Homeಮುಖಪುಟಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

- Advertisement -
- Advertisement -

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ.

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಭಾನುವಾರ (ಮಾ.15) ಘೋಷಿಸಿದ್ದಾರೆ. ರಾಜ್ಯದಲ್ಲಿ ಏಪ್ರಿಲ್ 23 ಮತ್ತು 29ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಹೊರ ಬೀಳಲಿದೆ.

ಚುನಾವಣೆ ದಿನಾಂಕ ಘೋಷಣೆಯಾಗಿ 24 ಗಂಟೆ ಪೂರ್ಣಗೊಳ್ಳುವ ಮುನ್ನ ಪ್ರಮುಖ ಅಧಿಕಾರಿಗಳನ್ನು ಚುನಾವಣಾ ಆಯೋಗ ಬದಲಾಯಿಸಿರುವುದು, ಈಗಾಗಲೇ ಆಯೋಗ ಮತ್ತು ಟಿಎಂಸಿ ನಡುವೆ ನಡೆಯುತ್ತಿರುವ ಸಂಘರ್ಷವನ್ನು ಇನ್ನಷ್ಟು ಹೆಚ್ಚಿಸುವ ಸಾಧ್ಯತೆ ಇದೆ.

ಚುನಾವಣಾ ಆಯೋಗ ಸರ್ಕಾರದ ಮುಖ್ಯ ಕಾರ್ಯದರ್ಶಿಯಾದ ನಂದಿನಿ ಚಕ್ರವರ್ತಿ ಅವರ ಬದಲಿಗೆ 1993ರ ಬ್ಯಾಚ್ ಐಎಎಸ್ ಅಧಿಕಾರಿ ದುಷ್ಯಂತ್ ನರಿಯಾಲಾ ಅವರನ್ನು ನೇಮಿಸಿದೆ. ಜಗದೀಶ್ ಪ್ರಸಾದ್ ಮೀನಾ ಅವರ ಬದಲಿಗೆ ಸಂಘಮಿತ್ರ ಘೋಷ್ ಅವರನ್ನು ಹೊಸ ಗೃಹ ಕಾರ್ಯದರ್ಶಿಯಾಗಿ ನೇಮಕ ಮಾಡಿದೆ. 1997ರ ಬ್ಯಾಚ್ ಐಎಎಸ್ ಅಧಿಕಾರಿಯಾದ ಸಂಘಮಿತ್ರ ಘೋಷ್, ಬಂಗಾಳದ ಮೊದಲ ಮಹಿಳಾ ಗೃಹ ಕಾರ್ಯದರ್ಶಿ ಎನಿಸಿಕೊಳ್ಳಲಿದ್ದಾರೆ.

ಭಾನುವಾರ ತಡರಾತ್ರಿ ಸರ್ಕಾರದ ಮುಖ್ಯ ಕಾರ್ಯದರ್ಶಿ ನಂದಿನಿ ಚಕ್ರವರ್ತಿ ಅವರಿಗೆ ಬರೆದ ಪತ್ರದಲ್ಲಿ ಚುನಾವಣಾ ಆಯೋಗದ ಕಾರ್ಯದರ್ಶಿ ಸುರ್ಜೀತ್ ಕುಮಾರ್ ಮಿಶ್ರಾ ಅವರು ಅಧಿಕಾರಿಗಳ ಬದಲಾವಣೆ ಕುರಿತು ನಿರ್ದೇಶಿಸಿದ್ದಾರೆ ಎಂದು ವರದಿಯಾಗಿದೆ.

ವಿಧಾನಸಭೆ ಚುನಾವಣೆ ಮುಗಿಯುವವರೆಗೆ ನಂದಿನಿ ಚಕ್ರವರ್ತಿ ಮತ್ತು ಜಗದೀಶ್ ಪ್ರಸಾಸ್ ಮೀನಾ ಇಬ್ಬರಿಗೂ ಚುನಾವಣೆಗೆ ಸಂಬಂಧಿಸಿದ ಯಾವುದೇ ಹುದ್ದೆಯನ್ನು ನೀಡಲಾಗುವುದಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ.

ಪಶ್ಚಿಮ ಬಂಗಾಳದ ಡಿಜಿಪಿ ಪಿಯೂಷ್ ಪಾಂಡೆ ಮತ್ತು ಕೋಲ್ಕತ್ತಾ ನಗರದ ಪೊಲೀಸ್ ಆಯುಕ್ತ ಸುಪ್ರತಿಮ್ ಸರ್ಕಾರ್ ಸೇರಿದಂತೆ ಉನ್ನತ ಪೊಲೀಸ್ ಅಧಿಕಾರಿಗಳನ್ನು ಚುನಾವಣಾ ಆಯೋಗ ವರ್ಗಾಯಿಸಿದೆ.

ಸಿದ್ಧ್ ನಾಥ್ ಗುಪ್ತಾ ಅವರನ್ನು ಪೊಲೀಸ್ ಮಹಾನಿರ್ದೇಶಕ (ಪ್ರಭಾರಿ) ಆಗಿ ನೇಮಿಸುವಂತೆ ಆಯೋಗ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ್ದು, ನಟರಾಜನ್ ರಮೇಶ್ ಬಾಬು ಅವರನ್ನು ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಮಹಾನಿರ್ದೇಶಕರನ್ನಾಗಿ ನೇಮಿಸಲಾಗಿದೆ.

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮತ್ತು ಐಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಹುದ್ದೆಗೆ ಅಜಯ್ ಮುಕುಂದ್ ರಾನಡೆ ಹಾಗೂ ಕೋಲ್ಕತ್ತಾ ಪೊಲೀಸ್ ಕಮಿಷನರ್ ಆಗಿ ಅಜಯ್ ಕುಮಾರ್ ನಂದ್ ಅವರನ್ನು ನೇಮಕ ಮಾಡಲು ಆಯೋಗ ಆದೇಶಿಸಿದೆ.

ಆದೇಶಗಳನ್ನು ತಕ್ಷಣವೇ ಜಾರಿಗೆ ತರುವಂತೆ ಚುನಾವಣಾ ಆಯೋಗ ನಿರ್ದೇಶಿಸಿದ್ದು, ಸೋಮವಾರ (ಮಾ.16) ಮಧ್ಯಾಹ್ನ 3 ಗಂಟೆಯೊಳಗೆ ಅನುಸರಣಾ ವರದಿಯನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಸ್ವಾತಂತ್ರ್ಯದ ನಂತರದ ಪಶ್ಚಿಮ ಬಂಗಾಳದ ಇತಿಹಾಸದಲ್ಲೇ ಸರ್ಕಾರದ ಮುಖ್ಯ ಕಾರ್ಯದರ್ಶಿಯನ್ನು ಈ ರೀತಿ ಹುದ್ದೆಯಿಂದ ಬದಲಾಯಿಸಿರುವುದು ಅಪರೂಪದ ಬೆಳವಣಿಗೆ ಎಂದು ರಾಜ್ಯದ ಹಿರಿಯ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾಗಿ ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...