Homeಕರ್ನಾಟಕಇಂದಿನಿಂದ ಹೋಟೆಲ್ ಊಟ-ತಿಂಡಿ ದರ ಏರಿಕೆ: ಕಾರಣವೇನು?

ಇಂದಿನಿಂದ ಹೋಟೆಲ್ ಊಟ-ತಿಂಡಿ ದರ ಏರಿಕೆ: ಕಾರಣವೇನು?

- Advertisement -
- Advertisement -

ಇಂದಿನಿಂದ ರಾಜ್ಯದಲ್ಲಿ ಹೋಟೆಲ್-ರೆಸ್ಟೋರೆಂಟ್-ಕೈಗಾಡಿಗಳಲ್ಲಿನ ಊಟ-ತಿಂಡಿ ದರ ಶೇ.10 ರಷ್ಟು ಹೆಚ್ಚಾಗಿದೆ. ಪ್ರತಿ ಪ್ಲೇಟ್ ಊಟ ತಿಂಡಿಯ ಮೇಲೆ 10 ರೂ ನಿಂದ 50 ರೂವರೆಗೆ ಏರಿಸಲಾಗಿದೆ. ಅದೇ ರೀತಿಯಾಗಿ ಕಾಫಿ-ಟೀ ಬೆಲೆ ಕೂಡ ಏರಿಕೆಯಾಗಿದೆ.

ಕಳೆದ ಮೂರು-ನಾಲ್ಕು ವರ್ಷಗಳಿಂದ ಹೋಟೆಲ್ ಊಟದ ದರದಲ್ಲಿ ತಟಸ್ಥತೆಯನ್ನು ಕಾಯ್ದುಕೊಂಡು ಬರಲಾಗಿತ್ತು. ಅದರಲ್ಲಿಯೂ ರಸ್ತೆ ಬದಿಯಲ್ಲಿರುವ ಚಿಕ್ಕ ಪುಟ್ಟ ಹೋಟೆಲ್‌ಗಳು, ಮೆಸ್‌ಗಳು ಮತ್ತು ಕೈಗಾಡಿಗಳು ಕೈಗೆಟುಕುವ ದರದಲ್ಲಿ ಊಟ- ತಿಂಡಿ ಮಾರುತ್ತಿದ್ದವು. ಈಗ ಅವುಗಳು ಸಹ ಬೆಲೆ ಏರಿಸಿವೆ. 30-35 ರೂಗಳಿಗೆಲ್ಲ ಬೆಳಗ್ಗಿನ ತಿಂಡಿ ತಿನ್ನಬಹುದಾಗಿತ್ತು. ಈಗ 50ರೂಗಳ ಗಡಿ ದಾಟಿದೆ. ಇನ್ನು ರೆಸ್ಟೋರೆಂಟ್‌ಗಲ್ಲಿ ಒಂದು ತಿಂಡಿಗೆ ಕನಿಷ್ಟ 100 ರೂ ಖರ್ಚು ಮಾಡಬೇಕಾಗಿದೆ.

ಕಾರಣವೇನು?

ಕೊರೊನಾ ಕಾರಣಕ್ಕೆ ಈ ಎರಡು ವರ್ಷ ಹೋಟೆಲ್ ಉದ್ಯಮ ಸಮರ್ಪಕವಾಗಿ ನಡೆದುದ್ದೆ ಇಲ್ಲ. ಲಾಕ್‌ಡೌನ್ ಕಾರಣಕ್ಕೆ ಹಲವಾರು ತಿಂಗಳುಗಳು ಮುಚ್ಚಿದ್ದರೆ ಇನ್ನುಳಿದ ಸಮಯದಲ್ಲಿ ಶೇ.50 ರಷ್ಟು ಜನಕ್ಕೆ ಮಾತ್ರ ಅನುಮತಿ, ಪಾರ್ಸೆಲ್ ಮಾತ್ರ ಎಂಬ ನಿಬಂಧನೆಗಳಿಗೆ ಒಳಪಟ್ಟಿತ್ತು. ಈಗ ಕೋವಿಡ್ ಮುಗಿದ ನಂತರ ಪೂರ್ಣ ಪ್ರಮಾಣದಲ್ಲಿ ಹೋಟೆಲ್‌ಗಳು ಆರಂಭವಾಗಿವೆ. ಆದರೆ ಹೋಟೆಲ್ ನಡೆಸಲು ಬೇಕಾಗುವ ಎಲ್ಲಾ ಸಾಮಾಗ್ರಿಗಳ ಬೆಲೆ ಏರಿಕೆಯಾಗಿದೆ. ಅಡುಗೆ ಎಣ್ಣೆ, ಗ್ಯಾಸ್, ತರಕಾರಿ, ದಿನಸಿ ಬೆಲೆ ದಿನೇ ದಿನೇ ಏರುತ್ತಿರುವುದರಿಂದ ಅನಿವಾರ್ಯವಾಗಿ ಬೆಲೆ ಏರಿಕೆ ಮಾಡಬೇಕಾಗಿದೆ.

ಅಡುಗೆ ಎಣ್ಣೆ:

80 ರೂಗಳಿಗೆ ಸಿಗುತ್ತಿದ್ದ ಒಂದು ಲೀಟರ್ ಅಡುಗೆ ಎಣ್ಣೆ ಈಗ 160-170 ರೂಗಳಿಗೆ ಏರಿಕೆಯಾಗಿದೆ. ಅಂದರೆ ಡಬಲ್ ಆಗಿದೆ. ಇದು ಹೋಟೆಲ್ ಉದ್ಯಮ ನಡೆಸುವವರಿಗೆ ಹೊರೆಯಾಗಿದೆ.

ವಾಣಿಜ್ಯ ಬಳಕೆಯ ಗ್ಯಾಸ್ ಬೆಲೆ ಏರಿಕೆ:

19 ಕೆಜಿಯ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಮೊನ್ನೆಯಷ್ಟೆ 250 ರೂ ಹೆಚ್ಚಳ ಮಾಡಲಾಗಿದೆ. ಹಾಗಾಗಿ ಬೆಂಗಳೂರಿನಲ್ಲಿ ಅದರ ಬೆಲೆ 2317.00 ರೂ.ಗೆ ಏರಿಕೆಯಾಗಿದೆ. ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು, ಟೀ ಸ್ಟಾಲ್‌ಗಳು ಮತ್ತು ಇತರ ವಾಣಿಜ್ಯ ಕೆಫೆಗಳು ಇದೇ 19 ಕೆಜಿ ಸಿಲಿಂಡರ್‌ ಅನ್ನು ಬಳಸಲಾಗುತ್ತವೆ.  2021ರ ನವೆಂಬರ್ ನಲ್ಲಿ 1700 ರೂ ಇದ್ದ ಗ್ಯಾಸ್ ಬೆಲೆ ಈಗ 2300 ರೂಗೆ ಏರಿದೆ. ಅಂದರೆ ಆರು ತಿಂಗಳಲ್ಲಿ 600 ರೂ ಹೆಚ್ಚಾಗಿದೆ!

ಪೆಟ್ರೋಲ್ -ಡೀಸೆಲ್ ಬೆಲೆಯಲ್ಲಿ ನಿರಂತರ ಏರಿಕೆ

2020ರ ಜೂನ್‌ನಲ್ಲಿ ಲೀಟರ್ ಪೆಟ್ರೋಲ್ ಬೆಲೆ 73.55ರೂ ಇತ್ತು. ಈಗ ಅದು 110 ರೂಗೆ ಏರಿದೆ. ಅಂದರೆ 36.50 ರೂ ಹೆಚ್ಚಳವಾಗಿದೆ. ಅಂದರೆ ಶೇ.50 ರಷ್ಟು ಏರಿಕೆಯಾಗಿದೆ. ಡೀಸೆಲ್ ಬೆಲೆ ಸಹ 66 ರೂ ಇದ್ದುದ್ದು ಈಗ 94 ರೂಗೆ ಏರಿಕೆಯಾಗಿದೆ. ಈ ಬೆಲೆ ಏರಿಕೆಯಿಂದ ಎಲ್ಲಾ ಸಾಗಣೆ ವಾಹನಗಳು ಬಾಡಿಗೆ ಏರಿಸಬೇಕಾಗುತ್ತದೆ. ಇದರಿಂದ ಆಹಾರ, ತರಕಾರಿ, ದಿನಸಿ, ಹಣ್ಣು ಸೇರಿದಂತೆ ದಿನಬಳಕೆಯ ಪ್ರತಿಯೊಂದು ವಸ್ತುಗಳ ಬೆಲೆ ಏರುತ್ತಿದೆ.

ಅದೇ ರೀತಿಯಾಗಿ ಟ್ರ್ಯಾಕ್ಟರ್, ಟಿಲ್ಲರ್, ಲಗೇಜ್ ವಾಹನಗಳಿಗೆ ಡೀಸೆಲ್ ಬೇಕಿರುವುದರಿಂದ ಕೃಷಿಯ ಮೇಲಿನ ಹೂಡಿಕೆ ಹೆಚ್ಚಾಗುತ್ತದೆ. ರೈತರಿಗೆ ಹೊರೆಯಾಗುತ್ತಿದೆ.

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ಕಾರಣವೇನು?

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇಂಧನಗಳ ಮೇಲಿನ ತೆರಿಗೆ ಹೆಚ್ಚು ಮಾಡುತ್ತಿದೆ. ಒಂದು ಲೀಟರ್ ಪೆಟ್ರೋಲ್‌ನ ಮೂಲ ಬೆಲೆ 38 ರೂಪಾಯಿಗಳಿದ್ದರೆ ಅದರ ಮೇಲೆ ಕೇಂದ್ರ ಸರ್ಕಾರವೊಂದೇ 37 ರೂ ಅಬಕಾರಿ ಸುಂಕ ವಿಧಿಸುತ್ತದೆ. ರಾಜ್ಯಗಳು ಸುಮಾರು 27 ರೂಪಾಯಿಯಷ್ಟು ವ್ಯಾಟ್ ತೆರಿಗೆ ವಿಧಿಸುತ್ತವೆ. ಸಾಗಣೆ, ಸಂಸ್ಕರಣೆ ಮತ್ತು ಡೀಲರ್ ಕಮಿಷನ್ 8ರೂ ಆಗುತ್ತದೆ. ಅಲ್ಲಿಗೆ ಪೆಟ್ರೋಲ್ ಬೆಲೆ 110 ರೂ ದಾಟುತ್ತದೆ.

ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ನಂತರ ಇಂಧನಗಳ ಮೇಲಿನ ತೆರಿಗೆಯಿಂದಲೇ 26,51,919 ಕೋಟಿ ರೂ ಸಂಗ್ರಹಿಸಿದ್ದಾರೆ! 26 ಲಕ್ಷ ಕೋಟಿ ರೂಗಳೆಂದರೆ ಕಳೆದ 10 ವರ್ಷದ ಇಡಿ ಕರ್ನಾಟಕ ಬಜೆಟ್‌ಗೆ ಸರಿಸಮವಾಗುತ್ತದೆ.

ನಾವು ವಾಹನಗಳನ್ನು ಬಳಸುತ್ತಿಲ್ಲ, ಹೀಗಾಗಿ ಪೆಟ್ರೋಲ್ ಬೆಲೆ ಏರಿಕೆಯಿಂದ ನಮಗೆ ತೊಂದರೆ ಇಲ್ಲ ಎಂದು ಯಾರಾದರೂ ಅಂದುಕೊಂಡರೆ ಅವರ ತಿಳಿವಳಿಕೆ ತಪ್ಪು ಎನ್ನುವುದರಲ್ಲಿ ಎರಡು ಮಾತಿಲ್ಲ. ಬೇಡಿ ಬದುಕುವವರೂ ಸೇರಿದಂತೆ ಈ ದೇಶದ ಪ್ರತಿಯೊಬ್ಬ ಪ್ರಜೆಯ ಜೀವನವೂ ಪ್ರತಿದಿನ ತುಟ್ಟಿಯಾಗುತ್ತಿದೆ.

ಕರ್ನಾಟಕದಲ್ಲಿ 2 ಕೋಟಿಗೂ ಅಧಿಕ ನೋಂದಾಯಿತ ವಾಹನಗಳಿವೆ. ಇವುಗಳ ಮಾಲಿಕರು ನೇರವಾಗಿ ಪೆಟ್ರೋಲ್ ಬೆಲೆ ಏರಿಕೆಯಿಂದ ಬಾಧಿತರಾದರೆ ಕರ್ನಾಟಕದ ಉಳಿದ 5 ಕೋಟಿ ಜನರು ಸಹ ಪೆಟ್ರೋಲ್ ಬೆಲೆ ಏರಿಕೆಯ ದುಷ್ಪರಿಣಾಮಗಳನ್ನು ಅನುಭವಿಸಬೇಕಾಗಿದೆ. ಇದರಿಂದ ಪಾರಾಗಲು ಇಂಧನಗಳ ಮೇಲಿನ ತೆರಿಗೆ ಇಳಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರುವುದೊಂದೆ ಜನರಿಗೆ ಉಳಿದಿರುವ ದಾರಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿ: ಮತ್ತೆ ಇಂಧನ ಬೆಲೆ ಏರಿಕೆ; ಎರಡು ವಾರಗಳಲ್ಲಿ ಪೆಟ್ರೋಲ್‌ ಬೆಲೆ 10 ರೂ. ಹೆಚ್ಚಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...