Homeಮುಖಪುಟ'ಅತ್ಯಾಚಾರ, ಆ್ಯಸಿಡ್ ದಾಳಿ ಸಂತ್ರಸ್ತರಿಗೆ ಆಸ್ಪತ್ರೆಗಳು ಉಚಿತ ಚಿಕಿತ್ಸೆ ನಿರಾಕರಿಸುವಂತಿಲ್ಲ' : ದೆಹಲಿ ಹೈಕೋರ್ಟ್

‘ಅತ್ಯಾಚಾರ, ಆ್ಯಸಿಡ್ ದಾಳಿ ಸಂತ್ರಸ್ತರಿಗೆ ಆಸ್ಪತ್ರೆಗಳು ಉಚಿತ ಚಿಕಿತ್ಸೆ ನಿರಾಕರಿಸುವಂತಿಲ್ಲ’ : ದೆಹಲಿ ಹೈಕೋರ್ಟ್

- Advertisement -
- Advertisement -

ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಹಾಗೂ ನರ್ಸಿಂಗ್ ಹೋಂಗಳು ಅತ್ಯಾಚಾರ, ಆ್ಯಸಿಡ್ ದಾಳಿ ಮತ್ತು ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತರಿಗೆ ವೈದ್ಯಕೀಯ ಚಿಕಿತ್ಸೆಯನ್ನು ನಿರಾಕರಿಸುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ.

16 ವರ್ಷದ ಬಾಲಕಿಯ ಮೇಲೆ ಆಕೆಯ ತಂದೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಪ್ರತಿಭಾ ಎಂ ಸಿಂಗ್ ಮತ್ತು ಅಮಿತ್ ಶರ್ಮಾ ಅವರ ಪೀಠ ಸೋಮವಾರ (ಡಿ.23) ಹಲವು ನಿರ್ದೇಶನಗಳನ್ನು ನೀಡಿದೆ.

ಎಲ್ಲಾ ಆಸ್ಪತ್ರೆಗಳು, ನರ್ಸಿಂಗ್ ಹೋಂಗಳು, ಕ್ಲಿನಿಕ್‌ಗಳು, ವೈದ್ಯಕೀಯ ಕೇಂದ್ರಗಳು ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯಕ್ಕೊಳಗಾದವರು, ಪೋಕ್ಸೋ ಪ್ರಕರಣದ ಸಂತ್ರಸ್ತರು ಮತ್ತು ಇಂತದ್ದೇ ಪ್ರಕರಣಗಳ ಇತರ ಸಂತ್ರಸ್ತರಿಗೆ ಉಚಿತ ವೈದ್ಯಕೀಯ ಆರೈಕೆ ಮತ್ತು ಚಿಕಿತ್ಸೆ ಒದಗಿಸುವುದು ಕರ್ತವ್ಯವಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಲೈಂಗಿಕ ದೌರ್ಜನ್ಯಕ್ಕೊಳಗಾದವರಿಗೆ ಚಿಕಿತ್ಸೆ ನಿರಾಕರಿಸುವುದು ಅಪರಾಧವಾಗಿದ್ದು, ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಮತ್ತು ಆಡಳಿತ ಮಂಡಳಿಗೆ ದಂಡ ವಿಧಿಸಬಹುದು ಎಂದು ನ್ಯಾಯಾಲಯ ತಿಳಿಸಿದೆ.

ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳಲ್ಲಿ ಸಂತ್ರಸ್ತರು ವೈದ್ಯಕೀಯ ಚಿಕಿತ್ಸೆ ಪಡೆಯುವಲ್ಲಿ ಸಮಸ್ಯೆ ಎದುರಿಸುತ್ತಿದ್ದಾರೆ ಎಂದಿರುವ ಪೀಠ, ಉಚಿತ ಚಿಕಿತ್ಸೆ ಎಂದರೆ, ಸಂತ್ರಸ್ತರಿಗೆ ಪ್ರಾಥಮಿಕ ಚಿಕಿತ್ಸೆ, ಅಗತ್ಯವಿದ್ದರೆ ದೀರ್ಘಾವದಿಯ ಚಿಕಿತ್ಸೆ, ರೋಗ ನಿರ್ಣಯ ಪರೀಕ್ಷೆಗಳು, ಮಾನಸಿಕ ಸಮಾಲೋಚನೆ (ಆಪ್ತ ಸಮಾಲೋಚನೆ) ಯು ಸೇರಿದೆ ಎಂದು ವಿವರಿಸಿದೆ.

ವೈದ್ಯಕೀಯ ಕೇಂದ್ರಗಳಿಗೆ ನ್ಯಾಯಾಲಯದ ನಿರ್ದೇಶಿಸಿದ ಮಾರ್ಗಸೂಚಿಗಳು

  • ದೆಹಲಿಯ ಪ್ರತಿಯೊಂದು ವೈದ್ಯಕೀಯ ಕೇಂದ್ರಗಳು ‘ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಸಾಮೂಹಿಕ ಅತ್ಯಾಚಾರ, ಆ್ಯಸಿಡ್ ದಾಳಿಯ ಸಂತ್ರಸ್ತರಗೆ ಉಚಿತ ಹೊರರೋಗಿ ಮತ್ತು ಒಳರೋಗಿ ವೈದ್ಯಕೀಯ ಚಿಕಿತ್ಸೆ’ ಲಭ್ಯವಿದೆ ಎಂದು ಬೋರ್ಡ್ ಹಾಕಬೇಕು.
  • ಅತ್ಯಾಚಾರ ಸಂತ್ರಸ್ತೆ ಆಸ್ಪತ್ರೆಗೆ ಬಂದ ತಕ್ಷಣ ಅವರನ್ನು ಪರೀಕ್ಷಿಸಿ ಚಿಕಿತ್ಸೆ ಪ್ರಾರಂಭಿಸಬೇಕು. ಅಗತ್ಯವಿದ್ದರೆ ಲೈಂಗಿಕ ಸಂಪರ್ಕದ ಮೂಲಕ ಹರಡುವ ಹೆಚ್‌ಐವಿಯಂತಹ ರೋಗಗಳನ್ನು ತಡೆಗಟ್ಟಲು ಚಿಕಿತ್ಸೆ ನೀಡಬೇಕು. ಸಂತ್ರಸ್ತೆಗೆ ಆಪ್ತ ಸಮಾಲೋಚನೆಯ ಮೂಲಕ ಮಾನಸಿಕ ಚಿಕಿತ್ಸೆ ಒದಗಿಸಬೇಕು. ಸಂತ್ರಸ್ತೆ ಗರ್ಭಿಣಿಯಾಗುವ ಸಾಧ್ಯತೆಯಿದ್ದರೆ, ಗರ್ಭ ನಿರೋಧಕ ನೀಡಬೇಕು.
  • ತುರ್ತು ಸಂದರ್ಭಗಳಲ್ಲಿ, ಸಂತ್ರಸ್ತೆಯನ್ನು ದಾಖಲಿಸಿಕೊಳ್ಳಲು ಸಂಬಂಧಪಟ್ಟ ವೈದ್ಯಕೀಯ ಕೇಂದ್ರಗಳು ಯಾವುದೇ ಗುರುತಿನ ಚೀಟಿಗಳನ್ನು, ದಾಖಲೆಗಳನ್ನು ನೀಡುವಂತೆ ಒತ್ತಾಯಿಸಬಾರದು.

ಮಗಳ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಅಪರಾಧಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ನ್ಯಾಯಾಲಯ ಮೇಲಿನ ನಿರ್ದೇಶನಗಳನ್ನು ನೀಡಿದೆ.

ಈ ಪ್ರಕರಣದಲ್ಲಿ ನ್ಯಾಯಾಲಯ ಮತ್ತು ದೆಹಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (ಡಿಎಲ್‌ಎಸ್‌ಎ) ಹಲವು ಭಾರೀ ಹಲವು ಬಾರಿ ಮಧ್ಯ ಪ್ರವೇಶಿಸಿದ ಹೊರತಾಗಿಯೂ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆಗಾಗಿ ಸಂತ್ರಸ್ತೆ ಕಾಯಬೇಕಾಯಿತು ಎಂಬ ಅಂಶವನ್ನು ನ್ಯಾಯಾಲಯ ಗಮನಿಸಿದೆ.

ಇದನ್ನೂ ಓದಿ : ಬಿಹಾರ | ಮುಸ್ಲಿಂ ಯುವಕನಿಗೆ ಥಳಿಸಿ, ಉಗುಳು ನೆಕ್ಕುವಂತೆ ಬಲವಂತ ; ಎಫ್‌ಐಆರ್‌ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...