Homeಮುಖಪುಟಮಾನಸಿಕ ಅಸ್ವಸ್ಥ ರೋಗಿಗಳನ್ನು ಬಿಸಾಡಿದ ಆಸ್ಪತ್ರೆ:  ಒಂದು ಶವ ಪತ್ತೆ

ಮಾನಸಿಕ ಅಸ್ವಸ್ಥ ರೋಗಿಗಳನ್ನು ಬಿಸಾಡಿದ ಆಸ್ಪತ್ರೆ:  ಒಂದು ಶವ ಪತ್ತೆ

- Advertisement -
- Advertisement -

ಔರಂಗಾಬಾದ್: ಬಿಹಾರದ ಔರಂಗಾಬಾದ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳು ಇಬ್ಬರು ಮಾನಸಿಕ ಅಸ್ವಸ್ಥ ರೋಗಿಗಳನ್ನು ಬೆಡ್‌ಶೀಟ್‌ಗಳಿಂದ ಸುತ್ತಿಕೊಂಡು ಕಟ್ಟಿಹಾಕಿ ಆಸ್ಪತ್ರೆಯಿಂದ ಸುಮಾರು 20 ಕಿ.ಮೀ. ದೂರದಲ್ಲಿ ಎಸೆದು ಬಂದಿದ್ದು, ಇದರಲ್ಲಿ ಒಬ್ಬ ರೋಗಿಯು ಸಾವನ್ನಪ್ಪಿದ್ದು, ಇನ್ನೊಬ್ಬ ಕಾಣೆಯಾಗಿದ್ದಾನೆ ಎಂದು ರಾಜ್ಯ ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸ್ವಾಸ್ಥ್ಯ ಮಿಷನ್ ಎಂದು ಬರೆದಿರುವ ಕೆಂಪು ಮತ್ತು ಬಿಳಿ ಬೆಡ್ ಶೀಟ್‌ನಲ್ಲಿ ಸುತ್ತಿದ 50 ವರ್ಷದ ವ್ಯಕ್ತಿಯ ಅಪರಿಚಿತ ಶವವನ್ನು ಪೊಲೀಸರು ಪತ್ತೆ ಮಾಡಿದಾಗ ಈ ಘಟನೆ ಬೆಳಕಿಗೆ ಬಂದಿದೆ.

ಔರಂಗಾಬಾದ್‌ನ ಮಾಡೆಲ್ ಸದರ್ ಆಸ್ಪತ್ರೆಯ ಇಬ್ಬರು ಸಿಬ್ಬಂದಿಗಳಾದ ಹರೇಂದ್ರ ಕುಮಾರ್- ರೋಗಿಗಳನ್ನು ಸ್ಟ್ರೆಚರ್‌ನಲ್ಲಿ ತುಂಬಿಕೊಂಡರೆ ಮತ್ತು ಸ್ಟ್ರೆಚರ್ ಸಿಬ್ಬಂದಿ ಸ್ರಂಜನ್ ಕುಮಾರ್- ಇಬ್ಬರು ಮಾನಸಿಕ ಅಸ್ವಸ್ಥ ರೋಗಿಗಳಿಗೆ ಬೆಡ್‌ಶೀಟ್‌ಗಳನ್ನು ಸುತ್ತಿ ಆಸ್ಪತ್ರೆಯ ಆಂಬ್ಯುಲೆನ್ಸ್‌ಗೆ ಹಾಕಿದರು ಮತ್ತು ಕುಗ್ರಾಮವೊಂದರಲ್ಲಿ ಅವರನ್ನು ಬಿಟ್ಟು ತೆರಳಿದ್ದರು ಎಂದು  ಪೊಲೀಸರು ಹೇಳಿದ್ದಾರೆ.

ಸ್ಟ್ರೆಚರ್ ಮೇಲೆ ಕರೆದೊಯ್ಯುವಾಗ ಇಬ್ಬರು ಜೀವಂತವಾಗಿದ್ದರು ಎಂದು ಸುರಂಜನ್ ಕುಮಾರ್ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ರೋಗಿಗಳಲ್ಲಿ ಒಬ್ಬರು ನಂತರ ಸಾವನ್ನಪ್ಪಿದರು, ಇನ್ನೊಬ್ಬರು ಇನ್ನೂ ಪತ್ತೆಯಾಗಿಲ್ಲ. ತನಿಖೆ ಮುಂದುವರಿದಿದ್ದು, ನಾಪತ್ತೆಯಾಗಿರುವ ರೋಗಿಗಾಗಿ ಶೋಧ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಸ್ಪತ್ರೆಯ ಡೆಪ್ಯುಟಿ ಸೂಪರಿಂಟೆಂಡೆಂಟ್ ಕುಮಾರ್ ಅಶುತೋಷ್ ಮತ್ತು ಮ್ಯಾನೇಜರ್ ಹೇಮಂತ್ ರಾಜನ್ ಅವರ ಆದೇಶವನ್ನು ಪಾಲಿಸಿದ್ದೇವೆ. ಅವರನ್ನು ದೂರದ ಪ್ರದೇಶಗಳಿಗೆ ಬಿಡುವಂತೆ ಆಸ್ಪತ್ರೆಯ ಅಧಿಕಾರಿಗಳು ನಮ್ಮನ್ನು ಕೇಳಿಕೊಂಡರು ಎಂದು ಹರೇಂದ್ರ ಮತ್ತು ಸುರಂಜನ್ ತನಿಖೆಯ ಸಮಯದಲ್ಲಿ ಪೊಲೀಸರಿಗೆ ತಿಳಿಸಿದ್ದಾರೆ.

ಆರರಿಂದ ಏಳು ದಿನಗಳ ಹಿಂದೆ ಇಬ್ಬರು ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ಇಬ್ಬರೂ ಆಸ್ಪತ್ರೆಯ ಆವರಣವನ್ನು ಕೊಳಕು ಮಾಡುತ್ತಿದ್ದರು ಎಂದು ಆಸ್ಪತ್ರೆಯ ಆಡಳಿತ ಮಂಡಳಿ ತಿಳಿಸಿದೆ.

ಆಸ್ಪತ್ರೆಯ ಕುಮಾರ್ ಅಶುತೋಷ್, ಹೇಮಂತ್ ರಾಜನ್, ಮೇಲ್ವಿಚಾರಕ ಶೈಲೇಶ್ ಕುಮಾರ್ ಮಿಶ್ರಾ, ಹರೇಂದರ್ ಕುಮಾರ್, ಆಂಬ್ಯುಲೆನ್ಸ್ ಚಾಲಕ ಶಿವಶಂಕರ್ ಕುಮಾರ್ ಮತ್ತು ಸ್ಟ್ರೆಚರ್ ಸಿಬ್ಬಂದಿ ಸುರಂಜನ್ ಮತ್ತು ಧರ್ಮಪಾಲ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 105 ಅಡಿಯಲ್ಲಿ ಸಬ್ ಇನ್ಸ್‌ಪೆಕ್ಟರ್ ದೀಪಕ್ ಕುಮಾರ್ ರೈ ಅವರ ಹೇಳಿಕೆಯ ಆಧಾರದ ಮೇಲೆ ಪೊಲೀಸ್ ದೂರು ದಾಖಲಿಸಲಾಗಿದೆ.

ನಾವು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದೇವೆ. ಈವರೆಗೆ ಯಾರ ಬಂಧನವೂ ಆಗಿಲ್ಲ. ಎರಡನೇ ರೋಗಿಯ ಹುಡುಕಾಟವೂ ನಡೆಯುತ್ತಿದೆ ಎಂದು ಔರಂಗಾಬಾದ್ ಎಸ್ಪಿ ಅಂಬರೀಷ್ ರಾಹುಲ್ ಹೇಳಿದ್ದಾರೆ.

ನವೆಂಬರ್ 12ರ ಬೆಳ್ಳಂಬೆಳಗ್ಗೆ ಪೋಖ್ರಾಹಿ ದೇವಸ್ಥಾನದ ಬಳಿ ಆಂಬ್ಯುಲೆನ್ಸ್ ನಿಂದ ಬೆಡ್‌ ಶೀಟ್ ತುಂಬಿದ್ದ ದೇಹಗಳನ್ನು ಎಸೆಯುವುದನ್ನು ನೋಡಿದ್ದೇನೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿರುವುದು ಪ್ರಕರಣಕ್ಕೆ ತಿರುವು ನೀಡಿದೆ.

“ನವೆಂಬರ್ 14 ರಂದು ಪೊಲೀಸ್ ಠಾಣೆಯಲ್ಲಿಈ ಕುರಿತು ಅಸ್ವಾಭಾವಿಕ ಸಾವಿನ ಪ್ರಕರಣವನ್ನು ದಾಖಲಿಸಲಾಗಿತ್ತು. ಆದರೆ ಪೊಲೀಸರು ಶವವಾಗಿ ಬಿದ್ದಿದ್ದ ಅಪರಿಚಿತ ವ್ಯಕ್ತಿಯ ವಿವರಗಳನ್ನು ಅವನ ಗುರುತಿಗೆ ಪ್ರಕಟನೆಯನ್ನು ಹೊರಡಿಸಲಾಗಿತ್ತು ಎಂದು ಬರುನ್ ಪೊಲೀಸ್ ಠಾಣೆಯ ಠಾಣಾಧಿಕಾರಿ ಸೌರಭ್ ಕುಮಾರ್ ಹೇಳಿದರು. .

ಜಿಲ್ಲಾಡಳಿತವು ತನಿಖೆಗೆ ಆದೇಶಿಸಿ ತ್ರಿಸದಸ್ಯ ತಂಡವನ್ನು ರಚಿಸಿದ್ದು, ವರದಿ ಸಲ್ಲಿಸಿದೆ. ಪೊಲೀಸ್ ತಂಡವು ಘಟನಾ ಸ್ಥಳದಲ್ಲಿ ಮತ್ತು ಆಸ್ಪತ್ರೆಯ ಆವರಣದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಿದ್ದು, ಇದರಲ್ಲಿ ಸಿಬ್ಬಂದಿ ಆಂಬ್ಯುಲೆನ್ಸ್‌ನೊಳಗೆ ಇಬ್ಬರು ರೋಗಿಗಳನ್ನು ಹಾಕಿರುವುದನ್ನು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಆಸ್ಪತ್ರೆಯ ಮ್ಯಾನೇಜರ್ ಹೇಮಂತ್ ರಾಜನ್ ಅವರನ್ನು ಪ್ರಶ್ನಿಸಿದಾಗ, ಇಬ್ಬರು ರೋಗಿಗಳನ್ನು ಸಸಾರಾಮ್ ಮೂಲದ ನಾರಾಯಣ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಶಿಫಾರಸ್ಸು ಮಾಡಲಾಗಿತ್ತು ಎಂದರು. ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕೇಳಿದಾಗ  ಅವರಿಗೆ ನೀಡಲು ಸಾಧ್ಯವಾಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತಮ ಸ್ಥಿತಿಯಲ್ಲಿದ್ದ ರೋಗಿಯನ್ನು ಆಸ್ಪತ್ರೆಯಿಂದ 20 ಕಿಮೀ ದೂರದಲ್ಲಿರುವ ಟೆಂಗ್ರಾ ಮೋರ್‌ನಲ್ಲಿ ಬಿಡಲಾಗಿತ್ತು, ಹೆಚ್ಚು ಗಂಭೀರವಾದ ಎರಡನೇ ರೋಗಿಯನ್ನು 20 ಕಿಮೀ, ಪೊಖ್ರಾಹಿ ಗ್ರಾಮದ ಬಳಿಯ ದೇವಸ್ಥಾನದ ಬಳಿ ಬಿಡಲಾಗಿತ್ತುಎಂದು ಹೇಳಿರುವ ಆಸ್ಪತ್ರೆಯ ಸಿಬ್ಬಂದಿ ಹರೇಂದ್ರ ಕುಮಾರ್ ಮತ್ತು ಸ್ರಂಜನ್ ಅವರನ್ನುಪೊಲೀಸರು  ಬಂಧಿಸಿದ್ದಾರೆ.

ಸಾವಿನ ನಿಖರವಾದ ಕಾರಣವನ್ನು ಕಂಡುಹಿಡಿಯಲು ವಿಧಿ ವಿಜ್ಞಾನ ಸಂಸ್ಥೆಗೆ ಕಳುಹಿಸಲಾಗಿದ್ದು ಶವವನ್ನು ಸಂರಕ್ಷಿಸಲಾಗಿದೆ ಎಂದು ಪೋಸ್ಟ್‌ಮಾರ್ಟಮ್ ವರದಿ ಹೇಳಿದೆ.

ಇದನ್ನೂ ಓದಿ…ರೈತರ ಹೋರಾಟಕ್ಕೆ ಜಯ : ಎಲ್ಲಾ ಕೃಷಿ ಉತ್ಪನ್ನಗಳಿಗೆ ‘ಎಂಎಸ್‌ಪಿ’ ಘೋಷಿಸಿದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....