Homeಮುಖಪುಟದಲಿತರ ಮನೆಗಳಿಗೆ ಬೆಂಕಿ: ಬಿಹಾರದ ಎನ್‌ಡಿಎ ಸರ್ಕಾರದ ವಿರುದ್ಧ ಕಾಂಗ್ರೆಸ್, ಬಿಎಸ್‌ಪಿ ವಾಗ್ದಾಳಿ

ದಲಿತರ ಮನೆಗಳಿಗೆ ಬೆಂಕಿ: ಬಿಹಾರದ ಎನ್‌ಡಿಎ ಸರ್ಕಾರದ ವಿರುದ್ಧ ಕಾಂಗ್ರೆಸ್, ಬಿಎಸ್‌ಪಿ ವಾಗ್ದಾಳಿ

- Advertisement -
- Advertisement -

ಬಿಹಾರದ ನವಾಡ ಜಿಲ್ಲೆಯ ಮುಫಸ್ಸಿಲ್ ಪೊಲೀಸ್ ಠಾಣಾ ವ್ಯಾಪ್ತಿಯ ಮಹಾದಲಿತ್ ಟೋಲಾದಲ್ಲಿ ಬುಧವಾರ ತಡರಾತ್ರಿ ಭೂ ವಿವಾದದ ಹಿನ್ನೆಲೆಯಲ್ಲಿ ಗುಂಪೊಂದು ಸುಮಾರು 100 ಮನೆಗಳಿಗೆ ಬೆಂಕಿ ಹಚ್ಚಿದೆ. ಮಹಾದಲಿತ ಸಮುದಾಯದ ಜನರು ಕಳೆದ 10 ವರ್ಷಗಳಿಂದ ಸರ್ಕಾರಿ ಭೂಮಿಯಲ್ಲಿ ವಾಸಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬುಧವಾರ ಸಂಜೆ ದುಷ್ಕರ್ಮಿಗಳ ಗುಂಪೊಂದು ಮಹಾದಲಿತ ತೊಲಕ್ಕೆ ಬಂದು ಗುಂಡಿನ ದಾಳಿ ನಡೆಸಿದೆ. ಘಟನೆಯನ್ನು ವಿರೋಧಿಸಿರುವ ಕಾಂಗ್ರೆಸ್, ಬಿಎಸ್‌ಪಿ ಪಕ್ಷಗಳು ನಿತೀಶ್‌ ಕುಮಾರ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ.

ಬಳಿಕ ಗುಂಪು ಮನೆಗಳಿಗೆ ಬೆಂಕಿ ಹಚ್ಚಿದೆ. ಸುತ್ತಮುತ್ತಲಿನ ಹೊಗೆಯನ್ನು ಗಮನಿಸಿದ ಮನೆಯ ನಿವಾಸಿಗಳು ಸುರಕ್ಷಿತ ಸ್ಥಳಕ್ಕೆ ಧಾವಿಸಿದರು. ಅವರು ತಮ್ಮ ಮನೆಗಳನ್ನು ಬೆಂಕಿಯಿಂದ ಸಂಪೂರ್ಣವಾಗಿ ನಾಶವಾಗದಂತೆ ರಕ್ಷಿಸಲು ಪ್ರಯತ್ನಿಸಿದರು. ಆದರೆ, ವ್ಯರ್ಥವಾಯಿತು.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಘಟನೆಯನ್ನು ಖಂಡಿಸಿದ್ದು, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಿಗೆ (ಕಾನೂನು ಮತ್ತು ಸುವ್ಯವಸ್ಥೆ) ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ತನಿಖೆಯ ಮೇಲ್ವಿಚಾರಣೆಗೆ ಸೂಚಿಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗದಂತೆ ಗ್ರಾಮದಲ್ಲಿ 100 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ದುಷ್ಕರ್ಮಿಗಳು ದೇದೂರು ಗ್ರಾಮದ ಕೃಷ್ಣನಗರ ತೋಲದಲ್ಲಿ ಗುಂಡು ಹಾರಿಸಿದ ಬಳಿಕ ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪೊಲೀಸ್ ಮೂಲಗಳ ಪ್ರಕಾರ, ಪ್ರಕರಣದ ಹೆಚ್ಚಿನ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಲಾಗಿದ್ದು, ಉಳಿದ ಶಂಕಿತರನ್ನು ಬಂಧಿಸಲು ಶೋಧ ಮುಂದುವರಿದಿದೆ. “ನಾವು ನಿರಾಶ್ರಿತರಿಗೆ ಆಹಾರ ಪ್ಯಾಕೆಟ್‌ಗಳು ಮತ್ತು ಕುಡಿಯುವ ನೀರು ಸೇರಿದಂತೆ ಪರಿಹಾರ ಸಾಮಗ್ರಿಗಳನ್ನು ಒದಗಿಸುತ್ತಿದ್ದೇವೆ. ಸಂತ್ರಸ್ತರಿಗೆ ತಾತ್ಕಾಲಿಕ ಟೆಂಟ್‌ಗಳನ್ನು ಸ್ಥಾಪಿಸಲಾಗಿದೆ” ಎಂದು ನಾವಡಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಶುತೋಷ್ ಕುಮಾರ್ ವರ್ಮಾ ತಿಳಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಘಟನೆಯಲ್ಲಿ ಜಾನುವಾರುಗಳು ಸುಟ್ಟು ಕರಕಲಾಗಿವೆ ಎಂಬ ಹೇಳಿಕೆಯನ್ನು ತಳ್ಳಿಹಾಕಿದ ವರ್ಮಾ, “ಅದನ್ನು ಸಾಭೀತುಪಡಿಸುವ ಯಾವುದೇ ಪುರಾವೆಗಳು ಕಂಡುಬಂದಿಲ್ಲ” ಎಂದು ಹೇಳಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಪಾಸ್ವಾನ್ ಮತ್ತು ಮಾಂಝಿ ಸಮುದಾಯದ ಸದಸ್ಯರು ಕೆಲವು ಸಾಗುವಳಿ ಮಾಡದ ಭೂಮಿಯ ಬಗ್ಗೆ ದೀರ್ಘಕಾಲದ ವಿವಾದವನ್ನು ಹೊಂದಿದ್ದಾರೆ.

21 ಮನೆಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಸುಮಾರು 40-50 ಮನೆಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ ಎಂದು ನಾವಡ ಎಸ್‌ಪಿ ಅಭಿನವ್ ಧೀಮಾನ್ ತಿಳಿಸಿದ್ದಾರೆ. ಸದ್ಯಕ್ಕೆ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

ಪ್ರಮುಖ ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದ್ದು, ಇತರ 10 ಜನರನ್ನು ಬಂಧಿಸಲಾಗಿದೆ. ಎರಡು ಕಡೆಯ ನಡುವಿನ ಜಮೀನು ವಿವಾದ ಘಟನೆಗೆ ಕಾರಣವಾಯಿತು ಎಂದು ಅವರು ಹೇಳಿದರು.

“ಸಿಎಂ ಅವರು ಘಟನೆಯನ್ನು ಖಂಡಿಸಿ, ಎಲ್ಲ ಶಂಕಿತರನ್ನು ಆದಷ್ಟು ಬೇಗ ಬಂಧಿಸುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ. ನವಾಡದ ಮಾಂಝಿ ಟೋಲಾದಲ್ಲಿ ಬೆಂಕಿ ಹಚ್ಚಿದವರು 21 ಮನೆಗಳಿಗೆ ಬೆಂಕಿ ಹಚ್ಚಿದ ಒಂದು ದಿನದ ನಂತರ ಪೊಲೀಸರು ಇದುವರೆಗೆ 15 ಜನರನ್ನು ಬಂಧಿಸಿದ್ದಾರೆ” ಎಂದು ಮುಖ್ಯಮಂತ್ರಿ ಕಚೇರಿಯ ಮೂಲಗಳು ಮಾಧ್ಯಮಗಳಿಗೆ ತಿಳಿಸಿವೆ.

“ಕಾನೂನನ್ನು ಕೈಗೆತ್ತಿಕೊಳ್ಳುವವರನ್ನು ಹಿಡಿದು ಶಿಕ್ಷಿಸಬೇಕು ಎಂದು ಸಿಎಂ ಒತ್ತಿ ಹೇಳಿದ್ದು, ರಾಜ್ಯದಾದ್ಯಂತ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಂತೆ ಸೂಚಿಸಿದ್ದಾರೆ” ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಆರ್‌ಜೆಡಿ ನಾಯಕ ತೇಜಸ್ವಿ ಪ್ರಸಾದ್ ಯಾದವ್, “ಮಹಾ ಜಂಗಲ್ ರಾಜ್! ಮಹಾ ದಾನವ ರಾಜ್! ಮಹಾ ರಾಕ್ಷಸ ರಾಜ್! ನಾವಡದಲ್ಲಿ ದಲಿತರ 100ಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ನರೇಂದ್ರ ಮೋದಿ ಮತ್ತು ನಿತೀಶ್ ಕುಮಾರ್ ಆಡಳಿತದಲ್ಲಿ ಬಿಹಾರದಾದ್ಯಂತ ಬೆಂಕಿ ಕಾಣಿಸಿಕೊಂಡಿದೆ. ಮುಖ್ಯಮಂತ್ರಿ ನಿತೀಶ್‌ ಕುಮಾರ್‌ಗೆ ತೊಂದರೆಯಿಲ್ಲ, ಎನ್‌ಡಿಎ ಮಿತ್ರಪಕ್ಷಗಳಿಗೆ ತಿಳಿದಿಲ್ಲ! ಬಡವರು ಸುಟ್ಟುಹೋದರು, ಸತ್ತರು. ಅವರು ಏನು ಕಾಳಜಿ ವಹಿಸುತ್ತಾರೆ? ನಾವು ದಲಿತರ ಮೇಲಿನ ದೌರ್ಜನ್ಯವನ್ನು ಸಹಿಸುವುದಿಲ್ಲ” ಎಂದು ಹೇಳಿದ್ದಾರೆ.

‘ಜಂಗಲ್ ರಾಜ್’?: ಎನ್‌ಡಿಎ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ನವಾಡದಲ್ಲಿ ಮನೆಗಳಿಗೆ ಬೆಂಕಿ ಹಚ್ಚಿದ ಘಟನೆಗೆ ಸಂಬಂಧಿಸಿದಂತೆ ಬಿಹಾರದ ಎನ್‌ಡಿಎ ಸರ್ಕಾರವನ್ನು ಗುರುವಾರ ವಾಗ್ದಾಳಿ ನಡೆಸಿದ ಕಾಂಗ್ರೆಸ್, ಇದು ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಜಂಗಲ್ ರಾಜ್‌ಗೆ ಮತ್ತೊಂದು ಪುರಾವೆಯಾಗಿದೆ. ವಂಚಿತರು ಮತ್ತು ದಲಿತರ ಬಗ್ಗೆ ಆಡಳಿತದ ‘ಅಸಡ್ಡೆ’ ತೋರಿಸುತ್ತದೆ ಎಂದು ಹೇಳಿದೆ.

ಬಿಹಾರದ ನಾವಡಾದಲ್ಲಿ ಮಹಾದಲಿತ್ ತೋಲಾ ಮೇಲೆ ಗೂಂಡಾಗಳ ಭಯೋತ್ಪಾದನೆ ಎನ್‌ಡಿಎ ಡಬಲ್ ಎಂಜಿನ್ ಸರ್ಕಾರದ ಜಂಗಲ್ ರಾಜ್‌ಗೆ ಮತ್ತೊಂದು ಪುರಾವೆಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಸುಮಾರು 100 ದಲಿತರ ಮನೆಗಳಿಗೆ ಬೆಂಕಿ ಹಚ್ಚಿ, ಗುಂಡು ಹಾರಿಸಿ, ರಾತ್ರಿಯ ಕತ್ತಲಲ್ಲಿ ಬಡ ಕುಟುಂಬಗಳ ಎಲ್ಲವನ್ನೂ ಕಿತ್ತುಕೊಂಡಿರುವುದು ಖಂಡನೀಯ ಎಂದು ಖರ್ಗೆ ಪ್ರತಿಪಾದಿಸಿದರು.

ದಲಿತರ ಬಗ್ಗೆ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ‘ಅತ್ಯಂತ ಅಸಡ್ಡೆ’, ವಂಚಿತರ ಮೇಲಿನ ಅಪರಾಧ ನಿರ್ಲಕ್ಷ್ಯ, ಸಮಾಜ ವಿರೋಧಿ ಶಕ್ತಿಗಳನ್ನು ಪ್ರೋತ್ಸಾಹಿಸುತ್ತಿರುವುದು ಈಗ ಉತ್ತುಂಗದಲ್ಲಿದೆ ಎಂದು ಅವರು ಆರೋಪಿಸಿದರು.

“ಪ್ರಧಾನಿ (ನರೇಂದ್ರ) ಮೋದಿ ಎಂದಿನಂತೆ ಮೌನವಾಗಿದ್ದಾರೆ, ನಿತೀಶ್ (ಕುಮಾರ್) ದುರಾಸೆಯಲ್ಲಿ ನಿರಾತಂಕರಾಗಿದ್ದಾರೆ. ಎನ್‌ಡಿಎ ಮಿತ್ರಪಕ್ಷಗಳು ಮೌನವಾಗಿವೆ ಎಂದು ಅವರು ಕಿಡಿಕಾರಿದ್ದಾರೆ.

ಬಿಹಾರದ ನವಾಡದಲ್ಲಿ 80ಕ್ಕೂ ಹೆಚ್ಚು ಮಹಾದಲಿತರ ಮನೆಗಳಿಗೆ ಬೆಂಕಿ ಹಚ್ಚಿದ ಘಟನೆ ಅತ್ಯಂತ ಭಯಾನಕ ಮತ್ತು ಖಂಡನೀಯ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ. ಹತ್ತಾರು ಸುತ್ತು ಗುಂಡು ಹಾರಿಸುವುದು ಮತ್ತು ಇಷ್ಟು ದೊಡ್ಡ ಪ್ರಮಾಣದಲ್ಲಿ ಭಯೋತ್ಪಾದನೆಯನ್ನು ಸೃಷ್ಟಿಸುವುದು. ಜನರನ್ನು ನಿರಾಶ್ರಿತರನ್ನಾಗಿ ಮಾಡುವುದು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಎಂದು ತೋರಿಸುತ್ತದೆ ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಸಾಮಾನ್ಯ ಗ್ರಾಮೀಣ-ಬಡವರು ಅಭದ್ರತೆ ಮತ್ತು ಭಯದ ನೆರಳಿನಲ್ಲಿ ಬದುಕಲು ಒತ್ತಾಯಿಸಲ್ಪಟ್ಟಿದ್ದಾರೆ. ಇಂತಹ ಅನ್ಯಾಯ ಎಸಗುವ ರೌಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಸಂತ್ರಸ್ತರಿಗೆ ಸೂಕ್ತ ಪುನರ್ವಸತಿ ಕಲ್ಪಿಸಬೇಕು ಎಂದು ನಾನು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಬಿಹಾರದ ನವಾಡ ಜಿಲ್ಲೆಯಲ್ಲಿ ದಲಿತರ ಹಲವಾರು ಮನೆಗಳನ್ನು ಸುಟ್ಟುಹಾಕಿರುವ ಬಗ್ಗೆ ಬಿಹಾರ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕೆಂದು ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ ಗುರುವಾರ ಒತ್ತಾಯಿಸಿದ್ದಾರೆ.

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಗಳು ಬಡ ಸಂತ್ರಸ್ತರ ಪುನರ್ವಸತಿಗಾಗಿ ಸರ್ಕಾರದಿಂದ ಸಂಪೂರ್ಣ ಹಣಕಾಸಿನ ನೆರವು ನೀಡಬೇಕೆಂದು ಅವರು ಕರೆ ನೀಡಿದರು.

“ಬಿಹಾರದ ನಾವಡಾದಲ್ಲಿ ಗೂಂಡಾಗಳು ಬಡ ದಲಿತರ ಮನೆಗಳನ್ನು ಸುಟ್ಟುಹಾಕಿ ಅವರ ಜೀವನ ಹಾಳು ಮಾಡಿದ ಘಟನೆ ಅತ್ಯಂತ ದುಃಖಕರ ಮತ್ತು ಗಂಭೀರವಾಗಿದೆ. ಸರ್ಕಾರವು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಮತ್ತು ಸಂತ್ರಸ್ತರ ಪುನರ್ವಸತಿಗೆ ಸಂಪೂರ್ಣ ಆರ್ಥಿಕ ಸಹಾಯವನ್ನು ನೀಡಬೇಕು” ಎಂದು ಮಾಯಾವತಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ; ಬಿಹಾರ | 100 ದಲಿತರ ಮನೆಗಳಿಗೆ ಬೆಂಕಿ; ಬಿಜೆಪಿ ವಿರುದ್ಧ ಕಾಂಗ್ರೆಸ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...