Homeಮುಖಪುಟವಿಪಕ್ಷ ನಾಯಕನಿಲ್ಲದೆ ಸದನ ನಡೆಯುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪು ಚುಕ್ಕೆ: ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ವಿಪಕ್ಷ ನಾಯಕನಿಲ್ಲದೆ ಸದನ ನಡೆಯುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪು ಚುಕ್ಕೆ: ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

- Advertisement -
- Advertisement -

ವಿಧಾನಮಂಡಲ ಅಧಿವೇಶನ ಆರಂಭವಾದರೂ ವಿಧಾನಸಭೆಯ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡದಿರುವುದಕ್ಕೆ ಬಿಜೆಪಿಗೆ ಸಾಧ್ಯವಾಗುತ್ತಿಲ್ಲ ಎಂದು ಕಾಂಗ್ರೆಸ್ ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದೆ.

”ಡಿಯರ್ ಬಿಜೆಪಿ, ಸರ್ಕಾರ ರಚನೆ ಆಯ್ತು, ನಮ್ಮ ಸರ್ಕಾರ ಟೆಕಾಫ್ ಆಗಿ ಹಲವು ದಿನಗಳಾಯ್ತು, ನಮ್ಮ ಗ್ಯಾರಂಟಿ ಯೋಜನೆಗಳ ಜಾರಿಯೂ ಆಯ್ತು, ಸದನವೂ ಪ್ರಾರಂಭವಾಯ್ತು. ಎಲ್ಲಿ ನಿಮ್ಮ ವಿರೋಧ ಪಕ್ಷದ ನಾಯಕ? ಬಿಜೆಪಿಗೆ ವಿರೋಧ ಪಕ್ಷದ ನಾಯಕನ ಗ್ಯಾರಂಟಿಯನ್ನೂ ಕೊಡಲಾಗುತ್ತಿಲ್ಲ ಎಂದರೆ ಎಂತಹ ಹಿನಾಯ ಸ್ಥಿತಿಯಲ್ಲಿದೆ!” ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.

”ಬಿಜೆಪಿಯ 66 ಶಾಸಕರಲ್ಲಿ ವಿರೋಧ ಪಕ್ಷದ ನಾಯಕನಾಗುವ ಅರ್ಹತೆ ಇರುವ ಒಬ್ಬೇ ಒಬ್ಬ ಶಾಸಕನಿಲ್ಲದಿರುವುದು ಅತ್ಯಂತ ನಾಚಿಕೆಗೇಡು. ಕರ್ನಾಟಕದದ ಇತಿಹಾಸದಲ್ಲಿ ವಿರೋಧ ಪಕ್ಷದ ನಾಯಕನಿಲ್ಲದೆ ನಡೆಯುತ್ತಿರುವ ಮೊದಲ ಅಧಿವೇಶನವಿದು. ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಪ್ರಜಾಪ್ರಭುತ್ವವನ್ನು ಗೌರವಿಸಲಿಲ್ಲ, ವಿಪಕ್ಷದಲ್ಲಿದ್ದಾಗಲೂ ಗೌರವಿಸುತ್ತಿಲ್ಲ” ಎಂದು ವಾಗ್ದಾಳಿ ನಡೆಸಿದೆ.

”ಬಿಜೆಪಿಗೆ ವಿರೋಧ ಪಕ್ಷದ ನಾಯಕನ ‘ಗ್ಯಾರಂಟಿ‘ಯೂ ಇಲ್ಲ! ವಿರೋಧ ಪಕ್ಷದ ನಾಯಕನಿಲ್ಲದೆ ಸದನ ಕಲಾಪ ನಡೆಯುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪು ಚುಕ್ಕೆ. ಈ ಕಪ್ಪು ಚುಕ್ಕೆಯನ್ನಿಟ್ಟಿದ್ದು ಬಿಜೆಪಿ” ಎಂದು ಕಿಡಿಕಾರಿದೆ.

”ವಿರೋಧ ಪಕ್ಷದ ನಾಯಕನ ಹುದ್ದೆಯನ್ನೂ ಮಾರಾಟಕ್ಕೆ ಇಡಲಾಗಿದೆಯೇ? ಮುಖ್ಯಮಂತ್ರಿ ಹುದ್ದೆಗೆ ₹2,500 ಕೋಟಿ ಫಿಕ್ಸ್ ಮಾಡಲಾಗಿತ್ತು. ವಿರೋಧ ಪಕ್ಷದ ನಾಯಕನ ಹುದ್ದೆ ಎಷ್ಟಕ್ಕೆ ಬಿಕರಿಯಾಗುತ್ತಿದೆ? ಆ ಚೌಕಾಶಿ ವ್ಯವಹಾರಕ್ಕಾಗಿಯೇ ಆಯ್ಕೆ ಪ್ರಕ್ರಿಯೆ ವಿಳಂಬವಾಗುತ್ತಿದೆಯೇ? ಬಿಜೆಪಿ ಉತ್ತರಿಸಬೇಕು” ಎಂದು ಕಾಂಗ್ರೆಸ್ ಹೇಳಿದೆ.

ಇದನ್ನೂ ಓದಿ: ಇಂದಿನಿಂದ ಅಧಿವೇಶನ ಆರಂಭ; ವಿರೋಧ ಪಕ್ಷ ನಾಯಕನ ಆಯ್ಕೆ ಇನ್ನೂ ಆಗಿಲ್ಲ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಬಾಂಬ್ ಸ್ಫೋಟ: ಬಾಲಕ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

0
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಕಚ್ಚಾ ಬಾಂಬ್ ಸ್ಫೋಟ ಸಂಭವಿಸಿ ಏಳು ವರ್ಷದ ಬಾಲಕ ಸಾವನ್ನಪ್ಪಿದ್ದು, ಇತರ ಇಬ್ಬರು ಅಪ್ರಾಪ್ತ ಬಾಲಕರಿಗೂ ತೀವ್ರ ಗಾಯಗಳಾಗಿದೆ. ಮೃತ ಬಾಲಕನನ್ನು ರಾಜ್ ಬಿಸ್ವಾಸ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ...