Homeಮುಖಪುಟಆಸ್ಪತ್ರೆಯಲ್ಲಿ ಬೆಂಕಿ ಅವಘಡ: ಇಬ್ಬರು ದಾದಿಯರ ವಿರುದ್ಧ ‘ನರಹತ್ಯೆ’ ಪ್ರಕರಣ ದಾಖಲು

ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ಇಬ್ಬರು ದಾದಿಯರ ವಿರುದ್ಧ ‘ನರಹತ್ಯೆ’ ಪ್ರಕರಣ ದಾಖಲು

- Advertisement -
- Advertisement -

ಮಹಾರಾಷ್ಟ್ರದ ಜಿಲ್ಲಾ ಆಸ್ಪತ್ರೆಯೊಂದರ ನವಜಾತ ಶಿಶು ಆರೈಕೆ ಘಟಕದಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೆ ಸಂಬಂಧಿಸಿ ಇಬ್ಬರು ದಾದಿಯರ ಮೇಲೆ ಕರ್ತವ್ಯದಲ್ಲಿ ನಿರ್ಲಕ್ಷ್ಯ ಮಾಡಿದ್ದಾರೆಂದು ಆರೋಪಿಸಿ ಅವರ ವಿರುದ್ದ ‘ನರಹತ್ಯೆ’ ಪ್ರಕರಣ ದಾಖಲಾಗಿದೆ ಎಂದು ರಾಜ್ಯದ ಗೃಹ ಮಂತ್ರಿ ಅನಿಲ್ ದೇಶ್ಮುಖ್‌ ಶುಕ್ರವಾರ ಹೇಳಿದ್ದಾರೆ.

ರಾಜ್ಯದ ವಿದರ್ಭ ಜಿಲ್ಲೆಯ ಭಂಡಾರ ಪಟ್ಟಣದಲ್ಲಿರುವ ನಾಲ್ಕು ಅಂತಸ್ತಿನ ಜಿಲ್ಲಾ ಆಸ್ಪತ್ರೆಯಲ್ಲಿ, ನವಜಾತ ಆರೈಕೆ ವಿಶೇಷ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಳೆದ ತಿಂಗಳು ಹತ್ತು ಶಿಶುಗಳು ಸಾವನ್ನಪ್ಪಿದ್ದವು.

ಇದನ್ನೂ ಓದಿ: ‘ಹೌದು ಮೈಲಾರ್ಡ್, ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರೆಲ್ಲಾ ಒಟ್ಟಾಗಿ ಸಂಚು ಹೂಡಿದರು’

ಘಟನೆಗೆ ಸಂಬಂಧಿಸಿದಂತೆ ಡಿಎಸ್ಪಿ ಮಟ್ಟದ ಅಧಿಕಾರಿಗಳು ಸಂಪೂರ್ಣವಾಗಿ ಪರಿಶೀಲಿಸುತ್ತಿದ್ದಾರೆ ಎಂದು ಗೃಹ ಸಚಿವ ದೇಶಮುಖ್ ಹೇಳಿದ್ದಾರೆ.

“ಭಂಡಾರದಲ್ಲಿನ ನಟಾಲ್ ಕೇರ್ ಘಟಕದಲ್ಲಿ ಸಂಭವಿಸಿದ ದುರಂತ ಅಗ್ನಿ ಅಪಘಾತದ ಪ್ರಕರಣದ ಬಗ್ಗೆ ನಡೆಸಿದ ತನಿಖೆಯಲ್ಲಿ, ನಿರ್ಲಕ್ಷ್ಯ ತೋರಿದ ಇಬ್ಬರು ದಾದಿಯರ ವಿರುದ್ಧ ನರಹತ್ಯೆ ಪ್ರಕರಣ ದಾಖಲಾಗಿದೆ. ಈ ವಿಷಯವನ್ನು ಡಿಎಸ್‌ಪಿ ಮಟ್ಟದ ಅಧಿಕಾರಿಗಳು ಕೂಲಂಕಷವಾಗಿ ತನಿಖೆ ನಡೆಸುತ್ತಿದ್ದಾರೆ” ಎಂದು ದೇಶಮುಖ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ’ಅಮಿತಾಬ್, ಅಕ್ಷಯ್‌ಗೆ ಮೋದಿ ಸರ್ಕಾರದ ವಿರುದ್ಧ ಮಾತನಾಡಲು ಧೈರ್ಯವಿಲ್ಲವೇ?’

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...