Homeಮುಖಪುಟನಾಂದೇಡ್‌ನಲ್ಲಿ ಸರಣಿ ಸಾವು ಸಂಭವಿಸಿದ ಆಸ್ಪತ್ರೆಯ ಶೌಚಾಲಯವನ್ನು ಡೀನ್ ಕೈಯಲ್ಲೇ ಶುಚಿಗೊಳಿಸಿದ ಸಂಸದ

ನಾಂದೇಡ್‌ನಲ್ಲಿ ಸರಣಿ ಸಾವು ಸಂಭವಿಸಿದ ಆಸ್ಪತ್ರೆಯ ಶೌಚಾಲಯವನ್ನು ಡೀನ್ ಕೈಯಲ್ಲೇ ಶುಚಿಗೊಳಿಸಿದ ಸಂಸದ

- Advertisement -
- Advertisement -

ಮಹಾರಾಷ್ಟ್ರದ ನಾಂದೇಡ್‌ನ ಸರ್ಕಾರಿ ಆಸ್ಪತ್ರೆಯಲ್ಲಿ 48 ಗಂಟೆಗಳಲ್ಲಿ 31 ಜನರು ಸಾವನ್ನಪ್ಪಿದ ಆಸ್ಪತ್ರೆಯ ಕೊಳಕು ಶೌಚಾಲಯವನ್ನು ಆಡಳಿತಾರೂಢ ಶಿವಸೇನೆಯ ಸಂಸದರು ಡೀನ್‌ ಕೈಯಲ್ಲಿ ಶುಚಿಗೊಳಿಸಿದ ಘಟನೆ ನಡೆದಿದೆ.

ಮಹಾರಾಷ್ಟ್ರದ ಆಸ್ಪತ್ರೆಯಲ್ಲಿನ ಈ ಸಾವು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು. ಆ ಬಳಿಕ ಶಿವಸೇನೆ (ಶಿಂಧೆ ಬಣ) ಸಂಸದ ಹೇಮಂತ್ ಪಾಟೀಲ್ ಅವರು ಮಂಗಳವಾರ ಶಂಕರರಾವ್ ಚವ್ಹಾಣ್ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಈ ವೇಳೆ ಆಸ್ಪತ್ರೆಯಲ್ಲಿ ಕೊಳಚೆ ಶೌಚಾಲಯ  ಇರುವುದನ್ನು ಗಮನಿಸಿದ ಪಾಟೀಲ್ ಆಸ್ಪತ್ರೆಯ ಡೀನ್ ಶ್ಯಾಮರಾವ್ ವಾಕೋಡೆ ಅವರನ್ನು ಕರೆಸಿ ಅದನ್ನು ಸ್ವಚ್ಛಗೊಳಿಸುವಂತೆ ಸೂಚಿಸಿದ್ದಾರೆ.

ಡೀನ್ ಶೌಚಾಲಯವನ್ನು ಶುಚಿಗೊಳಿಸುವಾಗ ಸಂಸದರು ನಿಂತುಕೊಂಡು ಪೈಪ್‌ನ್ನು ಹಿಡಿದಿರುವುದು ವೀಡಿಯೊಗಳಲ್ಲಿ ಕಂಡು ಬಂದಿದೆ. ಡೀನ್‌ ಟಾಯ್ಲೆಟ್‌ ಸ್ವಚ್ಛಗೊಳಿಸುವಾಗ ಸಂಸದರು ಟಾಯ್ಲೆಟ್‌ಗೆ ಪೈಪ್‌ ಮೂಲಕ ನೀರು ಹಾಕುವುದು ಕಂಡು ಬಂದಿದೆ.

ಸೋಮವಾರ ಇದೇ ಆಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 24 ಸಾವುಗಳು ಸಂಭವಿಸಿದೆ ಮತ್ತು ಮಂಗಳವಾರ 48 ಗಂಟೆಗಳಲ್ಲಿ ಸಾವಿನ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಇನ್ನು 71 ರೋಗಿಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.

ಆದರೆ ಡೀನ್ ವಕೋಡೆ ಅವರು ವೈದ್ಯಕೀಯ ನಿರ್ಲಕ್ಷ್ಯದ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಆಸ್ಪತ್ರೆಯಲ್ಲಿ ಔಷಧಿಗಳು ಅಥವಾ ವೈದ್ಯರ ಕೊರತೆಯಿಲ್ಲ ಎಂದು ಹೇಳಿದ್ದಾರೆ. ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗಿದ್ದರೂ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ಹೇಳಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ,  ಬಿಜೆಪಿ ಸರ್ಕಾರ ಪ್ರಚಾರಕ್ಕಾಗಿ ಸಾವಿರಾರು ಕೋಟಿ ಖರ್ಚು ಮಾಡುತ್ತದೆ. ಆದರೆ ಮಕ್ಕಳಿಗೆ  ಔಷಧಿಗಳನ್ನು ಖರೀದಿಸಲು ಅವರ ಬಳಿ ಹಣವಿಲ್ಲ ಎಂದು  ಎಕ್ಸ್‌ನಲ್ಲಿ ಟೀಕಿಸಿದ್ದಾರೆ.

ಇದನ್ನು ಓದಿ: ಬಿಜೆಪಿ ಸರ್ಕಾರ ಪ್ರಚಾರಕ್ಕೆ ಕೋಟ್ಯಂತರ ಖರ್ಚು ಮಾಡುತ್ತದೆ, ಆದರೆ ಮಕ್ಕಳಿಗೆ ಔಷಧಕ್ಕೆ ಹಣವಿಲ್ಲ: ರಾಹುಲ್ ಗಾಂಧಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರನ್ನು ಪ್ರಭಾವಿಸಲು ಬಿಜೆಪಿ ಹಣ – ಬೆದರಿಕೆ ಬಳಸುತ್ತಿದೆ: ಮಮತಾ ಆರೋಪ

ಬಿಜೆಪಿ ಹಣ ಮತ್ತು ಬೆದರಿಕೆಯನ್ನು ಬಳಸಿ ಜನರನ್ನು ಪ್ರಭಾವಿಸುತ್ತಿದೆ ಎಂದು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. "ತಮ್ಮ ಪಕ್ಷದ ಕಾರ್ಯಕರ್ತರ ವಿರುದ್ಧ ಪೊಲೀಸರ ದೌರ್ಜನ್ಯಗಳು ಹೆಚ್ಚಾಗಿವೆ, ಸರ್ಕಾರಿ ಅಧಿಕಾರಿಗಳು...

ಬ್ರೆಜಿಲ್ ಚುನಾವಣೆ: ಟ್ರಂಪ್ ಬೆಂಬಲಿತ ಬಲಪಂಥೀಯ ಬೋಲ್ಸೊನಾರೊಗೆ ಸೋಲು; ನಾಲ್ಕನೇ ಬಾರಿಗೆ ಎಡಪಂಥೀಯ ಲುಲಾಗೆ ಗೆಲುವು 

ಬ್ರೆಜಿಲ್ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರು ತೀವ್ರ ಬಲಪಂಥೀಯ ಎದುರಾಳಿ ಫ್ಲಾವಿಯೊ ಬೋಲ್ಸೊನಾರೊ ಅವರನ್ನು ಸೋಲಿಸಿ ಐತಿಹಾಸಿಕ ಗೆಲುವು ಸಾಧಿಸಿದ್ದಾರೆ. ಈ ಫಲಿತಾಂಶ ಬ್ರೆಜಿಲ್‌ನ...

ಭಾರತ-ಚೀನಾ ಗಡಿ ಸಮಸ್ಯೆಗಳ ಕುರಿತ 26 ರೆಡ್ಡಿಟ್ ಪೋಸ್ಟ್‌ಗಳಿಗೆ ನಿರ್ಬಂಧ: ಕೇಂದ್ರದ ರಹಸ್ಯ ಆದೇಶದ ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಐಎಫ್‌ಎಫ್

ಭಾರತ-ಚೀನಾ ಗಡಿ ವಿವಾದಕ್ಕೆ ಸಂಬಂಧಿಸಿದ ಚರ್ಚೆಗಳು, ಸೇನಾ ದೃಶ್ಯಗಳ ಪರಿಶೀಲನೆ, ಉಪಗ್ರಹ ಚಿತ್ರಗಳ ವರದಿ ಮತ್ತು ಅರುಣಾಚಲ ಪ್ರದೇಶದ ಮೇಲಿನ ಚೀನಾದ ಹಕ್ಕುಗಳ ಕುರಿತು ಪ್ರಕಟವಾಗಿದ್ದ 26 ರೆಡ್ಡಿಟ್ ಪೋಸ್ಟ್‌ಗಳನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ....

ಅಮಿತ್ ಶಾ ಕುರಿತ ಹೇಳಿಕೆಗಳಿಗೆ ಸಂಬಂಧಿಸಿದ ಮಾನನಷ್ಟ ಪ್ರಕರಣದಿಂದ ರಾಹುಲ್ ಗಾಂಧಿ ಖುಲಾಸೆ

ಉತ್ತರ ಪ್ರದೇಶದ ಸುಲ್ತಾನ್‌ಪುರದಲ್ಲಿರುವ ಸಂಸದರು/ಶಾಸಕರ ವಿಶೇಷ ನ್ಯಾಯಾಲಯವು, ಹಿರಿಯ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ವಿರುದ್ಧ ದಾಖಲಾಗಿದ್ದ 2018ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ವಜಾಗೊಳಿಸುವ ಮೂಲಕ ಅವರಿಗೆ ದೊಡ್ಡ ನಿರಾಳತೆಯನ್ನು ನೀಡಿದೆ....

ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ರಚನೆಯಾಗದಂತೆ ತಡೆಯಲು ಎಐಎಂಐಎಂ ಶ್ರಮಿಸಲಿದೆ: ಅಸದುದ್ದೀನ್ ಓವೈಸಿ

ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ರಚನೆಯಾಗದಂತೆ ನೋಡಿಕೊಳ್ಳಲು ತಮ್ಮ ಪಕ್ಷವು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಿದೆ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸದುದ್ದೀನ್ ಓವೈಸಿ ಭಾನುವಾರ (ಅ.25) ಹೇಳಿದ್ದಾರೆ. ಶಮ್ಲಿ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ: ಕಂಪ್ಯೂಟರ್ ಸಹಾಯಕರು ಮಾಡಿದ ನಮೂದುಗಳ ಮರುಪರಿಶೀಲನೆಗೆ ಯುಪಿ ಸಿಇಒ ಆದೇಶ

ಉತ್ತರ ಪ್ರದೇಶದ ಮತದಾರರ ಪಟ್ಟಿಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪಗಳ ಬೆನ್ನಲ್ಲೇ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಕಂಪ್ಯೂಟರ್ ಸಹಾಯಕರು ಮಾಡಿದ ಎಲ್ಲ ನಮೂದುಗಳನ್ನು ಕಡ್ಡಾಯವಾಗಿ ಮರುಪರಿಶೀಲಿಸುವಂತೆ ರಾಜ್ಯದ ಮುಖ್ಯ ಚುನಾವಣಾಧಿಕಾರಿ...

ಮಧ್ಯಪ್ರದೇಶ | ನರ್ಮದಾ ನದಿ ತೀರದಲ್ಲಿ 300ಕ್ಕೂ ಹೆಚ್ಚು ವೋಟರ್ ಐಡಿಗಳು ಪತ್ತೆ : ‘ಮತಗಳ್ಳತನ’ಕ್ಕೆ ಸ್ಪಷ್ಟ ಪುರಾವೆ ಎಂದ ಕಾಂಗ್ರೆಸ್

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಮಂಡ್ಲೇಶ್ವರ್ ಘಾಟ್‌ನಲ್ಲಿರುವ ನರ್ಮದಾ ನದಿಯ ದಡದಲ್ಲಿ ಭಾನುವಾರ (ಅ.25) ಒಟ್ಟು 343 ಮತದಾರರ ಗುರುತಿನ ಚೀಟಿಗಳು (ವೋಟರ್ ಐಡಿಗಳು) ಪತ್ತೆಯಾಗಿದ್ದು, ಇವೆಲ್ಲವೂ ಇಂದೋರ್‌ನ ವಿಳಾಸಗಳನ್ನು ಹೊಂದಿವೆ ಎಂದು newindianexpress.com...

ಲೀಟರ್ ಫಿನೈಲ್‌ಗೆ 33,500 ರೂ, ಎಲ್‌ಇಡಿ ಬಲ್ಬ್‌ಗೆ 11,800 ರೂ!: ಬಿಜೆಪಿ ಆಡಳಿತದ ಮಧ್ಯಪ್ರದೇಶ ನಗರಾಡಳಿತದಲ್ಲಿ ಬೃಹತ್ ಭ್ರಷ್ಟಾಚಾರ ಬಯಲಿಗೆಳೆದ ಹಿರಿಯ ಐಎಎಸ್ ಅಧಿಕಾರಿ!

ಮಧ್ಯಪ್ರದೇಶದ ನಗರಾಡಳಿತ ಇಲಾಖೆಯಲ್ಲಿ ನಡೆದಿರುವ ಕೋಟ್ಯಂತರ ರೂಪಾಯಿ ಅಕ್ರಮ ಖರೀದಿ ಪ್ರಕರಣವು ಈಗ ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದೆ. ವಿವಿಧ ನಗರ ಸ್ಥಳೀಯ ಸಂಸ್ಥೆಗಳು (ULBs) ಮತ್ತು ಪುರಸಭೆಗಳಲ್ಲಿ ಅತ್ಯಗತ್ಯ ವಸ್ತುಗಳನ್ನು ಮಾರುಕಟ್ಟೆ...

ತಮಿಳುನಾಡು| 42 ವರ್ಷಗಳ ನಂತರ ದಲಿತ ಕೇರಿಗೆ ಪ್ರವೇಶಿಸಿದ ದೇವಾಲಯದ ರಥ

42 ವರ್ಷಗಳ ಸುದೀರ್ಘ ಅಂತರದ ನಂತರ, ದೇವಾಲಯದ ರಥವೊಂದು ದಲಿತರು ವಾಸಿಸುವ ಪ್ರದೇಶಕ್ಕೆ ಪ್ರವೇಶಿಸಿರುವ ಘಟನೆ ತಮಿಳುನಾಡಿನ ಕಾಂಚೀಪುರ ಜಿಲ್ಲೆಯ ವಾಲಾಜಾಬಾದ್ ಸಮೀಪವಿರುವ ಪುತಾಗರಂ ಗ್ರಾಮದಲ್ಲಿ ನಡೆದಿದೆ. ಜಿಲ್ಲಾಡಳಿತದ ಸೂಚನೆಯ ಮೇರೆಗೆ ಭಾನುವಾರ...

ವಿದ್ಯಾರ್ಥಿ ಸಂಘದ ಚುನಾವಣೆ ಸೇರಿದಂತೆ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಜಾಮಿಯಾ ಮಿಲ್ಲಿಯಾ ವಿವಿ : ಹೋರಾಟ ಕೈಬಿಡಲು ವಿದ್ಯಾರ್ಥಿಗಳ ನಕಾರ

ಕ್ಯಾಂಪಸ್‌ನಲ್ಲಿ ಚುನಾಯಿತ ಪ್ರತಿನಿಧಿಗಳ ಮಂಡಳಿಯನ್ನು ಮರುಸ್ಥಾಪಿಸಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು ನಡೆಸಿದ ಸುದೀರ್ಘ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯವು (ಜೆಎಂಐ) ಸುಮಾರು 20 ವರ್ಷಗಳ ನಂತರ ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ಪುನರಾರಂಭಿಸುವುದಾಗಿ...