕವಾಗಿದ್ದು, ಅದನ್ನು ಅಕ್ರಮ ಮದ್ಯವನ್ನು ತಯಾರಿಸಲು ಆನ್‌ಲೈನ್‌ನಲ್ಲಿ ದೊಡ್ಡ ಪ್ರಮಾಣದಲ್ಲಿ ಖರೀದಿಸಲಾಗಿದೆ ಎಂದು ತಿಳಿದುಬಂದಿದೆ.

ಜನ ಪ್ರತಿನಿಧಿಗಳು, ಪೊಲೀಸ್ ಮತ್ತು ಇತರ ಇಲಾಖೆಗಳ ಹಿರಿಯ ಅಧಿಕಾರಿಗಳು ದುರಂತ ಸಂಭವಿಸಿದ ಗ್ರಾಮಗಳಿಗೆ ಭೇಟಿ ನೀಡಿದ್ದಾರೆ. ವೈದ್ಯಕೀಯ ತಂಡವೊಂದನ್ನು ಗ್ರಾಮಗಳಲ್ಲಿ ನೇಮಿಸಲಾಗಿದೆ. ಅವರು ಯಾವುದೇ ಅನಾರೋಗ್ಯ ಲಕ್ಷಣ ಇಲ್ಲದಿದ್ದವರೂ ಸೇರಿದಂತೆ, ನಕಲಿ ಮದ್ಯ ಸೇವಿಸಿದ ಪ್ರತಿಯೊಬ್ಬರನ್ನು ಪರೀಕ್ಷೆ ನಡೆಸಿ ಆಸ್ಪತ್ರೆ ಸೇರಿಸುತ್ತಿದ್ದಾರೆ.

ದುರಂತ ಸ್ಥಳಕ್ಕೆ ಸಿಎಂ ಭೇಟಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಮದ್ಯ ದುರಂತ ಸಂಭವಿಸಿದ ಗ್ರಾಮಗಳಿಗೆ ತೆರಳಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಗಂಭೀರ ಸ್ಥಿತಿಯಲ್ಲಿರುವವರ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದಿದ್ದಾರೆ. ಮೃತ ಕುಟುಂಬಗಳಿಗೆ ಸರ್ಕಾರದಿಂದ ತಲಾ 10 ಲಕ್ಷ ರೂಪಾಯಿ ಆರ್ಥಿಕ ಸಹಾಯ ಘೋಷಿಸಿದ್ದಾರೆ. ಸರ್ಕಾರದಿಂದ ಎಲ್ಲಾ ರೀತಿಯ ಬೆಂಬಲ ಒದಗಿಸುವುದಾಗಿ ಭರವಸೆ ನೀಡಿದ್ದಾರೆ.

ಘಟನೆಗೆ ಕಾರಣರಾದವರನ್ನು ಬಂಧಿಸಲಾಗಿದೆ. ನಿರ್ಲಕ್ಷ್ಯ ತೋರಿದ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಪ್ರಕರಣದ ಹಿಂದೆ ಎಷ್ಟೇ ದೊಡ್ಡ ಪ್ರಭಾವಿಗಳು ಇದ್ದರೂ, ಅವರ ವಿರುದ್ದ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಪಾಕಿಸ್ತಾನದ ಡ್ರೋನ್ ದಾಳಿಯಲ್ಲಿ ಗಾಯಗೊಂಡಿದ್ದ ಪಂಜಾಬ್‌ನ ಮಹಿಳೆ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...