Homeಮುಖಪುಟಮುಡಾ ಹಗರಣ ಚರ್ಚೆಗೆ ಆಗ್ರಹಿಸಿ 'ಕಮಲ-ದಳ' ಶಾಸಕರಿಂದ ಅಹೋರಾತ್ರಿ ಧರಣಿ; ವಿಧಾನಸೌಧ ಕಾರಿಡಾರ್‌ನಲ್ಲಿ ಭಜನೆ

ಮುಡಾ ಹಗರಣ ಚರ್ಚೆಗೆ ಆಗ್ರಹಿಸಿ ‘ಕಮಲ-ದಳ’ ಶಾಸಕರಿಂದ ಅಹೋರಾತ್ರಿ ಧರಣಿ; ವಿಧಾನಸೌಧ ಕಾರಿಡಾರ್‌ನಲ್ಲಿ ಭಜನೆ

- Advertisement -
- Advertisement -

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣದ ಕುರಿತು ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ಶಾಸಕರು ಚರ್ಚೆಗೆ ಒತ್ತಾಯಿಸಿದ್ದು, ವಿಧಾನ ಪರಿಷತ್ತಿನಲ್ಲೂ ಇಂತಹದ್ದೇ ದೃಶ್ಯ ಕಂಡು ಬಂತು. ಚರ್ಚೆಗೆ ಒತ್ತಾಯಿಸಿದ  ಬಿಜೆಪಿ ಮತ್ತು ಜೆಡಿಎಸ್ ಶಾಸಕರು, ಬುಧವಾರ ವಿಧಾನಸಭೆಯಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯ ಭಾಗವಾಗಿ, ಅವರು ಚರ್ಚೆಗೆ ಅವಕಾಶ ನೀಡದ ಕಾಂಗ್ರೆಸ್ ಸರ್ಕಾರ, ಸಿದ್ದರಾಮಯ್ಯ ಮತ್ತು ಸ್ಪೀಕರ್ ಯು ಟಿ ಖಾದರ್ ವಿರುದ್ಧ ಘೋಷಣಾ ಫಲಕಗಳನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸಿದರು. ನಂತರ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ, ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಸೇರಿದಂತೆ ಶಾಸಕರು ವಿಧಾನಸೌಧದ ಆವರಣದಲ್ಲಿಯೇ ಮಲಗಿದರು.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ಮುಂದೂಡಿಕೆ ಸೂಚನೆಯನ್ನು ವಿಧಾನಸಭಾಧ್ಯಕ್ಷ ಖಾದರ್ ತಿರಸ್ಕರಿಸಿದ್ದು, ವಿಪಕ್ಷ ಶಾಸಕರು ವಿಧಾನಸಭೆಯೊಳಗೆ ಅಹೋರಾತ್ರಿ ಧರಣಿ ನಡೆಸಿದರು. ಪ್ರತಿಭಟನೆಯಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಿ.ಟಿ.ರವಿ ಸೇರಿದಂತೆ ಬಿಜೆಪಿ, ಜೆಡಿಎಸ್‌ ಸೇರಿದಂತೆ ಹಲವು ವಿಧಾನಪರಿಷತ್‌ ಸದಸ್ಯರು ಭಾಗವಹಿಸಿದ್ದರು.

ಪ್ರತಿಭಟನಾ ನಿರತ ಶಾಸಕರು ಕರ್ನಾಟಕ ವಿಧಾನಸಭೆಯೊಳಗೆ ಮಲಗಿರುವ ವಿಡಿಯೋಗಳು ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿದ್ದು, ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ರಾತ್ರಿಯಿಡೀ ನಡೆದ ಧರಣಿಯಲ್ಲಿ ಅವರು ಭಕ್ತಿಗೀತೆಗಳನ್ನು ಹಾಡಿದರು.

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಕರ್ನಾಟಕ ಬಿಜೆಪಿ ಆಗ್ರಹ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಮುಡಾ ಹಗರಣದ ಪಿತಾಮಹ’ ಎಂದು ಆರೋಪಿಸಿ ಕರ್ನಾಟಕ ಬಿಜೆಪಿ ಘಟಕವು ಅವರ ರಾಜೀನಾಮೆಗೆ ಒತ್ತಾಯಿಸುತ್ತಿದೆ.

“ಸಿದ್ದರಾಮಯ್ಯ ನವರು ಭಾಗಿಯಾಗಿರುವ ಮೈಸೂರು ಮೂಡಾ ಹಗರಣ ಖಂಡಿಸಿ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಭ್ರಷ್ಟಾಚಾರ ಸೇರಿದಂತೆ ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸೌಧದಲ್ಲಿ ಉಭಯ ಸದನಗಳ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರೊಂದಿಗೆ ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಲಾಗಿದೆ” ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಸಿದ್ದರಾಮಯ್ಯನವರೇ ಹಾಗೂ ಕಾಂಗ್ರೆಸ್ಸಿಗರೇ…….” ಪರಿಶಿಷ್ಟ ಪಂಗಡದ ಕಲ್ಯಾಣಕ್ಕೆ ಮೀಸಲಾಗಿದ್ದ ಮಹರ್ಷಿ ವಾಲ್ಮೀಕಿ ನಿಗಮದ ₹187 ಕೋಟಿ ಹಣ ದರೋಡೆ ಮಾಡಿ ಈಗಾಗಲೇ ‘ಇಡಿ ಇಕ್ಕಳ’ಕ್ಕೆ ಸಿಲುಕಿ ಶಾಸಕ ಬಿ ನಾಗೇಂದ್ರ ಜೈಲು ಸೇರಿರುವುದರ ಹಿಂದೆಯೇ ಸರತಿ ಸಾಲಿನಲ್ಲಿ ನಿಂತು ಜೈಲಿನ ಬಾಗಿಲು ತಟ್ಟುತ್ತಿದ್ದೀರಿ. ವಿತ್ತ ಖಾತೆಯನ್ನು ಹೊತ್ತ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಈ ಹಗರಣದ ಬಗ್ಗೆ ತಮಗೇನೂ ತಿಳಿದಿಲ್ಲ’ ಗುಳುಂ’ಆಗಿರುವ ವಾಲ್ಮೀಕಿ ನಿಗಮದ 187 ಕೋಟಿ ರೂಗಳ ರಕ್ಷಣೆಯ ಹೊಣೆ ನನ್ನದಲ್ಲ ಎಂದು ಹೇಳುತ್ತಿರುವುದು ಬರೀ ನೈತಿಕತೆಯ ಪ್ರಶ್ನೆ ಅಲ್ಲವೇ ಅಲ್ಲ. ಜವಾಬ್ದಾರಿಯಿಂದ ನುಣುಕಿಕೊಳ್ಳುವ ಕುತಂತ್ರದ ಯೋಚನೆಯಾಗಿದೆ, ಇದಕ್ಕೆ ತನಿಖೆಯ ಹಾದಿಯಲ್ಲಿ ನಿಮಗೆ ತಕ್ಕ ಉತ್ತರ ದೊರಕಲಿದೆ” ಎಂದಿದ್ದಾರೆ.

“ಪರಿಶಿಷ್ಟ ಜಾತಿಗಳ ಕಲ್ಯಾಣ ಕಾರ್ಯಕ್ಕೆ ಮಾತ್ರ ಬಳಸಬೇಕಿದ್ದ ಸಾವಿರಾರು ಕೋಟಿ ರೂಪಾಯಿಗಳನ್ನು ಅನ್ಯ ಕಾರ್ಯಗಳಿಗೆ ಬಳಸಿ ನೀವು ಮತ್ತು ನಿಮ್ಮ ಸರ್ಕಾರ ಪರಿಶಿಷ್ಟರ ದ್ರೋಹಿಯಾಗಿದ್ದೀರಿ, ನಿಮಗೆ ಪರಿಶಿಷ್ಟ ಸಮುದಾಯಗಳೇ ಪಾಠ ಕಲಿಸಲಿವೆ. ನಿಮ್ಮ ತವರು ಜಿಲ್ಲೆ ಮೈಸೂರಿನಲ್ಲಿ ಸೂರು ಹೊಂದುವ ಜೀವಮಾನದ ಕನಸನ್ನು ನನಸು ಮಾಡಿಕೊಳ್ಳಲು ದಶಕಗಳಿಂದ ಕಾದು ಕುಳಿತಿದ್ದ ಲಕ್ಷಕ್ಕೂ ಹೆಚ್ಚಿನ ಅರ್ಜಿದಾರ ವಸತಿ ರಹಿತರು ಹಾಗೂ ಬಡವರಿಗೆ ದಕ್ಕಬೇಕಾದ ಮೂಡಾ ನಿವೇಶನಗಳನ್ನು ಬಲಾಢ್ಯರು, ನೆಲಬಾಕರು, ಪ್ರಭಾವಿಗಳಿಗೆ ನೀತಿ ನಿಯಮಗಳನ್ನು ಮೀರಿ ಕೋಟ್ಯಂತರ ರೂಪಾಯಿ ಬೆಲೆಬಾಳುವ 5000ಕ್ಕೂ ಹೆಚ್ಚು ನಿವೇಶನಗಳನ್ನು ಧಾರೆ ಎರೆದು ಕೊಟ್ಟಿರುವ ನಿವೇಶನ ಅಕ್ರಮದ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲು ನೀವು ಏಕೆ ಹಿಂದೇಟು ಹಾಕುತ್ತಿದ್ದೀರಿ” ಎಂದು ಪ್ರಶ್ನಿಸಿದ್ದಾರೆ.

“ಏಕೆಂದರೆ, ಈ ಹಗರಣದ ಪಿತಾಮಹ ನೀವೇ ಆಗಿದ್ದೀರಿ, ನಿಮ್ಮ ಪತ್ನಿಯವರ ಹೆಸರಿನಲ್ಲಿ ಬೆಳೆಬಾಳುವ 14 ನಿವೇಶನಗಳನ್ನು ನಿಯಮ ಬಾಹಿರವಾಗಿ ಪಡೆದುಕೊಂಡು ನೈಜ ಫಲಾನು ಭವಿ ಪರಿಶಿಷ್ಟ ಕುಟುಂಬವನ್ನು ವಂಚಿಸಿ ನಾಡಿನ ಮುಖ್ಯಮಂತ್ರಿ ಸ್ಥಾನದ ಘನತೆ ಗೌರವಗಳನ್ನು ಗಾಳಿಗೆ ತೂರಿ, ಸ್ವಜನ ಪಕ್ಷಪಾತ ಹಾಗೂ ಭ್ರಷ್ಟತೆಯ ಕಿರೀಟ ಧರಿಸಿ ಭಂಡತನದಿಂದ ನಿಮ್ಮನ್ನು ನೀವೇ ಸಮರ್ಥಿಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ನಿಮ್ಮ ಅಕ್ರಮಗಳ ವಿರುದ್ಧ ಪ್ರಜಾಸತ್ತಾತ್ಮಕ ರೀತಿಯಲ್ಲಿ ಹೋರಾಡಲು ಅವಕಾಶ ನೀಡದೇ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ದಮನ ಮಾಡುತ್ತಿದ್ದೀರಿ, ಮತ್ತೊಂದೆಡೆ ಪ್ರಜಾಪ್ರಭುತ್ವದ ದೇಗುಲ ವಿಧಾನಸೌಧದ ಉಭಯ ಸದನಗಳಲ್ಲೂ ವಿರೋಧ ಪಕ್ಷವಾಗಿ ಜನಪರ ದನಿಯಾಗಿ ನಿಂತು ಹಗರಣವನ್ನು ಬಯಲು ಮಾಡಲು ಅವಕಾಶ ನೀಡದೆ ಸಾಂವಿಧಾನಿಕ ಹಕ್ಕಿನ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದೀರಿ. ಪಕ್ಷಪಾತಿ ಸ್ಪೀಕರ್ ಅವರು ನಿಮ್ಮ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವುದು ಶಾಸಕಾಂಗ ವ್ಯವಸ್ಥೆಯ ಕಪ್ಪು ಚುಕ್ಕೆಯಾಗಿದೆ” ಎಂದಿದ್ದಾರೆ.

ಏನಿದು ಮುಡಾ ಹಗರಣ?

ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮೈಸೂರಿನ ಕೆಸರೆ ಗ್ರಾಮದಲ್ಲಿ 3 ಎಕರೆ ಜಮೀನು ಹೊಂದಿದ್ದರು. ಈ ಭೂಮಿಯನ್ನು ಮುಡಾ ಅಭಿವೃದ್ಧಿಗಾಗಿ ಸ್ವಾಧೀನಪಡಿಸಿಕೊಂಡಿದ್ದು, ಮೈಸೂರಿನ ಮೇಲ್ಮಟ್ಟದ ಪ್ರದೇಶದಲ್ಲಿ ಸಿದ್ದರಾಮಯ್ಯ ಅವರ ಪತ್ನಿಗೆ ಪರಿಹಾರದ ನಿವೇಶನಗಳನ್ನು ಮಂಜೂರು ಮಾಡಲಾಗಿದೆ. ಮುಡಾದಿಂದ ಸ್ವಾಧೀನಪಡಿಸಿಕೊಂಡಿರುವ ಪಾರ್ವತಿ ಅವರ ಜಮೀನಿಗೆ ಹೋಲಿಸಿದರೆ ಪಾರ್ವತಿ ಅವರಿಗೆ ನೀಡಲಾದ ನಿವೇಶನವು ಹೆಚ್ಚಿನ ಆಸ್ತಿ ಮೌಲ್ಯವನ್ನು ಹೊಂದಿದೆ ಎಂದು ಆರೋಪಿಸಲಾಗಿದೆ.

ಮುಡಾ ಪಾರ್ವತಿ ಅವರಿಗೆ 50:50 ಅನುಪಾತದ ಯೋಜನೆಯಡಿ ಅವರ 3.16 ಎಕರೆ ಜಮೀನಿಗೆ ಬದಲಾಗಿ ನಿವೇಶನಗಳನ್ನು ಮಂಜೂರು ಮಾಡಿತ್ತು, ಅಲ್ಲಿ ಮುಡಾ ವಸತಿ ಬಡಾವಣೆಯನ್ನು ಅಭಿವೃದ್ಧಿಪಡಿಸಿತು.

ಮುಡಾದಿಂದ ಪರಿಹಾರ ಪಡೆಯಲು ನಕಲಿ ದಾಖಲೆ ಸೃಷ್ಟಿಸಿದ ಆರೋಪದ ಮೇಲೆ ಸಿಎಂ ಸಿದ್ದರಾಮಯ್ಯ ಹಾಗೂ ಇತರ ಒಂಬತ್ತು ಮಂದಿ ವಿರುದ್ಧ ಸಾಮಾಜಿಕ ಕಾರ್ಯಕರ್ತೆ ಸ್ನೇಹಮಯಿ ಕೃಷ್ಣ ಅವರು ದೂರು ದಾಖಲಿಸಿದ್ದರು. ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಅವರ ಸೋದರ ಮಾವ ಮಲಿಕಾರ್ಜುನ ಸ್ವಾಮಿ ದೇವರಾಜ್ ಮತ್ತು ಅವರ ಕುಟುಂಬದವರು ಅಕ್ರಮ ಎಸಗಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ. ಮುಡಾ ನಕಲಿ ದಾಖಲೆಗಳನ್ನು ಸೃಷ್ಟಿಸಿ ಕೋಟ್ಯಂತರ ರೂಪಾಯಿ ಮೌಲ್ಯದ ನಿವೇಶನಗಳನ್ನು ಪಡೆದು ವಂಚಿಸಿದೆ ಎಂದು ಆರೋಪಿಸಿದೆ.

ಸ್ನೇಹಮಯಿ ಕೃಷ್ಣ ಅವರು ತಮ್ಮ ದೂರಿನಲ್ಲಿ ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಮುಡಾ ಹಗರಣದಲ್ಲಿ 5000 ಕೋಟಿ ರೂ.ಗೂ ಹೆಚ್ಚು ಹಗರಣ ನಡೆದಿದೆ ಎಂದು ಬಿಜೆಪಿ ಆರೋಪಿಸಿದ್ದು, ತನಿಖೆಯನ್ನು ಸಿಬಿಐಗೆ ಒಪ್ಪಿಸುವಂತೆ ಒತ್ತಾಯಿಸಿದೆ.

ಇದನ್ನೂ ಓದಿ; ಕನ್ನಡಿಗರಿಗೆ ಉದ್ಯೋಗ ಮೀಸಲು ಮಸೂದೆ ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್‌ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...