Homeಕರ್ನಾಟಕಆಸ್ಪತ್ರೆಗಳ ಸೇವಾ ಶುಲ್ಕ ಸರ್ಕಾರಕ್ಕೆ ಸಂದಾಯವಾಗಲ್ಲ - ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಆಸ್ಪತ್ರೆಗಳ ಸೇವಾ ಶುಲ್ಕ ಸರ್ಕಾರಕ್ಕೆ ಸಂದಾಯವಾಗಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

- Advertisement -
- Advertisement -

ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕ ಸರ್ಕಾರಕ್ಕೆ ಸಂದಾಯವಾಗುವುದಿಲ್ಲ, ಅದಕ್ಕೂ ಗ್ಯಾರಂಟಿ ಯೋಜನೆಗಳಿಗೆ ತಳುಕು ಹಾಕುವುದರಲ್ಲಿ ಯಾವುದೆ ಅರ್ಥವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಗುರುವಾರ ಹೇಳಿದ್ದಾರೆ. ಆಸ್ಪತ್ರೆಗಳ ಸೇವಾ ಶುಲ್ಕ ಪರಿಷ್ಕರಣೆ ಒಂದು ಪ್ರಕ್ರಿಯೆಯಾಗಿದ್ದು, ಆ ಹಣವನ್ನು ಆಯಾ ಆಸ್ಪತ್ರೆಗಳ ಅಭಿವೃದ್ಧಿಗೆ ಬಳಸಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಆಸ್ಪತ್ರೆಗಳ ಸೇವಾ ಶುಲ್ಕ

ಈ ಕುರಿತು ಮಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವರು ಗುಂಡೂರಾವ್, “ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕ ಸರ್ಕಾರಕ್ಕೆ ಸಂದಾಯವಾಗುವುದಿಲ್ಲ. ಶುಲ್ಕ ಹೆಚ್ಚಳ ಮಾಡುವ ಮೂಲಕ ಗ್ಯಾರಂಟಿಗಳಿಗೆ ಹಣ ಹೊಂದಿಸಬೇಕಾದ ಪರಿಸ್ಥಿತಿ ಸರ್ಕಾರಕ್ಕೆ ಎದುರಾಗಿಲ್ಲ. ಅಷ್ಟಕ್ಕೂ ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕವನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ಆಯಾ ಆಸ್ಪತ್ರೆಗಳ ಅಭಿವೃದ್ಧಿಗೆ ಬಳಕೆ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಮೂರು, ನಾಲ್ಕು ವರ್ಷಗಳಿಗೊಮ್ಮೆ ಶುಲ್ಕ ಪರಿಷ್ಕರಣೆಯಾಗುವುದು ಸಹಜ ಪ್ರಕ್ರಿಯೆಯಾಗಿದೆ. ಇದನ್ನೇ ಮುಂದಿಟ್ಟುಕೊಂಡು ಗ್ಯಾರಂಟಿಗಳಿಗೆ ತಳುಕು ಹಾಕಿ ನೋಡುವುದು ಸರಿಯಲ್ಲ. ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕದ ಹಣವನ್ನು ಆಯಾ ಆಸ್ಪತ್ರೆಗಳ ಎಆರ್‌ಎಸ್‌ ಸಮಿತಿಗಳು ಚರ್ಚೆ ನಡೆಸಿ ಆಸ್ಪತ್ರೆಯ ಅಭಿವೃದ್ಧಿಗೆ ಬಳಕೆ ಮಾಡುತ್ತವೆ” ಎಂದು ಅವರು ಹೇಳಿದ್ದಾರೆ. ಆಸ್ಪತ್ರೆಗಳ ಸೇವಾ ಶುಲ್ಕ

“ಆಸ್ಪತ್ರೆಯ ಎಆರ್‌ಎಸ್‌ ಫಂಡ್‌ ಹೆಸರಲ್ಲಿ ಅನುದಾನ ಲಭ್ಯವಿರುತ್ತದೆ. ಆಸ್ಪತ್ರೆಯ ಸ್ವಚ್ಛತೆ, ದುರಸ್ಥಿ ಕಾರ್ಯಗಳು ಸೇರಿದಂತೆ ಆಸ್ಪತ್ರೆಗಳ ಅಭಿವೃದ್ಧಿಗಳಿಗೆ ಬಳಕೆ ಮಾಡಲಾಗುತ್ತದೆ. ಸರ್ಕಾರ ಕೇವಲ ಅನುಮತಿ ನೀಡುತ್ತದೆ ಅಷ್ಟೇ” ಎಂದು ಗುಂಡೂರಾವ್ ಹೇಳಿದ್ದಾರೆ.

“ಆರೋಗ್ಯ ಇಲಾಖೆ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಇನ್ನೂ ಪ್ರಾಥಮಿಕ ಹಂತದ ಚರ್ಚೆಯಲ್ಲಿದೆ. ಇಲ್ಲಿಯ ವರೆಗೂ ಸಾಮೂಹಿಕವಾಗಿ ಯಾವುದೇ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಹೆಚ್ಚಳ ಮಾಡಿಲ್ಲ. ಜನರಿಗೆ ಹೊರೆಯಾಗದಂತೆ ಸೇವಾ ಶುಲ್ಕ ಪರಿಷ್ಕರಣೆ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ. 15% ದಿಂದ 20% ದಷ್ಟು ಶುಲ್ಕ ಹೆಚ್ಚಳದ ಬಗ್ಗೆ ಚರ್ಚೆಗಳಿವೆ” ಎಂದು ಅವರು ತಿಳಿಸಿದ್ದಾರೆ.

“ಈ ಹಿಂದೆ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಮಾತ್ರ ಆರೋಗ್ಯ ಇಲಾಖೆಯ ಆಯುಕ್ತರ ಅನುಮತಿ ಪಡೆದು ಶುಲ್ಕ ಪರಿಷ್ಕರಣೆ ಮಾಡಲಾಗಿದೆ. ಉಳಿದ ಯಾವುದೇ ಆಸ್ಪತ್ರೆಗಳಲ್ಲಾಗಲಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಾಗಲಿ ಇಲ್ಲಿಯವರೆಗೂ ಸೇವಾ ಶುಲ್ಕದಲ್ಲಿ ಹೆಚ್ಚಳವಾಗಿಲ್ಲ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಜನರಿಗೆ ಹೊರೆಯಾಗದಂತೆ ಸೂಕ್ತ ರೀತಿಯಲ್ಲಿ ಶುಲ್ಕ ಪರಿಷ್ಕರಣೆ ಮಾಡುತ್ತೇವೆ” ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಇದನ್ನೂ ಓದಿ: ನಬಾರ್ಡ್ ಸಾಲ ಕಡಿತ : ರೈತರಿಗಾದ ಅನ್ಯಾಯ ಸರಿಪಡಿಸಲು ಸಿಎಂ ಸಿದ್ದರಾಮಯ್ಯ ಮನವಿ

ನಬಾರ್ಡ್ ಸಾಲ ಕಡಿತ : ರೈತರಿಗಾದ ಅನ್ಯಾಯ ಸರಿಪಡಿಸಲು ಸಿಎಂ ಸಿದ್ದರಾಮಯ್ಯ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...