HomeUncategorizedಹೋಸಪೇಟೆ: ಪ್ರಮುಖ ಸ್ಪರ್ಧಿಗಳು ನಾಲ್ಕು - ಆನಂದ್ ಸಿಂಗ್ ಗೆಲ್ಲುವ ಸಾಧ್ಯತೆಯೇ ಹೆಚ್ಚು

ಹೋಸಪೇಟೆ: ಪ್ರಮುಖ ಸ್ಪರ್ಧಿಗಳು ನಾಲ್ಕು – ಆನಂದ್ ಸಿಂಗ್ ಗೆಲ್ಲುವ ಸಾಧ್ಯತೆಯೇ ಹೆಚ್ಚು

- Advertisement -
- Advertisement -

ಗಣಿ ದುಡ್ಡಿನಲ್ಲಿ ಪ್ರಜಾಪ್ರಭುತ್ವದ ರಕ್ತಹೀರುವ ತಿಗಣೆಗಳು ಬಳ್ಳಾರಿಯಲ್ಲಿ ಮೇಲೆದ್ದ ಮೇಲೆ ಅದು ರಾಜ್ಯದ ಗಮನ ಸೆಳೆಯುವ ಜಿಲ್ಲೆಯಾಗಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ಮಧ್ಯೆ ಮರಕೋತಿ ಆಟವಾಡುತ್ತಿರುವ ಆನಂದ್ ಸಿಂಗ್ ವಿಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದ ಆರಿಸಿ ಬಂದು ರಾಜೀನಾಮೆ ಕೊಟ್ಟು ಅನರ್ಹ ಶಾಸಕನಾಗಿ ಬಿಜೆಪಿಯ ಅಭ್ಯರ್ಥಿಯಾಗಿದ್ದಾರೆ. ವಿಜಯನಗರ ಪ್ರತ್ಯೇಕ ಜಿಲ್ಲೆ ಮಾಡಬೇಕು, ಅನುದಾನ ಹೆಚ್ಚು ಮಾಡಬೇಕು ಮತ್ತು ಜಿಂದಾಲ್ ಕಂಪನಿಗೆ ಸರ್ಕಾರ ಭೂಮಿ ನೀಡಬಾರದು ಎನ್ನುವ ಕಾರಣಗಳನ್ನು ರಾಜೀನಾಮೆ ಕೊಟ್ಟಾಗ ಹೇಳಿದ್ದರು. ಅದು ಸ್ವಂತ ಮಾನ ಉಳಿಸಿಕೊಳ್ಳುವುದರ ಜೊತೆಗೆ, ಮುಂದಿನ ಉಪಚುನಾವಣೆಯ ಮೇಲೆ ಕಣ್ಣಿಟ್ಟೇ ಆಡಿದ ಮಾತಾಗಿತ್ತು. ಆದರೆ ಈ ಚುನಾವಣೆಯಲ್ಲಿ ಅವೆಲ್ಲಾ ಮೂಲೆಗೆ ಸರಿದಿವೆ.

ಕಾಂಗ್ರೆಸ್ ಪಕ್ಷದಿಂದ ಸಂಡೂರಿನ ರಾಜಮನೆತನದ ವಿ.ವೈ.ಘೋರ್ಫಡೆ ಕಣದಲ್ಲಿದ್ದು, ಜೆಡಿಎಸ್‍ನಿಂದ ಎನ್.ಎಂ.ನಬಿ ಕಣದಲ್ಲಿದ್ದಾರೆ. ಬಿಜೆಪಿಯಿಂದ ಬಂಡಾಯವೆದ್ದಿರುವ ಕವಿರಾಜ ಅರಸ್ ಪಕ್ಷೇತರ ಅಭ್ಯರ್ಥಿಯಾಗಿದ್ದಾರೆ. ಕಾಂಗ್ರೆಸ್‍ಗೆ ಗೆಲ್ಲುವ ಅವಕಾಶಗಳಿದ್ದರೂ ಸಹ ಪಕ್ಷದ ಪರವಾಗಿ ಕೆಲಸಮಾಡುವ ನಾಯಕರ ಕೊರತೆಯೇ ಎದ್ದು ಕಾಣುತ್ತಿದೆ. ಆದರೆ ಜೆಡಿಎಸ್ ಹೆಚ್ಚು ಕೆಲಸ ಮಾಡುತ್ತಿದೆಯಾದರೂ ಮತಗಳನ್ನು ಸೆಳೆಯುವಲ್ಲಿ ವಿಫಲವಾಗುತ್ತಿದೆ ಎನ್ನಲಾಗಿದೆ. ಎನ್.ಎಂ.ನಬಿಯವರು ಎಂ.ಪಿ.ಪ್ರಕಾಶ್ ಅವರ ಜೊತೆಗೆ ಸಚಿವರಾಗಿದ್ದಂತಹ ಹಿರಿಯರು. ಆಗಿನಿಂದಲೂ ಜೆಡಿಎಸ್‍ನಲ್ಲೇ ಇದ್ದವರು. ಇವರಿಗೆ ಇಲ್ಲಿ ಈಗ ಟಿಕೆಟ್ ದೊರೆತಿದೆ.

ಕಳೆದ ಬಾರಿ ಕಾಂಗ್ರೆಸ್‍ನಿಂದ ಬಂಡಾಯವೆದ್ದು, ಜೆಡಿಎಸ್‍ನಿಂದ ಕಣಕ್ಕಿಳಿದು 3835 ಮತಗಳ ಅಂತರದಿಂದ ಸೋತಿದ್ದಂತಹ ದೀಪಕ್ ಸಿಂಗ್ ಈ ಬಾರಿ ಕಾಂಗ್ರೆಸ್‍ನ ವಿ.ವೈ.ಘೋರ್ಪಡೆಯ ಪರವಾಗಿ ಕೆಲಸ ಮಾಡುವುದಾಗಿ ಘೋಷಿಸಿದ್ದಾರೆ. ಆನಂದ್ ಸಿಂಗ್ ಮತಗಳನ್ನು ಹಿಡಿದಿಟ್ಟುಕೊಳ್ಳುವಲ್ಲಿ ಈ ಬಾರಿ ಸಫಲವಾಗುವ ಸಾಧ್ಯತೆಗಳೇ ಹೆಚ್ಚು ಎಂದು ಹೇಳಲಾಗುತ್ತಿದೆ. ಮೇಲ್ನೋಟಕ್ಕೆ ತ್ರಿಕೋನ ಸ್ಪರ್ಧೆಯಂತೆ ಕಂಡರು ಸಹ ಕಾಂಗ್ರೆಸ್ ಮತ್ತು ಬಿಜೆಪಿಗೆ ಜಿದ್ದಾಜಿದ್ದಿ ಇರಲಿದೆ. ಬೇಕೆಂದಾಗ ರಾಜೀನಾಮೆ ನೀಡಿ ಉಪ ಚುನಾವಣೆ ನಡೆಸುವ ಮೂಲಕ ಜನರ ತೆರಿಗೆ ಹಣವನ್ನು ಪೋಲುಮಾಡುವ ರಾಜೀನಾಮೆ ಶೂರರನ್ನು ಸೋಲಿಸಬೇಕು ಎಂಬ ಮನಸ್ಸನ್ನು ವಿಜಯನಗರ ಕ್ಷೇತ್ರದ ಜನತೆ ಮಾಡಿದ ಹಾಗೆ ಕಾಣಿಸುತ್ತಿಲ್ಲ. ಹಾಗಾಗಿ ಕೊನೆಕ್ಷಣದ ಅಚ್ಚರಿ ನಡೆಯದ ಹೊರತು ಆನಂದ್‍ಸಿಂಗ್‍ಗೆ ಗೆಲ್ಲುವ ಎಲ್ಲಾ ಸಾಧ್ಯತೆಗಳು ಇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...