Homeರಾಷ್ಟ್ರೀಯಸಾಮಾಜಿಕ ಮಾಧ್ಯಮಗಳಲ್ಲಿ ನೂಪುರ್ ಶರ್ಮಾ ಬೆಂಬಲಿಸಿದ್ದಕ್ಕೆ ರಾಜಸ್ಥಾನದ ಉದಯಪುರದಲ್ಲಿ ಭೀಕರ ಹತ್ಯೆ; ಆರೋಪಿಗಳ ಬಂಧನ

ಸಾಮಾಜಿಕ ಮಾಧ್ಯಮಗಳಲ್ಲಿ ನೂಪುರ್ ಶರ್ಮಾ ಬೆಂಬಲಿಸಿದ್ದಕ್ಕೆ ರಾಜಸ್ಥಾನದ ಉದಯಪುರದಲ್ಲಿ ಭೀಕರ ಹತ್ಯೆ; ಆರೋಪಿಗಳ ಬಂಧನ

- Advertisement -
- Advertisement -

ರಾಜಸ್ಥಾನದ ಉದಯಪುರದಲ್ಲಿ ಮಂಗಳವಾರ ಹಾಡ ಹಗಲೇ ಅಂಗಡಿಯವರೊಬ್ಬರನ್ನು ಹತ್ಯೆ ಮಾಡಲಾಗಿದ್ದು, ನಗರದಲ್ಲಿ ಉದ್ವಿಗ್ನತೆ ಉಂಟಾಗಿದೆ. ಕನ್ಹಯ್ಯಾ ಲಾಲ್ ಎಂಬ ಅಂಗಡಿಯವರನ್ನು ಇಬ್ಬರು ದುಷ್ಕರ್ಮಿಗಳು ಅವರ ತಲೆಯನ್ನು ಕೊಯ್ದು ಹತ್ಯೆ ಮಾಡಿದ್ದಾರೆ.

ಅಮಾನತುಗೊಂಡ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿದ್ದಕ್ಕಾಗಿ ವ್ಯಕ್ತಿಯನ್ನು ಕೊಂದಿರುವುದಾಗಿ, ಕೊಲೆಯ ನಂತರ ದುಷ್ಕರ್ಮಿಗಳು ವಿಡಿಯೊದಲ್ಲಿ ಒಪ್ಪಿಕೊಂಡಿದ್ದಾರೆ. ಆರೋಪಿಗಳನ್ನು ರಾಜ್‌ಸಮಂದ್ ಜಿಲ್ಲೆಯ ಭೀಮ್ ಪ್ರದೇಶದಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಪರಾರಿಯಾಗಲು ಯತ್ನಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದುಷ್ಕರ್ಮಿಗಳಿಬ್ಬರು ಟೈಲರ್ ಅಂಗಡಿಗೆ ಪ್ರವೇಶಿಸಿ ಚಾಕುವಿನಿಂದ ದಾಳಿ ನಡೆಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ದುಷ್ಕರ್ಮಿಗಳಿಬ್ಬರೂ ಪ್ರತ್ಯೇಕವಾಗಿ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಹೇಳಿದೆ.

ಇದನ್ನೂ ಓದಿ: ‘ಬಿಜೆಪಿ ಪದಾಧಿಕಾರಿಗಳ ಆಕ್ಷೇಪಾರ್ಹ ಹೇಳಿಕೆಗೆ ವಿರೋಧವಿದೆ’: ಪ್ರವಾದಿ ನಿಂದನೆಯನ್ನು ಖಂಡಿಸಿದ ಅಮೆರಿಕ

ಇಬ್ಬರೂ ಕೊಲೆಯನ್ನು ಒಪ್ಪಿಕೊಂಡಿದ್ದು, ಪ್ರಧಾನಿ ನರೇಂದ್ರ ಮೋದಿಗೆ ಬೆದರಿಕೆ ಹಾಕಿದ್ದಾರೆ. ದುಷ್ಕರ್ಮಿಗಳಲ್ಲಿ ಒಬ್ಬ ವ್ಯಕ್ತಿ ತಾವು ನಡೆಸಿದ ಕೃತ್ಯದ ಉದ್ದೇಶವನ್ನು ವಿವರಿಸಿದ್ದಾನೆ.

ಶಾಂತಿಗಾಗಿ ಸಿಎಂ ಮನವಿ; ಮುಂದುವರಿದ ಪೊಲೀಸ್ ತನಿಖೆ 

“ಭೀಕರವಾಗಿ ಕೊಲೆ ಮಾಡಲಾಗಿದೆ. ಘಟನೆಯ ಬಗ್ಗೆ ಸಂಪೂರ್ಣ ತನಿಖೆ ನಡೆಸಲಾಗುವುದು. ಕೆಲವು ಆರೋಪಿಗಳನ್ನು ಗುರುತಿಸಲಾಗಿದೆ” ಎಂದು ಉದಯಪುರದ ಪೊಲೀಸ್‌ ಅಧೀಕ್ಷಕರು ಹೇಳಿದ್ದಾರೆ.

ಹತ್ಯೆಯೂ ಉದಯಪುರದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದ್ದು, ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಶಾಂತಿಗಾಗಿ ಜನತೆಯೊಂದಿಗೆ ಮನವಿ ಮಾಡಿದ್ದಾರೆ.

“ಉದಯ್‌ಪುರದಲ್ಲಿ ನಡೆದ ಯುವಕನ ಘೋರ ಹತ್ಯೆಯನ್ನು ನಾನು ಖಂಡಿಸುತ್ತೇನೆ. ಈ ಘಟನೆಯಲ್ಲಿ ಭಾಗಿಯಾಗಿರುವ ಎಲ್ಲಾ ಕ್ರಿಮಿನಲ್‌ಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು. ಪೊಲೀಸರು ಅಪರಾಧದ ಬುಡಕ್ಕೆ ಹೋಗುತ್ತಾರೆ. ಶಾಂತಿ ಕಾಪಾಡುವಂತೆ ನಾನು ಎಲ್ಲಾ ಪಕ್ಷಗಳಿಗೆ ಮನವಿ ಮಾಡುತ್ತೇನೆ” ಎಂದು ಗೆಹ್ಲೋಟ್ ಹೇಳಿದ್ದಾರೆ.

ಇದನ್ನೂ ಓದಿ: ಪ್ರವಾದಿ ನಿಂದನೆ: ಮುಂಬೈ ಪೊಲೀಸರ ಕೈಗೆ ಸಿಗದ ಅಮಾನತುಗೊಂಡ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ

ಪ್ರತಿಭಟನೆ, ಇಂಟರ್ನೆಟ್‌ ಅಮಾನತು

ಘಟನೆಯ ನಂತರ, ಉದಯಪುರದಾದ್ಯಂತ ಪ್ರತಿಭಟನೆಗಳು ಭುಗಿಲೆದ್ದಿದ್ದು, ಮಾರುಕಟ್ಟೆಗಳನ್ನು ಮುಚ್ಚಿಸಲಾಗಿದೆ. ಹಿಂಸಾತ್ಮಕ ಕೃತ್ಯದ ವಿರುದ್ಧ ಪ್ರತಿಭಟನಾಕಾರರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಜಿಲ್ಲಾಧಿಕಾರಿ ತಾರಾಚಂದ್ ಮೀನಾ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ಚೌಧರಿ ಸ್ಥಳಕ್ಕೆ ಆಗಮಿಸಿದ್ದಾರೆ. ಈ ಮಧ್ಯೆ, ಮುಂದಿನ 24 ಗಂಟೆಗಳ ಕಾಲ ಪ್ರದೇಶದಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...