ಹೊಸಪೇಟೆ: ನ್ಯಾಯಾಲಯದ ಆವರಣದಲ್ಲಿಯೇ ವಕೀಲರ ಬರ್ಬರ ಹತ್ಯೆ - ಹಂತಕನ ಬಂಧನ

ಹೊಸಪೇಟೆಯ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯದ ಆವರಣದಲ್ಲಿಯೇ ವಕೀಲ ಮತ್ತು ಕಾಂಗ್ರೆಸ್ ಮುಖಂಡ ತಾರಿಹಳ್ಳಿ ವೆಂಕಟೇಶ್ (48) ಅವರ ಹತ್ಯೆ ಮಾಡಿರುವ ಘಟನೆ ಇಂದು (ಫೆ.27) ನಡೆದಿದೆ.

ವೆಂಕಟೇಶ್ ಅವರ ಸಂಬಂಧಿ ಮನೋಜ್ ಎಂಬಾತ ಕೊಲೆ ಮಾಡಿದ್ದು, ಆತನನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ ಎಂದು ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.

ವೀಡಿಯೋ ನೋಡಿ: ಪುರಸಭೆ ಅಧಿಕಾರಿಗಳ ಕಿರುಕುಳ ತಾಳದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಮದ್ದೂರಿನ ಪೌರ ಕಾರ್ಮಿಕ

ತಾರಿಹಳ್ಳಿ ವೆಂಕಟೇಶ್ ನ್ಯಾಯಾಲಯದ ಆವರಣದಲ್ಲಿ ನೋಟರಿ ಮಾಡುತ್ತಿದ್ದಾಗ ಮನೋಜ್ ಎಂಬಾತ ಏಕಾಏಕಿ ಬಂದು ಹಲ್ಲೆ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡ ವೆಂಕಟೇಶ್ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:ಮುರುಘಾ ಮಠದ ಅಧಿಕಾರಿಯ ಮೇಲೆ ಅತ್ಯಾಚಾರ ಆರೋಪ: ಪ್ರಕರಣ ಬಯಲಿಗೆಳೆದ ಪತ್ರಕರ್ತನ ವಿರುದ್ಧ ಎಫ್‌ಐಆರ್!

ಆರೋಪಿಯು ವಕೀಲರ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ಇದಕ್ಕೆ ಕಾರಣ ಹಳೆಯ ದ್ವೇ‍ಷ ಎಂದು ಹಲವರು ಹೇಳಿದ್ದಾರೆ. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆ ಮಾಡಿದ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವೀಡಿಯೋ ನೋಡಿ: ದೆಹಲಿಯಲ್ಲಿ ಜನವರಿ 26ರ ಟ್ರಾಕ್ಟರ್ ರ್‍ಯಾಲಿಯಲ್ಲಿ ನಿಜವಾಗಿಯೂ ನಡೆದಿದ್ದೇನು? ಪ್ರತ್ಯಕ್ಷ ದರ್ಶಿಯ ವರದಿ


ಇದನ್ನೂ ಓದಿ: ಮದ್ಯ ನಿಷೇಧ ಆಂದೋಲನದಿಂದ ಫೆ.28ಕ್ಕೆ ಟ್ವಿಟರ್ ಅಭಿಯಾನ

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
+ posts

1 COMMENT

  1. ಮನುವಾದಿಗಳ ಆಡಳಿತದಲ್ಲಿ ಕಾನೂನು, ಸುವ್ಯವಸ್ಥೆ ಹದಗೆಟ್ಟಿದೆ. ಲಂಚ ಕೊಟ್ಟವರಿಗೆ ರೌಡಿಶೀಟಿನಿಂದ ಹೊರಬರುವ ಸೌಭಾಗ್ಯ ಕೂಡ ಈ ಸರಕಾರದಲ್ಲಿ ದೊರಕುತ್ತಿದೆ.

LEAVE A REPLY

Please enter your comment!
Please enter your name here