Homeಮುಖಪುಟಜಿಎಸ್‌ಟಿ ಕುರಿತ ಟೀಕೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕ್ಷಮೆ ಕೋರಿದ ಹೋಟೆಲ್ ಮಾಲೀಕ :...

ಜಿಎಸ್‌ಟಿ ಕುರಿತ ಟೀಕೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕ್ಷಮೆ ಕೋರಿದ ಹೋಟೆಲ್ ಮಾಲೀಕ : ವಿಡಿಯೋ ವೈರಲ್

- Advertisement -
- Advertisement -

ಜಿಎಸ್‌ಟಿ ಸಂಬಂಧಿತ ಸಮಸ್ಯೆಗಳ ಕುರಿತು ಪ್ರಶ್ನೆಯೆತ್ತಿ ತುಂಬಿದ ಸಭೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದ್ದಕ್ಕೆ ತಮಿಳುನಾಡಿನ ಕೊಯಮತ್ತೂರಿನ ಹೋಟೆಲ್ ಮಾಲೀಕರೊಬ್ಬರು ಕ್ಷಮೆ ಕೇಳಿದ್ದಾರೆ ಎನ್ನಲಾದ ವಿಡಿಯೋವೊಂದು ವೈರಲ್ ಆಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ ಹಲವರು, ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕ್ಷಮೆ ಕೇಳಿಸಿದ್ದಾರೆ ಎಂದು ಆರೋಪಿಸಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಎಕ್ಸ್‌ನಲ್ಲಿ ವಿಡಿಯೋಗಳನ್ನು ಹಂಚಿಕೊಂಡಿರುವ ಕೇರಳ ಕಾಂಗ್ರೆಸ್ “ಶ್ರೀ ಅನ್ನಪೂರ್ಣ ಕೊಯಮತ್ತೂರಿನ ಪ್ರಸಿದ್ಧ ಸಸ್ಯಾಹಾರಿ ರೆಸ್ಟೋರೆಂಟ್ ಸರಪಳಿಯಾಗಿದೆ. ಬುಧವಾರ, ರೆಸ್ಟೋರೆಂಟ್‌ನ ಮಾಲೀಕ ಶ್ರೀನಿವಾಸನ್ ಅವರು ಹಣಕಾಸು ಸಚಿವರ ಜೊತೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಅಲ್ಲಿ ಜಿಎಸ್‌ಟಿಯ ಸಮಸ್ಯೆಗಳ ಬಗ್ಗೆ ಬಹಳ ನಯವಾಗಿ ಅವರು ಪ್ರಶ್ನೆಗಳನ್ನು ಕೇಳಿದ್ದರು” ಎಂದು ತಿಳಿಸಿದೆ.

“ಸಮಸ್ಯೆಯೆಂದರೆ ಪ್ರತಿಯೊಂದು ವಸ್ತುವಿಗೂ ವಿಭಿನ್ನವಾಗಿ ಜಿಎಸ್‌ಟಿ ಅನ್ವಯಿಸಲಾಗುತ್ತದೆ. ಉದಾಹರಣೆಗೆ : ಬನ್ ಮೇಲೆ ಯಾವುದೇ ಜಿಎಸ್‌ಟಿ ಇಲ್ಲ. ನೀವು ಅದರಲ್ಲಿ ಕ್ರೀಮ್ ಹಾಕಿದರೆ ಶೇ.18 ಜಿಎಸ್‌ಟಿ ಬೀಳುತ್ತದೆ. ಹಾಗಾಗಿ, ಬನ್ ಮತ್ತು ಕ್ರೀಮ್ ಅನ್ನು ಪ್ರತ್ಯೇಕವಾಗಿ ಕೊಡಿ ಎಂದು ಗ್ರಾಹಕರು ಕೇಳುತ್ತಾರೆ. ಹಣ ಉಳಿಸಲು ಅವರೇ ಬನ್‌ ಮೇಲೆ ಕ್ರೀಂ ಹಾಕಿಕೊಳ್ಳುತ್ತಾರೆ. ಉತ್ತರ ಭಾರತದಲ್ಲಿ ಜನರು ಹೆಚ್ಚು ಸಿಹಿ ತಿನ್ನುತ್ತಾರೆ ಎಂಬ ಕಾರಣಕ್ಕೆ ಹಣಕಾಸು ಇಲಾಖೆ ಸಿಹಿ ಮೇಲೆ ಶೇ.5 ಮತ್ತು ನಮ್ಕೀನ್ ಮೇಲೆ ಶೇ.12 ಜಿಎಸ್‌ಟಿ ಹಾಕಿದೆ ಎಂದು ಜನರು ಹೇಳುತ್ತಾರೆ. ತಮಿಳುನಾಡಿನಲ್ಲಿ ಸಿಹಿ, ನಮ್ಕೀನ್ ಮತ್ತು ಕಾಫಿ ಒಟ್ಟಿಗೆ ಹೋಗುತ್ತದೆ. ಆದ್ದರಿಂದ, ದಯವಿಟ್ಟು ಇವುಗಳಿಗೆ ಏಕರೂಪದ ಜಿಎಸ್‌ಟಿಯನ್ನು ವಿಧಿಸಿ. ಈ ಜಿಎಸ್‌ಟಿ ಗೊಂದಲದಿಂದಾಗಿ ಕಂಪ್ಯೂಟರೇ ಸ್ಟ್ರಕ್ ಆಗುತ್ತಿವೆ” ಎಂದು ಶ್ರೀನಿವಾಸನ್ ಅವರ ಮಾತುಗಳನ್ನು ವಿವರಿಸಿದೆ.

“ಶ್ರೀನಿವಾಸನ್ ಅವರ ಮಾತಿಗೆ ವೇದಿಕೆಯಲ್ಲಿ ಸೀತಾರಾಮನ್ ಮೇಡಂ ನಕ್ಕಿದ್ದರು. ಆದರೆ ನಂತರ ಶ್ರೀನಿವಾಸನ್ ಅವರು “ನಾನು ಯಾವುದೇ ಪಕ್ಷದ ಪರ ಇರುವವನಲ್ಲ” ಎಂದು ಸೀತಾರಾಮನ್ ಮುಂದೆ ಕ್ಷಮೆ ಯಾಚಿಸಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ಮಾಸ್ಟರ್ ಜೀ ಶ್ರೀನಿವಾಸನ್ ಅವರ ಟೀಕೆಗೆ ಕೋಪಗೊಂಡಿದ್ದಾರೆ ಮತ್ತು ಅವರ ಹಿಂಬಾಲಕರು ಕೂಡ ಅವರಂತೆ ವರ್ತಿಸುತ್ತಿದ್ದಾರೆ. ಟೀಕೆಗೆ ಅತ್ಯಂತ ಕೋಪಗೊಂಡಿದ್ದಾರೆ” ಎಂದು ಕೇರಳ ಕಾಂಗ್ರೆಸ್ ಹೇಳಿದೆ.

ತಮಿಳುನಾಡು ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಬಾಲಾಜಿ ಎಂ.ಎಸ್‌ ತನ್ನ ಎಕ್ಸ್‌ ಖಾತೆಯಲ್ಲಿ ವೈರಲ್ ವಿಡಿಯೋ ಹಂಚಿಕೊಂಡು “ಕೊಯಮತ್ತೂರು ಅನ್ನಪೂರ್ಣ ಶ್ರೀನಿವಾಸನ್ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಕೊಯಮತ್ತೂರು ದಕ್ಷಿಣ ಸದಸ್ಯೆ ವನತಿ ಜೊತೆ ಭೇಟಿಯಾಗಿ, ಸಭೆಯಲ್ಲಿ ತಾನು ಆಡಿದ ಮಾತುಗಳು ತಪ್ಪಾಗಿದೆ ಎಂದು ಕ್ಷಮೆ ಕೋರಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ : ತೆರಿಗೆಯಲ್ಲಿ ಶೇ.50ರಷ್ಟು ಪಾಲು ಕೊಡಿ : ಪ್ರತಿಪಕ್ಷಗಳ ಆಡಳಿತ ರಾಜ್ಯಗಳಿಂದ ಕೇಂದ್ರಕ್ಕೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...