Homeಕರ್ನಾಟಕಮಧ್ಯಪ್ರದೇಶ: ಅತ್ಯಾಚಾರ ಆರೋಪಿಯ ಮನೆ ನೆಲಸಮ

ಮಧ್ಯಪ್ರದೇಶ: ಅತ್ಯಾಚಾರ ಆರೋಪಿಯ ಮನೆ ನೆಲಸಮ

- Advertisement -
- Advertisement -

ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಹದಿಹರೆಯದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಮನೆಯನ್ನು ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ಆರೋಪಿಸಿ ನೆಲಸಮ ಮಾಡಲು ಆಡಳಿತ ಮುಂದಾಗಿದೆ.

15 ವರ್ಷದ ಬಾಲಕಿಯೊಬ್ಬಳು, ಅರೆಬೆತ್ತಲೆಯಾಗಿ ರಕ್ತಸ್ರಾವದೊಂದಿಗೆ ಸಹಾಯಕ್ಕಾಗಿ ಮನೆ-ಮನೆಗೆ ತೆರಳಿದ ವೀಡಿಯೊಗಳು ಕಳೆದ ವಾರ ಭಾರೀ ವೈರಲ್‌ ಆಗಿತ್ತು.

ಈ ಪ್ರಕರಣದಲ್ಲಿ ಆರೋಪಿ ಭರತ್ ಸೋನಿ ಎಂಬ ಆಟೋ ರಿಕ್ಷಾ ಚಾಲಕನನ್ನು ಗುರುವಾರ ಬಂಧಿಸಲಾಗಿದೆ. ಸದ್ಯ ಭರತ್ ಪೊಲೀಸರ ವಶದಲ್ಲಿದ್ದು, ವಿಚಾರಣೆ ನಡೆಯುತ್ತಿದೆ. ಅವರ ಕುಟುಂಬವು ಸರ್ಕಾರಿ ಭೂಮಿಯಲ್ಲಿ ಮನೆಯನ್ನು ನಿರ್ಮಿಸಿ ಹಲವು ವರ್ಷಗಳಿಂದ ವಾಸಿಸುತ್ತಿದೆ ಎಂದು ಉಜ್ಜಯಿನಿ ಮಹಾನಗರ ಪಾಲಿಕೆ ತಿಳಿಸಿದೆ.

ಈ ಜಮೀನು ಸರ್ಕಾರಕ್ಕೆ ಸೇರಿದ್ದು, ಆದ್ದರಿಂದ ಅದನ್ನು ಕೆಡವಲು ಯಾವುದೇ ಸೂಚನೆ ಅಗತ್ಯವಿಲ್ಲ ಎಂದು ಪಾಲಿಕೆ ಆಯುಕ್ತ ರೋಷನ್ ಸಿಂಗ್ ಹೇಳಿದ್ದಾರೆ. ಮಧ್ಯಪ್ರದೇಶ ಪೊಲೀಸರ ಸಹಯೋಗದಲ್ಲಿ ಮುನ್ಸಿಪಲ್ ಕಾರ್ಪೋರೇಷನ್ ನಾಳೆ ಮನೆ ನೆಲಸಮ ಕಾರ್ಯವನ್ನು ಮಾಡಲಿದ್ದಾರೆ ಎಂದು ಹೇಳಿದ್ದಾರೆ.

ಸುಮಾರು 700 ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿ ಸುದೀರ್ಘ ತನಿಖೆಯ ನಂತರ ಭರತ್‌ಗೆ ಬಂಧಿಸಲಾಗಿದೆ. ತನಿಖೆಯ ತಂಡದಲ್ಲಿ 30-35 ಜನರು ಭಾಗಿಯಾಗಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿ ಅಜಯ್ ವರ್ಮಾ ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಸೆ. 26 ರಂದು ಅಪ್ರಾಪ್ತ ಬಾಲಕಿ ಬೆತ್ತಲೆಯಾಗಿ ರಕ್ತಸ್ರಾವದೊಂದಿಗೆ ಸಹಾಯಕ್ಕಾಗಿ ಬೇಡಿಕೊಳ್ಳುತ್ತಿರುವ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದವು. ಉಜ್ಜಯಿನಿಯಿಂದ ಸುಮಾರು 15 ಕಿ.ಮೀ ದೂರದಲ್ಲಿರುವ ಬದ್‌ನಗರ ರಸ್ತೆಯಲ್ಲಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಬಾಲಕಿ ಚಿಂದಿ ಬಟ್ಟೆಯನ್ನು ಹೊದ್ದುಕೊಂಡು ಮನೆ-ಮನೆಗೆ ತೆರಳಿ ನೆರವು ಕೇಳುವ ದೃಶ್ಯ ಸೆರೆಯಾಗಿತ್ತು.

ಆಕೆಯನ್ನು ಕಂಡ ಪಾದ್ರಿಯೊಬ್ಬರು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದನ್ನು ಮನಗಂಡು ಆಕೆಯನ್ನು ಟವೆಲ್‌ನಲ್ಲಿ ಹೊದಿಸಿ ಹತ್ತಿರದ ಆಸ್ಪತ್ರೆಗೆ ಸಾಗಿಸಿದರು. ವೈದ್ಯಕೀಯ ಪರೀಕ್ಷೆಯಲ್ಲಿ ಅತ್ಯಾಚಾರ  ಬಯಲಾಗಿತ್ತು. ಬಾಲಕಿ ಈ ವೇಳೆ ತೀವ್ರವಾಗಿ ಅಸ್ವಸ್ಥರಾಗಿದ್ದರು. ವಿಶೇಷ ವೈದ್ಯಕೀಯ ಆರೈಕೆಗಾಗಿ ಆಕೆಯನ್ನು ಇಂದೋರ್‌ಗೆ ರವಾನಿಸಲಾಗಿದೆ. ಪೊಲೀಸ್ ಅಧಿಕಾರಿಗಳು ಸ್ವಯಂಪ್ರೇರಿತರಾಗಿ ಆಕೆಗೆ ರಕ್ತದಾನವನ್ನು ಮಾಡಿದ್ದಾರೆ.

ಘಟನೆ ನಡೆದ ಮೂರು ದಿನಗಳ ಬಳಿಕ ಆರೋಪಿ ಭರತ್‌ನನ್ನು ಬಂಧಿಸಲಾಗಿತ್ತು. ಪೊಲೀಸರು ಸ್ಥಳ ಪರಿಶೀಲನೆ ಮಾಡುವಾಗ ಆರೋಪಿ ಓಡಿಹೋಗಲು ಪ್ರಯತ್ನಿಸಿದ್ದಾನೆ. ಆದರೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಕೃತ್ಯದ ಬಗ್ಗೆ ಪ್ರತಿಕ್ರಿಯಿಸಿದ ಭರತ್‌ನ ತಂದೆ, ತನ್ನ ಮಗ ಈ ಅಪರಾಧ ಮಾಡಿರುವುದಾದರೆ ಅವನಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕೆಂದು ಹೇಳಿದ್ದಾರೆ. ಇದಲ್ಲದೆ ಸ್ಥಳೀಯ ವಕೀಲರ ಸಂಘವು ನ್ಯಾಯಾಲಯದಲ್ಲಿ ಆರೋಪಿಯ ಪರ ವಕಾಲತ್ತು ವಹಿಸದಂತೆ ವಕೀಲರಿಗೆ ಆಗ್ರಹಿಸಿತ್ತು.

ಇದನ್ನು ಓದಿ: ಉ.ಪ್ರದೇಶ: ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ತಂದೆಯಿಂದಲೇ ನಿರಂತರವಾಗಿ ಅತ್ಯಾಚಾರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...